Homeಕರ್ನಾಟಕCAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

CAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

- Advertisement -
- Advertisement -

ಕೇಂದ್ರ ಸರ್ಕಾರದ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರುದ್ಧ ವಿದ್ಯಾರ್ಥಿಗಳು, ಪ್ರಗತಿಪರರು, ದಲಿತರು, ಮಹಿಳೆಯರು, ವಕೀಲರು ಪ್ರತಿಭಟನೆ ದಾಖಲಿಸಿದ್ದಾಯಿತು. ಈಗ ಅವರ ಸಾಲಿಗೆ ವೈದ್ಯರೂ ಸಹ ಸೇರಿದ್ದು ಇಂತಹ ಅಸಾಂವಿಧಾನಿಕ ಕಾಯ್ದೆ ಬೇಡ ಎಂದು ಕಲಬುರಗಿಯಲ್ಲಿ ಇಂದು ವೈಧ್ಯರ ಸಮೂಹ ಬೀದಿಗಿಳಿದಿದೆ.

ಮೆಡಿಕಲ್‌ ಫೆಟರ್ನಿಟಿ ಸಂಘಟನೆಯ ವತಿಯಿಂದ ಕಲಬುರಗಿಯ ತಿಮ್ಮಾಪುರ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸಿದ 500ಕ್ಕೂ ಹೆಚ್ಚು ವೈದ್ಯರು ಈ ಕಾಯ್ದೆಗಳಿಗೆ ನಮ್ಮ ವಿರೋಧವಿದೆ ಎಂಬ ಸಂದೇಶವನ್ನು ಸಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಡಾ.ಸೀಮಾ ದೇಶಪಾಂಡೆ ಮಾತನಾಡಿ ಸರ್ಕಾರದಲ್ಲಿರುವವರು ಕಷ್ಟದಲ್ಲಿರುವವರೆಇಗೆ ಸಹಾಯ ಮಾಡುವ ಬದಲು ಎನ್‌ಪಿಆರ್‌, ಎನ್‌ಆರ್‌ಸಿ ಕಾಯ್ದೆಗಳನ್ನು ತಂದು ತೊಂದರೆ ಕೊಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರ ಕುಸಿಯುತ್ತಿದ್ದು, ನಾವು ಭರವಸೆ ಕಳೆದುಕೊಂಡಿದ್ದೇವೆ. ಭಾರತದ ಆರ್ಥಿಕತೆ ಮರಣಶಯ್ಯೆಯಲ್ಲಿದೆ. ಭಾರತದ ಆರೋಗ್ಯ ಸ್ಥಿತಿಯು ಕುಸಿಯುತ್ತಿದೆ. ರೋಗಿಗಳು ಹಣವಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಜನರ ಸಮಸ್ಯೆಗಳನ್ನು ಮಾತಾಡುವುದನ್ನು, ಬಿಟ್ಟು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಸಿಎಎ, ಎನ್‌ಆರ್‌ಸಿಯಂತಹ ಕಾಯ್ದೆಗಳನ್ನು ತರುತ್ತಿರುವುದಕ್ಕೆ ಜವಾಬ್ದಾರಿಯುವ ವೈದ್ಯರಾಗಿ ನಮ್ಮ ವಿರೋಧವಿದೆ ಎಂದಿದ್ದಾರೆ.

ಎನ್‌ಪಿಆರ್‌ ಜನವಿರೋಧಿಗಳಾಗಿವೆ. ಇದರ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಾವು ಭಾರತದ ಜನರು. ಇಂತಹ ಕಾಯ್ದೆಗಳಿಗೆ ಬದಲಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅಶ್ವಕುಲ್ಲಾಖಾನ್‌, ಭಗತ್‌ ಸಿಂಗ್‌, ರಾಮ್‌ ಪ್ರಸಾದ್‌ ಬಿಸ್ಮಿಲ್ಲಾ, ಸುಭಾಸ್‌ ಚಂದ್ರ ಬೋಸ್‌ರಂತಹ ವಿವಿಧ ಧರ್ಮದ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಂತಹ ದೇಶದಲ್ಲಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದು ಸರಿಯಿಲ್ಲ ಎಂದರು. ನಾವು ರೋಗಿಗಳನ್ನು ನೋಡುತ್ತೇವೆಯೇ ಹೊರತು ಅವರ ಧರ್ಮವನ್ನಲ್ಲ. ನಾವು ನೈತಿಕತೆ ಹೊಂದಿದ್ದೇವೆ. ಅದಕ್ಕಾಗಿ ನಾವು ಆಡಳಿತ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದೇವೆ ಎಂದರು.

ಮೊಹಮ್ಮದ್‌ ಇರ್ಫಾನ್‌ ಮಾತನಾಡಿ ನಮ್ಮ ಸ್ವಾತಂತ್ಯಕ್ಕಾಗಿ ಈ ಹೋರಾಟ ಆರಂಭವಾಗಿದೆ. ಇದಕ್ಕೆ ಅಂತ್ಯವಿಲ್ಲ. ಕಾಯ್ದೆಯನ್ನು ಓದದೇ ಕೆಲವರು ಅದರ ಪರವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ ನಾವು ವೈದ್ಯರು, ಸಮಾಜದ ಪರಿಸ್ಥಿತಿಯನ್ನು ಅರಿತವರು ಈ ಕಾಯ್ದೆಯನ್ನು ಸಂಪೂರ್ಣವಾಗಿ ಓದಿದ್ದೇವೆ. ಇದು  ಅಸಾಂವಿಧಾನಿಕವಾದುದು, ಜನರನ್ನು ವಿಭಜಿಸುವುದಾಗಿದೆ. ಇದನ್ನು ನೋಡಿ ಸುಮ್ಮನೇ ಕೂರಲು ಸಾಧ್ಯವಿಲ್ಲ. ಅದಕ್ಕೆ ಬೀದಿಗಿಳಿದಿದ್ದೇವೆ ಎಂದರು.

ಜಾಮಿಯಾ, ಜೆಎನ್‌ಯು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಅವರಿಗೆ ಶರಣು ಹೇಳುತ್ತೇವೆ. ವಿಷಯ ಸುಪ್ರೀಂ ಕೋರ್ಟಿನಲ್ಲಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ಅಲ್ಲಿಯೂ ಈ ಕಾಯ್ದೆ ಜಾರಿಯಾದರೆ ನಾವು ದೆಹಲಿ ಚಲೋ ಕರೆ ಕೊಡುತ್ತೇವೆ ಎಂದರು.

ಡಾ. ರಾಹುಲ್‌ ತಮನ್‌ ಮಾತನಾಡಿ ಈಗಾಗಲೇ ಪೌರತ್ವಕ್ಕೆ ಕೆಲವು ನಿಯಮ, ಕಾಯ್ದೆ ಇದೆ. ಅದಕ್ಕೆ ತಿದ್ದುಪಡಿ ತಂದು ಅವರು ಮುಸ್ಲಿಂ ಜನರ ವಿರುದ್ಧವಿದ್ದೇವೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಅವರು ಬಡವರು, ದಲಿತರು, ಒಬಿಸಿ, ಮಹಿಳೆಯರ ವಿರುದ್ಧವಿದ್ದಾರೆ. ಅಸ್ಸಾಂನಲ್ಲಿ 19 ಲಕ್ಷ ಜನರನ್ನು ಬಂಧನಕೇಂದ್ರದಲ್ಲಿಟ್ಟಿದ್ದಾರೆ. ಅದರಲ್ಲಿ 5 ಲಕ್ಷ ಜನರು ಮಾತ್ರ ಮುಸ್ಲಿಮರಾಗಿದ್ದು ಉಳಿದ 14 ಲಕ್ಷ ಬೇರೆ ಜಾತಿ ಧರ್ಮದವರೇ ಆಗಿದ್ದಾರೆ. ಹಾಗಾಗಿ ಎಲ್ಲಾ ಜನರು ಈ ಕಾಯ್ದೆಯನ್ನು ವಿರೋಧಿಸಬೇಕು ಎಂದರು.

ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆಯಾದ ಕ್ರಿಮಿನಲ್‌ಗಳು ಪಾರ್ಲಿಮೆಂಟ್‌ನಲ್ಲಿದ್ದಾರೆ. ಅವರು ಪ್ರಾಮಾಣಿಕ ಜನರ ದಾಖಲೆ ಕೇಳಿ ಜೈಲಿಗಟ್ಟುವ ಹುನ್ನಾರ ನಡೆಸಿದ್ದಾರೆ. ವಸುಧೈವ ಕುಟುಂಬಕಂ ಎಂಬ ಸಂಸ್ಕೃತಿ ನಮ್ಮದು. ಈ ಭೂಮಿ ಮೇಲೆ ಇರುವ ಎಲ್ಲರೂ ನಮ್ಮ ಕುಟುಂಬದವರೇ.. ಆದರೆ ಸರ್ಕಾರ ಧರ್ಮಧ ಆಧಾರದಲ್ಲಿ ನಮ್ಮನ್ನು ಒಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಒಂದು ಲಕ್ಷ ಶಿಶುಗಳು ಹುಟ್ಟುವ ಮೊದಲೇ ಸಾವಿಗೀಡಾಗುತ್ತಿವೆ. ಇದರ ಬಗ್ಗೆ ಯೋಚಿಸಬೇಕು. ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 115ನೇ ರ್‍ಯಾಂಕ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ನಮ್ಮ ಆದ್ಯತೆಯೇನು ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...