Homeಮುಖಪುಟವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ...

ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ ಸೋಮವಾರ (ಅ.26) ಘೋಷಿಸಿದೆ.

ಆದರೆ, ವಿಶ್ವವಿದ್ಯಾಲಯದ ಈ ಭರವಸೆಯನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಿರಸ್ಕರಿಸಿದ್ದಾರೆ. ವಿವಿ ಹೊರಡಿಸಿರುವ ನೋಟಿಸ್‌ನಲ್ಲಿ ಚುನಾವಣಾ ಪ್ರಕ್ರಿಯೆಗೆ ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ನಿಗದಿಪಡಿಸಿಲ್ಲ ಮತ್ತು ಪ್ರಾಕ್ಟರ್ (ಮುಖ್ಯ ಶಿಸ್ತು ಅಧಿಕಾರಿ) ರಾಜೀನಾಮೆಗೆ ಸಂಬಂಧಿಸಿದ ತಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಹೊರಡಿಸಿದ ಆದೇಶದಲ್ಲಿ, ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಅನುಮೋದನೆ ದೊರೆತ 15 ದಿನಗಳ ನಂತರ ಚುನಾವಣೆಗಳು ನಡೆಯಲಿವೆ ಎಂದು ತಿಳಿಸಿದೆ. “ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ಸಂಘದ (ಜೆಎಂಐಎಸ್‌ಯು) ಸಂವಿಧಾನಕ್ಕೆ ಅನುಮೋದನೆ ದೊರೆತ ದಿನಾಂಕದಿಂದ 15 ದಿನಗಳ ನಂತರ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಲಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು 2006ರಲ್ಲಿ ವಿಸರ್ಜಿಸಲಾಗಿತ್ತು. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಚುನಾಯಿತ ಪ್ರಾತಿನಿಧ್ಯವನ್ನು ಖಾತರಿಪಡಿಸಿಕೊಳ್ಳಲು ಅದರ ಮರುಸ್ಥಾಪನೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಕೈಗೊಳ್ಳಲಾಗಿದ್ದ ಎಲ್ಲಾ ಅಮಾನತು ಆದೇಶಗಳು ಮತ್ತು ಕಾರಣ ಕೇಳಿ ನೀಡಲಾಗಿದ್ದ ನೋಟಿಸ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಮತ್ತು  ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ನಡೆಸಿದ್ದಾರೆನ್ನಲಾದ ದೌರ್ಜನ್ಯ ಹಾಗೂ ಹಲ್ಲೆಯ ಆರೋಪಗಳ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿಯನ್ನು ರಚಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲು ಜಾಮಿಯಾ ಕುಲಸಚಿವ (Registrar) ಮಹತಾಬ್ ಆಲಂ ರಿಝ್ವಿ ಅವರು ಸೋಮವಾರ ಮುಂಜಾನೆ ಸುಮಾರು 4:30ಕ್ಕೆ ಧರಣಿ ಸ್ಥಳಕ್ಕೆ ಆಗಮಿಸಿದ್ದರು. ಆಡಳಿತ ಮಂಡಳಿಯ ಅಧಿಕೃತ ಆದೇಶದ ಪ್ರತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಅವರು, ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ತಿಳಿಸುವ ಮೂಲಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು ಎಂದು indiatoday.in ವರದಿ ಮಾಡಿದೆ.

ಆದರೆ, ಆದೇಶ ಪ್ರತಿಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಸ್ಪಷ್ಟವಾದ ವಿವರಣೆಯನ್ನು ನೀಡಿಲ್ಲ ಎಂದು ವಾದಿಸಿದ ವಿದ್ಯಾರ್ಥಿಗಳು ಅದನ್ನು ತಿರಸ್ಕರಿಸಿದ್ದಾರೆ. ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಅನುಮೋದನೆ ಸಿಕ್ಕ 15 ದಿನಗಳ ಒಳಗಾಗಿ ಚುನಾವಣೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆಯಾದರೂ, ಆ ಅನುಮೋದನೆಯನ್ನು ಯಾವಾಗ ನೀಡಲಾಗುತ್ತದೆ ಎಂಬುದನ್ನು ಎಲ್ಲಿಯೂ ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಮುಂದುವರಿಯಲಿದೆ ಎಂದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಪ್ರಾಕ್ಟರ್ ಅವರ ರಾಜೀನಾಮೆಗೆ ಸಂಬಂಧಿಸಿದ ತಮ್ಮ ಬೇಡಿಕೆಯನ್ನು ಆದೇಶದಲ್ಲಿ ಕೈಬಿಟ್ಟಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಆದೇಶವು ತಾವು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಕಾರಣವಾದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ತಾವು ಅಸ್ಪಷ್ಟ ಭರವಸೆಗಳನ್ನು ಒಪ್ಪಿಕೊಳ್ಳುವುದಕ್ಕಿಂತ ಹೆಚ್ಚಾಗಿ, ಕ್ಯಾಂಪಸ್‌ನಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಅರ್ಥಪೂರ್ಣ ವಿದ್ಯಾರ್ಥಿ ಪ್ರಾತಿನಿಧ್ಯವನ್ನು ಪಡೆದುಕೊಳ್ಳುವ ಉದ್ದೇಶದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆದೇಶವು ಸುಮಾರು ಎರಡು ದಶಕಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳು ಪುನರಾರಂಭಗೊಳ್ಳುವ ಸಾಧ್ಯತೆಯ ಮುನ್ಸೂಚನೆ ನೀಡಿದೆಯಾದರೂ, ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಅನುಮೋದನೆ ನೀಡುವ ಕುರಿತು ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ಪ್ರಕಟಿಸದೇ ಇರುವುದು ಪ್ರಸ್ತುತ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿ ಉಳಿದಿದೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ತಮ್ಮ ಬೇಡಿಕೆಗಳನ್ನು ಸ್ಪಷ್ಟವಾಗಿ ಈಡೇರಿಸುವವರೆಗೆ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡಿದ್ದಾರೆ.

ವಿದ್ಯಾರ್ಥಿ ಸಂಘವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸಿ ಜಾಮಿಯಾ ಮಿಲ್ಲಿಯಾದ ವಿದ್ಯಾರ್ಥಿಗಳು ಅಕ್ಟೋಬರ್ 11ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಶನಿವಾರ(ಅ.24) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಬಲವಂತವಾಗಿ ತೆರವುಗೊಳಿಸಲು ಪ್ರಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಆ ಬಳಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಕ್ಯಾಂಪಸ್‌ನಲ್ಲಿ ನೀರಿನ ಪೂರೈಕೆಯನ್ನು ಕಡಿತಗೊಳಿಸಲಾಗಿದೆ. ಕ್ಯಾಂಪಸ್ ಆವರಣದೊಳಗೆ ಪ್ರವೇಶ ಹಾಗೂ ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಭಾರೀ ಪೊಲೀಸ್ ನಿಯೋಜನೆಯ ನಡುವೆಯೂ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.






























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಚೀನಾ ಗಡಿ ಸಮಸ್ಯೆಗಳ ಕುರಿತ 26 ರೆಡ್ಡಿಟ್ ಪೋಸ್ಟ್‌ಗಳಿಗೆ ನಿರ್ಬಂಧ: ಕೇಂದ್ರದ ರಹಸ್ಯ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಐಎಫ್‌ಎಫ್

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದ ಚರ್ಚೆಗಳು, ಸೇನಾ ದೃಶ್ಯಗಳ ಪರಿಶೀಲನೆ, ಉಪಗ್ರಹ ಚಿತ್ರಗಳ ವರದಿ ಮತ್ತು ಅರುಣಾಚಲ ಪ್ರದೇಶದ ಮೇಲಿನ ಚೀನಾದ ಹಕ್ಕುಗಳ ಕುರಿತು ಪ್ರಕಟವಾಗಿದ್ದ 26 ರೆಡ್ಡಿಟ್ ಪೋಸ್ಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ....

ಅಮಿತ್ ಶಾ ಕುರಿತ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಿಂದ ರಾಹುಲ್ ಗಾಂಧಿ ಖುಲಾಸೆ

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು/ಶಾಸಕರ ವಿಶೇಷ ನ್ಯಾಯಾಲಯವು, ಹಿರಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ 2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವ ಮೂಲಕ ಅವರಿಗೆ ದೊಡ್ಡ ನಿರಾಳತೆಯನ್ನು ನೀಡಿದೆ....

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯಲು ಎಐಎಂಐಎಂ ಶ್ರಮಿಸಲಿದೆ: ಅಸದುದ್ದೀನ್ ಓವೈಸಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ನೋಡಿಕೊಳ್ಳಲು ತಮ್ಮ ಪಕ್ಷವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸದುದ್ದೀನ್ ಓವೈಸಿ ಭಾನುವಾರ (ಅ.25) ಹೇಳಿದ್ದಾರೆ. ಶಮ್ಲಿ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಕಂಪ್ಯೂಟರ್ ಸಹಾಯಕರು ಮಾಡಿದ ನಮೂದುಗಳ ಮರುಪರಿಶೀಲನೆಗೆ ಯುಪಿ ಸಿಇಒ ಆದೇಶ

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಬೆನ್ನಲ್ಲೇ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಕಂಪ್ಯೂಟರ್ ಸಹಾಯಕರು ಮಾಡಿದ ಎಲ್ಲ ನಮೂದುಗಳನ್ನು ಕಡ್ಡಾಯವಾಗಿ ಮರುಪರಿಶೀಲಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ...

ಮಧ್ಯಪ್ರದೇಶ | ನರ್ಮದಾ ನದಿ ತೀರದಲ್ಲಿ 300ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆ : ‘ಮತಗಳ್ಳತನ’ಕ್ಕೆ ಸ್ಪಷ್ಟ ಪುರಾವೆ ಎಂದ ಕಾಂಗ್ರೆಸ್

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಂಡ್ಲೇಶ್ವರ್ ಘಾಟ್‌ನಲ್ಲಿರುವ ನರ್ಮದಾ ನದಿಯ ದಡದಲ್ಲಿ ಭಾನುವಾರ (ಅ.25) ಒಟ್ಟು 343 ಮತದಾರರ ಗುರುತಿನ ಚೀಟಿಗಳು (ವೋಟರ್ ಐಡಿಗಳು) ಪತ್ತೆಯಾಗಿದ್ದು, ಇವೆಲ್ಲವೂ ಇಂದೋರ್‌ನ ವಿಳಾಸಗಳನ್ನು ಹೊಂದಿವೆ ಎಂದು newindianexpress.com...

ಲೀಟರ್ ಫಿನೈಲ್‌ಗೆ 33,500 ರೂ, ಎಲ್‌ಇಡಿ ಬಲ್ಬ್‌ಗೆ 11,800 ರೂ!: ಬಿಜೆಪಿ ಆಡಳಿತದ ಮಧ್ಯಪ್ರದೇಶ ನಗರಾಡಳಿತದಲ್ಲಿ ಬೃಹತ್ ಭ್ರಷ್ಟಾಚಾರ ಬಯಲಿಗೆಳೆದ ಹಿರಿಯ ಐಎಎಸ್ ಅಧಿಕಾರಿ!

ಮಧ್ಯಪ್ರದೇಶದ ನಗರಾಡಳಿತ ಇಲಾಖೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಖರೀದಿ ಪ್ರಕರಣವು ಈಗ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ವಿವಿಧ ನಗರ ಸ್ಥಳೀಯ ಸಂಸ್ಥೆಗಳು (ULBs) ಮತ್ತು ಪುರಸಭೆಗಳಲ್ಲಿ ಅತ್ಯಗತ್ಯ ವಸ್ತುಗಳನ್ನು ಮಾರುಕಟ್ಟೆ...

ತಮಿಳುನಾಡು| 42 ವರ್ಷಗಳ ನಂತರ ದಲಿತ ಕೇರಿಗೆ ಪ್ರವೇಶಿಸಿದ ದೇವಾಲಯದ ರಥ

42 ವರ್ಷಗಳ ಸುದೀರ್ಘ ಅಂತರದ ನಂತರ, ದೇವಾಲಯದ ರಥವೊಂದು ದಲಿತರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಿರುವ ಘಟನೆ ತಮಿಳುನಾಡಿನ ಕಾಂಚೀಪುರ ಜಿಲ್ಲೆಯ ವಾಲಾಜಾಬಾದ್ ಸಮೀಪವಿರುವ ಪುತಾಗರಂ ಗ್ರಾಮದಲ್ಲಿ ನಡೆದಿದೆ. ಜಿಲ್ಲಾಡಳಿತದ ಸೂಚನೆಯ ಮೇರೆಗೆ ಭಾನುವಾರ...

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್...