Homeಮುಖಪುಟಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

- Advertisement -
- Advertisement -

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆ ಹಾಗೂ ನಂತರದ ಬಂಧನದಿಂದಾಗಿ ಕ್ಯಾಂಪಸ್‌ನಲ್ಲಿ ಉಂಟಾಗಿದ್ದ ಉದ್ವಿಗ್ನತೆಯ ವಾತಾವರಣವನ್ನು ಸರಿಪಡಿಸಿ, ಸಹಜ ಸ್ಥಿತಿ ಮರಳಿಸುವ ಪ್ರಯತ್ನವಾಗಿ ಈ ಹೆಜ್ಜೆ ಇಡಲಾಗಿದೆ.

ಇದರೊಂದಿಗೆ, ಸಿಪಿಐ (ಎಂ) ಸಂಸದ ಜಾನ್ ಬ್ರಿಟ್ಟಾಸ್ ಅವರು ಉಪಕುಲಪತಿ ಪ್ರೊ. ಮಝರ್ ಆಸಿಫ್ ಅವರಿಗೆ ಪತ್ರ ಬರೆದು, ಉಭಯ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಏಳು ಸದಸ್ಯರ ಈ ತಂಡದಲ್ಲಿ ಉಪಕುಲಪತಿ, ರಿಜಿಸ್ಟ್ರಾರ್ ಪ್ರೊ. ಮೊಹಮ್ಮದ್ ತಾಬ್ ಆಲಂ ರಿಜ್ವಿ, ನಾನಾ ನಿಕಾಯಗಳ ಡೀನರು, ವಿದ್ಯಾರ್ಥಿ ಕಲ್ಯಾಣ ಡೀನ್, ಮುಖ್ಯ ಪ್ರೊಕ್ಟರ್ ಮತ್ತು ಹಾಸ್ಟೆಲ್ ಪ್ರೊವೋಸ್ಟ್‌ಗಳು ಸೇರಿದ್ದಾರೆ.

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ

ವಿದ್ಯಾರ್ಥಿ ಸಂಘವನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಅಕ್ಟೋಬರ್ 12ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕ್ಯಾಂಪಸ್‌ನಲ್ಲಿ ನಡೆದ ಗಲಭೆ ಹಾಗೂ ಅಶಾಂತಿ, ವಿಶೇಷವಾಗಿ ಉಪಕುಲಪತಿಯವರ ಮೇಲೆ ನಡೆದ ಭೌತಿಕ ಹಲ್ಲೆಯ ಘಟನೆಯ ನಂತರ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಚುನಾಯಿತ ವಿದ್ಯಾರ್ಥಿ ಸಂಘವನ್ನು ವಿಸರ್ಜಿಸಿತ್ತು.

“ಪ್ರತಿನಿಧಿತ್ವಕ್ಕಾಗಿ ನಮ್ಮ ಬಳಿ ಇರುವುದು ವಿಭಾಗೀಯ ಚುನಾವಣೆಗಳ ವ್ಯವಸ್ಥೆ ಮಾತ್ರ. ಆದರೆ ವಿಭಾಗೀಯ ಮಂಡಳಿಯ ಅಧ್ಯಕ್ಷರೇ ಡೀನ್ ಅಥವಾ ವಿಭಾಗದ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಆಡಳಿತದ ಇಚ್ಛಾನುಸಾರ ಅಧಿಕಾರ ಚಲಾಯಿಸುವುದೇ ಮುಂದುವರಿದಿದೆ. ಈ ಮಂಡಳಿಗಳಲ್ಲಿ ವಿದ್ಯಾರ್ಥಿಗಳಿಗೆ ನಿರ್ಧಾರ ಕೈಗೊಳ್ಳುವ ಯಾವುದೇ ಅಧಿಕಾರವಿಲ್ಲ” ಎಂದು ಉಪವಾಸ ನಿರತ ಮೂವರು ವಿದ್ಯಾರ್ಥಿಗಳಲ್ಲಿ ಒಬ್ಬರಾದ ಎಬಿನ್ ಬೇಸಿಲ್ ತಿಳಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ.

ಶುಲ್ಕ ಹೆಚ್ಚಳ, ಮೂಲಭೂತ ಸೌಕರ್ಯಗಳು, ಪ್ರವೇಶಾತಿಯಲ್ಲಿನ ಭ್ರಷ್ಟಾಚಾರ ಮತ್ತು ಮೀಸಲಾತಿ ನೀತಿಗಳಂತಹ ಸಮಸ್ಯೆಗಳನ್ನು ವಿಶ್ವವಿದ್ಯಾಲಯವು ನಿರಂತರವಾಗಿ ನಿರ್ಲಕ್ಷಿಸುತ್ತ ಬಂದಿದೆ. ಅದಕ್ಕೆ ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಅವರು ದೂರಿದ್ದಾರೆ.

ಉಪವಾಸ ಸತ್ಯಾಗ್ರಹದಲ್ಲಿದ್ದ ಜಾಸಿಮ್ ಖಾನ್ ಅವರನ್ನು ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಥಳಿಸಿದ್ದು, ನಂತರ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ತೀವ್ರಗೊಂಡಂತೆ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಆಡಳಿತ ಮಂಡಳಿಯು ಎಬಿನ್ ಬೇಸಿಲ್ ಅವರನ್ನು ವಿಶ್ವವಿದ್ಯಾಲಯದಿಂದ ಹೊರಹಾಕಿದೆ. ಜಾಸಿಮ್ ಖಾನ್ ಹಾಗೂ ರೆಹಾನ್ ಹೈದರ್ ಅವರನ್ನು ಅಮಾನತುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...