Homeಮುಖಪುಟಸಿಜೆಪಿ ನಾಯಕರು - ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

- Advertisement -
- Advertisement -
ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ.

ಶಾಂತಿ ಕಾಪಾಡಲು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಮುಚ್ಚಳಿಕೆ ಬರೆದುಕೊಡುವಂತೆ ದೆಹಲಿ ಪೊಲೀಸ್ ಇಲಾಖೆಯು ಅಕ್ಟೋಬರ್ 17 ರಂದು ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಐಸಾ) ಅಧ್ಯಕ್ಷೆ ನೇಹಾ ಬೋರಾ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಯನ್ನೂ ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ.

ದಸರಾ ರಜೆ ನಿಮಿತ್ತ ಈ ವಾರ ಹೈಕೋರ್ಟ್ ಮುಚ್ಚಿದ್ದರೂ, ಅಕ್ಟೋಬರ್ 19 ರಂದು ಎಸ್‌ಇಎಂ ಹೊರಡಿಸಿದ ಎರಡು ದಿನಗಳ ನ್ಯಾಯಾಂಗ ಬಂಧನದ ಆದೇಶವನ್ನು ದಾಸ್ ಮತ್ತು ರಂಕಾ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಸಂಭಾವ್ಯ ಶಾಂತಿಭಂಗ, ಸಾರ್ವಜನಿಕ ಶಾಂತಿ ಕದಡುವುದು ಅಥವಾ ಅಶಾಂತಿಯನ್ನುಂಟು ಮಾಡುವ ಯಾವುದೇ ತಪ್ಪಾದ ಕೃತ್ಯವನ್ನು ವ್ಯಕ್ತಿಯು ಎಸಗುವ ಸಾಧ್ಯತೆಯಿದೆ ಎಂಬ ನಂಬಲಾರ್ಹ ಮಾಹಿತಿಯಿದ್ದಾಗ, ಶಾಂತಿ ಕಾಪಾಡಲು ಆ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯಲು ಎಸ್‌ಇಎಂಗೆ ಸೆಕ್ಷನ್ 126 ಅಧಿಕಾರ ನೀಡುತ್ತದೆ. ನೇಹಾ ಬೋರಾ ಅವರ ಅರ್ಜಿಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 126ರ ಅಡಿಯಲ್ಲಿ ನೀಡಲಾದ ಅಕ್ಟೋಬರ್ 17ರ ದಿನಾಂಕದ ನೋಟೀಸ್‌ಗೆ ಸಂಬಂಧಿಸಿದ್ದಾಗಿದೆ. “ವಿಚಾರಣೆಯ ಅವಧಿಗೆ ಶಾಂತಿ ಕಾಪಾಡಲು” ಒಬ್ಬ ಜಾಮೀನುದಾರರೊಂದಿಗೆ 10,000 ರೂ.ಗಳ ವೈಯಕ್ತಿಕ ಮುಚ್ಚಳಿಕೆಯನ್ನು ಏಕೆ ಬರೆದುಕೊಡಬಾರದು ಎಂಬುದಕ್ಕೆ ಕಾರಣ ತೋರಿಸುವಂತೆ ಅಕ್ಟೋಬರ್ 19 ರಂದು ಎಸ್‌ಇಎಂ ಮುಂದೆ ಹಾಜರಾಗಲು ವಿದ್ಯಾರ್ಥಿ ನೇಹಾಗೆ ನೋಟೀಸ್‌ನಲ್ಲಿ ಸೂಚಿಸಲಾಗಿತ್ತು.

ಅಕ್ಟೋಬರ್ 16 ರಂದು ಸಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಲಹರಾ ದೋ ತಿರಂಗಾ’ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ನೇಹಾ ಬೋರಾ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅವರನ್ನು ಅಕ್ಟೋಬರ್ 17 ರಂದು ಬಿಡುಗಡೆ ಮಾಡಲಾಗಿತ್ತು.

ಜಂತರ್ ಮಂತರ್ ಪ್ರವೇಶಿಸಿದ ಸಿಜೆಪಿ ನಾಯಕರು ವಶಕ್ಕೆ

ನಿರ್ಬಂಧಿತ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್‌ನ ಗೇಟ್ ಅನ್ನು ಹತ್ತಿ ಒಳಗೆ ಪ್ರವೇಶಿಸಿದ ಆರೋಪದ ಮೇಲೆ ಅಕ್ಟೋಬರ್ 13 ರಂದು ಸೌರವ್ ದಾಸ್ ಮತ್ತು ಆಸುತೋಶ್ ರಾಂಕಾ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಮಂದೀರ್ ಮಾರ್ಗ್ ಪೊಲೀಸ್ ಠಾಣೆಯ ಹೊಸದಾಗಿ ನೇಮಕಗೊಂಡ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಸೋಮವಾರ ಹಾಜರುಪಡಿಸಿದ ನಂತರ, ಅಕ್ಟೋಬರ್ 21 ರವರೆಗೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಲಾಯಿತು.

ಇತರ ಸಿಜೆಪಿ ಕಾರ್ಯಕರ್ತರೊಂದಿಗೆ ದಾಸ್ ಮತ್ತು ರಾಂಕಾ ಅವರು ರಾಷ್ಟ್ರಧ್ವಜವನ್ನು ಪ್ರದರ್ಶಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಅಕ್ಟೋಬರ್ 13 ರಂದು ಅವರನ್ನು ತಡೆದು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಯಿತು.

ಅಕ್ಟೋಬರ್ 14 ರಂದು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ದಾಸ್ ಮತ್ತು ರಾಂಕಾ ಅವರನ್ನು ಮೊದಲ ಬಾರಿಗೆ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...

‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ!

ಕಾಕ್‌ರೋಚ್ ಜನತಾ ಪಾರ್ಟಿಯ ಯುವ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸುತ್ತಿರುವ ಕಸ್ಟಡಿ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಪ್ರಜಾಪ್ರಭುತ್ವವಾದಿ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ...

ಯೇಸುವಿನ ದರ್ಶನದ ಹೆಸರಲ್ಲಿ 191 ಜನರ ಮಾರಣಹೋಮ : ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಸೇರಿ 29 ಮಂದಿ ತಪ್ಪಿತಸ್ಥರು ಎಂದ ನ್ಯಾಯಾಲಯ  

ಬರೋಬ್ಬರಿ 191 ಜನರ ಸಾವಿಗೆ ಕಾರಣನಾದ ಕೀನ್ಯಾದ ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಮತ್ತು ಆತನ ಸಹಚರರನ್ನು ಸೋಮವಾರ (ಅಕ್ಟೋಬರ್ 19) ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನವೆಂಬರ್ 6ರಂದು ಶಿಕ್ಷೆ ಪ್ರಮಾಣ...

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...

‘ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’: ಎಸ್ಐಆರ್ ವಿರೋಧಿಸಿ ಅ. 28ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆಗೆ ಪ್ರಕಾಶ್ ಅಂಬೇಡ್ಕರ್ ಕರೆ

ಮುಂಬೈ: ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ,...

ಹೋರಾಟಗಾರನ ಕೊಲೆ, ಅಮಿತ್ ಶಾ ಭೇಟಿ : ಪಂಜಾಬ್‌ನಲ್ಲಿ ಎಎಪಿಗೆ ಮುಳುವಾಗುತ್ತಾ ಡ್ರಗ್ ವಿರೋಧಿ ಜನಾಕ್ರೋಶ?

ಕಳೆದ ವಾರ ಪಂಜಾಬ್‌ನ ಮಾನಸಾ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನೊಬ್ಬ 42 ವರ್ಷದ ಮಾದಕವಸ್ತು ವಿರೋಧಿ ಕಾರ್ಯಕರ್ತ (Anti-Drugs Activist's) ಪರ್ವಿಂದರ್ ಸಿಂಗ್ ಝೋಟಾ ಅವರನ್ನು ಹತ್ಯೆ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....