Homeಮುಖಪುಟಚುನಾವಣಾ ಆಯೋಗದ ಕಾರ್ಯವೈಖರಿ ಪರಿಶೀಲಿಸಲು ನಿವೃತ್ತ ಸಿಜೆಐ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂ...

ಚುನಾವಣಾ ಆಯೋಗದ ಕಾರ್ಯವೈಖರಿ ಪರಿಶೀಲಿಸಲು ನಿವೃತ್ತ ಸಿಜೆಐ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯನಿರ್ವಹಣೆಯಲ್ಲಿರುವ ಸಾಂಸ್ಥಿಕ ನ್ಯೂನತೆಗಳನ್ನು ಪರಿಶೀಲಿಸಲು, ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಾಧೀಶರೊಬ್ಬರ ಅಧ್ಯಕ್ಷತೆಯಲ್ಲಿ ಸ್ವತಂತ್ರ ತಜ್ಞ ಸಮಿತಿಯೊಂದನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ವಕೀಲ ವಿಶಾಲ್ ತಿವಾರಿ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಧಾರ್ಮಿಕ ಲೇಬಲ್‌ಗಳು, ಧಾರ್ಮಿಕ ಚಿಹ್ನೆಗಳು, ಕೋಮು ಆಧಾರಿತ ಮನವಿಗಳು, ಪಂಥೀಯ ಗುರುತುಗಳು ಅಥವಾ ದ್ವೇಷಪೂರಿತ ಭಾಷಣಗಳನ್ನು ಬಳಸಿಕೊಂಡು ನಡೆಸುವ ಚುನಾವಣಾ ಪ್ರಚಾರದ ಮೇಲೆ ‘ಸಂಪೂರ್ಣ ನಿಷೇಧ’ ಹೇರುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ ಎಂದು barandbench.com ವರದಿ ಮಾಡಿದೆ.

ಈ ಅರ್ಜಿಯು ಯಾವುದೇ ರಾಜಕೀಯ ಪಕ್ಷಪಾತವಿಲ್ಲದ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಹೊಂದಿರುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸುತ್ತದೆ. ಅರ್ಜಿದಾರರು ಯಾವುದೇ ರಾಜಕೀಯ ಪಕ್ಷ ಅಥವಾ ಅಧಿಕಾರದಲ್ಲಿರುವವರ ವಿರುದ್ಧ ಯಾವುದೇ ರೀತಿಯ ತೀರ್ಪನ್ನು ಕೋರುತ್ತಿಲ್ಲ, ಅಥವಾ ಅವರು ಯಾವುದೇ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಕೈಗೊಂಡ ಏಕಪಕ್ಷೀಯ ನಿರ್ಧಾರಗಳ ಕುರಿತು, ಇತರ ಇಬ್ಬರು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಹತ್ತು ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಲಿಖಿತ ಆಕ್ಷೇಪಣೆಗಳನ್ನು ದಾಖಲಿಸಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಸೆಪ್ಟೆಂಬರ್ 23ರಂದು ವರದಿ ಮಾಡಿತ್ತು. ಈ ವರದಿಯನ್ನೇ ಈ ಅರ್ಜಿ ಆಧರಿಸಿದೆ.

ಇಬ್ಬರು ಚುನಾವಣಾ ಆಯುಕ್ತ ಆಕ್ಷೇಪಣೆಗಳು ಶಾಸನಬದ್ಧ ಫಾರ್ಮ್ 6 ಕ್ಕೆ ಮಾಡಲಾದ ಅನಧಿಕೃತ ಬದಲಾವಣೆಗಳು, ಚುನಾವಣಾ ಡೇಟಾಬೇಸ್ ಕೇಂದ್ರೀಕರಣ, ಪಶ್ಚಿಮ ಬಂಗಾಳದಲ್ಲಿ ಅನುಮೋದನೆ ಇಲ್ಲದೆ ಮೇಲ್ಮನವಿಗಳನ್ನು ಸಲ್ಲಿಸಿರುವುದು ಮತ್ತು ಕೆಲಸದ ಹಂಚಿಕೆ ಆದೇಶಗಳಿಗೆ ಸಂಬಂಧಿಸಿದ್ದಾಗಿದ್ದವು.

ಚುನಾವಣಾ ಆಯೋಗ ಈ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಅಂಗೀಕರಿಸಿದೆಯಾದರೂ, ಅವುಗಳನ್ನು ಕೇವಲ ದಿನನಿತ್ಯದ ಸಲಹೆಗಳೆಂದು ಬಣ್ಣಿಸಿದೆ. ಆದರೆ, ಫಾರ್ಮ್ 6 ಕ್ಕೆ ಬದಲಾವಣೆಗಳನ್ನು ಮಾಡಲು ಯಾರು ಅಧಿಕಾರ ನೀಡಿದ್ದರು ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪಶ್ಚಿಮ ಬಂಗಾಳದಲ್ಲಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಸಹ ಈ ಅರ್ಜಿಯು ಎತ್ತಿ ತೋರಿಸಿದೆ. ಚುನಾವಣಾ ಆಯೋಗದ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಅರ್ಜಿಯು, ಮತದಾರರ ಪಟ್ಟಿಯಿಂದ ಹೊರಗುಳಿದಿರುವ ವ್ಯಕ್ತಿಗಳಿಂದ ಸುಮಾರು 38.20 ಲಕ್ಷ ಮೇಲ್ಮನವಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಕೇವಲ 1.02 ಲಕ್ಷದಷ್ಟು ಮೇಲ್ಮನವಿಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದೆ. ವರದಿಗಳ ಪ್ರಕಾರ, ಚುನಾವಣಾ ಆಯೋಗವು ಮೇಲ್ಮನವಿ ನ್ಯಾಯಾಧೀಕರಣಗಳ ಸಂಖ್ಯೆಯನ್ನು 19 ರಿಂದ 42ಕ್ಕೆ ಹೆಚ್ಚಿಸಲು ಕೋರಿದೆ ಎಂದಿದೆ.

ಅರ್ಜಿಯಲ್ಲಿ ಉಲ್ಲೇಖಿಸಲಾದ ಮತ್ತೊಂದು ವರದಿಯ ಪ್ರಕಾರ, ಮಹಾರಾಷ್ಟ್ರದ ಕರಡು ಮತದಾರರ ಪಟ್ಟಿಯಲ್ಲಿ 2,70,313 ಮತದಾರರ ವಯಸ್ಸು, ಹುಟ್ಟಿದ ವರ್ಷದ ತಾಂತ್ರಿಕ ದೋಷದ ಕಾರಣದಿಂದಾಗಿ 101 ರಿಂದ 150 ವರ್ಷಗಳ ನಡುವೆ ಇರುವುದಾಗಿ ತೋರಿಸಲಾಗಿದೆ.

ಆದ್ದರಿಂದ, ಚುನಾವಣಾ ಆಯೋಗದ ಲೋಪದೋಷಗಳನ್ನು ತಜ್ಞರ ಸಮಿತಿಯೊಂದು ಪರಿಶೀಲಿಸಬೇಕು ಎಂದು ಕೋರಲಾಗಿದೆ. ಪ್ರಸ್ತಾವಿತ ಸಮಿತಿಯು ಸಂವಿಧಾನಿಕ ಕಾನೂನು, ಚುನಾವಣಾ ಆಡಳಿತ, ಅಂಕಿಅಂಶಗಳು, ತಂತ್ರಜ್ಞಾನ, ಸೈಬರ್ ಭದ್ರತೆ ಮತ್ತು ದತ್ತಾಂಶ ಸಂರಕ್ಷಣೆ (ಡೇಟಾ ಪ್ರೊಟೆಕ್ಷನ್) ಕ್ಷೇತ್ರಗಳ ತಜ್ಞರನ್ನು ಒಳಗೊಂಡಿರಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.



















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ: ತನಿಖೆ ಚುರುಕು 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆಪಾದಿತ ಕುಟುಕು ಕಾರ್ಯಾಚರಣೆಯ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಅಪರಾಧ ವಿಭಾಗದ ವಿಶೇಷ ತಂಡ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಪ್ರಕರಣದಲ್ಲಿ ನಡೆದಿರುವ ಮೊದಲ...

ಕೆಪಿಎಸ್‌ಸಿ ನೇಮಕಾತಿ ಹಗರಣ : ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ (ಅ.24) ಅನುಮತಿ ನೀಡಿದ್ದಾರೆ. ಈ...

ಶಾಂತಿ ಬಾಂಡ್‌ಗೆ ಸಹಿ ಹಾಕಲು ನಿರಾಕರಿಸಿದ ನೇಹಾ ಬೋರಾ; ನೋಟಿಸ್‌ನ ಔಚಿತ್ಯದ ಬಗ್ಗೆ ಪ್ರಶ್ನೆ

ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ (ಎಸ್‌ಇಎಂ) ಮುಂದೆ ಶಾಂತಿ ಬಾಂಡ್‌ಗೆ ಸಹಿ ಹಾಕುವುದಿಲ್ಲ ಎಂದು ಶನಿವಾರ (ಅ. 24) ಹೇಳಿದ್ದಾರೆ. ರೂ....

ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!

ಪೊಲೀಸರು ಬಿಡುಗಡೆ ಮಾಡುವ ವಿಡಿಯೊಗಳಲ್ಲಿ ಒಂದೇ ರೀತಿಯ ದೃಶ್ಯಗಳು ಮರುಕಳಿಸುತ್ತವೆ: ಕಾಲಿನ ಕೆಳಭಾಗಕ್ಕೆ ಗುಂಡೇಟು ತಗುಲಿದ ವ್ಯಕ್ತಿಯೊಬ್ಬರು ಕತ್ತಲಿನಲ್ಲಿ ಕುಂಟುತ್ತಾ ಸಾಗುತ್ತಿದ್ದರೆ, ಪೊಲೀಸರು ಅವರನ್ನು ಸುತ್ತುವರಿದು ಕರೆದೊಯ್ಯುತ್ತಾರೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ...

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆಗಿನ ತನ್ನ ಸೆಟಲ್‌ಮೆಂಟ್ ಖಾತೆಯಿಂದ ರೂ 13.97 ಕೋಟಿ ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ (ಸೈಫನ್ ಮಾಡಲಾಗಿದೆ) ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ. ಹಿಂದುಸ್ತಾನ್ ಟೈಮ್ಸ್...

ಡಿ.ಕೆ ಶಿವಕುಮಾರ್, ಕೇರಳ ಸಿಎಂ ಸತೀಶನ್‌ಗೆ ಸ್ಟಿಂಗ್ ಆಪರೇಷನ್ ಬಲೆ? ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕಾಂಗ್ರೆಸ್ ಹೈಕಮಾಂಡ್...

‘ಬಿಳೇಕಹಳ್ಳಿ’ ಮೆಟ್ರೋ ನಿಲ್ದಾಣಕ್ಕೆ ಕೇವಲ ‘ಐಐಎಂಬಿ’ ಹೆಸರಿಟ್ಟಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ : ಮರುನಾಮಕರಣಕ್ಕೆ ಆಗ್ರಹ

ಬೆಂಗಳೂರಿನ 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) 'ಬಿಳೇಕಹಳ್ಳಿ' ನಿಲ್ದಾಣಕ್ಕೆ ಕೇವಲ ಐಐಎಂಬಿ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು) ಎಂದು ಹೆಸರಿಟ್ಟಿರುವುದಕ್ಕೆ ಊರಿನ ಜನರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದು,...

ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಸೌದಿಯಲ್ಲಿ ಮರಣದಂಡನೆ: ವಿಶ್ವಸಂಸ್ಥೆ ತಜ್ಞರ ತೀವ್ರ ಖಂಡನೆ, ಇಬ್ಬರ ಜೀವ ಉಳಿಸಲು ಆಗ್ರಹ

ಸೌದಿ ಅರೇಬಿಯಾದಲ್ಲಿ ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಮರಣದಂಡನೆಗೆ ಗುರಿಯಾಗಿದ್ದ ಹಸನ್ ಝಾಕಿ ಅಲ್-ಫರಾಜ್ ಅವರನ್ನು ಗಲ್ಲಿಗೇರಿಸಿರುವುದಕ್ಕೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಆಘಾತ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ. ಇದೇ ಪ್ರಕರಣದ ಮಾದರಿಯಲ್ಲಿ ಮರಣದಂಡನೆ ಎದುರಿಸುತ್ತಿರುವ...

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...