Homeಮುಖಪುಟದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

- Advertisement -
- Advertisement -

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

‘ಲೆಹರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಭಿಜಿತ್ ದೀಪ್ಕೆ ಮತ್ತು ನೇಹಾ ಬೋರಾ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ಔಪಚಾರಿಕ ಪ್ರಕ್ರಿಯೆಗಳ ನಂತರ ನೇಹಾ ಅವರನ್ನು ಬಿಡುಗಡೆ ಮಾಡಲಾಗಿದ್ದು, ದೀಪ್ಕೆ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 126/170ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ ಹಾಗೂ ಅವರನ್ನು ಎಸ್‌ಇಎಂ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ತಿರಂಗಾ ರ‍್ಯಾಲಿಗಾಗಿ ರಾಷ್ಟ್ರಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಶುಕ್ರವಾರ ಮಧ್ಯಾಹ್ನ ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಬಳಿ ಜಮಾಯಿಸಿದ್ದರು. ಸಂಜೆಯಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ರಾಷ್ಟ್ರಧ್ವಜಗಳೊಂದಿಗೆ ರ‍್ಯಾಲಿಗೆ ಸೇರಿಕೊಂಡಿದ್ದರಿಂದ ಪ್ರತಿಭಟನಾಕಾರರ ಜನಸಂದಣಿ ಮತ್ತಷ್ಟು ಹೆಚ್ಚಾಯಿತು.

ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ಗೆ ಪ್ರತಿಭಟನಾಕಾರರು ಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಸಂಪೂರ್ಣವಾಗಿ ಬಂದ್ ಮಾಡಿದ್ದರು. ಆದರೂ ಸುಮಾರು 500ಕ್ಕೂ ಹೆಚ್ಚು ಜನರು ಕನಾಟ್ ಪ್ಲೇಸ್‌ನ ಹೊರಭಾಗದ ರಸ್ತೆಗಳಲ್ಲಿ ತ್ರಿವರ್ಣ ಧ್ವಜ ಹಿಡಿದು ಘೋಷಣೆಗಳನ್ನು ಕೂಗುತ್ತಾ ರ‍್ಯಾಲಿಯನ್ನು ಮುಂದುವರಿಸಿದರು. ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದಿದ್ದರಿಂದ, ಪೊಲೀಸರು ಆರಂಭದಲ್ಲಿ (ರಾತ್ರಿ 7:30 ರವರೆಗೆ) ಅವರನ್ನು ವಶಕ್ಕೆ ಪಡೆಯಲು ಹಿಂಜರಿದರು. 

ಪರಿಸ್ಥಿತಿ ಕೈಮೀರದಂತೆ ತಡೆಯಲು ದೆಹಲಿ ಪೊಲೀಸ್, ಸಿಆರ್‌ಪಿಎಫ್ ಮತ್ತು ರಾಪಿಡ್ ಆಕ್ಷನ್ ಫೋರ್ಸ್ (RAF) ಸೇರಿದಂತೆ ಸುಮಾರು 10,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಆ ಸ್ಥಳದಿಂದ ಹಿಂದಕ್ಕೆ ತಳ್ಳಲು ಪ್ರಯತ್ನಿಸಿದಾಗ ಪೊಲೀಸರು ಮತ್ತು ಜನರ ನಡುವೆ ತಳ್ಳಾಟ-ನೂಕಾಟಗಳು ನಡೆದವು.

ರಾತ್ರಿ 7:30ರ ನಂತರ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಆರಂಭಿಸಿದರು. ಸೆಂಟ್ರಲ್ ದೆಹಲಿಯಲ್ಲಿ ಮೆರವಣಿಗೆ ನಡೆಸುತ್ತಿದ್ದ ಸುಮಾರು 150ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು. 

ಆಮ್ ಆದ್ಮಿ ಪಾರ್ಟಿ (AAP) ನಾಯಕ ಗೋಪಾಲ್ ರೈ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಈ ರ‍್ಯಾಲಿಗೆ ನೇರವಾಗಿ ಕೈಜೋಡಿಸಿದ್ದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್ ಅಡಿಯಲ್ಲಿ ವಿವಿಧ ರೈತ ಸಂಘಟನೆಗಳು ಅಕ್ಟೋಬರ್ 23 ರಂದು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿವೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...