Homeಮುಖಪುಟಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

ಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

- Advertisement -
- Advertisement -

ಅಕ್ಟೋಬರ್ 10, 2026 ರಂದು ನವದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಾಂತಿಯುತ ಪ್ರತಿಭಟನಾಕಾರರು ಹಾಗೂ ವಕೀಲರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ, ದೈಹಿಕ ಹಲ್ಲೆ ಮತ್ತು ಕಾನೂನುಬಾಹಿರ ಬಂಧನಗಳನ್ನು ‘ಬಾಂಬೆ ಬಾರ್ ಅಸೋಸಿಯೇಷನ್’ ಅತ್ಯಂತ ತೀವ್ರವಾಗಿ ಖಂಡಿಸಿದೆ. ಈ ಕುರಿತು ಅಸೋಸಿಯೇಷನ್‌ನ ಸ್ಥಾಯಿ ಸಮಿತಿಯು ಅಧಿಕೃತ ನಿರ್ಣಯವನ್ನು ಹೊರಡಿಸಿದ್ದು, ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕುಗಳ ದಮನದ ವಿರುದ್ಧ ಗಂಭೀರ ಕಳವಳ ವ್ಯಕ್ತಪಡಿಸಿದೆ.

ದೇಶದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಸೇರಿದಂತೆ ಕಾನೂನು ಕ್ಷೇತ್ರದ ಸದಸ್ಯರು ತಮ್ಮ ಸಾಂವಿಧಾನಿಕ ಹಕ್ಕಾದ ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದಾಗ ಅವರ ಮೇಲೆ ಅತಿಯಾದ ಬಲಪ್ರಯೋಗ ಮಾಡಿರುವುದಕ್ಕೆ ಅಸೋಸಿಯೇಷನ್ ತೀವ್ರ ಅಸಮಾಧಾನ ಹೊರಹಾಕಿದೆ. ಅದರಲ್ಲೂ ವಿಶೇಷವಾಗಿ, ಹಿರಿಯ ವಕೀಲ ಶಾದಾನ್ ಫರಾಸತ್ ಅವರನ್ನು ದೈಹಿಕವಾಗಿ ಎಳೆದಾಡಿ, ಸರಕಿನ ಮೂಟೆಯಂತೆ ನಡೆಸಿಕೊಂಡ ರೀತಿಗೆ ಆಘಾತ ವ್ಯಕ್ತಪಡಿಸಿರುವ ಸಂಘಟನೆಯು, ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಮಹಿಳಾ ವಕೀಲರು ಹಾಗೂ ನಾಗರಿಕರನ್ನು ನಡೆಸಿಕೊಂಡ ರೀತಿಯೂ ಅಷ್ಟೇ ಕಳವಳಕಾರಿಯಾಗಿದೆ ಎಂದು ತಿಳಿಸಲಾಗಿದೆ.

ಶಾಂತಿಯುತವಾಗಿ ಸಭೆ ಸೇರುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಮತ್ತು ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಅನಿವಾರ್ಯ ಲಕ್ಷಣವಾಗಿದೆ ಎಂದು ಅಸೋಸಿಯೇಷನ್ ತನ್ನ ನಿರ್ಣಯದಲ್ಲಿ ಪುನರುಚ್ಚರಿಸಿದೆ. ಸರ್ಕಾರ ಅಥವಾ ಸಾರ್ವಜನಿಕ ಪ್ರಾಧಿಕಾರಗಳೊಂದಿಗೆ ಭಿನ್ನಾಭಿಪ್ರಾಯ ಹೊಂದುವುದು ಸರ್ಕಾರದ ಕೃಪೆಯಿಂದ ದೊರೆಯುವ ಸೌಲಭ್ಯವಲ್ಲ, ಅದೊಂದು ಸಾಂವಿಧಾನಿಕ ಖಾತ್ರಿಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ ಕಾಯ್ದುಕೊಳ್ಳುವ ಜವಾಬ್ದಾರಿಯ ಹೆಸರಿನಲ್ಲಿ ಪೊಲೀಸರು ಅನಿಯಂತ್ರಿತ ಬಂಧನ, ಅತಿಯಾದ ಬಲಪ್ರಯೋಗ ಅಥವಾ ಶಾಂತಿಯುತ ಧ್ವನಿಯನ್ನು ಹತ್ತಿಕ್ಕುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ಅಸೋಸಿಯೇಷನ್ ಎಚ್ಚರಿಸಿದೆ.

ಹಿರಿಯ ವಕೀಲರು ಮತ್ತು ಇತರ ವಕೀಲರ ಮೇಲಿನ ದೈಹಿಕ ಹಲ್ಲೆ ಸೇರಿದಂತೆ ಇಡೀ ಘಟನೆಯ ಕುರಿತು ಕಾಲಮಿತಿಯೊಳಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ದುರ್ನಡತೆ ಅಥವಾ ಅಕ್ರಮ ಬಲಪ್ರಯೋಗಕ್ಕೆ ಕಾರಣರಾದ ಎಲ್ಲಾ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಮತ್ತು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬಾಂಬೆ ಬಾರ್ ಅಸೋಸಿಯೇಷನ್ ಆಗ್ರಹಿಸಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವನ್ನು ಸಹಿಸುವ ಶಕ್ತಿ ಮತ್ತು ವಿಮರ್ಶೆಯನ್ನು ಸ್ವೀಕರಿಸುವ ಪಕ್ವತೆ ಹೊಂದಿರಬೇಕು ಎಂದಿರುವ ಸಂಘಟನೆಯು, ಶಾಂತಿಯುತ ಪ್ರತಿಭಟನಾಕಾರರನ್ನು ಕೇವಲ ಅಸಮ್ಮತಿ ವ್ಯಕ್ತಪಡಿಸಿದ್ದಕ್ಕಾಗಿ ಸರ್ಕಾರದ ಶತ್ರುಗಳಂತೆ ಕಾಣಲಾಗದು ಎಂದು ಸ್ಪಷ್ಟಪಡಿಸಿದೆ. ಬಾರ್‌ನ ಸ್ವಾತಂತ್ರ್ಯ, ಘನತೆ ಮತ್ತು ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ರಕ್ಷಿಸಲು ದೇಶಾದ್ಯಂತ ಇರುವ ಬಾರ್ ಅಸೋಸಿಯೇಷನ್‌ಗಳು ಹಾಗೂ ಕಾನೂನು ವೃತ್ತಿಪರರೊಂದಿಗೆ ‘ಬಾಂಬೆ ಬಾರ್ ಅಸೋಸಿಯೇಷನ್’ ದೃಢವಾಗಿ ನಿಲ್ಲಲಿದೆ ಎಂದು ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೇಶವನ್ನು ದಾರಿ ತಪ್ಪಿಸಬೇಡಿ’: ಸಿಜೆಪಿ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಾಧ್ಯಮ ಸಂಚಾಲಕ ಆಶಿಶ್ ಉಷಾ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ...

ಎಸ್‌ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ...

SIR ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂಸದ ಅಸಾದುದ್ದೀನ್ ಓವೈಸಿ

ಲೋಕಸಭಾ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಚುನಾವಣಾ ಆಯೋಗದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ರೀತಿಯ ಬಾಕಿ...

SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು...

ನಮ್ಮನ್ನು ಪರಸ್ಪರ ಅನುಮಾನಿಸುವಂತೆ ಮಾಡುವುದು ಮೋದಿ ಸರ್ಕಾರದ ಉದ್ದೇಶ: ಸಿಇಸಿ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿಗೆ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವರನ್ನು ಪರಸ್ಪರ ಅನುಮಾನಿಸುವಂತೆ ಮಾಡಿ, ಹೋರಾಟವನ್ನು ದುರ್ಬಲಗೊಳಿಸುವುದು ಮೋದಿ ಸರ್ಕಾರದ ತಂತ್ರವಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ)...

SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು...

DELHI PROTEST : ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ 5 ದಿನಗಳ ನ್ಯಾಯಾಂಗ ಬಂಧನ

ಪ್ರತಿಭಟನಾ ಪ್ರದೇಶ ಎಂಬ ಮಾನ್ಯತೆಯನ್ನು ರದ್ದುಗೊಳಿಸಲಾಗಿರುವ ಜಂತರ್ ಮಂತರ್‌ಗೆ ಅಕ್ರಮವಾಗಿ ಪ್ರವೇಶಿಸುವ ಮೂಲಕ ಶಾಂತಿ ಕದಡುವುದಿಲ್ಲ ಎಂಬ ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್...

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...

‘ಪ್ರತಿಭಟನೆಗೆ ದ್ವಿಮುಖ ನೀತಿ ಇಲ್ಲ’: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗದ ಬಗ್ಗೆ ಸಮಗ್ರ ವರದಿ ಕೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ದೆಹಲಿಯಲ್ಲಿ ಈ ಹಕ್ಕನ್ನು ಪ್ರತಿಪಾದಿಸಿ, ಬೆಂಗಳೂರಿನಲ್ಲಿ ಅದೇ ಹಕ್ಕನ್ನು ನಿರಾಕರಿಸುವ ದ್ವಿಮುಖ ನೀತಿ ಇರಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...