ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ (ಅ.24) ಅನುಮತಿ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ನೀಡಿದ್ದು, “ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ” ಎಂದು ಹೇಳಿದ್ದಾರೆ.
“ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದೆ. ಯುವಜನತೆಯ ಭವಿಷ್ಯದ ಜೊತೆ ಆಟವಾಡುವ ಯಾವುದೇ ಕೃತ್ಯಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ” ಎಂದು ಸಿಎಂ ಬರೆದುಕೊಂಡಿದ್ದಾರೆ.
“ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಭ್ರಷ್ಟಾಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ಆಡಳಿತಕ್ಕೆ ಕಪ್ಪುಚುಕ್ಕೆ ತರುವ ಕೃತ್ಯಗಳಿಗೆ ಮನ್ನಣೆಯಿಲ್ಲ” ಎಂದು ಹೇಳಿದ್ದಾರೆ.


