HomeಮುಖಪುಟSIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು (ಅ.14) ದೆಹಲಿ ಎಸ್‌ಐಆರ್ ಪ್ರಕರಣದ ವಿಚಾರಣೆಯನ್ನು ನಿಗದಿಗಿಂತ ಮೊದಲೇ ನಡೆಸಲು ನಿರ್ಧರಿಸಿದೆ.

ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ವಾದವನ್ನು ಆಲಿಸಿದ ನಂತರ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆಯ ದಿನಾಂಕವನ್ನು ಅಕ್ಟೋಬರ್ 30ರಿಂದ ಅಕ್ಟೋಬರ್ 28ಕ್ಕೆ ಬದಲಾಯಿಸಿದೆ ಎಂದು livelaw.in ವರದಿ ಮಾಡಿದೆ.

ಅಕ್ಟೋಬರ್ 30ರಂದು ಹೆಸರುಗಳ ಕೈಬಿಡುವಿಕೆಯನ್ನು ಸರಿಪಡಿಸಲು ಕೊನೆಯ ದಿನಾಂಕವಾಗಿರುವುದರಿಂದ, ಅಕ್ಟೋಬರ್ 28ರಂದು ನಡೆಯುವ ವಿಚಾರಣೆಯಿಂದ ಹೆಚ್ಚಿನ ಪ್ರಯೋಜನವಾಗದಿರಬಹುದು ಎಂದು ಭೂಷಣ್ ಪ್ರತಿಪಾದಿಸಿದಾಗ, ಮುಖ್ಯ ನ್ಯಾಯಮೂರ್ತಿಗಳು “ಇವೆಲ್ಲವನ್ನೂ ಪರಿಗಣನೆಗೆ ತೆಗೆದುಕೊಳ್ಳುವಂತಹ ಆದೇಶವೊಂದನ್ನು ಹೊರಡಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ದೆಹಲಿ ಎಸ್‌ಐಆರ್ ವಿರುದ್ಧ ಬಾಕಿ ಇರುವ ಅರ್ಜಿಯಲ್ಲಿ, ಸಾಮಾಜಿಕ ಹೋರಾಟಗಾರರಾದ ಅಂಜಲಿ ಭಾರದ್ವಾಜ್ ಮತ್ತು ಅಮೃತಾ ಜೋಹ್ರಿ ಅವರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ಭೂಷಣ್ ಪ್ರಸ್ತಾಪಿಸಿದ್ದಾರೆ.

“ಅವರು (ಚುನಾವಣಾ ಆಯೋಗದವರು) ಜನರಿಗೆ ‘ಫಾರ್ಮ್ 6’ ಅನ್ನು ಭರ್ತಿ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ನಾನು ಈ ಹಿಂದೆಂದೂ ಮತ ಚಲಾಯಿಸಿಲ್ಲ ಎಂಬ ಘೋಷಣೆಯು ಫಾರ್ಮ್ 6ರಲ್ಲಿ ಇರುತ್ತದೆ. ಒಂದು ವೇಳೆ ಜನರು ಸುಳ್ಳು ಘೋಷಣೆ ನೀಡಿದರೆ, ಅವರಿಗೆ ಜೈಲು ಶಿಕ್ಷೆ ವಿಧಿಸಬಹುದಾದ ಸಾಧ್ಯತೆಯಿರುತ್ತದೆ. ಆದ್ದರಿಂದ, ಸ್ಥಳ ಬದಲಾಯಿಸಿದ ಮತದಾರರಿಗಾಗಿ ಇರುವ ಫಾರ್ಮ್ 8 ಅನ್ನು ಭರ್ತಿ ಮಾಡಲು ಅಥವಾ ಇದಕ್ಕಾಗಿ ಬೇರೆ ಯಾವುದಾದರೂ ಹೊಸ ನಮೂನೆಯನ್ನು ರೂಪಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ನಾವು ಕೋರುತ್ತಿದ್ದೇವೆ” ಎಂದು ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವಿಷಯವನ್ನು ಶುಕ್ರವಾರದಂದು ವಿಚಾರಣಾ ಪಟ್ಟಿಯಲ್ಲಿ ಸೇರಿಸಬೇಕೆಂದು ಅವರು ಮನವಿ ಮಾಡಿದ್ದರು.

ಈ ಕೋರಿಕೆಯನ್ನು ಆಲಿಸಿದ ನ್ಯಾಯಾಲಯ, ಅಂತಿಮವಾಗಿ ಮುಖ್ಯ ವಿಷಯವನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿತು ಎಂದು livelaw.in ವರದಿ ಉಲ್ಲೇಖಿಸಿದೆ.

ನೋಟಿಸ್‌ಗಳನ್ನು ಪಡೆದ ಮತದಾರರ ಹೆಸರುಗಳು ಹಾಗೂ ಆ ನೋಟಿಸ್‌ಗಳನ್ನು ನೀಡಲು ಕಾರಣವಾದ ನಿರ್ದಿಷ್ಟ ಅಂಶಗಳನ್ನು ಸಮರ್ಪಕವಾಗಿ ಬಹಿರಂಗಪಡಿಸುವಲ್ಲಿ ಭಾರತೀಯ ಚುನಾವಣಾ ಆಯೋಗ ಮತ್ತು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ವಿಫಲರಾಗಿದ್ದಾರೆ ಎಂದು ಮುಖ್ಯ ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಂಜಲಿ ಭಾರದ್ವಾಜ್ ಮತ್ತು ಅಮೃತಾ ಜೋಹ್ರಿ ಅವರೂ ಸಲ್ಲಿಸಿರುವ ಈ ಅರ್ಜಿಯು, ‘ತಾರ್ಕಿಕ ವ್ಯತ್ಯಾಸಗಳು’ ಎಂಬ ವರ್ಗದ ಅಡಿಯಲ್ಲಿ ಮತದಾರರನ್ನು ವರ್ಗೀಕರಿಸಲು ಅನ್ವಯವಾಗುವ ಮಾನದಂಡಗಳು, ವ್ಯಾಖ್ಯಾನಗಳು, ಅಲ್ಗಾರಿದಮಿಕ್ ನಿಯತಾಂಕಗಳು ಮತ್ತು ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಹಿರಂಗಪಡಿಸುವಂತೆ ಕೋರಿದೆ.

ದೆಹಲಿ ಎಸ್‌ಐಆರ್‌ ಸಮಯದಲ್ಲಿ ಮತದಾರರಿಗೆ ನೋಟಿಸ್‌ಗಳನ್ನು ‘ಬಹುತೇಕ ಯಾಂತ್ರಿಕವಾಗಿ’ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಹೇಳಿತ್ತು. ‘ತಾರ್ಕಿಕ ವ್ಯತ್ಯಾಸ’ ವನ್ನು ಗುರುತಿಸಲು ಆಧಾರವು ಸ್ಪಷ್ಟೀಕರಣದ ಅಗತ್ಯವಿದೆ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ...

SIR ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂಸದ ಅಸಾದುದ್ದೀನ್ ಓವೈಸಿ

ಲೋಕಸಭಾ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಚುನಾವಣಾ ಆಯೋಗದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ರೀತಿಯ ಬಾಕಿ...

ನಮ್ಮನ್ನು ಪರಸ್ಪರ ಅನುಮಾನಿಸುವಂತೆ ಮಾಡುವುದು ಮೋದಿ ಸರ್ಕಾರದ ಉದ್ದೇಶ: ಸಿಇಸಿ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿಗೆ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವರನ್ನು ಪರಸ್ಪರ ಅನುಮಾನಿಸುವಂತೆ ಮಾಡಿ, ಹೋರಾಟವನ್ನು ದುರ್ಬಲಗೊಳಿಸುವುದು ಮೋದಿ ಸರ್ಕಾರದ ತಂತ್ರವಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ)...

SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು...

DELHI PROTEST : ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ 5 ದಿನಗಳ ನ್ಯಾಯಾಂಗ ಬಂಧನ

ಪ್ರತಿಭಟನಾ ಪ್ರದೇಶ ಎಂಬ ಮಾನ್ಯತೆಯನ್ನು ರದ್ದುಗೊಳಿಸಲಾಗಿರುವ ಜಂತರ್ ಮಂತರ್‌ಗೆ ಅಕ್ರಮವಾಗಿ ಪ್ರವೇಶಿಸುವ ಮೂಲಕ ಶಾಂತಿ ಕದಡುವುದಿಲ್ಲ ಎಂಬ ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್...

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...

‘ಪ್ರತಿಭಟನೆಗೆ ದ್ವಿಮುಖ ನೀತಿ ಇಲ್ಲ’: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗದ ಬಗ್ಗೆ ಸಮಗ್ರ ವರದಿ ಕೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ದೆಹಲಿಯಲ್ಲಿ ಈ ಹಕ್ಕನ್ನು ಪ್ರತಿಪಾದಿಸಿ, ಬೆಂಗಳೂರಿನಲ್ಲಿ ಅದೇ ಹಕ್ಕನ್ನು ನಿರಾಕರಿಸುವ ದ್ವಿಮುಖ ನೀತಿ ಇರಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...