Homeಮುಖಪುಟಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ...

ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13) ಸೂಚಿಸಿರುವುದಾಗಿ livelaw.in ವರದಿ ಮಾಡಿದೆ.

ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ತೊಡಗಿರುವ ಪತ್ರಕರ್ತರಿಗೆ, ಅದರಲ್ಲೂ ಮುಖ್ಯವಾಗಿ ಮಹಿಳಾ ಪತ್ರಕರ್ತೆಯರಿಗೆ ರಕ್ಷಣೆ ನೀಡಬೇಕು ಎಂದು ಕೋರಿ ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ (NWMI) ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಪ್ರಸ್ತಾಪಿಸಿದ ನಂತರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮೇಲಿನ ಸೂಚನೆ ನೀಡಿದ್ದಾರೆ.

“ಯಾರಾದರೂ ಹಿರಿಯ ಅಧಿಕಾರಿಯೊಬ್ಬರು ಇಲ್ಲಿ ಖುದ್ದಾಗಿ ಹಾಜರಿದ್ದು ವಿವರಣೆ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿಗಳು, “ಪೊಲೀಸ್ ಇಲಾಖೆಯು ಈ ಆರೋಪಗಳಿಗೆ ವಿವರಣೆ ನೀಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ಅವರಿಗೆ ಮುಂಚಿತವಾಗಿಯೇ ನೋಟಿಸ್ ನೀಡಲಾಗಿದೆ ಎಂದು ಜೈಸಿಂಗ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೊಲೀಸರ ಕಡೆಯಿಂದ ನಡೆದಿದೆ ಎನ್ನಲಾದ ಕ್ರಮಕ್ಕೆ ಸಂಬಂಧಿಸಿದ ವಿಷಯದ ಜೊತೆಯಲ್ಲೇ, ಈ ಅರ್ಜಿಯನ್ನೂ ಸಹ ಗುರುವಾರ (ಅ.15) ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ‘ಫ್ರೀಡಂ ಸ್ಪೀಚ್ ಕಲೆಕ್ಟಿವ್’ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಪ್ರಸ್ತಾಪಿಸಿದ್ದು, ಪ್ರತಿಭಟನೆಗಳ ವರದಿಗಾರಿಕೆ ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಕಿರುಕುಳ ನೀಡಬಾರದು ಎಂದು ಕೋರ್ಟ್ ಅಕ್ಟೋಬರ್ 10 ರಂದು ನೀಡಿದ್ದ ಆದೇಶವನ್ನು ಉಲ್ಲಂಘಿಸಿ, ಪೊಲೀಸರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಹಿರಿಯ ವಕೀಲ ಚಂದರ್ ಉದಯ್ ಸಿಂಗ್ ಅವರೂ ಸಹ ಇದೇ ರೀತಿಯ ಮತ್ತೊಂದು ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ.

ಪ್ರತಿಭಟನೆಗಳು ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳ ವರದಿಗಾರಿಕೆ ಮಾಡುವ ಪತ್ರಕರ್ತರ ಸುರಕ್ಷತೆ ಹಾಗೂ ಗೌರವವನ್ನು ಖಾತ್ರಿಪಡಿಸಲು ನಿರ್ದೇಶನಗಳನ್ನು ನೀಡುವಂತೆ ಕೋರಿ NWMI ರಿಟ್ ಅರ್ಜಿಯನ್ನು ಸಲ್ಲಿಸಿದೆ.

ಈಗಾಗಲೇ ಪೊಲೀಸರ ದೌರ್ಜನ್ಯಗಳ ಕುರಿತು ಒಂದು ತನಿಖೆ ನಡೆಯುತ್ತಿದ್ದರೂ, ಅದು ಪತ್ರಕರ್ತರ ಸಮಸ್ಯೆಗಳನ್ನು ಮುಖ್ಯವಾಗಿ ಪರಿಗಣಿಸುತ್ತಿಲ್ಲ ಎಂದು ಈ ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಗಳಿಗೆ ಪತ್ರಕರ್ತರು ಮುಕ್ತವಾಗಿ ಹೋಗಲು ಬಿಡದಿರುವುದು, ಪೊಲೀಸರು ಅವರನ್ನು ವಶಕ್ಕೆ ಪಡೆಯುವುದು ಅಥವಾ ಬಲವಂತವಾಗಿ ಅಲ್ಲಿಂದ ಓಡಿಸುತ್ತಿರುವುದರ ಬಗ್ಗೆ ಪ್ರಸ್ತುತ ತನಿಖೆಯಲ್ಲಿ ಯಾವುದೇ ಪ್ರಸ್ತಾಪವಿಲ್ಲ. ಅದರೊಂದಿಗೆ, ಪತ್ರಕರ್ತರು ಯಾವುದೇ ಭಯವಿಲ್ಲದೆ ಸ್ವತಂತ್ರವಾಗಿ ಸುದ್ದಿ ಸಂಗ್ರಹಿಸಲು ಮತ್ತು ವರದಿ ಮಾಡಲು ಕಾನೂನಿನ ಪ್ರಕಾರ ಸಿಗಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಈ ತನಿಖೆ ಗಮನ ಹರಿಸುತ್ತಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಅಂದರೆ, ಈಗ ನಡೆಯುತ್ತಿರುವ ತನಿಖೆಯು ಪತ್ರಕರ್ತರ ಕೆಲಸದ ಸ್ವಾತಂತ್ರ್ಯ ಮತ್ತು ಅವರ ರಕ್ಷಣೆಯ ಅಸಲಿ ವಿಷಯಗಳನ್ನೇ ಕೈಬಿಟ್ಟಿದೆ ಎಂದು ಹೇಳಲಾಗಿದೆ.

ಅರ್ಜಿಯು ಭಾರತ ಸರ್ಕಾರದ ನಿರ್ದೇಶನಗಳನ್ನು ಕೋರಿದ್ದು, ನೈಜ ಸುದ್ದಿ ಸಂಗ್ರಹಣೆ ಅಥವಾ ವರದಿಗಾರಿಕೆಯಲ್ಲಿ ತೊಡಗಿರುವ ಮಹಿಳಾ ಪತ್ರಕರ್ತೆಯರು ಯಾವುದೇ ಪ್ರತಿಭಟನೆ, ಸಾರ್ವಜನಿಕ ಸಭೆ, ಜನಸಂದಣಿ ನಿಯಂತ್ರಣ ಕಾರ್ಯಾಚರಣೆ ಅಥವಾ ಇತರ ಸಾರ್ವಜನಿಕ ಪ್ರಾಮುಖ್ಯತೆಯ ಕಾರ್ಯಕ್ರಮಗಳ ಸ್ಥಳದಲ್ಲಿ ಹಾಜರಿದ್ದಾರೆ ಅಥವಾ ಅದರ ಹತ್ತಿರ ಇದ್ದಾರೆ ಎಂಬ ಕೇವಲ ಕಾರಣಕ್ಕಾಗಿ ಅವರನ್ನು ದೈಹಿಕವಾಗಿ ಎಳೆದಾಡುವುದು, ಬೆದರಿಸುವುದು, ಅನಗತ್ಯವಾಗಿ ಬಂಧಿಸುವುದು ಅಥವಾ ಬಲವಂತವಾಗಿ ಅಲ್ಲಿಂದ ತೆರವುಗೊಳಿಸದಂತೆ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದೆ.

ಪತ್ರಕರ್ತರು ಕೇವಲ ಇಂತಹ ಸಾರ್ವಜನಿಕ ಕಾರ್ಯಕ್ರಮಗಳನ್ನು ವರದಿ ಮಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿ ಪೊಲೀಸರ ಯಾವುದೇ ಕ್ರಮಕ್ಕೆ ಒಳಗಾಗದೆ, ತಮ್ಮ ವೃತ್ತಿಪರ ಕರ್ತವ್ಯಗಳನ್ನು ಮುಕ್ತವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಒದಗಿಸಬೇಕು ಎಂದು ಈ ಅರ್ಜಿಯು ಕೋರಿದೆ.

Courtesy :livelaw.in



















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು 'ಸಾಂವಿಧಾನಿಕವಾಗಿ ಅಸಮ್ಮತ' ಎಂದು...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಚೋರೋ ಕೆ ಸರ್ದಾರ್" (ಕಳ್ಳರ ಸರದಾರ) ಮತ್ತು "ಕಮಾಂಡರ್-ಇನ್-ಚೀಫ್" (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಪಾರ್ಲಿಮೆಂಟರಿ ಬೋರ್ಡ್ ಸದಸ್ಯೆ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಪ್ರಸ್ತುತ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ...

DELHI PROTEST : ಜಂತರ್ ಮಂತರ್ ಪ್ರವೇಶಿಸಿದ ಸಿಜೆಪಿ ನಾಯಕರು ಪೊಲೀಸ್ ವಶಕ್ಕೆ

ನಿರ್ಬಂಧಗಳ ನಡುವೆ ಜಂತರ್ ಮಂತರ್ ಪ್ರವೇಶಿಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ, ಅಜಿಂಕ್ಯ ಶಿಂದೆ ಮತ್ತು ಇತರರನ್ನು ದೆಹಲಿ ಪೊಲೀಸರು ಮಂಗಳವಾರ (ಅ.13) ವಶಕ್ಕೆ ಪಡೆದಿದ್ದಾರೆ....

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ: ಚುನಾವಣಾ ಆಯೋಗಕ್ಕೆ ಸವಾಲು

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್...