HomeಅಂಕಣಗಳುKarnataka against SIRSIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

- Advertisement -
- Advertisement -

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು ‘ಜಂತರ್ ಮಂತರ್’ ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಜನಪರ ಸಂಘಟನೆಗಳ ಒಕ್ಕೂಟ ಘೋಷಿಸಿದೆ. ಈ ಹೋರಾಟಕ್ಕೆ ರಾಜ್ಯದ ರೈತ ಮತ್ತು ದಲಿತ ಸಂಘಟನೆಗಳು ಕೈ ಜೋಡಿಸಲಿವೆ.

‘ಸಂಯುಕ್ತ ಹೋರಾಟ ಕರ್ನಾಟಕ’ ಸಂಘಟನೆಯ ನೇತೃತ್ವದಲ್ಲಿ ಸೋಮವಾರ (ಅ.19) ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಜಂಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಆಳುವ ಪಕ್ಷದ ಅಣತಿಯಂತೆ ಏಕಪಕ್ಷೀಯ ಮತ್ತು ಅಕ್ರಮ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಿಂದ ಈ ಅಕ್ರಮಗಳು ಬಟಾಬಯಲಾಗಿದ್ದು, ಇದರ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವಜನರು ಹಾಗೂ ಮಹಿಳಾ ಪತ್ರಕರ್ತೆಯರ ಮೇಲೆ ಪೊಲೀಸರನ್ನು ಬಳಸಿ ಹಲ್ಲೆ ನಡೆಸಲಾಗುತ್ತಿದೆ ಮತ್ತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ಸಂಘಟನೆಯ ಮುಖಂಡರು ದೂರಿದ್ದಾರೆ.

ಕೇಂದ್ರದ ಮೋದಿ ಮತ್ತು ಅಮಿತ್ ಶಾ ಸರ್ಕಾರವು ಆರೋಪಿತ ಅಧಿಕಾರಿಯನ್ನು ರಕ್ಷಿಸುತ್ತಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಈ ಹಿಂದೆ 727 ರೈತರ ಬಲಿದಾನಕ್ಕೆ ಕಾರಣವಾಗಿದ್ದ ಕೃಷಿ ಕಾಯ್ದೆಗಳನ್ನು ಹಿಂಪಡೆದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದೆ ಕೇಂದ್ರ ಸರ್ಕಾರ ಬೆನ್ನಿಗೆ ಚೂರಿ ಹಾಕಿದೆ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಬಿಕ್ಕಟ್ಟಿಗೂ ಕೇಂದ್ರದ ನೀತಿಗಳೇ ಕಾರಣ ಎಂದು ರೈತ ಮುಖಂಡರು ಹೇಳಿದ್ದಾರೆ.

ಮತ್ತೊಂದೆಡೆ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಅಲೆಮಾರಿ, ದಲಿತ, ಆದಿವಾಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಡಿಲೀಟ್ ಮಾಡಲಾಗಿದ್ದು, ಇದು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಇದನ್ನು ಅಳಿವು-ಉಳಿವಿನ ಹೋರಾಟವಾಗಿ ಸ್ವೀಕರಿಸಲಾಗಿದೆ ಎಂದು ದಲಿತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಈ ಕೆಳಗಿನ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಸಂಯುಕ್ತ ಹೋರಾಟ ಪ್ರತಿಭಟನೆಗೆ ಕರೆ ಕೊಟ್ಟಿದೆ.

  1. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸಬೇಕು.
  2. ಚುನಾವಣಾ ಆಯೋಗದ ಆಯ್ಕೆ ವಿಧಾನವನ್ನು ಪ್ರಜಾತಾಂತ್ರಿಕಗೊಳಿಸಬೇಕು.
  3. ಎಸ್‌ಐಆರ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹೊಸ ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರ ಪಟ್ಟಿಯ ಮರುಪರಿಷ್ಕರಣೆ ಮಾಡಬೇಕು.
  4. ಎಸ್‌ಐಆರ್ ಜಾರಿಗೆ ಬಂದ ನಂತರ ನಡೆದ ಎಲ್ಲಾ ಚುನಾವಣೆಗಳನ್ನು ರದ್ದುಪಡಿಸಿ ಮರು ಚುನಾವಣೆ ನಡೆಸಬೇಕು.
  5. ದೆಹಲಿಯ ಜಂತರ್ ಮಂತರ್ ಅನ್ನು ಪ್ರತಿಭಟನಾ ತಾಣವಾಗಿ ಮುಂದುವರಿಸಬೇಕು ಹಾಗೂ ಯುವಜನರ ಮೇಲಿನ ಕೇಸುಗಳನ್ನು ಹಿಂಪಡೆಯಬೇಕು.

ಪತ್ರಿಕಾಗೋಷ್ಠಿಯಲ್ಲಿ ಪ್ರಸಿದ್ಧ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಎಚ್.ಆರ್. ಬಸವರಾಜಪ್ಪ, ದರ್ಶನ್ ಪುಟ್ಟಣ್ಣಯ್ಯ, ಟಿ. ಯಶ್ವಂತ್, ಕುಮಾರ್ ಸಮತಳ ಹಾಗೂ ದಲಿತ ಮುಖಂಡರಾದ ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು, ಎನ್. ವೆಂಕಟೇಶ್, ವಿ. ನಾಗರಾಜ್, ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಕ್ಟೋಬರ್ 23ರ ಹೋರಾಟದಲ್ಲಿ ಎಲ್ಲಾ ವರ್ಗದ ಜನರು, ವಿಶೇಷವಾಗಿ ಯುವಜನರು ಸ್ವಯಂಪ್ರೇರಿತರಾಗಿ ಭಾಗವಹಿಸಬೇಕೆಂದು ಕರೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...