HomeಅಂಕಣಗಳುKarnataka against SIRಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

- Advertisement -
- Advertisement -

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು!

ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ ಅರ್ಹ ಮತದಾರರನ್ನು ಅಕ್ರಮವಾಗಿ ಪಟ್ಟಿಯಿಂದ ಹೊರಗಿಟ್ಟಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿರುವ ಜನಪರ ಸಂಘಟನೆಗಳು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ಅಸಂವಿಧಾನಿಕ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಮುಂಬರುವ ಜನವರಿ ತಿಂಗಳಿನಲ್ಲಿ ಬಹುದಿನಗಳಿಂದ ಬಾಕಿಯಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಆದರೆ, ಈ ಚುನಾವಣೆಗಳಿಗೆ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಈ ಅಂತಿಮ ಎಸ್‌ಐಆರ್ ಪಟ್ಟಿಯನ್ನೇ ಅನ್ವಯಿಸಿಕೊಳ್ಳಬೇಕೇ ಅಥವಾ ಬದಿಗೊತ್ತಬೇಕೇ ಎಂಬ ಸಂವಿಧಾನಿಕ ಚರ್ಚೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.


ಈ ನಡುವೆ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ನಿದರ್ಶನಗಳನ್ನು ಹೋರಾಟಗಾರರು ಮುನ್ನೆಲೆಗೆ ತಂದಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿದ್ದ ಈ ಎಸ್‌ಐಆರ್ ಪಟ್ಟಿಯನ್ನು ಸ್ವತಃ ಬಿಜೆಪಿ ಆಡಳಿತದ ರಾಜ್ಯಗಳೇ ಒಪ್ಪಲು ತಯಾರಿರಲಿಲ್ಲ ಮತ್ತು ತಮ್ಮ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಆ ಪಟ್ಟಿಯನ್ನು ಬಳಸಲು ನಿರಾಕರಿಸಿದ್ದವು. ಭಾರತೀಯ ಸಂವಿಧಾನದ ವಿಧಿ 243K ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗಗಳಿಗೆ ಇರುವ ಸಾಂವಿಧಾನಿಕ ಸ್ವತಂತ್ರ ಅಧಿಕಾರವನ್ನು ಬಳಸಿ, ಆ ರಾಜ್ಯಗಳು ಸ್ಥಳೀಯ ಚುನಾವಣೆಗೆ ಹಳೆಯ ಅಥವಾ ಸ್ವತಂತ್ರ ಪಟ್ಟಿಯನ್ನು ಕಾಯ್ದುಕೊಂಡು ತಮ್ಮ ಮತದಾರರ ಹಕ್ಕನ್ನು ರಕ್ಷಿಸಿದ್ದವು. ಹೀಗಿದ್ದಾಗ, ಸ್ವತಃ ಬಿಜೆಪಿ ಆಡಳಿತದ ರಾಜ್ಯಗಳೇ ಅಸಂವಿಧಾನಿಕವೆಂದು ಬದಿಗೊತ್ತಿರುವ ಈ SIR ಆಧಾರಿತ ಪಟ್ಟಿಯನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಯಾವುದೇ ಕಾರಣಕ್ಕೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಳಸಬಾರದು ಎಂದು ಒಕ್ಕೂಟದ ನಾಯಕರು ಬಲವಾಗಿ ಪ್ರತಿಪಾದಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ಮತಕಾವಲು ಸಮಿತಿಯ ಪ್ರಮುಖ ನಾಯಕರು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ವರದಿಗಳನ್ನು ಸಂಪೂರ್ಣವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಒಟ್ಟು ಮತದಾರರ ಸಂಖ್ಯೆ 5.54 ಕೋಟಿಯಿಂದ 4.55 ಕೋಟಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ವಿವಿಧ ನೆಪಗಳನ್ನು ನೀಡಿ ಬರೋಬ್ಬರಿ 99.32 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದ್ದು, ನಗರ ಪ್ರದೇಶವಾದ ಬೆಂಗಳೂರಿನಲ್ಲೇ ಶೇಕಡಾ 43.2 ರಷ್ಟು ಅಂದರೆ ಸರಿಸುಮಾರು 1 ಕೋಟಿಯಷ್ಟಿದ್ದ ಮತದಾರರ ಪೈಕಿ 59 ಲಕ್ಷಕ್ಕೆ ಕುಸಿದಿರುವುದು ಇಡೀ ಪ್ರಕ್ರಿಯೆಯ ಮೇಲೆಯೇ ಮಹಾ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಡ್ಯೂಪ್ಲಿಕೇಟ್‌ ಮತ್ತು ಅನರ್ಹ ಮತದಾರರನ್ನು ಹೊರತುಪಡಿಸಿ ಎಸ್‌ಐಆರ್‌ ಪ್ರಕ್ರಿಯೆಯ ಹೆಸರಿನಲ್ಲಿ ಕರ್ನಾಟಕದಲ್ಲಿ ಕನಿಷ್ಠ 75 ಲಕ್ಷ ಅರ್ಹ ಮತದಾರರ ಹೆಸರುಗಳು ನಿಯಮಬಾಹಿರವಾಗಿ ಮತ್ತು ತಪ್ಪು ಗ್ರಹಿಕೆಯಿಂದ ಡಿಲೀಟ್ ಆಗಿರಬಹುದು ಎಂಬುದು ಹೋರಾಟಗಾರರ ಅಂದಾಜಾಗಿದೆ. ಮನೆ ಬದಲಾಯಿಸಿದವರಿಗೆ ಫಾರಂ 8 ನೀಡಿ ಮತ ವರ್ಗಾಯಿಸುವ ಬದಲು ಸಾರಾಸಾಗಟಾಗಿ ಹೆಸರುಗಳನ್ನು ಡಿಲೀಟ್ ಮಾಡಿರುವುದು ಸರಿಯಲ್ಲ ಎಂದು ಪ್ರತಿಪಾದಿಸಿರುವ ನಾಯಕರು, ಕೇವಲ ಬೆರಳೆಣಿಕೆಯ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ನೆಪದಲ್ಲಿ ಕೋಟ್ಯಾಂತರ ಭಾರತೀಯ ಪ್ರಜೆಗಳ ಮತದಾನದ ಮೂಲಭೂತ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ದೂರಿದ್ದಾರೆ.

ಹೀಗಾಗಿ, ಜಿಪಂ-ತಾಪಂ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿರುವ ಈ ಸಂದರ್ಭದಲ್ಲಿ, ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಈ ಆಕ್ಷೇಪಣೆಗಳನ್ನು ಪರಿಗಣಿಸಿ, ಸಂವಿಧಾನದ ವಿಧಿ 243K ಅಡಿಯಲ್ಲಿ ಯುಪಿ-ರಾಜಸ್ಥಾನ ಮಾದರಿಯನ್ನು ಅನುಸರಿಸುತ್ತದೆಯೇ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ SIR ಪಟ್ಟಿಯನ್ನು ಬದಿಗೊತ್ತಿ ಹಳೆಯ ಅಥವಾ ಪರಿಷ್ಕೃತ ಪಟ್ಟಿಯನ್ನೇ ಬಳಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...

ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾಳನ್ನು, ಘಟನೆ ನಡೆದ ಕೆಲವೇ...