Homeಮುಖಪುಟತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

- Advertisement -
- Advertisement -

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ ನಾಲ್ವರನ್ನು ಕೆಲವೇ ಸಮಯದಲ್ಲಿ ಮತ್ತೆ ಬಂಧಿಸಲಾಗಿದೆ. ಹೊಟ್ಟೆನೋವು ಉಂಟಾದಂತೆ ನಾಟಕವಾಡುವ ಮೂಲಕ ಕೈದಿಗಳು ಸಂಘಟಿತವಾಗಿ ಪರಾರಿಯಾಗಿದ್ದಾರೆ.

ಒಂದೇ ಕೋಣೆಯಲ್ಲಿದ್ದ ಕೆಲವು ಕೈದಿಗಳು, ತಮ್ಮ ಸಹ ಕೈದಿಯೊಬ್ಬರು ತೀವ್ರ ಅಸ್ವಸ್ಥರಾಗಿದ್ದು, ತಕ್ಷಣ ವೈದ್ಯಕೀಯ ನೆರವು ಅಗತ್ಯವಿದೆ ಎಂದು ಕರ್ತವ್ಯದಲ್ಲಿದ್ದ ವಾರ್ಡನ್‌ಗೆ ಕೂಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೈದಿಗಳಿಗೆ ನೆರವಾಗಲು ಜೈಲು ಸಿಬ್ಬಂದಿ ಕೋಣೆಯ ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ, ಕೈದಿಗಳು ಏಕಾಏಕಿ ಅವರ ಮೇಲೆ ಹಿಂಸಾತ್ಮಕವಾಗಿ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಮಣಿಸಿ, ಮೂವರು ಅಧಿಕಾರಿಗಳನ್ನು ಗಾಯಗೊಳಿಸಿದ ಬಳಿಕ ಜೈಲು ಆವರಣದಿಂದ ಪರಾರಿಯಾಗಿದ್ದಾರೆ.

ತಮಿಳುನಾಡಿನ ಹಲವು ಜಿಲ್ಲೆಗಳು ಹಾಗೂ ಅಂತರರಾಜ್ಯ ಮಟ್ಟದಲ್ಲಿ ಪರಾರಿಯಾದ ಕೈದಿಗಳಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ನೆರೆಯ ಕೇರಳ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಪಶ್ಚಿಮ ಘಟ್ಟಗಳ ಅರಣ್ಯ ಪ್ರದೇಶಗಳು ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಗಡಿಯಾಚೆಗೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಮಂಗಳವಾರ ಬೆಳಿಗ್ಗೆ ಪೊಲೀಸರು ನಾಲ್ವರು ಪರಾರಿಯಾದ ಕೈದಿಗಳನ್ನು ಮತ್ತೆ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಂಧಿತರನ್ನು ಪ್ರವೀಣ್ ಕುಮಾರ್, ಸಿಲಂಬರಸನ್, ರಾಜಾ ಸಿಕಂದರ್ ಮತ್ತು ರಾಜ್‌ಕುಮಾರ್ ಎಂದು ಗುರುತಿಸಲಾಗಿದೆ. ಉಳಿದ 13 ಕೈದಿಗಳು ಇನ್ನೂ ಪತ್ತೆಯಾಗಿಲ್ಲ.

ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯೇಂದ್ರ ಬಿಡಾರಿ ಅವರು ಪರಾರಿಯಾದವರ ಪತ್ತೆಗಾಗಿ 17 ವಿಶೇಷ ತಂಡಗಳನ್ನು ರಚಿಸಿದ್ದಾರೆ. ನೆರೆಯ ದಿಂಡಿಗಲ್ ಜಿಲ್ಲೆಯಲ್ಲಿಯೂ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಪರಾರಿಯಾದ ಕೈದಿಗಳಲ್ಲಿ ಹೆಚ್ಚಿನವರು ಮಧುರೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ.

ಸ್ಥಳೀಯ ಪೊಲೀಸರನ್ನು ಕಟ್ಟೆಚ್ಚರದಲ್ಲಿರಿಸಲಾಗಿದೆ. ಉಪಜೈಲಿನಲ್ಲಿ ಸಂಭವಿಸಿದ ಗಂಭೀರ ಭದ್ರತಾ ಲೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಎಂದು ಮೂಲವೊಂದು ತಿಳಿಸಿದೆ.

ರಾಜಕೀಯ ಸಂಘರ್ಷಕ್ಕೆ ಕಾರಣವಾದ ಘಟನೆ

ಈ ಘಟನೆಯು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಆಡಳಿತಾರೂಢ ಟಿವಿಕೆ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕಿಸಿದ್ದು, ಜೈಲಿನಿಂದ ಕೈದಿಗಳು ಪರಾರಿಯಾಗಿರುವುದನ್ನು ಭದ್ರತಾ ವ್ಯವಸ್ಥೆಯ ಅವಮಾನಕರ ವೈಫಲ್ಯ ಎಂದು ಕರೆದಿವೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಆಡಳಿತದಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿವೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಥೇಣಿ ಜಿಲ್ಲೆಯ ಜೈಲಿನಿಂದ 17 ಕೈದಿಗಳು ಪರಾರಿಯಾಗಿರುವ ಸುದ್ದಿ ಆಘಾತಕಾರಿಯಾಗಿದೆ ಎಂದು ಹೇಳಿದ್ದಾರೆ.

“ವಕೀಲರ ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಸರ್ಕಾರದ ವಿರುದ್ಧ ದಾಖಲಾಗಿರುವ ನ್ಯಾಯಾಲಯದ ಪ್ರಕರಣಗಳಿಂದಾಗಿ ಕಾನೂನು ಇಲಾಖೆ ಈಗಾಗಲೇ ನಗೆಪಾಟಲಿಗೀಡಾಗಿದೆ. ವಿದ್ಯುತ್ ಖರೀದಿ ಹಗರಣ ಮತ್ತು ಪದೇಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ವಿದ್ಯುತ್ ಇಲಾಖೆಯೂ ವಿವಾದದಲ್ಲಿ ಸಿಲುಕಿದೆ. ಈಗ ಜೈಲು ಇಲಾಖೆಯೂ ಈ ಪಟ್ಟಿಗೆ ಸೇರಿದೆ. ಈ ಮೂರು ಇಲಾಖೆಗಳನ್ನೂ ಒಬ್ಬರೇ ಸಚಿವರು ನಿರ್ವಹಿಸುತ್ತಿರುವುದು ಈ ಘಟನೆಯ ವಿಶೇಷ” ಎಂದು ಪಳನಿಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಸಚಿವ ಆರ್. ನಿರ್ಮಲ್ ಕುಮಾರ್ ಅವರ ಆಡಳಿತ ಸಾಮರ್ಥ್ಯವನ್ನು ಕಂಡು ಇಡೀ ಊರೇ ನಗುತ್ತಿದೆ” ಎಂದು ಸಚಿವರನ್ನು ಟೀಕಿಸಿದ ಪಳನಿಸ್ವಾಮಿ, ಚೆನ್ನೈನ ಪುಝಲ್ ಜೈಲಿನಿಂದ ಈ ಹಿಂದೆ ಇಬ್ಬರು ಕೈದಿಗಳು ಪರಾರಿಯಾಗಿದ್ದ ಘಟನೆಯನ್ನೂ ನೆನಪಿಸಿದ್ದಾರೆ.

“ಈ ಸರ್ಕಾರಕ್ಕೂ ಸಚಿವರಿಗೂ ಇಂತಹ ವಿಷಯಗಳ ಬಗ್ಗೆ ಗಮನ ಹರಿಸಲು ಸಮಯವಿಲ್ಲವೆಂದು ತೋರುತ್ತದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಗತಿಗಳ ಕುರಿತು ಮುಖ್ಯಮಂತ್ರಿ ವಿಜಯ್ ಅವರನ್ನು ಟೀಕಿಸಿದ ಪಳನಿಸ್ವಾಮಿ, “ಜೈಲಿನೊಳಗೇ ಭದ್ರತೆ ಇಲ್ಲದಿರುವಾಗ, ಕೈದಿಗಳೇ ಸಿಬ್ಬಂದಿಯ ಮೇಲೆ ದಾಳಿ ನಡೆಸಿ ಪರಾರಿಯಾಗುತ್ತಿರುವಾಗ, ಈ ಆಡಳಿತದಲ್ಲಿ ಸಾಮಾನ್ಯ ಜನರು ರಸ್ತೆಗಳಲ್ಲಿ ಹೇಗೆ ಸುರಕ್ಷಿತವಾಗಿರಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಟಿವಿಕೆ ಆಡಳಿತದಲ್ಲಿ ಕೊಲೆಗಳು ಹೆಚ್ಚುತ್ತಿವೆ, ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ, ಕೆಲವು ಟಿವಿಕೆ ಪದಾಧಿಕಾರಿಗಳ ಭಾಗವಹಿಸುವಿಕೆಯ ಆರೋಪಗಳೊಂದಿಗೆ ಮಾದಕ ವಸ್ತುಗಳ ಕಳ್ಳಸಾಗಣೆ ನಡೆಯುತ್ತಿದೆ, ಮಕ್ಕಳು ನಾಪತ್ತೆಯಾಗುತ್ತಿರುವ ಘಟನೆಗಳು ಮುಂದುವರಿದಿವೆ ಮತ್ತು ಕೈದಿಗಳು ಜೈಲಿನಿಂದ ಪರಾರಿಯಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪರಾರಿಯಾದ ಕೈದಿಗಳನ್ನು ತಕ್ಷಣ ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಬೇಕು. ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಸರ್ಕಾರ ಸೂಕ್ತ ಗಮನ ಹರಿಸಬೇಕು ಎಂದು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

ಟಿವಿಕೆ ಸರ್ಕಾರದ ಆಡಳಿತ ವೈಫಲ್ಯ: ಬಿಜೆಪಿ ಟೀಕೆ

ಬಿಜೆಪಿಯ ಮುಖ್ಯ ವಕ್ತಾರ ನಾರಾಯಣನ್ ತಿರುಪತಿ ಅವರು, ಥೇಣಿ ಜೈಲು ಪರಾರಿ ಘಟನೆಯು ಟಿವಿಕೆ ಸರ್ಕಾರದ ಅವಮಾನಕರ ವೈಫಲ್ಯವಾಗಿದ್ದು, ಮುಖ್ಯಮಂತ್ರಿ ವಿಜಯ್ ಅವರ ಆಡಳಿತ ಸಾಮರ್ಥ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ಹೇಳಿದ್ದಾರೆ.

“2026ರ ಅಕ್ಟೋಬರ್ 26–27ರ ರಾತ್ರಿ ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳು ಅತ್ಯಂತ ಸರಳವಾದ ತಂತ್ರವನ್ನು ಬಳಸಿ ಪರಾರಿಯಾಗಿದ್ದಾರೆ. ಎಲ್ಲರನ್ನೂ ಒಂದೇ ಕೋಣೆಯಲ್ಲಿ ಇರಿಸಲಾಗಿತ್ತು. ಒಬ್ಬ ಕೈದಿ ಮೂರ್ಚೆರೋಗ ಬಂದಂತೆ ನಟಿಸಿದರೆ, ಉಳಿದವರು ಕಾಯುತ್ತಿದ್ದರು. ಸಿಬ್ಬಂದಿ ಬಾಗಿಲು ತೆರೆದಾಗ ಅವರ ಮೇಲೆ ದಾಳಿ ನಡೆಸಿ ಕೈದಿಗಳು ಹೊರಗೆ ಹೋದರು. ಈ ಘಟನೆಯಲ್ಲಿ ಗ್ರೇಡ್‌–II ಸಿಬ್ಬಂದಿ ತಂಗಪಾಂಡಿ ಅವರ ತಲೆಗೆ ಗಾಯವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದು ಅತ್ಯಂತ ಅಪಾಯಕಾರಿ ಕೈದಿಗಳು ರೂಪಿಸಿದ ಸಂಕೀರ್ಣ ಪರಾರಿಯಲ್ಲ. ಬದಲಾಗಿ, ಟಿವಿಕೆ ಸರ್ಕಾರದ ಅಡಿಯಲ್ಲಿ ಜೈಲು ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿರುವುದರಿಂದ ಯಶಸ್ವಿಯಾದ ಸರಳ ವಂಚನೆ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇಷ್ಟೊಂದು ವಿಚಾರಣಾಧೀನ ಕೈದಿಗಳನ್ನು ಒಂದೇ ಕೋಣೆಯಲ್ಲಿ ಇರಿಸುವುದು, ವೈದ್ಯಕೀಯ ತುರ್ತುಸ್ಥಿತಿಯ ಕುರಿತು ಪರಿಶೀಲಿಸದೆ ಕೋಣೆಯ ಬಾಗಿಲು ತೆರೆಯುವುದು ಮತ್ತು ಕೈದಿಗಳ ಗುಂಪೊಂದು ಸಿಬ್ಬಂದಿಯನ್ನು ಮಣಿಸಿ ಹೊರಹೋಗಲು ಅವಕಾಶ ಮಾಡಿಕೊಡುವುದು ಟಿವಿಕೆ ಸರ್ಕಾರದ ಅಸಮರ್ಥತೆ, ದುರ್ಬಳಕೆ ಮತ್ತು ದುರಾಡಳಿತಕ್ಕೆ ಸಾಕ್ಷಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...