Homeಕರ್ನಾಟಕಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ - ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

- Advertisement -
- Advertisement -

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಸದ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ನಮಗಿತ್ತು. ಆದರೆ ಚುನಾವಣಾ ಫಲಿತಾಂಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿದೆ. ಈ ಫಲಿತಾಂಶವನ್ನು ಕೇವಲ ಚುನಾವಣಾ ಹಿನ್ನಡೆಯಾಗಿ ಪರಿಗಣಿಸದೆ, ಕಾಂಗ್ರೆಸ್ ಪಕ್ಷದ ಪಾಲಿಗೆ ಗಂಭೀರ ಆತ್ಮಾವಲೋಕನದ ಸಂದರ್ಭವಾಗಿ ಸ್ವೀಕರಿಸಿದ್ದೇವೆ. ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ” ಎಂದಿದ್ದಾರೆ.

“ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಜ್ಞಾವಂತ ಮತದಾರ ವರ್ಗವಾಗಿದ್ದು, ಅವರ ರಾಜಕೀಯ ನಿಲುವುಗಳು ಹಾಗೂ ನಿರೀಕ್ಷೆಗಳಿಗೆ ವಿಶೇಷ ಮಹತ್ವವಿದೆ. ಈ ಚುನಾವಣೆಯಲ್ಲಿ ಅಂತಹ ಮತದಾರರ ವಿಶ್ವಾಸವನ್ನು ಗಳಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ, ಪಕ್ಷದ ನಿಲುವುಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಹಾಗೂ ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸುವಲ್ಲಿ ಆಗಿರುವ ಕೊರತೆಗಳ ಬಗ್ಗೆ ಆತ್ಮಾವಲೋಕನ ನಡೆಸುತ್ತೇವೆ” ಎಂದು ಹೇಳಿದ್ದಾರೆ.

“ಶಿಕ್ಷಕರು ಮತ್ತು ಪದವೀಧರರ ನಿರೀಕ್ಷೆಗಳು, ಉದ್ಯೋಗದ ಅಭದ್ರತೆ, ಶೈಕ್ಷಣಿಕ ವ್ಯವಸ್ಥೆಯ ಸವಾಲುಗಳು ಹಾಗೂ ಅವರ ವೃತ್ತಿಪರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದನ್ನೂ ಪರಾಮರ್ಶಿಸುತ್ತೇವೆ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಪಕ್ಷದ ನಿಲುವುಗಳನ್ನು ಮತದಾರರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಆಗಿರುವ ನ್ಯೂನತೆಗಳನ್ನು ಗುರುತಿಸಿ ಸರಿಪಡಿಸಿಕೊಳ್ಳುತ್ತೇವೆ” ಎಂದು ಹರಿಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಈ ಫಲಿತಾಂಶ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಹಾಗೂ ಜನಪರ ಬದ್ಧತೆಯನ್ನು ದುರ್ಬಲಗೊಳಿಸುವುದಿಲ್ಲ. ಬದಲಾಗಿ ನಮ್ಮ ಸಂಘಟನಾ ಕಾರ್ಯವೈಖರಿ, ಜನಸಂಪರ್ಕ ಹಾಗೂ ರಾಜಕೀಯ ಕಾರ್ಯತಂತ್ರಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಿಕೊಳ್ಳುವ ಜವಾಬ್ದಾರಿಯನ್ನು ಹೆಚ್ಚಿಸಿದೆ” ಎಂದಿದ್ದಾರೆ.

“ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚುನಾವಣಾ ಫಲಿತಾಂಶದ ಕುರಿತು ಪಕ್ಷದ ಎಲ್ಲ ಹಂತಗಳಲ್ಲಿ ಸಮಗ್ರ ಪರಾಮರ್ಶೆ ನಡೆಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಶಿಕ್ಷಕರು, ಪದವೀಧರರು ಹಾಗೂ ಜನಸಾಮಾನ್ಯರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ...

ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು...

ಉತ್ತರ ಪ್ರದೇಶ| ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಸಾವು ಪ್ರಕರಣ; ಎಫ್‌ಐಆರ್ ದಾಖಲು

ಅಕ್ಟೋಬರ್ 25 ರಂದು ಪ್ರತಾಪಗಢದ ಡಾ. ಸೋನೆಲಾಲ್ ಪಟೇಲ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಕುಟುಂಬವು, ಸೋಮವಾರ ತಡರಾತ್ರಿ ಆತನ ಮೃತದೇಹವನ್ನು ಹೊತ್ತುಕೊಂಡು ತಮ್ಮ ಊರಾದ...