Homeಮುಖಪುಟಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

- Advertisement -
- Advertisement -

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ ‘ದೈನಿಕ್ ಜನ್ವಾಣಿ’ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

60 ವರ್ಷದ ನಸೀಮ್ ಅಹ್ಮದ್ ಅವರನ್ನು ಗಂಭೀರ ಸ್ಥಿತಿಯಲ್ಲಿ ಗರ್ಹ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಹಪುರ್ ದೇಹಾತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಹೀರಾತು ಕೇಳುವ ಸಂದರ್ಭದಲ್ಲಿ ನಡೆದ ಹಲ್ಲೆಯಿಂದ ‘ದೈನಿಕ್ ಜನ್ವಾಣಿ’ ಪತ್ರಕರ್ತ ನಸೀಮ್ ಮೃತಪಟ್ಟಿದ್ದಾರೆ ಎಂದು ಹಪುರ್ ಪೊಲೀಸ್ ಇಲಾಖೆ ತಿಳಿಸಿದೆ. ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದು, ಸಂಗ್ರಹಿಸಿದ ಸಂಗತಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಷಯ ತಿಳಿದ ತಕ್ಷಣವೇ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಧುಬನ್ ಕುಮಾರ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಬುಲಂದ್‌ಶಹರ್ ರಸ್ತೆಯ ಆವಾಸ್ ವಿಕಾಸ್ ಕಾಲೋನಿಯ ನಿವಾಸಿಯಾದ ಅಹ್ಮದ್ ಅವರು ಜಾಹೀರಾತು ವಿಚಾರವಾಗಿ ಜರೋಥಿ ರಸ್ತೆಯಲ್ಲಿರುವ ಹಿಟ್ಟು ಗಿರಣಿಗೆ ತೆರಳಿದ್ದಾಗ ವಾಗ್ವಾದ ನಡೆಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಿರಣಿಯಲ್ಲಿದ್ದವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಅವರು ಪತ್ರಕರ್ತರೆಂಬ ಕುಟುಂಬದವರ ಮಾತನ್ನು ಪೊಲೀಸರು ಆರಂಭದಲ್ಲಿ ಖಚಿತಪಡಿಸಿರಲಿಲ್ಲ. ಆದರೆ, ಪ್ರಸ್ತುತ ಪೊಲೀಸರ ಹೇಳಿಕೆಯಲ್ಲಿ ಅವರನ್ನು ಪತ್ರಕರ್ತ ಎಂದೇ ಉಲ್ಲೇಖಿಸಲಾಗಿದೆ.

ಪತ್ರಿಕೆಗೆ ಜಾಹೀರಾತು ನೀಡಲು ಉದ್ಯಮಿಯೊಬ್ಬರು ನಿರಾಕರಿಸಿದ ನಂತರ ಈ ಹಿಂಸಾಚಾರ ಆರಂಭವಾಯಿತು ಎಂದು ಪ್ರತ್ಯಕ್ಷದರ್ಶಿ ಸಲಾವುದ್ದೀನ್ ಆರೋಪಿಸಿದ್ದಾರೆ.

ಸಲಾವುದ್ದೀನ್ ಅವರ ಪ್ರಕಾರ, ನಸೀಮ್ ಅವರು ಜಾಹೀರಾತು ಕೋರಿ ಉದ್ಯಮಿಯ ಬಳಿಗೆ ಹೋಗಿದ್ದರು. ನಿರಾಕರಣೆಯ ಬಳಿಕ ಇಬ್ಬರೂ ಅಲ್ಲಿಂದ ಹೊರಡುತ್ತಿದ್ದಾಗ, ಅವರನ್ನು ತಡೆದು ನಕಲಿ ಪತ್ರಕರ್ತರೆಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ತನ್ನ ಮೇಲೂ ತೀವ್ರ ಹಲ್ಲೆ ನಡೆಸಲಾಗಿದೆ ಎಂದು ‘ದಿ ಅಬ್ಸರ್ವರ್ ಪೋಸ್ಟ್’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...

ಜೆಎನ್‌ಯು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ರಾಷ್ಟ್ರಪತಿಗಳಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ತಮ್ಮ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವಿಚಾರದಲ್ಲಿ ತುರ್ತು ಮಧ್ಯಪ್ರವೇಶ ಕೋರಿ ಕಮ್ಯೂನಿಸ್ಟ್...

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ವಶಕ್ಕೆ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಲ್ಲಿ ಇಬ್ಬರು ಪುರುಷರು ಮತ್ತು 17 ವರ್ಷದ ಅಪ್ರಾಪ್ತ ವಯಸ್ಕನನ್ನು ಪೊಲೀಸರು ವಶಕ್ಕೆ...

“ನನ್ನ ಮೇಲೆ 45 ಮಾನನಷ್ಟ ಕೇಸ್ ಇವೆ, ಆದರೆ ವೋಟ್ ಚೋರಿ ಆರೋಪಕ್ಕೆ ಕೇಸ್ ಹಾಕಲ್ಲ” ನರೇಂದ್ರ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ರಾಹುಲ್ ವಾಗ್ದಾಳಿ

"ನನ್ನ ವಿರುದ್ಧ ದೇಶಾದ್ಯಂತ ಮಾನನಷ್ಟ ಪ್ರಕರಣಗಳು ಸೇರಿದಂತೆ 45ಕ್ಕೂ ಹೆಚ್ಚು ಕೇಸ್‌ಗಳಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಬಂಧಿಸಿದ ವಿಷಯಗಳ ಮೇಲೂ ಮೊಕದ್ದಮೆಗಳಿವೆ. ಆದರೆ,...