Homeಮುಖಪುಟಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ...

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

- Advertisement -
- Advertisement -

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದೆ.

ಅಭ್ಯರ್ಥಿಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು, ನಾಮಪತ್ರ ಸಲ್ಲಿಕೆಯ ಗಡುವನ್ನು ವಿಸ್ತರಿಸಬೇಕು ಮತ್ತು ಅಭ್ಯರ್ಥಿಗಳು ಸುರಕ್ಷಿತವಾಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಹೆಚ್ಚುವರಿ ಹಾಗೂ ಪರ್ಯಾಯ ನಾಮಪತ್ರ ಸಲ್ಲಿಕೆ ಕೇಂದ್ರಗಳನ್ನು ನಿಯೋಜಿಸಬೇಕು ಎಂದು ಪಕ್ಷವು ತನ್ನ ಅರ್ಜಿಯಲ್ಲಿ ಕೋರಿದೆ.

ವಿಶೇಷ ರಜಾ ಅವಧಿಯ ಪೀಠದ ಮುಂದೆ ಸಲ್ಲಿಸಲಾದ ಅರ್ಜಿಯು ಆಂಧ್ರಪ್ರದೇಶ ಹೈಕೋರ್ಟ್‌ನ ಅಕ್ಟೋಬರ್ 18ರ ಆದೇಶವನ್ನು ಪ್ರಶ್ನಿಸಿದೆ, ಹೈಕೋರ್ಟ್ ತನ್ನ ಆದೇಶದಲ್ಲಿ ನಾಮಪತ್ರ ಸಲ್ಲಿಕೆಯ ಅವಧಿಯನ್ನು ಒಂದು ದಿನ ವಿಸ್ತರಿಸಲು ನಿರಾಕರಿಸಿತ್ತು. ನಾಮಪತ್ರ ಸಲ್ಲಿಕೆಯ ಗಡುವು ಈಗಾಗಲೇ ಮುಗಿದುಹೋಗಿದೆ ಮತ್ತು ಅದನ್ನು ವಿಸ್ತರಿಸುವುದು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ಅವಧಿ ವಿಸ್ತರಣೆ ಕೋರಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ತನ್ನ ಪ್ರಧಾನ ಕಾರ್ಯದರ್ಶಿ ಲೀಲಾ ಅಪ್ಪಿರೆಡ್ಡಿ ಅವರ ಮೂಲಕ ವೈಎಸ್‌ಆರ್‌ಸಿಪಿ ಸಲ್ಲಿಸಿರುವ ಅರ್ಜಿಯಲ್ಲಿ, ಅ.16ರಂದು ಆರಂಭವಾಗಿ ಅ.18ರಂದು ಕೊನೆಗೊಂಡ ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ತನ್ನ ಹಲವಾರು ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ, ಬೆದರಿಕೆ ಹಾಕಲಾಗಿದೆ ಅಥವಾ ಅವರು ನಾಮಪತ್ರ ಸಲ್ಲಿಕೆ ಕೇಂದ್ರಗಳನ್ನು ತಲುಪದಂತೆ ದೈಹಿಕವಾಗಿ ತಡೆಯಲಾಗಿದೆ ಎಂದು ವಾದಿಸಿದೆ.

ಅರ್ಜಿಯ ಪ್ರಕಾರ, ಪುಂಗನೂರು, ರಾಯಚೋಟಿ, ಕಡಪ ಮತ್ತು ತಿರುಪತಿಯಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಕಡಪದಲ್ಲಿ ಅಭ್ಯರ್ಥಿಯೊಬ್ಬರ ನಾಮಪತ್ರಗಳನ್ನು ಕಸಿದುಕೊಂಡು ಹರಿದು ಹಾಕಲಾಗಿದೆ ಎಂದು ಪಕ್ಷವು ಆರೋಪಿಸಿದೆ, ಹಾಗೂ ತಿರುಪತಿ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಒಂಬತ್ತು ಅಭ್ಯರ್ಥಿಗಳನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳ ಕಚೇರಿಗಳನ್ನು ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಹೇಳಿದೆ.

ವೈಎಸ್‌ಆರ್‌ಸಿಪಿ ಸಂಸದ ಪಿ.ವಿ. ಮಿಥುನ್ ರೆಡ್ಡಿ ಅವರು ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಜೊತೆಯಾಗಿ ಹೋಗುತ್ತಿದ್ದಾಗ, ಅವರ ಬೆಂಗಾವಲು ವಾಹನಗಳ ಮೇಲೆ ನಡೆದಿದೆ ಎನ್ನಲಾದ ದಾಳಿಯ ಕುರಿತೂ ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹಿಂಸಾಚಾರದ ಆತಂಕಗಳನ್ನು ಉಲ್ಲೇಖಿಸಿ, ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿ ನಾಮಪತ್ರ ಸಲ್ಲಿಕೆ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಕೋರಿ ಪಕ್ಷವು ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ ಅ.15 ರಂದು ಹೈಕೋರ್ಟ್ ಏಕಸದಸ್ಯ ಪೀಠವು ಪಕ್ಷವು ಕೋರಿದ್ದ ಸಮಗ್ರ ಪರಿಹಾರವನ್ನು (omnibus relief) ನೀಡಲು ನಿರಾಕರಿಸಿತು ಮತ್ತು ಆಯಾ ಚುನಾವಣಾಧಿಕಾರಿಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲು ಅಭ್ಯರ್ಥಿಗಳಿಗೆ ಸ್ವಾತಂತ್ರ್ಯ ನೀಡಿತ್ತು.

ಅ. 16ರಂದು ನಡೆದಿದೆ ಎನ್ನಲಾದ ಘಟನೆಗಳ ನಂತರ, ಪಕ್ಷವು ನಾಮಪತ್ರ ಸಲ್ಲಿಕೆಯ ಗಡುವನ್ನು ವಿಸ್ತರಿಸುವಂತೆ ರಾಜ್ಯ ಚುನಾವಣಾ ಆಯೋಗವನ್ನು ಕೋರಿತ್ತು. ಆಯೋಗವು ನಾಮಪತ್ರ ಸಲ್ಲಿಕೆ ಕೇಂದ್ರಗಳಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಆದೇಶಿಸಿತೇ ಹೊರತು, ಗಡುವನ್ನು ವಿಸ್ತರಿಸಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಾಗ, ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸಲು ನ್ಯಾಯಾಲಯಗಳು ಹಸ್ತಕ್ಷೇಪ ಮಾಡಬೇಕು ಎಂದು ವೈಎಸ್‌ಆರ್‌ಸಿಪಿ ವಾದಿಸಿದೆ. ಅಡ್ಡಿಪಡಿಸಿದ ಕಾರಣಕ್ಕಾಗಿ ನಾಮಪತ್ರ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ, ವಿಸ್ತರಿಸಲಾದ ಅವಧಿಯಲ್ಲಿ ತಮ್ಮ ಪತ್ರಗಳನ್ನು ಸಲ್ಲಿಸಲು ಅನುಮತಿ ನೀಡಬೇಕು ಎಂಬ ನಿರ್ದೇಶನವನ್ನು ಸಹ ಅದು ಕೋರಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗದ ಹಸ್ತಕ್ಷೇಪದ ಮೇಲಿನ ನಿರ್ಬಂಧವು ನ್ಯಾಯಾಲಯಗಳು ಸ್ವಯಂ ಪಾಲಿಸುವ ಶಿಸ್ತಿನ ನಿಯಮವೇ ಹೊರತು, ಅದು ಸಂಪೂರ್ಣ ನಿಷೇಧವಲ್ಲ ಎಂದು ವೈಎಸ್‌ಆರ್‌ಸಿಪಿ ವಾದಿಸಿದೆ. ನಿಗದಿಪಡಿಸಿದ ಚುನಾವಣಾ ಅರ್ಜಿ ಪ್ರಕ್ರಿಯೆಯನ್ನು ಹೊರತುಪಡಿಸಿ, ಬೇರೆ ಯಾವುದೇ ರೀತಿಯಲ್ಲಿ ಚುನಾವಣಾ ಸವಾಲುಗಳನ್ನು ನ್ಯಾಯಾಲಯಗಳು ಸ್ವೀಕರಿಸಬಾರದು ಎಂಬ ನಿರ್ಬಂಧವು, ಸಾಂವಿಧಾನಿಕ ನ್ಯಾಯಾಲಯಗಳು ಚುನಾವಣಾ ಸುಗಮ ನಡವಳಿಕೆಗೆ ಸಹಾಯ ಮಾಡುವಂತಹ ಮತ್ತು ಅನುಕೂಲ ಕಲ್ಪಿಸುವಂತಹ ನಿರ್ದೇಶನಗಳನ್ನು ನೀಡುವುದನ್ನು ತಡೆಯುವುದಿಲ್ಲ ಎಂದು ಅದು ಪ್ರತಿಪಾದಿಸಿದೆ.

ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಹಾಳುಗೆಡವಲಾಗುತ್ತಿದೆ ಮತ್ತು ಅಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲಾಗುತ್ತಿದೆ ಎಂಬ ಆರೋಪಗಳು ಇರುವಾಗ ನ್ಯಾಯಾಲಯಗಳು ಮಧ್ಯಪ್ರವೇಶಿಸಲೇಬೇಕು ಎಂದು ಪಕ್ಷವು ವಾದಿಸಿದೆ. ಅಲ್ಲದೆ, ಎದುರಾದ ಅಡ್ಡಿ ಆತಂಕಗಳಿಂದಾಗಿಯೇ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಸಾಧ್ಯವಾಗದೇ ಇರುವಾಗ, ಕೇವಲ ನಾಮಪತ್ರ ಸಲ್ಲಿಕೆಯ ಗಡುವು ಮುಗಿದುಹೋಗಿದೆ ಎಂಬ ಕಾರಣವನ್ನು ನೀಡಿ ನ್ಯಾಯವನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಅದು ಮತ್ತಷ್ಟು ವಾದಿಸಿದೆ.

ಇದರ ಜೊತೆಗೆ, ಸುಪ್ರೀಂ ಕೋರ್ಟ್‌ನಿಂದ ಮುಂದಿನ ಆದೇಶ ಬರುವವರೆಗೆ, ಪೀಡಿತ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಪಕ್ಷವು ಕೋರಿದೆ.




































ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...