Homeಅಂತರಾಷ್ಟ್ರೀಯ'ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..'; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ...

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

- Advertisement -
- Advertisement -

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯುದ್ಧವನ್ನು ಅಂತ್ಯಗೊಳಿಸಲು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕೆಗೆ ಗುರಿಯಾಗಿರುವ ಝೆಲೆನ್‌ಸ್ಕಿ, ಬುಧವಾರ ‘ಫಾಕ್ಸ್‌ ಅಂಡ್‌ ಫ್ರೆಂಡ್ಸ್‌’ ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.

‘ನಿಮ್ಮ ದೇಶದ ಶೇ. 75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಭೂಭಾಗವನ್ನು ಉಳಿಸಿಕೊಳ್ಳಲು ಸಾಧ್ಯವೇ?’ ಎಂಬ ಪ್ರಶ್ನೆಗೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಕದನ ವಿರಾಮಕ್ಕೆ ತಾವು ಸಿದ್ಧವಿರುವುದಾಗಿ ತಿಳಿಸಿದ ಅವರು, ಆದರೆ ರಷ್ಯಾದ ಆಕ್ರಮಣ ಮತ್ತು ವಶಪಡಿಸಿಕೊಳ್ಳುವಿಕೆ ಮತ್ತೆ ಮರುಕಳಿಸದಂತೆ ಉಕ್ರೇನ್‌ಗೆ ಭದ್ರತಾ ಖಾತರಿ ನೀಡಬೇಕು ಎಂದು ಒತ್ತಿಹೇಳಿದ್ದಾರೆ.

“ಹೌದು, ಸದ್ಯಕ್ಕೆ ನಾವು ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಬೇಕಿದೆ. ಯುದ್ಧವನ್ನು ಅಂತ್ಯಗೊಳಿಸಲು ಇದು ನಿಜವಾದ ಮಾರ್ಗ ಎಂದು ನಾನು ಭಾವಿಸುತ್ತೇನೆ. ನಾವು ಇದನ್ನು ಕದನ ವಿರಾಮ ಎಂದು ಕರೆಯುತ್ತೇವೆ. ಅಧ್ಯಕ್ಷ ಟ್ರಂಪ್ ಇದನ್ನು ‘ಸ್ಥಗಿತ’ ಎಂದು ಕರೆದಿದ್ದಾರೆ” ಎಂದು ಝೆಲೆನ್‌ಸ್ಕಿ ಹೇಳಿದ್ದಾರೆ.

“ಇದು ಇಂದು ರಷ್ಯಾದಿಂದ ನಮಗೆ ಬೇಕಾಗಿರುವ ಕನಿಷ್ಠ ಕ್ರಮವಾಗಿದೆ. ನಂತರ ನಾವು ಅಧ್ಯಕ್ಷ ಟ್ರಂಪ್ ಮತ್ತು ಯುರೋಪಿನ ನಾಯಕರನ್ನು ಸಂಪರ್ಕಿಸಿ ಭದ್ರತಾ ಖಾತರಿ ನೀಡುವಂತೆ ಕೇಳಿಕೊಳ್ಳುತ್ತೇವೆ” ಎಂದು ಅವರು ತಿಳಿಸಿದ್ದಾರೆ.

‘ಯುದ್ಧಭೂಮಿಯಲ್ಲಿ ರಷ್ಯಾ ಗೆಲ್ಲುತ್ತಿಲ್ಲ’

ರಷ್ಯಾ ವಶಪಡಿಸಿಕೊಂಡಿರುವ ಪ್ರದೇಶಗಳ ಮೇಲಿನ ನಿಯಂತ್ರಣವನ್ನು ಮರಳಿ ಪಡೆಯದೆ, ಪ್ರಸ್ತುತ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸುವ ಪ್ರಸ್ತಾಪಕ್ಕೆ ಝೆಲೆನ್‌ಸ್ಕಿ ಸಿದ್ಧತೆ ತೋರಿರುವುದು, ರಷ್ಯಾದ ನಿಯಂತ್ರಣದಲ್ಲಿರುವ ಉಕ್ರೇನ್‌ನ ಭೂಭಾಗದ ಒಂದು ಭಾಗವನ್ನು ಮರಳಿ ಪಡೆಯದೆ ಉಳಿಸಿಕೊಳ್ಳುವ ಸಾಧ್ಯತೆಗೆ ಅವರು ಒಪ್ಪಿಗೆ ಸೂಚಿಸಿದಂತಿದೆ. ಆದರೆ, ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ಶಾಶ್ವತವಾಗಿ ರಷ್ಯಾಕ್ಕೆ ಬಿಟ್ಟುಕೊಡಲು ಅವರು ಒಪ್ಪಿದ್ದಾರೆ ಎಂಬುದನ್ನು ಈ ಹೇಳಿಕೆಯೊಂದರಿಂದ ಖಚಿತಪಡಿಸಲಾಗುವುದಿಲ್ಲ.

ಇದೇ ವೇಳೆ, ಯುದ್ಧದಲ್ಲಿ ರಷ್ಯಾ ಗೆಲ್ಲುತ್ತಿಲ್ಲ ಎಂದು ಝೆಲೆನ್‌ಸ್ಕಿ ಪುನರುಚ್ಚರಿಸಿದ್ದಾರೆ. ಉಕ್ರೇನ್‌ನ ಜನರು ಯುದ್ಧದಿಂದ ದಣಿದಿದ್ದಾರೆ ಎಂಬುದನ್ನು ಒಪ್ಪಿಕೊಂಡ ಅವರು, ತಮ್ಮ ದೇಶದಲ್ಲಿಯೇ ಉಳಿಯಲು ಬಯಸುವ ಜನರು ರಷ್ಯಾದ ವಿರುದ್ಧ ಹೋರಾಟ ಮುಂದುವರಿಸಲಿದ್ದಾರೆ ಎಂದು ಹೇಳಿದ್ದಾರೆ.

“ಯುದ್ಧಭೂಮಿಯಲ್ಲಿ ಅವರು ಗೆಲ್ಲುತ್ತಿಲ್ಲ. ಅದಕ್ಕಾಗಿಯೇ ನಮ್ಮ ಮೇಲೆ ನಾನಾ ರೀತಿಯ ಒತ್ತಡಗಳನ್ನು ಹೇರುವ ಮೂಲಕ ನಮ್ಮ ಭೂಮಿಯಿಂದ ನಮ್ಮನ್ನು ಹೊರಹಾಕಲು ಬಯಸುತ್ತಿದ್ದಾರೆ. ಇದು ನ್ಯಾಯಸಮ್ಮತವಲ್ಲ. ಜನರು ದಣಿದಿದ್ದಾರೆ ಎಂಬುದು ನಿಜ. ಈ ಯುದ್ಧವನ್ನು ಸಾಧ್ಯವಾದಷ್ಟು ಬೇಗ ಅಂತ್ಯಗೊಳಿಸಲು ನಾವು ಬಯಸುತ್ತೇವೆ” ಎಂದು ಅವರು ‘ಫಾಕ್ಸ್‌ ಅಂಡ್‌ ಫ್ರೆಂಡ್ಸ್‌’ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಟ್ರಂಪ್‌ ಮತ್ತು ಝೆಲೆನ್‌ಸ್ಕಿ ನಡುವೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯ

ರಷ್ಯಾ ವಶಪಡಿಸಿಕೊಂಡಿರುವ ಪ್ರದೇಶಗಳ ಕುರಿತು ಝೆಲೆನ್‌ಸ್ಕಿ ಇಂತಹ ನಿಲುವು ವ್ಯಕ್ತಪಡಿಸಿರುವುದು ಇದೇ ಮೊದಲ ಬಾರಿಯಾಗಿರಬಹುದು ಎಂದು ವರದಿ ಹೇಳಿದೆ. ಇತ್ತೀಚೆಗೆ ಅವರು ಅಮೆರಿಕದ ಹಿರಿಯ ಪ್ರತಿನಿಧಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜಾರೆಡ್ ಕುಶ್ನರ್ ಅವರನ್ನು ಭೇಟಿಯಾಗಿ, ಯುದ್ಧವನ್ನು ಅಂತ್ಯಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದರು.

ಇದರ ನಡುವೆ, ರಷ್ಯಾ ಮತ್ತು ಅಮೆರಿಕ ನಡುವಿನ ಇತ್ತೀಚಿನ ತೈಲ ಒಪ್ಪಂದದ ವಿಚಾರವಾಗಿ ಟ್ರಂಪ್‌ ಮತ್ತು ಝೆಲೆನ್‌ಸ್ಕಿ ನಡುವಿನ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಈ ಒಪ್ಪಂದವನ್ನು ಝೆಲೆನ್‌ಸ್ಕಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಟ್ರಂಪ್, ಉಕ್ರೇನ್‌ಗೆ ಹೊಸ ಅಧ್ಯಕ್ಷರ ಅಗತ್ಯವಿದೆ ಎಂದು ಹೇಳಿದ್ದರು.

ಟ್ರಂಪ್‌ ಅವರ ಹೇಳಿಕೆಗೆ ಝೆಲೆನ್‌ಸ್ಕಿ ಸರ್ಕಾರದ ಸಚಿವರು ಪ್ರತಿಕ್ರಿಯಿಸಿದ್ದು, ಝೆಲೆನ್‌ಸ್ಕಿ ಅಧ್ಯಕ್ಷರಾಗಿ ಮುಂದುವರಿಯುವುದನ್ನು ಉಕ್ರೇನ್‌ ಜನರು ಬೆಂಬಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ‘ವಾಲ್‌ ಸ್ಟ್ರೀಟ್‌ ಜರ್ನಲ್‌’ ವರದಿಯೊಂದು ಮತ್ತೊಂದು ಬೆಳವಣಿಗೆಯನ್ನು ಉಲ್ಲೇಖಿಸಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ ಯುದ್ಧವನ್ನು ರಷ್ಯಾಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಂತ್ಯಗೊಳಿಸುವ ಉದ್ದೇಶದಿಂದ ಟ್ರಂಪ್‌ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ಪ್ರಸ್ತಾಪ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಅಮೆರಿಕ ಮತ್ತು ಚೀನಾ ಅಧಿಕಾರಿಗಳು ಈ ಪ್ರಸ್ತಾಪವನ್ನು ದೃಢಪಡಿಸಿಲ್ಲ. ಆದರೆ, ಇಂತಹ ಸಭೆ ನಡೆಯುವ ಕುರಿತು ರಷ್ಯಾದ ಅಧಿಕಾರಿಗಳು ಆಶಾವಾದ ಹೊಂದಿದ್ದಾರೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...

ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ ಮೆರವಣಿಗೆ; ಎಸ್‌ಐಆರ್ ವಿರೋಧಿ ಪ್ರತಿಭಟನೆ ನಿಮ್ಮೂರಲ್ಲೆಲ್ಲಿ ಗೊತ್ತಾ?

ಎಸ್ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ಹಾಗೂ ನವದೆಹಲಿಯ 'ಜಂತರ್ ಮಂತರ್' ಮೈದಾನದಲ್ಲಿ ಪ್ರತಿಭಟನೆ ಮಾಡದಂತೆ ನಿರ್ಬಂಧಿಸಿರುವ ದೆಹಲಿ ಪೊಲೀಸರ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ದೇಶದಾದ್ಯಂತ ಜನಪರ ಸಂಘಟನೆಗಳು ಏಕಕಾಲದಲ್ಲಿ 'ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...

ನ್ಯಾಯಾಂಗ ಬಂಧನದಿಂದ ಬಿಡುಗಡೆ ಬೆನ್ನಲ್ಲೇ ಸಿಜೆಪಿ ನಾಯಕರಿಗೆ ದೆಹಲಿ ಕ್ರೈಮ್ ಬ್ರಾಂಚ್ ಸಮನ್ಸ್

ದೆಹಲಿ ಪೊಲೀಸ್ ಅಪರಾಧ ವಿಭಾಗವು (ಕ್ರೈಮ್ ಬ್ರಾಂಚ್) ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಅ.22) ಮಧ್ಯಾಹ್ನ 12...