Homeಮುಖಪುಟನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

ನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

- Advertisement -
- Advertisement -

ನವದೆಹಲಿಯ ರಾಷ್ಟ್ರಪತಿ ಭವನದ ಸಮೀಪವಿರುವ ನಾರ್ತ್ ಬ್ಲಾಕ್ ಪ್ರದೇಶದಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಗೆ (ಡಿಎಫ್‌ಎಸ್‌) ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬಂದಿದ್ದು, ತಕ್ಷಣವೇ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ ಅಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದ ಮೇಲ್ಛಾವಣಿಯಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಣ್ಣ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ, ಆದರೆ ಅದನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.

“ನಾರ್ತ್ ಬ್ಲಾಕ್‌ನ ಮೇಲ್ಛಾವಣಿಯಲ್ಲಿ ಅಳವಡಿಸಲಾಗಿದ್ದ ಎಸಿ ಬಾಯ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಎಸಿ ಬಾಯ್ಲರ್‌ಗಳಲ್ಲಿ ಒಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಶಿವಸೇನೆ ಸಂಸದರಿಂದ ಫೋಟೋ ಹಂಚಿಕೆ

ಸಂಸತ್ತಿಗೆ ತೆರಳುತ್ತಿದ್ದಾಗ ತಮಗೆ ಬೆಂಕಿ ಕಾಣಿಸಿಕೊಂಡಿದ್ದಾಗಿ ಶಿವಸೇನೆಯ ರಾಜ್ಯಸಭಾ ಸದಸ್ಯ ಮಿಲಿಂದ್ ದಿಯೋರಾ ತಿಳಿಸಿದ್ದಾರೆ. ‘ಎಕ್ಸ್’ನಲ್ಲಿ ಅವರು ಬೆಂಕಿಯ ದೃಶ್ಯವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಗೆ ಏರುತ್ತಿರುವುದು ಕಂಡುಬಂದಿದೆ.

“ಸಂಸತ್ತಿಗೆ ಹೋಗುವ ದಾರಿಯಲ್ಲಿ ನಾರ್ತ್ ಬ್ಲಾಕ್‌ನ ಹಿಂಭಾಗದಿಂದ ದಟ್ಟ ಹೊಗೆ ಏರುತ್ತಿರುವುದನ್ನು ಗಮನಿಸಿದೆ. ಬಹುಶಃ ಅಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಭಾವಿಸುತ್ತೇನೆ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಸ್ಪಂದಿಸುತ್ತಿವೆ” ಎಂದು ಶಿವಸೇನೆ ಸಂಸದರು ಹೇಳಿದ್ದಾರೆ.

ಸಂಸತ್ ಭವನದ ಆವರಣದಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಅತ್ಯಂತ ಅಪರೂಪ. ಈ ಹಿಂದೆ, 2022ರ ಮೇ ತಿಂಗಳಲ್ಲಿ ಮಧ್ಯ ದೆಹಲಿಯಲ್ಲಿರುವ ಹೊಸ ಸಂಸತ್ ಭವನದಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಆಗ ಕಟ್ಟಡದ ಸುರಕ್ಷತಾ ಜಾಲಕ್ಕೆ ಬೆಂಕಿ ತಗುಲಿತ್ತು. ಕೂಡಲೇ ಅಗ್ನಿಶಾಮಕ ದಳದವರು ಐದು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಇದನ್ನು ಸಣ್ಣ ಪ್ರಮಾಣದ ಅಗ್ನಿ ಅವಘಡ ಎಂದು ಹೇಳಿರುವ ಅಧಿಕಾರಿಗಳು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪುವ ಮೊದಲೇ ಸಂಸತ್ ಸಂಕೀರ್ಣದ ಒಳಗಿದ್ದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದರು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ, ಸಂಸತ್ ಭವನದ ಸಮೀಪವಿರುವ ‘ಸೆಂಟ್ರಲ್ ವಿಸ್ಟಾ’ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ ಮೂರು ತಾತ್ಕಾಲಿಕ ಶೆಡ್‌ಗಳಲ್ಲಿಯೂ ಬೆಂಕಿ ಕಾಣಿಸಿಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ ಡಿಕ್ಕಿ; ಎಸ್‌ಐಟಿ ತನಿಖೆಗೆ ಆದೇಶ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ಹಲವು ವಾಹನಗಳು 'ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ'ನಲ್ಲಿ ಪರಸ್ಪರ ಡಿಕ್ಕಿ...

ಮಹಾರಾಷ್ಟ್ರ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ತಡೆ ನೀಡಲು ನಿರಾಕರಣೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಕರ್ನಾಟಕ SIR : ಚುನಾವಣಾ ಅಧಿಕಾರಿಗಳಿಂದಲೇ 61,000ಕ್ಕೂ ಹೆಚ್ಚು ಫಾರಂ-7 ಅರ್ಜಿ ಸಲ್ಲಿಕೆ; ಒಂದರಲ್ಲೂ ಕಾರಣ ಉಲ್ಲೇಖಿಸಿಲ್ಲ-ವರದಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಕನಿಷ್ಠ 61,059 ಫಾರಂ-7 ಅರ್ಜಿಗಳನ್ನು ಸ್ವತಃ ಚುನಾವಣಾ ಅಧಿಕಾರಿಗಳೇ ಸಲ್ಲಿಸಿದ್ದು, ಅವುಗಳಲ್ಲಿ ಒಂದೇ ಒಂದು ಅರ್ಜಿಯಲ್ಲೂ ಹೆಸರು ಕೈಬಿಡಲು ಕಾರಣವನ್ನು ನಮೂದಿಸಿಲ್ಲ. ಮತದಾರರ ನೋಂದಣಿ...

ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ

ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು...

ಬ್ರೆಜಿಲ್ ಚುನಾವಣೆ: ಟ್ರಂಪ್ ಬೆಂಬಲಿತ ಬಲಪಂಥೀಯ ಬೋಲ್ಸೊನಾರೊಗೆ ಸೋಲು; ನಾಲ್ಕನೇ ಬಾರಿಗೆ ಎಡಪಂಥೀಯ ಲುಲಾಗೆ ಗೆಲುವು 

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ತೀವ್ರ ಬಲಪಂಥೀಯ ಎದುರಾಳಿ ಫ್ಲಾವಿಯೊ ಬೋಲ್ಸೊನಾರೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಬ್ರೆಜಿಲ್‌ನ...

ಭಾರತ-ಚೀನಾ ಗಡಿ ಸಮಸ್ಯೆಗಳ ಕುರಿತ 26 ರೆಡ್ಡಿಟ್ ಪೋಸ್ಟ್‌ಗಳಿಗೆ ನಿರ್ಬಂಧ: ಕೇಂದ್ರದ ರಹಸ್ಯ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಐಎಫ್‌ಎಫ್

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದ ಚರ್ಚೆಗಳು, ಸೇನಾ ದೃಶ್ಯಗಳ ಪರಿಶೀಲನೆ, ಉಪಗ್ರಹ ಚಿತ್ರಗಳ ವರದಿ ಮತ್ತು ಅರುಣಾಚಲ ಪ್ರದೇಶದ ಮೇಲಿನ ಚೀನಾದ ಹಕ್ಕುಗಳ ಕುರಿತು ಪ್ರಕಟವಾಗಿದ್ದ 26 ರೆಡ್ಡಿಟ್ ಪೋಸ್ಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ....