Homeಮುಖಪುಟಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ ಕಾರ್ಯದರ್ಶಿ ಹಾಗೂ ವಕೀಲ ಮೀನೇಶ್ ದುಬೆ ಅವರು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸನ್ನಿ ಜೋಸೆಫ್ ಅವರಿಗೆ ಅಧಿಕೃತ ಲೀಗಲ್ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಸಿಜೆಐ ಸೂರ್ಯಕಾಂತ್ ಅವರು, “ಇದು ಕಾನೂನು ಮತ್ತು ಸುವ್ಯವಸ್ಥೆಯ ವಿಷಯ, ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ” ಎಂದು ಹೇಳಿದ್ದರು.

ಸಿಜೆಐ ಅವರ ಈ ಹೇಳಿಕೆಯನ್ನು ವಿರೋಧಿಸಿ ಅಕ್ಟೋಬರ್ 12ರಂದು ಕಾಂಗ್ರೆಸ್ ಕೇರಳ ಘಟಕದ ಅಧಿಕೃತ ಹಾಗೂ ಪರಿಶೀಲಿಸಲ್ಪಟ್ಟ (@INCKerala) ಎಕ್ಸ್ ಖಾತೆಯಲ್ಲಿ, “ಪ್ರಿಯ ಸೂರ್ಯಕಾಂತ್ ಅವರೇ, ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದರೆ ತಕ್ಷಣ ರಾಜೀನಾಮೆ ನೀಡಿ. ಅದನ್ನು ನಿರ್ವಹಿಸಬಲ್ಲ ನಿಮ್ಮ ಬದಲಿ ವ್ಯಕ್ತಿಯನ್ನು ನಾವು ಕಂಡುಕೊಳ್ಳುತ್ತೇವೆ” ಎಂದು ಪ್ರಕಟಿಸಲಾಗಿತ್ತು. ಆದರೆ ಈ ಪೋಸ್ಟ್ ವಿವಾದಕ್ಕೆ ಕಾರಣವಾದ ಬಳಿಕ ಅದನ್ನು ಡಿಲಿಟ್ ಮಾಡಲಾಗಿತ್ತು ಎನ್ನಲಾಗಿದೆ.

ನ್ಯಾಯಾಂಗದ ಘನತೆ ಮತ್ತು ಸ್ವಾತಂತ್ರ್ಯದ ಕುರಿತು ಕಳವಳ ವ್ಯಕ್ತಪಡಿಸಿರುವ ವಕೀಲ ಮೀನೇಶ್ ದುಬೆ, ನೋಟಿಸ್ ತಲುಪಿದ 7 ದಿನಗಳೊಳಗೆ ಸಮಗ್ರ ಲಿಖಿತ ಉತ್ತರ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಆಗ್ರಹಿಸಿದ್ದಾರೆ. ಈ ವಿವಾದದ ಬಳಿಕ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವವು ಪೋಸ್ಟ್‌ನೊಂದಿಗೆ ತಮಗೆ ಸಂಬಂಧವಿಲ್ಲ ಎಂದು ಅಂತರ ಕಾಯ್ದುಕೊಂಡಿತ್ತು ಹಾಗೂ ಪಕ್ಷದ ನಿಲುವಿಗೆ ಭಿನ್ನವಾಗಿದೆ ಎಂದು ಸ್ಪಷ್ಟಪಡಿಸಿತ್ತು. ಅಲ್ಲದೆ, ಈ ಪೋಸ್ಟ್ ರಾಜ್ಯ ನಾಯಕತ್ವದ ಗಮನಕ್ಕೆ ಬಾರದೆ ಪ್ರಕಟಿಸಲಾಗಿದೆ ಮತ್ತು ಇದಕ್ಕೆ ಕಾರಣರಾದ ವ್ಯಕ್ತಿಯನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಸನ್ನಿ ಜೋಸೆಫ್ ಸ್ಪಷ್ಟನೆ ನೀಡಿದ್ದರು.

ಆದರೆ, ಕೇವಲ ಹುದ್ದೆಯಿಂದ ತೆಗೆದುಹಾಕುವುದರಿಂದ ಪಕ್ಷದ ಅಧಿಕೃತ ಖಾತೆಯಿಂದ ಪ್ರಕಟವಾದ ಹೇಳಿಕೆಯ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ನೋಟಿಸ್‌ನಲ್ಲಿ ಆಕ್ಷೇಪಿಸಲಾಗಿದೆ. ಈ ಟ್ವೀಟ್ ಅನ್ನು ರಚಿಸಿ ಪ್ರಕಟಿಸಿದ ವ್ಯಕ್ತಿ ಹಾಗೂ ಇದಕ್ಕೆ ಅನುಮೋದನೆ ನೀಡಿದವರ ವಿವರಗಳನ್ನು ಒದಗಿಸುವಂತೆ, ಸಾರ್ವಜನಿಕವಾಗಿ ಸಿಜೆಐಗೆ ಯಾವುದೇ ಬಹಿರಂಗ ಕ್ಷಮೆ ಯಾಕೆ ಕೋರಲಾಗಿಲ್ಲ ಎಂಬುದನ್ನು ವಿವರಿಸುವಂತೆ ಹಾಗೂ ಆ ವ್ಯಕ್ತಿಯ ವಿರುದ್ಧ ಬೇರೆ ಯಾವುದೇ ಅಧಿಕೃತ ಶಿಸ್ತು ಕ್ರಮ ಜರುಗಿಸಲಾಗಿದೆಯೇ ಎಂಬುದನ್ನು ತಿಳಿಸುವಂತೆ ನೋಟಿಸ್‌ನಲ್ಲಿ ಪ್ರಶ್ನಿಸಲಾಗಿದೆ. ಜೊತೆಗೆ, ಇದಕ್ಕೆ ಸಂಬಂಧಿಸಿದ ಎಲ್ಲಾ ಎಲೆಕ್ಟ್ರಾನಿಕ್ ದಾಖಲೆಗಳು ಮತ್ತು ಲಾಗ್‌ಗಳನ್ನು ಸಂರಕ್ಷಿಸುವಂತೆಯೂ ಸೂಚಿಸಲಾಗಿದೆ.

ರಾಜಕೀಯ ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಎಂಬುದನ್ನು ನೋಟಿಸ್‌ನಲ್ಲಿ ಒಪ್ಪಿಕೊಳ್ಳಲಾಗಿದ್ದರೂ, ರಾಜಕೀಯ ಪಕ್ಷಗಳು ಮತ್ತು ಅವುಗಳ ಪದಾಧಿಕಾರಿಗಳು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಜವಾಬ್ದಾರಿಯುತ ನಡವಳಿಕೆಯನ್ನು ಹೊಂದಿರಬೇಕು ಎಂದು ನೆನಪಿಸಲಾಗಿದೆ. ಒಂದು ವೇಳೆ ತೃಪ್ತಕರ ಉತ್ತರ ಬಾರದಿದ್ದರೆ, ಕ್ರಿಮಿನಲ್ ನ್ಯಾಯಾಂಗ ನಿಂದನೆ (Criminal Contempt) ಸೇರಿದಂತೆ ಲಭ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸುವುದಾಗಿ ಮೀನೇಶ್ ದುಬೆ ಎಚ್ಚರಿಕೆ ನೀಡಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...