HomeಅಂಕಣಗಳುKarnataka against SIRಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

- Advertisement -
- Advertisement -

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ ಯಾತ್ರೆಗೆ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಅನುಮತಿ ನೀಡಿದ್ದಾರೆ. 

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಜಾಗೃತ ಕರ್ನಾಟಕ ಮತ್ತು ಮೈ ವೋಟ್, ಮೈ ರೈಟ್ ಸಂಘಟನೆಗಳು ಜಂಟಿಯಾಗಿ ಈ ಯಾತ್ರೆಯನ್ನು ಆಯೋಜಿಸಿವೆ. ಆದರೆ, ಮೆರವಣಿಗೆಯ ವೇಳೆ ಪ್ರತಿಭಟನೆ ನಡೆಸುವುದು, ಫಲಕ ಪ್ರದರ್ಶಿಸುವುದು ಮತ್ತು ಘೋಷಣೆ ಕೂಗುವುದಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಹಲಸೂರು ಗೇಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಶುಕ್ರವಾರ ನೀಡಿರುವ ಅನುಮತಿ ಪತ್ರದ ಪ್ರಕಾರ, ಸಂಜೆ 5 ಗಂಟೆಯಿಂದ 6.30ರವರೆಗೆ ಮಾತ್ರ ಪಾದಯಾತ್ರೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಟೌನ್ ಹಾಲ್, ಮೆರವಣಿಗೆಯ ಮಾರ್ಗ ಮತ್ತು ಕ್ವಿಟ್ ಇಂಡಿಯಾ ಸ್ಮಾರಕದ ಬಳಿ ಯಾವುದೇ ರೀತಿಯ ಪ್ರತಿಭಟನೆ ಅಥವಾ ಸಾಂಕೇತಿಕ ಪ್ರದರ್ಶನ ನಡೆಸುವಂತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ಪಾದಚಾರಿಗಳು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಯಾತ್ರೆ ನಡೆಸಬೇಕು ಎಂದು ಆಯೋಜಕರಿಗೆ ಸೂಚಿಸಲಾಗಿದೆ.

ಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಫಲಕಗಳು, ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳನ್ನು ಪ್ರದರ್ಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಯಾವುದೇ ರಾಜಕೀಯ ಪಕ್ಷ, ಸಂಘಟನೆ, ಸಮುದಾಯ ಅಥವಾ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುವಂತಿಲ್ಲ ಎಂದು ಅನುಮತಿ ಪತ್ರದಲ್ಲಿ ತಿಳಿಸಲಾಗಿದೆ. ನಿಗದಿತ ಸಮಯದೊಳಗೆ ಯಾತ್ರೆಯನ್ನು ಕ್ವಿಟ್ ಇಂಡಿಯಾ ಸ್ಮಾರಕದ ಬಳಿ ಮುಕ್ತಾಯಗೊಳಿಸಬೇಕು. ಅಲ್ಲಿಯೂ ಘೋಷಣೆಗಳನ್ನು ಕೂಗುವುದು ಅಥವಾ ಪ್ರತಿಭಟನಾ ಫಲಕಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶವಿಲ್ಲ ಎಂದು ಪೊಲೀಸರು ಸೂಚಿಸಿದ್ದಾರೆ.

ಈ ನಿರ್ಬಂಧಗಳಿಗೆ ಸಂಬಂಧಿಸಿದಂತೆ ಪೊಲೀಸರು ಕರ್ನಾಟಕ ಹೈಕೋರ್ಟ್‌ನ ಡಬ್ಲ್ಯುಪಿ ಸಂಖ್ಯೆ 5781/2021ರ ಆದೇಶವನ್ನು ಉಲ್ಲೇಖಿಸಿದ್ದಾರೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರ ಸ್ಥಳಗಳಲ್ಲಿ ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ ಮತ್ತು ಪ್ರದರ್ಶನಗಳನ್ನು ನಡೆಸುವಂತಿಲ್ಲ ಎಂಬ ಹೈಕೋರ್ಟ್ ನಿರ್ದೇಶನವನ್ನು ಪಾಲಿಸಬೇಕು ಎಂದು ಆಯೋಜಕರಿಗೆ ತಿಳಿಸಿದ್ದಾರೆ.

ಯಾತ್ರೆಯ ಸಂದರ್ಭದಲ್ಲಿ ಅಥವಾ ಕಾರ್ಯಕ್ರಮ ಮುಕ್ತಾಯದ ವೇಳೆ ಅನುಮತಿ ಪತ್ರದಲ್ಲಿನ ಷರತ್ತುಗಳನ್ನು ಉಲ್ಲಂಘಿಸಿದರೆ, ಇಲ್ಲವೇ ಹೈಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ರಾಷ್ಟ್ರಧ್ವಜವನ್ನು ಕೇಂದ್ರವಾಗಿಟ್ಟುಕೊಂಡು ನಡೆಯುತ್ತಿರುವ ಈ ಯಾತ್ರೆಗೆ ಅನುಮತಿ ನೀಡಿದ್ದರೂ, ಅದರೊಂದಿಗೆ ಪ್ರತಿಭಟನಾ ಚಟುವಟಿಕೆಗಳನ್ನು ನಡೆಸುವುದಕ್ಕೆ ವಿಧಿಸಿರುವ ನಿರ್ಬಂಧಗಳು ಗಮನ ಸೆಳೆದಿವೆ. ಯಾತ್ರೆಯ ಉದ್ದೇಶ ಮತ್ತು ಪ್ರತಿಭಟನೆಯ ಸ್ವರೂಪದ ನಡುವಿನ ಗಡಿಯನ್ನು ಪೊಲೀಸರು ತಮ್ಮ ಷರತ್ತುಗಳ ಮೂಲಕ ಸ್ಪಷ್ಟಪಡಿಸಿದ್ದು, ಆಯೋಜಕರು ಈ ಎಲ್ಲ ನಿರ್ಬಂಧಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...