HomeಅಂಕಣಗಳುKarnataka against SIRಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಸ್ಥಳೀಯ ಚುನಾವಣೆಗಳಿಗೆ ಎಸ್‌ಐಆರ್ ಬಳಸಬಾರದು: ನ.5ರ ಇಂಡಿಯಾ ಒಕ್ಕೂಟದ ಪ್ರತಿಭಟನೆಗೆ ಬೆಂಬಲ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಒಕ್ಕೂಟ, ಕರ್ನಾಟಕದಲ್ಲಿ ಒಂದು ಕೋಟಿಗೂ ಅಧಿಕ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದು, ಈ ದೊಡ್ಡ ಪ್ರಮಾಣದ ಅಳಿಸುವಿಕೆಗೆ ಚುನಾವಣಾ ಆಯೋಗ ಸಮರ್ಪಕ ವಿವರಣೆ ನೀಡಿಲ್ಲ ಎಂದು ಆಕ್ಷೇಪಿಸಿದೆ.

2025ರ ಮತದಾರರ ಪಟ್ಟಿಗೆ ಸುಮಾರು 6.5 ಲಕ್ಷ ಮತದಾರರು ಸೇರ್ಪಡೆಯಾಗಿದ್ದರೆ, ಅಂತಿಮ ಪಟ್ಟಿಯಿಂದ 1.06 ಕೋಟಿ ಜನರನ್ನು ಕೈಬಿಡಲಾಗಿದೆ. ಮೃತಪಟ್ಟವರು ಹಾಗೂ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವವರ ಸಂಖ್ಯೆ ಸುಮಾರು 25 ಲಕ್ಷ ಎಂದು ಚುನಾವಣಾ ಆಯೋಗವೇ ಹೇಳಿದೆ. ಈ ಅಂಕಿಅಂಶಗಳನ್ನು ಪರಿಗಣಿಸಿದರೂ ಉಳಿದ ಸುಮಾರು 75 ಲಕ್ಷ ಮತದಾರರು ಏನಾದರು ಎಂಬ ಪ್ರಶ್ನೆಗೆ ಆಯೋಗ ಉತ್ತರ ನೀಡಿಲ್ಲ ಎಂದು ಒಕ್ಕೂಟ ಆರೋಪಿಸಿದೆ.

ವಿಶೇಷವಾಗಿ, ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಶೇ.43ರಷ್ಟು ಮತದಾರರು ಪಟ್ಟಿಯಿಂದ ಕಾಣೆಯಾಗಿರುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಒಕ್ಕೂಟ, ‘ನಾಗರಿಕ ಮತ ಕಾವಲು ಸಮಿತಿ’ ರಾಜ್ಯದ ವಿವಿಧೆಡೆ ನಡೆಸಿದ ಬೂತ್ ಪರಿಶೀಲನೆಯಲ್ಲಿ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ತಿಳಿಸಿದೆ. ಸ್ಥಳದಲ್ಲೇ ವಾಸವಿದ್ದವರನ್ನು ಸ್ಥಳಾಂತರಗೊಂಡಿದ್ದಾರೆಂದು ನಮೂದಿಸಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಬದುಕಿದ್ದವರನ್ನೂ ಮೃತಪಟ್ಟಿದ್ದಾರೆಂದು ದಾಖಲಿಸಿರುವ ಪ್ರಕರಣಗಳು ಪತ್ತೆಯಾಗಿವೆ. ಇಂತಹ ದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಸಂಬಂಧಪಟ್ಟ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸಿಲ್ಲ ಎಂದು ಆರೋಪಿಸಿದೆ.

ಕಾಂಗ್ರೆಸ್ ನಾಯಕರ ದ್ವಂದ್ವ ನಿಲುವಿಗೆ ಆಕ್ಷೇಪ

ದೇಶಾದ್ಯಂತ ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಪ್ರತಿಪಕ್ಷಗಳು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬೃಹತ್ ರ‍್ಯಾಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಆದರೆ, ಇದೇ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಕೆಲವು ಸಚಿವರು ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡುತ್ತಿರುವುದು ವಿರೋಧಾಭಾಸದ ನಿಲುವು ಎಂದು ಒಕ್ಕೂಟ ಟೀಕಿಸಿದೆ.

‘ಬೆಂಗಳೂರಿನಲ್ಲಿ ಮಾತ್ರ ಸಮಸ್ಯೆಯಿದೆ, ಬೇರೆ ಜಿಲ್ಲೆಗಳಲ್ಲಿ ಸಮಸ್ಯೆಯಿಲ್ಲ’, ‘ನಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿರುವುದರಿಂದ ಯಾವುದೇ ಸಮಸ್ಯೆಯಾಗಿಲ್ಲ’ ಎಂಬಂತಹ ಹೇಳಿಕೆಗಳು ಹೋರಾಟದ ಉದ್ದೇಶಕ್ಕೆ ವಿರುದ್ಧವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ನ ಈ ದ್ವಂದ್ವ ನಿಲುವು ಮುಂದುವರಿದರೆ ಪಕ್ಷ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿರುವ ಒಕ್ಕೂಟ, ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಈ ವಿಚಾರದಲ್ಲಿ ತಮ್ಮ ಪಕ್ಷ ಮತ್ತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದೆ.

ನ.5ರ ಪ್ರತಿಭಟನೆಗೆ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಎಸ್‌ಐಆರ್ ಪ್ರಕ್ರಿಯೆ ರದ್ದತಿಗೆ ಒತ್ತಾಯಿಸಿ ‘ಇಂಡಿಯಾ’ ಒಕ್ಕೂಟದ ರಾಜಕೀಯ ಪಕ್ಷಗಳು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿವೆ. ಈ ಪ್ರತಿಭಟನೆಗೆ ಎಸ್‌ಐಆರ್ ವಿರೋಧಿ ಒಕ್ಕೂಟ ಸಕ್ರಿಯ ಬೆಂಬಲ ಘೋಷಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆಗೆ ನಿಷ್ಪಕ್ಷಪಾತ ಮತ್ತು ಪಾರದರ್ಶಕ ಚುನಾವಣಾ ಆಯೋಗದ ಅಗತ್ಯವಿದೆ. ಪ್ರತಿಯೊಬ್ಬ ಅರ್ಹ ಮತದಾರನ ಹೆಸರೂ ಮತದಾರರ ಪಟ್ಟಿಯಲ್ಲಿ ಇರಬೇಕು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕು. ಹೀಗಾಗಿ ಎಲ್ಲ ವರ್ಗದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಒಕ್ಕೂಟ ಮನವಿ ಮಾಡಿದೆ.

ಸ್ಥಳೀಯ ಚುನಾವಣೆಗಳಿಗೆ ಎಸ್‌ಐಆರ್ ಪಟ್ಟಿ ಬಳಸಬಾರದು

ಕರ್ನಾಟಕ ಸರ್ಕಾರವು ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಅದನ್ನು ಬಳಸಬಾರದು ಎಂಬುದು ಒಕ್ಕೂಟದ ಪ್ರಮುಖ ಆಗ್ರಹವಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ರಾಜ್ಯ ಚುನಾವಣಾ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯನ್ನು ಆಧರಿಸಿ ನಡೆಯುತ್ತವೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗ ಸಿದ್ಧಪಡಿಸಿರುವ ಎಸ್‌ಐಆರ್ ಪಟ್ಟಿಯನ್ನೇ ಬಳಸಬೇಕೆಂಬ ಅನಿವಾರ್ಯತೆ ಅಥವಾ ಅಗತ್ಯವಿಲ್ಲ ಎಂದು ಒಕ್ಕೂಟ ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಲ್ಲಿಯೂ ಸ್ಥಳೀಯ ಚುನಾವಣೆಗಳಿಗೆ ಎಸ್‌ಐಆರ್ ಪಟ್ಟಿಯನ್ನು ಬಳಸುತ್ತಿಲ್ಲ ಎಂದು ಉಲ್ಲೇಖಿಸಿರುವ ಒಕ್ಕೂಟ, ಕರ್ನಾಟಕದಲ್ಲಿಯೂ ಅದನ್ನು ಬಳಸಬಾರದು ಎಂದು ಒತ್ತಾಯಿಸಿದೆ. ಬದಲಾಗಿ, ರಾಜ್ಯ ಚುನಾವಣಾ ಆಯೋಗದ ಮೂಲಕ ಎಲ್ಲ ಮತಗಟ್ಟೆಗಳಲ್ಲೂ ಸಾರ್ವಜನಿಕ ಪರಿಶೀಲನಾ ಸಭೆಗಳನ್ನು ಆಯೋಜಿಸಿ, 2025ರ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ, ದೋಷಗಳನ್ನು ಸರಿಪಡಿಸಿದ ನಂತರ ಸ್ಥಳೀಯ ಚುನಾವಣೆಗಳಿಗೆ ಬಳಸಬೇಕು ಎಂದು ಮನವಿ ಮಾಡಿದೆ.

ಒಕ್ಕೂಟದ ಪ್ರಮುಖ ಬೇಡಿಕೆಗಳು

ಕರ್ನಾಟಕದಲ್ಲಿ ಒಂದು ಕೋಟಿಗೂ ಅಧಿಕ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಎಸ್‌ಐಆರ್ ಅಂತಿಮ ಪಟ್ಟಿಯನ್ನು ತಿರಸ್ಕರಿಸಬೇಕು.

ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುತ್ತಿರುವ ಕರ್ನಾಟಕದ ಕಾಂಗ್ರೆಸ್ ಸಚಿವರ ಧೋರಣೆಯನ್ನು ಸರಿಪಡಿಸಬೇಕು. ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ತಮ್ಮ ನಿಲುವು ಸ್ಪಷ್ಟಪಡಿಸಬೇಕು.

ನವೆಂಬರ್ 5ರಂದು ‘ಇಂಡಿಯಾ’ ಒಕ್ಕೂಟ ಕರೆ ನೀಡಿರುವ ಪ್ರತಿಭಟನೆಗೆ ಎಲ್ಲರೂ ಬೆಂಬಲ ನೀಡಬೇಕು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜ್ಯ ಸರ್ಕಾರ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯನ್ನು ಬಳಸಬಾರದು.

ರಾಜ್ಯ ಚುನಾವಣಾ ಆಯೋಗದ ಮೂಲಕ ಎಲ್ಲ ಮತಗಟ್ಟೆಗಳಲ್ಲೂ ಸಾರ್ವಜನಿಕ ಪರಿಶೀಲನಾ ಸಭೆಗಳನ್ನು ನಡೆಸಿ, 2025ರ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಬಳಸಬೇಕು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

    ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

    ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

    ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...

    ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

    ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾ ಅವರನ್ನು, ಘಟನೆ ನಡೆದ...

    “ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

    ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

    ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

    ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

    ‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

    ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

    ‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

    ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

    ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

    ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...