HomeಮುಖಪುಟDELHI PROTEST : ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ 5 ದಿನಗಳ ನ್ಯಾಯಾಂಗ ಬಂಧನ

DELHI PROTEST : ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ 5 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಪ್ರತಿಭಟನಾ ಪ್ರದೇಶ ಎಂಬ ಮಾನ್ಯತೆಯನ್ನು ರದ್ದುಗೊಳಿಸಲಾಗಿರುವ ಜಂತರ್ ಮಂತರ್‌ಗೆ ಅಕ್ರಮವಾಗಿ ಪ್ರವೇಶಿಸುವ ಮೂಲಕ ಶಾಂತಿ ಕದಡುವುದಿಲ್ಲ ಎಂಬ ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಬುಧವಾರ (ಅ.14) ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಿಹಾರ್ ಜೈಲಿಗೆ ಕಳುಹಿಸಲಾಗಿದೆ ಎಂದು newindianexpress.com ವರದಿ ಮಾಡಿದೆ.

ಸಿಜೆಪಿಯ ಮತ್ತೊಬ್ಬ ನಾಯಕ ಅಜಿಂಕ್ಯ ಶಿಂಧೆ ಅವರ ಜಾಮೀನು ಬಾಂಡ್ ಪ್ರಕ್ರಿಯೆಗಳನ್ನು ಅಂತಿಮಗೊಳಿಸಲಾಗುತ್ತಿದೆ. ಈ ಮೂವರನ್ನು ಬುಧವಾರ ಬೆಳಗ್ಗೆ ಮತ್ತೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು ಎಂದು ವರದಿ ಉಲ್ಲೇಖಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ, ಇತ್ತೀಚೆಗಷ್ಟೇ ಧರಣಿಗಳಿಗೆ ನಿಗದಿಪಡಿಸಲಾಗಿದ್ದ ಸ್ಥಳಗಳ ಪಟ್ಟಿಯಿಂದ ಕೈ ಬಿಟ್ಟಿರುವ ಜಂತರ್‌ ಮಂತರ್‌ನ ಬ್ಯಾರಿಕೇಡ್‌ಗಳನ್ನು ದಾಟಿ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಈ ಮೂವರನ್ನು ಮಂಗಳವಾರ (ಅ.13) ಮುಂಜಾನೆ ವಶಕ್ಕೆ ಪಡೆಯಲಾಗಿತ್ತು.

ಪೊಲೀಸರು ಬಂಧಿತರ ವಿರುದ್ಧ ಅಕ್ರಮ ಪ್ರವೇಶ, ನಿಷೇಧಾಜ್ಞೆಗಳ ಉಲ್ಲಂಘನೆ, ಶಾಂತಿ ಬಾಂಡ್‌ನ ಉಲ್ಲಂಘನೆ ಮತ್ತು ಸರ್ಕಾರಿ ನೌಕರರ ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅ.10ರಂದು ದೆಹಲಿಯಲ್ಲಿ ಕರೆಕೊಟ್ಟಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ದೆಹಲಿ ಪೊಲೀಸರು ವಿಮಾನದೊಳಗೆಯೇ ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಮುಂದೆ ಮೂವರೂ ಕೂಡ ಒಂದು ವರ್ಷದವರೆಗೆ ಶಾಂತಿ ಕಾಪಾಡುವ ಬಗ್ಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು ಎಂದು ಹೇಳಲಾಗ್ತಿದೆ.

ಸೌರವ್ ಮತ್ತು ರಾಂಕಾ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

“ಅಶು ಮತ್ತು ಸೌರವ್ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅವರ ತಪ್ಪಾದರೂ ಏನು? ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು!. ನರೇಂದ್ರ ಮೋದಿಯವರೇ.. ಸ್ವಲ್ಪ ಧೈರ್ಯ ತೋರಿಸಿ. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ನೀವು ಅಷ್ಟೊಂದು ದೃಢಸಂಕಲ್ಪ ಮಾಡಿದ್ದರೆ, ಇಂತಹ ಹೇಡಿತನದ ತಂತ್ರಗಳ ಹಿಂದೆ ಅಡಗಿಕೊಳ್ಳುವ ಬದಲು ಅಧಿಕೃತವಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಧೈರ್ಯ ಮಾಡಿ” ಎಂದು ದೀಪ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಯಲ್ಲಿ (ಎಸ್‌ಐಆರ್‌) ನಡೆದ ಅಕ್ರಮಗಳನ್ನು ವಿರೋಧಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ಈ ಬಿಗಿ ಭದ್ರತೆಯ ನಡುವೆಯೇ ಹೋರಾಟಗಾರರು ವಿವಿಧ ರೀತಿಯಲ್ಲಿ ಪ್ರತಿರೋಧ ಒಡ್ಡುತ್ತಿದ್ದಾರೆ.

ಅಕ್ಟೋಬರ್ 11ರಂದು, ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರು ರಾಮ್‌ಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಸಿಬಿಡಿ ಮೈದಾನವನ್ನು ಪ್ರತಿಭಟನೆ, ಧರಣಿಗೆ ನಿಗದಿತ ಸ್ಥಳಗಳೆಂದು ಘೋಷಿಸಿ ಆದೇಶ ಹೊರಡಿಸಿದ್ದು, ಜಂತರ್ ಮಂತರ್ ಅನ್ನು ಪ್ರತಿಭಟನೆಗೆ ಮೀಸಲಾದ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದೆ.

ರಾಷ್ಟ್ರ ರಾಜಧಾನಿಯ ರಾಜಕೀಯ ಕೇಂದ್ರದಿಂದ ಪ್ರತಿಭಟನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರಿಂದ ಸಾರ್ವಜನಿಕ ಅಸಮ್ಮತಿಯ ಗೋಚರತೆ ಕಡಿಮೆಯಾಗುತ್ತದೆ ಎಂದು ವಾದಿಸುವ ಮೂಲಕ ಸಿಜೆಪಿ (CJP) ಈ ಕ್ರಮವನ್ನು ಟೀಕಿಸಿದೆ.

ಸಿಜೆಪಿ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದು, ರಾಷ್ಟ್ರ ರಾಜಧಾನಿಯ ರಾಜಕೀಯ ಕೇಂದ್ರದಿಂದ ದೂರಕ್ಕೆ ಪ್ರತಿಭಟನೆಗಳನ್ನು ಸ್ಥಳಾಂತರಿಸುವುದರಿಂದ ಸಾರ್ವಜನಿಕ ಭಿನ್ನಾಭಿಪ್ರಾಯದ ದೃಶ್ಯ ಗೋಚರತೆ ಮತ್ತು ಪ್ರಭಾವವು ದುರ್ಬಲಗೊಳ್ಳುತ್ತದೆ ಎಂದು ವಾದಿಸಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು...

ನಮ್ಮನ್ನು ಪರಸ್ಪರ ಅನುಮಾನಿಸುವಂತೆ ಮಾಡುವುದು ಮೋದಿ ಸರ್ಕಾರದ ಉದ್ದೇಶ: ಸಿಇಸಿ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿಗೆ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವರನ್ನು ಪರಸ್ಪರ ಅನುಮಾನಿಸುವಂತೆ ಮಾಡಿ, ಹೋರಾಟವನ್ನು ದುರ್ಬಲಗೊಳಿಸುವುದು ಮೋದಿ ಸರ್ಕಾರದ ತಂತ್ರವಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ)...

SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು...

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...

‘ಪ್ರತಿಭಟನೆಗೆ ದ್ವಿಮುಖ ನೀತಿ ಇಲ್ಲ’: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗದ ಬಗ್ಗೆ ಸಮಗ್ರ ವರದಿ ಕೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ದೆಹಲಿಯಲ್ಲಿ ಈ ಹಕ್ಕನ್ನು ಪ್ರತಿಪಾದಿಸಿ, ಬೆಂಗಳೂರಿನಲ್ಲಿ ಅದೇ ಹಕ್ಕನ್ನು ನಿರಾಕರಿಸುವ ದ್ವಿಮುಖ ನೀತಿ ಇರಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು 'ಸಾಂವಿಧಾನಿಕವಾಗಿ ಅಸಮ್ಮತ' ಎಂದು...