Homeದಲಿತ್ ಫೈಲ್ಸ್ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ ಸಹೋದರ ಸೇರಿದಂತೆ ಇಬ್ಬರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಮೃತ ಯುವಕ ಅಕ್ಷಯ್, 20 ವರ್ಷದ ರಿಧಿಮಾಳನ್ನು ಪ್ರೀತಿಸಿ ಮದುವೆಯಾಗಿದ್ದ ಎಂಬ ಕಾರಣಕ್ಕೆ ಆಕೆಯ ಕುಟುಂಬದವರಿಂದ ದಾಳಿಗೆ ಒಳಗಾಗಿದ್ದಾನೆ ಎಂದು ಶಂಕಿಸಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಈ ಜೋಡಿ ಮನೆಬಿಟ್ಟು ಓಡಿಹೋಗಿ ಮದುವೆಯಾಗಿ ನೋಯ್ಡಾದಲ್ಲಿ ನೆಲೆಸಿತ್ತು.

ಸೋಮವಾರ ಅಕ್ಷಯ್ ಮುಜಫ್ಫರ್‌ನಗರಕ್ಕೆ ಮರಳಿದ್ದ. ಅದೇ ದಿನ ಸಂಜೆ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತನ ಮೇಲೆ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್, ಮಂಗಳವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಖತೌಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಎಚ್‌ಒ) ದಿನೇಶ್ ಬಾಘೇಲ್ ಮಾತನಾಡಿ, ಈ ಕೊಲೆ ಪೂರ್ವಯೋಜಿತವಾಗಿರುವ ಶಂಕೆಯಿದ್ದು, ಸಂಚಿನಲ್ಲಿ ಹಲವು ಮಂದಿ ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾದವರಲ್ಲಿ ಆಕಾಶ್ ಎಂಬಾತನೂ ಇದ್ದಾನೆ. ದಾಳಿ ನಡೆದ ಸಂದರ್ಭದಲ್ಲಿ ಆತ ಅಕ್ಷಯ್ ಜೊತೆಯಲ್ಲಿದ್ದ. ಅಲ್ಲದೆ, ಅಕ್ಷಯ್ ಎಲ್ಲಿದ್ದಾನೆ ಮತ್ತು ಆತನ ಚಲನವಲನಗಳ ಬಗ್ಗೆ ದಾಳಿಕೋರರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಅಕ್ಷಯ್ ತನ್ನ ಸ್ವಗ್ರಾಮ ಬಿಹಾರಿಪುರದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಸರಾಯ್ ಗ್ರಾಮಕ್ಕೆ ತನ್ನ ಚಿಕ್ಕಪ್ಪನನ್ನು ಭೇಟಿಯಾಗಲು ಹೋದಾಗ ರಿಧಿಮಾಳನ್ನು ಮೊದಲ ಬಾರಿಗೆ ಭೇಟಿಯಾಗಿದ್ದ. ರಿಧಿಮಾ ಸರಾಯ್ ಗ್ರಾಮದಲ್ಲಿ ವಾಸಿಸುತ್ತಿದ್ದಳು.

ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತು. ಆದರೆ, ರಿಧಿಮಾಳ ಕುಟುಂಬದವರು ಈ ಸಂಬಂಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದರು. ಹುಡುಗಿಯ ಕುಟುಂಬದ ವಿರೋಧದ ಹಿನ್ನೆಲೆಯಲ್ಲಿ ಅಕ್ಷಯ್‌ನ ಕುಟುಂಬದವರೂ ಸಂಬಂಧವನ್ನು ಕೊನೆಗೊಳಿಸುವಂತೆ ಆತನಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ, ಅಕ್ಷಯ್ ಅದಕ್ಕೆ ಒಪ್ಪಿರಲಿಲ್ಲ.

ಸುಮಾರು ಒಂದೂವರೆ ವರ್ಷದ ಹಿಂದೆ ಈ ಜೋಡಿ ಮನೆಬಿಟ್ಟು ಓಡಿಹೋಗಿತ್ತು ಎಂದು ಮೂಲಗಳು ತಿಳಿಸಿವೆ. ಇದಾದ ಬಳಿಕ ರಿಧಿಮಾಳ ಕುಟುಂಬದವರು ಅಕ್ಷಯ್ ವಿರುದ್ಧ ಅಪಹರಣದ ದೂರು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಈ ಜೋಡಿ ನ್ಯಾಯಾಲಯದಲ್ಲಿ ವಿವಾಹವಾಗಿ ನೋಯ್ಡಾಗೆ ತೆರಳಿತ್ತು. ಅಲ್ಲಿ ಅಕ್ಷಯ್ ಕೆಲಸಕ್ಕೆ ಸೇರಿಕೊಂಡಿದ್ದ ಎಂದು ಠಾಣಾಧಿಕಾರಿ ಬಾಘೇಲ್ ಹೇಳಿದ್ದಾರೆ.

ಮದುವೆಯಾಗಿ ಬೇರೆಡೆ ನೆಲೆಸಿದ ಬಳಿಕವೂ ಅಕ್ಷಯ್ ಜೊತೆಗಿನ ಸಂಬಂಧವನ್ನು ರಿಧಿಮಾಳ ಕುಟುಂಬದವರು ಒಪ್ಪಿಕೊಳ್ಳಲಿಲ್ಲ. ಆತನ ವಿರುದ್ಧದ ಅಸಮಾಧಾನವನ್ನು ಮುಂದುವರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಷಯ್ ಮತ್ತೆ ಮುಜಫ್ಫರ್‌ನಗರಕ್ಕೆ ಮರಳುವುದಕ್ಕಾಗಿ ರಿಧಿಮಾಳ ಸಂಬಂಧಿಕರು ಕಾಯುತ್ತಿದ್ದರು ಎನ್ನಲಾಗಿದೆ.

ಸೋಮವಾರ ಬೆಳಗ್ಗೆ ಅಕ್ಷಯ್ ಮುಜಫ್ಫರ್‌ನಗರಕ್ಕೆ ಮರಳಿದ್ದ ಎಂದು ಆತನ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಅದೇ ದಿನ ಸಂಜೆ ಔಷಧಿ ಖರೀದಿಸಲು ಹೋಗುವುದಾಗಿ ಮನೆಯವರಿಗೆ ಹೇಳಿ, ಆಕಾಶ್ ಜೊತೆ ಮೋಟಾರ್‌ಸೈಕಲ್‌ನಲ್ಲಿ ತೆರಳಿದ್ದ.

ಖತೌಲಿ ಪ್ರದೇಶದ ಜನಸತ್ ರಸ್ತೆಯಲ್ಲಿರುವ ಅಂಗಡಿಯೊಂದರ ಬಳಿ ಇಬ್ಬರೂ ನಿಂತು ಮಾತನಾಡುತ್ತಿದ್ದರು. ಈ ವೇಳೆ ಮೋಟಾರ್‌ಸೈಕಲ್‌ನಲ್ಲಿ ಬಂದ ಮುಖವಾಡ ಧರಿಸಿದ್ದ ಮೂವರು ವ್ಯಕ್ತಿಗಳು ಅಕ್ಷಯ್‌ನನ್ನು ಎದುರಿಸಿದ್ದಾರೆ. ಅವರಲ್ಲೊಬ್ಬ ಇಟ್ಟಿಗೆಯಿಂದ ಆತನಿಗೆ ಹೊಡೆದಿದ್ದು, ಅಕ್ಷಯ್ ನೆಲಕ್ಕೆ ಬಿದ್ದಿದ್ದಾನೆ. ಬಳಿಕ ದಾಳಿಕೋರರು ಆತನ ತಲೆಗೆ ಪದೇಪದೆ ಇಟ್ಟಿಗೆಗಳಿಂದ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅಕ್ಷಯ್‌ನನ್ನು ಮೀರತ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಪಡೆಯುತ್ತಿದ್ದಾಗ ಆತ ಮೃತಪಟ್ಟಿದ್ದಾನೆ.

ಆರು ಸಹೋದರಿಯರ ಪೈಕಿ ಏಕೈಕ ಸಹೋದರನಾಗಿದ್ದ ಅಕ್ಷಯ್‌ನ ಅಂತ್ಯಕ್ರಿಯೆಯನ್ನು ಬುಧವಾರ ನೆರವೇರಿಸಲಾಯಿತು.

ಅಕ್ಷಯ್‌ನ ಸ್ವಗ್ರಾಮ ಬಿಹಾರಿಪುರದ ನಿವಾಸಿಗಳು ಘಟನೆಯಿಂದ ಆಕ್ರೋಶಗೊಂಡು, ನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ ಸಿಟಿ) ಅಮೃತ್ ಜೈನ್ ಅವರನ್ನು ಭೇಟಿಯಾಗಿ, ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು.

ಮುಜಫ್ಫರ್‌ನಗರದ ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ರೈ ಮಾತನಾಡಿ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...