HomeಅಂಕಣಗಳುSIR‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ ‘ಇಂಡಿಯಾ’ ಒಕ್ಕೂಟ ಸಲ್ಲಿಸಿರುವ ಪ್ರಮುಖ ಅರ್ಜಿಗೆ ಸಂಬಂಧಿಸಿದಂತೆ, ಇಂದು (15 ಅಕ್ಟೋಬರ್ 2026) ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ‘ಲೈವ್‌ ಲಾ’ ವರದಿ ಮಾಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಸಂಜಯ್ ರಾವತ್ ಹಾಗೂ ಸೌಗತ ರಾಯ್ ಸೇರಿದಂತೆ ‘ಇಂಡಿಯಾ’ ಒಕ್ಕೂಟದ 10ಕ್ಕೂ ಹೆಚ್ಚು ಹಿರಿಯ ನಾಯಕರು ಜಂಟಿಯಾಗಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಅವರಿದ್ದ ದ್ವಿಪೀಠವು ಅರ್ಜಿಯ ವಿಚಾರಣೆ ನಡೆಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸೇರಿದಂತೆ ಇತರ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಗೆ ನೋಟಿಸ್ ನೀಡಿದ್ದು, ಈ ಕುರಿತು ಶೀಘ್ರವೇ ಉತ್ತರಿಸುವಂತೆ ನಿರ್ದೇಶಿಸಿದೆ.

ವಿಚಾರಣೆಯ ವೇಳೆ ಮೌಖಿಕ ಟಿಪ್ಪಣಿ ನೀಡಿದ ಸಿಜೆಐ ಸೂರ್ಯ ಕಾಂತ್ ಅವರು, ಈ ಹಿಂದೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಸಂಭವಿಸಿದ ಜನಸ್ತೋಮ ಹಾಗೂ ಗೊಂದಲಗಳನ್ನು ಪರೋಕ್ಷವಾಗಿ ಉಲ್ಲೇಖಿಸಿ, ಪ್ರಕರಣದಲ್ಲಿನ ಅರ್ಜಿದಾರರೊಬ್ಬರು ತಮ್ಮ ನಡವಳಿಕೆಯ ಕುರಿತಾಗಿಯೂ ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗವು 24 ಜೂನ್ 2025 ರಂದು ಕೈಗೊಂಡ ನಿರ್ಧಾರದಂತೆ ಜಾರಿಗೆ ತಂದ ‘ಎಸ್‌ಐಆರ್’ ಪ್ರಕ್ರಿಯೆಯಲ್ಲಿ ವ್ಯಾಪಕ ರೀತಿಯ ಸಾಂವಿಧಾನಿಕ ಮತ್ತು ಕಾನೂನು ಉಲ್ಲಂಘನೆಗಳಾಗಿವೆ ಎಂಬುದು ‘ಇಂಡಿಯಾ’ ನಾಯಕರ ಪ್ರಮುಖ ದೂರಾಗಿದೆ. ದೇಶದ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಮುನ್ಸೂಚನೆ ಅಥವಾ ವಿಚಾರಣೆಗೆ ಅವಕಾಶ ನೀಡದೆ ಏಕಾಏಕಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ವಿಪಕ್ಷ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಲ್ಲದೆ, ಕಾಯ್ದೆಯನ್ವಯ ಎಲ್ಲಾ ಚುನಾವಣಾ ಆಯುಕ್ತರು ಒಟ್ಟಾಗಿ ಸಮಾಲೋಚಿಸಿ ನಿರ್ಧಾರಗಳನ್ನು ಕೈಗೊಳ್ಳಬೇಕಿತ್ತು. ಆದರೆ ಮುಖ್ಯ ಚುನಾವಣಾ ಆಯುಕ್ತರು ಇತರ ಆಯುಕ್ತರೊಂದಿಗೆ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ. ಮತದಾರರ ನೋಂದಣಿ ನಿಯಮಗಳಿಗೆ ವ್ಯತಿರಿಕ್ತವಾಗಿ ಆನ್‌ಲೈನ್ ‘ಫಾರ್ಮ್ 6’ ನಲ್ಲಿ ಮಾಡಲಾಗಿರುವ ಬದಲಾವಣೆಗಳನ್ನೂ ನಾಯಕರು ಪ್ರಶ್ನಿಸಿದ್ದಾರೆ.

ವಿಪಕ್ಷಗಳು ನ್ಯಾಯಾಲಯದ ಮುಂದೆ ಇಟ್ಟಿರುವ ಬೇಡಿಕೆಗಳು:

ಪ್ರಕರಣದಲ್ಲಿ ಪಾರದರ್ಶಕತೆ ಮತ್ತು ಸಾಂವಿಧಾನಿಕ ಬದ್ಧತೆಯನ್ನು ಕಾಯ್ದುಕೊಳ್ಳಲು ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಪ್ರಮುಖ ಮನವಿಗಳನ್ನು ಮಾಡಿವೆ. ಮುಖ್ಯವಾಗಿ, ಈ ಸುದೀರ್ಘ ಕಾನೂನು ಹೋರಾಟದ ಅಂತಿಮ ತೀರ್ಪು ಬರುವವರೆಗೆ ದೇಶಾದ್ಯಂತ ಜಾರಿಯಲ್ಲಿರುವ ‘ಎಸ್‌ಐಆರ್’ ಪ್ರಕ್ರಿಯೆಯನ್ನು ತಕ್ಷಣವೇ ಅಮಾನತಿನಲ್ಲಿಡಬೇಕು ಎಂದು ‘ಇಂಡಿಯಾ’ ನಾಯಕರು ಒತ್ತಾಯಿಸಿದ್ದಾರೆ.

ಇದರೊಂದಿಗೆ, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ, ಮತದಾರರ ಪಟ್ಟಿಯಿಂದ ಕೈಬಿಡಲಾದ ಹೆಸರುಗಳ ಸಮಗ್ರ ಆಡಿಟ್ ನಡೆಸಬೇಕು ಮತ್ತು ಇವಿಎಂ ಪ್ರಕ್ರಿಯೆಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಹೋಲಿಸಿ ಪರಿಶೀಲಿಸಬೇಕು ಎಂದು ಕೋರಲಾಗಿದೆ. ಪಟ್ಟಿಯಿಂದ ತೆಗೆದುಹಾಕಲಾದ ಪ್ರತಿಯೊಬ್ಬ ಮತದಾರನ ವಿವರ ಹಾಗೂ ಅದಕ್ಕೆ ಸೂಕ್ತ ಕಾರಣಗಳನ್ನು ಬೂತ್‌ವಾರಿಯಾಗಿ ಬಹಿರಂಗಪಡಿಸಬೇಕು ಮತ್ತು ಅರ್ಹ ಮತದಾರರಿಗೆ ಹೆಸರು ಮರುಸೇರ್ಪಡೆಗೊಳಿಸಲು ಸುಲಭ ವ್ಯವಸ್ಥೆ ಕಲ್ಪಿಸಬೇಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ಚುನಾವಣಾ ಆಯೋಗದ ನಿರ್ಧಾರಗಳ ವಿರುದ್ಧ ರಾಜಕೀಯವಾಗಿ ಮತ್ತು ಕಾಯ್ದೆಗಳ ಚೌಕಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ‘ಇಂಡಿಯಾ’ ಒಕ್ಕೂಟದ ನಾಯಕರು, ಸುಪ್ರೀಂ ಕೋರ್ಟ್ ಮಧ್ಯಪ್ರವೇಶದಿಂದ ನಿಷ್ಪಕ್ಷಪಾತ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಜೊತೆಗೆ, ವಿಪಕ್ಷ ನಾಯಕರ ಈ ಜಂಟಿ ಅರ್ಜಿಯ ವಿಚಾರಣೆಯನ್ನೂ ಸುಪ್ರೀಂ ಕೋರ್ಟ್ ಮುಂದಿನ ಮಂಗಳವಾರ ನಡೆಸಲಿದ್ದು, ಈ ಬೆಳವಣಿಗೆಯ ಮೇಲೆ ಇಡೀ ದೇಶದ ಗಮನ ನೆಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್...

ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಅಂಕಿತಾ ಪೋಷಕರೊಂದಿಗೆ ಕಾಂಗ್ರೆಸ್ ನಾಯಕರು ದೆಹಲಿಯ ಇಂಡಿಯಾ...

ಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

ಅಕ್ಟೋಬರ್ 10, 2026 ರಂದು ನವದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಾಂತಿಯುತ ಪ್ರತಿಭಟನಾಕಾರರು ಹಾಗೂ ವಕೀಲರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ, ದೈಹಿಕ ಹಲ್ಲೆ ಮತ್ತು ಕಾನೂನುಬಾಹಿರ ಬಂಧನಗಳನ್ನು 'ಬಾಂಬೆ...

‘ದೇಶವನ್ನು ದಾರಿ ತಪ್ಪಿಸಬೇಡಿ’: ಸಿಜೆಪಿ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಾಧ್ಯಮ ಸಂಚಾಲಕ ಆಶಿಶ್ ಉಷಾ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ...

ಎಸ್‌ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ...