Homeಮುಖಪುಟಗಾಯಕಿ ನೇಹಾ ಸಿಂಗ್ ಕುರಿತು ಎಬಿಪಿ ನ್ಯೂಸ್ ಸುಳ್ಳು, ಮಾನಹಾನಿಕರ ವರದಿ : ಸ್ವಯಂಪ್ರೇರಿತ ಪ್ರಕರಣ...

ಗಾಯಕಿ ನೇಹಾ ಸಿಂಗ್ ಕುರಿತು ಎಬಿಪಿ ನ್ಯೂಸ್ ಸುಳ್ಳು, ಮಾನಹಾನಿಕರ ವರದಿ : ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

- Advertisement -
- Advertisement -

ಗಾಯಕಿ ಹಾಗೂ ಹೋರಾಟಗಾರ್ತಿ ನೇಹಾ ಸಿಂಗ್ ರಾಥೋರ್ ಬಗ್ಗೆ ಎಬಿಪಿ ನ್ಯೂಸ್ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ.

ಎಬಿಪಿ ನ್ಯೂಸ್ ಇತ್ತೀಚೆಗೆ ನೇಹಾ ಸಿಂಗ್ ಅವರ ಹೆಸರನ್ನು ವೇಶ್ಯಾವಾಟಿಕೆ ಜಾಲದೊಂದಿಗೆ ಲಿಂಕ್ ಮಾಡಿ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿತ್ತು. ಈ ವರದಿಯು ಮಹಿಳೆಯ ಘನತೆಗೆ ಧಕ್ಕೆ ತರುವಂತಹದ್ದಾಗಿದ್ದು, ನೇಹಾ ಅವರ ಚಾರಿತ್ರ್ಯ ಹರಣಕ್ಕೆ ಯತ್ನಿಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ನೇಹಾ ಸಿಂಗ್ ಕೂಡ ಎಬಿಪಿ ನ್ಯೂಸ್ ಸಂಪಾದಕನಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡ ವಿಡಿಯೋ ಹಂಚಿಕೊಂಡಿದ್ದರು. ಸುಳ್ಳು ಸುದ್ದಿ ಹಬ್ಬಿದ್ದಕ್ಕೆ ಎಬಿಪಿ ಕ್ಷಮೆ ಕೋರಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ನೇಹಾ, “ಕ್ಷಮೆ ಕೇಳುವುದರಿಂದ ಏನು ಪ್ರಯೋಜನ, ದಲ್ಲಾಳಿ ಎಬಿಪಿ ನ್ಯೂಸ್? ನೀವು ಹರಡಿದ ವದಂತಿಗಳು ಹಾಗೆಯೇ ಮಾಯವಾಗಿಬಿಡುತ್ತವೆಯೇ? ಎಂದು ಪ್ರಶ್ನಿಸಿದ್ದರು. “ನನ್ನ ಘನತೆಗೆ ಆದ ಅವಮಾನಕ್ಕೆ ಯಾವುದೇ ಕ್ಷಮೆ ಇಲ್ಲ. ನ್ಯಾಯಾಲಯದಲ್ಲಿ ನೋಡೋಣ” ಎಂದು ಹೇಳಿದ್ದರು.

ತನ್ನ ವಿರುದ್ದ ಸುಳ್ಳು ಸುದ್ದಿ ಘನತೆಗೆ ಚ್ಯುತಿ ತಂದ ಎಬಿಪಿ ನ್ಯೂಸ್ ವಿರುದ್ದ ಕ್ರಮ ಕೈಗೊಳ್ಳುವಂತೆ ನೇಹಾ ಸಾಮಾಜಿಕ ಜಾಲತಾಣಗಳ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವನ್ನು ಒತ್ತಾಯಿಸಿದ್ದರು.

ಸೋಮವಾರ (ಅ.19) ಸಾಮಾಜಿಕ ಜಾಲತಾಣಗಳ ಮೂಲಕ ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಆಯೋಗ, “ಗಾಯಕಿ ನೇಹಾ ಸಿಂಗ್ ರಾಥೋರ್ ಅವರನ್ನು ವೇಶ್ಯಾವಾಟಿಕೆ ಜಾಲದೊಂದಿಗೆ ಲಿಂಕ್ ಮಾಡಿ ಸುದ್ದಿ ಸಂಸ್ಥೆಯೊಂದು ಅವಹೇಳನಕಾರಿ ವಿಷಯವನ್ನು ಪ್ರಸಾರ ಮಾಡಿರುವುದರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ಸಾರ್ವಜನಿಕ ವಲಯದಿಂದ ತೀವ್ರ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಆ ವರದಿಯು ತಪ್ಪು ಮತ್ತು ಸತ್ಯಕ್ಕೆ ದೂರವಾಗಿದೆ ಎಂದು ಒಪ್ಪಿಕೊಂಡಿರುವ ಸುದ್ದಿ ವಾಹಿನಿಯು ಅಧಿಕೃತವಾಗಿ ಕ್ಷಮೆಯಾಚಿಸಿದೆ” ಎಂದು ಹೇಳಿದೆ.

ಮುಂದುವರಿದು, “ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ವಿಜಯಾ ರಹಾಟ್ಕರ್ ಅವರು, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (PCI) ನಂತಹ ನಿಯಂತ್ರಕ ಸಂಸ್ಥೆಗಳು; ಎಲೆಕ್ಟ್ರಾನಿಕ್ ಮೀಡಿಯಾ ಮಾನಿಟರಿಂಗ್ ಸೆಂಟರ್ (EMMC) ನಂತಹ ಆಡಳಿತಾತ್ಮಕ ಸಂಸ್ಥೆಗಳು; ಹಾಗೂ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಂಡ್ ಡಿಜಿಟಲ್ ಅಸೋಸಿಯೇಷನ್ (NBDA) ಮತ್ತು ಡಿಜಿಟಲ್ ಪಬ್ಲಿಷರ್ಸ್ ಕಂಟೆಂಟ್ ಗ್ರೀವೆನ್ಸ್ ಕೌನ್ಸಿಲ್ (DPCGC) ನಂತಹ ಮಾಧ್ಯಮ ಉದ್ಯಮದ ಸ್ವ-ನಿಯಂತ್ರಕ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ. ಮಾಹಿತಿ ತಂತ್ರಜ್ಞಾನ (ಮಧ್ಯಸ್ಥಗಾರರ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ತಕ್ಷಣದ ಮತ್ತು ಕಾಲಮಿತಿಯ ಕ್ರಮವನ್ನು ಖಚಿತಪಡಿಸಿಕೊಳ್ಳಲು ಅವರು ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ” ಎಂದು ಆಯೋಗ ತಿಳಿಸಿದೆ.

ಈ ಕುರಿತು 15 ದಿನಗಳ ಒಳಗಾಗಿ ಆಕ್ಷನ್ ಟೇಕನ್ ರಿಪೋರ್ಟ್ (ATR) ಅಂದರೆ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಆಯೋಗವು ಕೋರಿದೆ. ಇದರೊಂದಿಗೆ ಲಿಂಗ ಆಧಾರಿತ ಚಾರಿತ್ರ್ಯ ಹರಣ ಮತ್ತು ಮಹಿಳೆಯರ ವಿರುದ್ಧ ನಡೆಯುವ ಡಿಜಿಟಲ್ ಕಿರುಕುಳದ ವಿರುದ್ಧ ಕಠಿಣ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಆಯೋಗವು ಕರೆ ನೀಡಿದೆ. ಮಾಧ್ಯಮ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು ಹಾಗೂ ಸುದ್ದಿ ಪ್ರಸಾರ ಮಾಡುವಾಗ ಸತ್ಯಾಸತ್ಯತೆ, ಮಹಿಳೆಯರ ಘನತೆ, ಗೌರವ ಮತ್ತು ಅವರ ಖಾಸಗಿತನವನ್ನು ಕಡ್ಡಾಯವಾಗಿ ಗೌರವಿಸಬೇಕು ಎಂದು ಆಯೋಗವು ಸೂಚಿಸಿದೆ.







 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಧಾರ್ಮಿಕ ಸ್ಥಳದಲ್ಲಿ ವಾಸಿಸುತ್ತಿರುವುದಕ್ಕೆ ಮತ್ತು ಅವರು ಪೂಜೆ ಸಲ್ಲಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರು ವ್ಯಕ್ತಿಗಳು, ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಸಾಲದ್ದಕ್ಕೆ ಅವರನ್ನು ದೇವಾಲಯದೊಳಗೆ...

ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವ್ಯಾಪ್ತಿಯನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪೊಂದನ್ನು ಟೀಕಿಸುವ ಘೋಷವಾಕ್ಯಗಳನ್ನು ಸಾರ್ವಜನಿಕ ಗೋಡೆಯ ಮೇಲೆ ಬರೆದಿದ್ದಾರೆ ಎಂಬ ಆರೋಪದ ಮೇರೆಗೆ 13 ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್...

‘ಭಾರತದಲ್ಲಿ ಆಡಳಿತ ಬದಲಾವಣೆ ಆಗುವುದಿಲ್ಲ’: ಪ್ರತಿಭಟನೆ, ಹೋರಾಟಗಳಿಗೆ ಪಶ್ಚಿಮ ದೇಶಗಳ ಪ್ರಭಾವ ಕಾರಣ ಎಂದ ಮೋಹನ್ ಭಾಗವತ್

ನಾಗ್ಪುರ: ಭಾರತದಲ್ಲಿ ಆಡಳಿತ ಬದಲಾವಣೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವ ವಾದವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರೋಧಿಸಿದ್ದಾರೆ. ಆಡಳಿತ ಬದಲಾವಣೆಗೆ ಕರೆ ನೀಡುವ ಚಳವಳಿಗಳು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಬದಲಿಗೆ,...

ಗಾಜಿಯಾಬಾದ್‌| ದಲಿತ ವಿದ್ಯಾರ್ಥಿಗೆ ಸಹಪಾಠಿಗಳಿಂದ ಜಾತಿ ನಿಂದನೆ – ಹಲ್ಲೆ ಆರೋಪ

ಅಕ್ಟೋಬರ್ 7 ರ ಮಧ್ಯರಾತ್ರಿ ಮಹೇಶ್ ಕುಮಾರ್ (45) ಎಚ್ಚರಗೊಂಡಾಗ, ತಮ್ಮ ಮನೆಯ ಹೊರಗೆ 11ನೇ ತರಗತಿಯಲ್ಲಿ ಓದುತ್ತಿದ್ದ ಮಗ ಕುಳಿತಿರುವುದನ್ನು ಗಮನಿಸಿದರು. ಆ ಹದಿಹರೆಯದ ಬಾಲಕನ ಮುಖದಲ್ಲಿ ಆತಂಕವಿತ್ತು, ಶಾಲೆಯಲ್ಲಿ ತನಗಾಗುತ್ತಿದ್ದ...

ಪ್ರಧಾನಿ, ಮಾಜಿ ಪ್ರಧಾನಿ ವಿದೇಶಿ ಪ್ರವಾಸ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್!

ಮಾಹಿತಿ ಹಕ್ಕು ಕಾಯ್ದೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ಅವರು ಭಾರತೀಯ ವಾಯುಪಡೆಯ (IAF) ವಿಮಾನಗಳಲ್ಲಿ ನಡೆಸಿದ್ದ ವಿದೇಶಿ ಪ್ರವಾಸಗಳಿಗೆ ಸಂಬಂಧಿಸಿದ ವಿವರವಾದ ದಾಖಲೆಗಳನ್ನು ಬಹಿರಂಗಪಡಿಸುವಂತೆ...

ಜಂತರ್ ಮಂತರ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಾರ್ಟಿ ನಾಯಕರ ನ್ಯಾಯಾಂಗ ಬಂಧನ ಎರಡು ದಿನಗಳಿಗೆ ವಿಸ್ತರಣೆ; ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾವಣೆ!

ದೆಹಲಿಯ ನಿರ್ಬಂಧಿತ ಜಂತರ್ ಮಂತರ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ...

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...