Homeಮುಖಪುಟಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು

ಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು

- Advertisement -
- Advertisement -

ಉತ್ತರಾಖಂಡದ ರೆಸಾರ್ಟ್‌ನಲ್ಲಿ ಕೊಲೆಯಾದ ಯುವತಿ ಅಂಕಿತಾ ಭಂಡಾರಿ ಪೋಷಕರು ನ್ಯಾಯಕ್ಕಾಗಿ ತಮ್ಮ ಹೋರಾಟ ಮುಂದುವರಿಸಿದ್ದು, ಬುಧವಾರ (ನ.4) ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಗಾಂಧಿ ಸ್ಮಾರಕದ ಸಾರ್ವಜನಿಕ ದ್ವಾರದ ಬಳಿ ಧರಣಿ ಕುಳಿತಿದ್ದ ಅವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದ್ದಾರೆ.

ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದನ್ನು ವಿರೋಧಿಸಿ ಅಂಕಿತಾ ಪೋಷಕರು ಅ.14ರಂದು ಇಂಡಿಯಾ ಗೇಟ್ ಬಳಿ ಆಹೋರಾತ್ರಿ ಧರಣಿ ನಡೆಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಆ ಬಳಿಕ ಇದು ಪೊಲೀಸ್ ಬಲಪ್ರಯೋಗದ ಎರಡನೇ ಘಟನೆಯಾಗಿದೆ.

ಅ.14ರ ಧರಣಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದರು. ಮಹಿಳಾ ದೌರ್ಜನ್ಯದ ವಿರುದ್ದದ ಹೋರಾಟಗಾರ್ತಿ ಯೋಗಿತಾ ಭಯನಾ ಅವರು ಅಂಕಿತಾ ಪೋಷಕರ ಹೋರಾಟಕ್ಕೆ ಸಂಪೂರ್ಣ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ಇತರ ಹೋರಾಟಗಾರರು ಸಾಥ್ ನೀಡುತ್ತಿದ್ದಾರೆ.

ಯೋಗಿತಾ ಭಯಾನ ಅವರು ಈ ಹಿಂದೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿಯೂ ಹೋರಾಟ ನಡೆಸಿದ್ದರು. ಅತ್ಯಾಚಾರಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಕದ ತಟ್ಟಿದಾಗ ಯೋಗಿತಾ ಆಕೆಯ ಜೊತೆ ನಿಂತಿದ್ದರು.

ಅಂಕಿತಾ ಭಂಡಾರಿ ಪೋಷಕರು ಬುಧವಾರ ರಾಜ್‌ಘಾಟ್‌ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಿದರು. ನಂತರ ಅವರು, ಪ್ರತಿಭಟನೆಗೆಂದು ನಿಗದಿಪಡಿಸದ ಸ್ಥಳವಾದ ಸಾರ್ವಜನಿಕ ಪ್ರವೇಶ ದ್ವಾರದ ಬಳಿ, ಇತರ ಇಬ್ಬರೊಂದಿಗೆ ಸೇರಿ ಧರಣಿ ನಡೆಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸ್ಮಾರಕದ ದ್ವಾರದಲ್ಲಿ ಧರಣಿ ನಡೆಸುವಂತೆ ಪದೇ ಪದೇ ಮನವಿ ಮಾಡಿದರೂ ಅವರು ಕದಲಿಲ್ಲ. ಕೊನೆಗೆ ಅವರನ್ನು ಅಲ್ಲಿಂದ ತೆರವುಗೊಳಿಸಲಾಯಿತು. ವಶಕ್ಕೆ ಪಡೆದಿಲ್ಲ ಎಂದು ಪೊಲೀಸರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸರು ಬಲವಂತವಾಗಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ಅಂಕಿತಾ ತಾಯಿ ಸೋನಿ ದೇವಿ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಅವರನ್ನು ವೈದ್ಯಕೀಯ-ಕಾನೂನು ಪರೀಕ್ಷೆಗಾಗಿ (ಎಂಎಲ್‌ಸಿ) ಬುರಾರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮತ್ತು ಅವರ ಪತಿ ಇಬ್ಬರೂ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದರು ಎಂದು ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ಬುರಾರಿಯ ಎಎಪಿ ಶಾಸಕ ಸಂಜೀವ್ ಝಾ ಮತ್ತು ಅವರ ಬೆಂಬಲಿಗರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಂಕಿತಾ ಪೋಷಕರು ಶಾಸಕರೊಂದಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ.

ಋಷಿಕೇಶದ ‘ವನಂತರ ರೆಸಾರ್ಟ್’ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ ಅಂಕಿತಾ ಭಂಡಾರಿಯನ್ನು ಸೆ. 18, 2022ರಂದು ಕೊಲೆ ಮಾಡಲಾಗಿತ್ತು. ನಾಲ್ಕು ದಿನಗಳ ನಂತರ, ಚಿಲ್ಲಾ ಕಾಲುವೆಯಿಂದ ಅವರ ಮೃತದೇಹವನ್ನು ಹೊರತೆಗೆಯಲಾಗಿತ್ತು.

ಈ ಪ್ರಕರಣದಲ್ಲಿ, ಬಿಜೆಪಿ ಮಾಜಿ ನಾಯಕ ವಿನೋದ್ ಆರ್ಯ ಅವರ ಪುತ್ರ ಹಾಗೂ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ಆತನ ಇಬ್ಬರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ರೆಸಾರ್ಟ್‌ಗೆ ಬಂದಿದ್ದ ವಿಐಪಿಯೊಬ್ಬರಿಗೆ ಹೆಚ್ಚುವರಿ ಸರ್ವಿಸ್ (ಲೈಂಗಿಕವಾಗಿ ಸಹಕರಿಸುವಂತೆ) ಕೊಡುವಂತೆ ಅಪರಾಧಿಗಳು ಅಂಕಿತಾಗೆ ಒತ್ತಾಯಿಸಿದ್ದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚುವರಿ ಸರ್ವಿಸ್ ಕೇಳಿದ ವಿಐಪಿ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಎಂದು ಆರೋಪಿಸಲಾಗಿದೆ. ಗೌತಮ್ ಅವರನ್ನು ಬಿಜೆಪಿ ಸರ್ಕಾರ ಉತ್ತಾರಖಂಡದ ರಾಜ್ಯಪಾಲರಾಗಿ ಇತ್ತೀಚೆಗೆ ನೇಮಿಸಿದೆ.

ಅಂಕಿತಾ ಪ್ರಕರಣದಲ್ಲಿ ಕೊಲೆ ಅಪರಾಧಿಗಳಿಗೆ ಶಿಕ್ಷೆಯಾಗಿದೆ. ಆದರೆ, ಸರ್ವಿಸ್ ಕೇಳಿದ ವ್ಯಕ್ತಿಗೆ ಶಿಕ್ಷೆಯಾಗಿಲ್ಲ ಮತ್ತು ಆ ಆಯಾಮದಲ್ಲಿ ತನಿಖೆ ನಡೆದಿಲ್ಲ. ಹಾಗಾಗಿ, ನಮಗೆ ಸಂಪೂರ್ಣ ನ್ಯಾಯ ಸಿಕ್ಕಿಲ್ಲ ಎಂದು ಪೋಷಕರು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆ

'ಮತ ಉಳಿಸಿ, ದೇಶ ಉಳಿಸಿ' ಎಂಬ ಶಿರ್ಷಿಕೆಯಡಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ ಒಕ್ಕೂಟ'...

ಉದ್ಯೋಗಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ, ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅರ್ಹತೆ ಮತ್ತು ಪ್ರತಿಭೆಯ ಆಧಾರದಲ್ಲಿ ನೇಮಕಾತಿ ಮಾಡುವುದರ ಜೊತೆಗೆ, ಕರ್ನಾಟಕದ ಖಾಸಗಿ ಕಂಪನಿಗಳು ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಬೇಕು. ಪ್ರತಿಭಾವಂತ ಕನ್ನಡಿಗರಿಗೆ ನೇಮಕಾತಿಯಲ್ಲಿ ಆದ್ಯತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ....

‘ನೀವು ನಮ್ಮೊಂದಿಗಿದ್ದೀರಾ, ಇಲ್ಲ ನಮ್ಮ ವಿರುದ್ಧ ಇದ್ದೀರಾ’: ಇರಾನ್ ತೈಲ ವ್ಯಾಪಾರಕ್ಕೆ ನೆರವು ಆರೋಪ; ಭಾರತ ಮೂಲದ ದಂಪತಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್: ಇರಾನ್‌ನ ತೈಲ ವ್ಯಾಪಾರಕ್ಕೆ ನೆರವು ನೀಡುವ ಮೂಲಕ ಅಮೆರಿಕದ ಆರ್ಥಿಕ ನಿರ್ಬಂಧಗಳನ್ನು ಉಲ್ಲಂಘಿಸಲು ಸಹಕರಿಸಿದ ಆರೋಪದ ಮೇಲೆ ಭಾರತ ಮೂಲದ ದಂಪತಿ ಮತ್ತು ಅವರೊಂದಿಗೆ ಸಂಪರ್ಕ ಹೊಂದಿರುವ ಹಲವು ಕಂಪನಿಗಳ ವಿರುದ್ಧ...

ಆರು ರಾಜ್ಯಗಳು – ಕೇಂದ್ರಾಡಳಿತ ಪ್ರದೇಶಗಳ ‘ಎಸ್‌ಎಸ್‌ಆರ್’ ಪ್ರಕ್ರಿಯೆ ಘೋಷಿಸಿದ ಚುನಾವಣಾ ಆಯೋಗ

ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು, ಮಿಜೋರಾಂ, ಒಡಿಶಾ ಮತ್ತು ಸಿಕ್ಕಿಂಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Summary Revision -...

40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್

ʼಶೇಕಡ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ನ.4) ರದ್ದುಪಡಿಸಿದೆ. ಕರ್ನಾಟಕ...

‘ಔಪಚಾರಿಕ ಬಂಧನವಲ್ಲ, ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಲೆಕ್ಕ’: ಸುಪ್ರೀಂ ಮಹತ್ವದ ತೀರ್ಪು; ನಾಲ್ವರು ಆರೋಪಿಗಳ ಬಿಡುಗಡೆಗೆ ಆದೇಶ

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಸಾಂವಿಧಾನಿಕ ಗಡುವು ಆರಂಭವಾಗುತ್ತದೆ. ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದ ಈ ಅವಧಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ...

ಹಳೆಯ ವಿದ್ಯಾರ್ಥಿಗೆ ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದನೆ; ಕ್ಷಮೆಯಾಚನೆಯೊಂದಿಗೆ ಪ್ರಕರಣ ಮುಕ್ತಾಯಕ್ಕೆ ಪ್ರಯತ್ನ

ಹೈದರಾಬಾದ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಜಯ್ ರಾಮದಾಸ್ ಮಂಡಲಾ ಅವರು ಇಮೇಲ್ ಮೂಲಕ ತಮ್ಮನ್ನು 'ದಲಿತ ಅಸ್ಪೃಶ್ಯ ಮೂರ್ಖ' ಎಂದು ನಿಂದಿಸಿದ್ದಾರೆ ಮತ್ತು ಬಿಹಾರ ಹಾಗೂ ಜಾರ್ಖಂಡ್‌ನ ವಿದ್ಯಾರ್ಥಿಗಳನ್ನು...

SIR ನಡೆಯುತ್ತಿರುವ ರಾಜ್ಯಗಳಲ್ಲೂ ಆನ್‌ಲೈನ್ ಫಾರಂ-6 ಮತ್ತು ಘೋಷಣಾ ಪತ್ರವನ್ನು ಪ್ರತ್ಯೇಕಿಸಿದ ಚು. ಆಯೋಗ

ಭಾರತೀಯ ಚುನಾವಣಾ ಆಯೋಗ (ಇಸಿಐ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ನಡೆಯುತ್ತಿರುವ ರಾಜ್ಯಗಳಲ್ಲೂ, ಹೊಸ ಮತದಾರರ ನೋಂದಣಿಗೆ ಬಳಸಲಾಗುವ ಫಾರಂ-6 ಮತ್ತು ಅದರ ಜೊತೆಗಿನ 'ಘೋಷಣಾ ಪತ್ರವನ್ನು' (ಡಿಕ್ಲರೇಷನ್)...

ಬಿಜೆಪಿ ಕಾರ್ಯಕರ್ತನ ‘ಪಾಕಿಸ್ತಾನ್ ಜಿಂದಾಬಾದ್’ ಪ್ರಕರಣ ರದ್ದು! ಪ್ರತಿಭಟನೆ ವೇಳೆ ‘ಬಾಯಿತಪ್ಪಿ ಬಂದ ಮಾತು’ ಎಂಬ ವಾದ ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಭಾರತೀಯ ಜನತಾ ಪಾರ್ಟಿ (BJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾರ್ಯಕರ್ತನೊಬ್ಬನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಯಿತಪ್ಪಿ...

“ಒಬ್ಬ ವ್ಯಕ್ತಿ 10 ಜನರ ಕೆಲಸ ಮಾಡಬೇಕು”: ಕಾರ್ಮಿಕ ಹಕ್ಕುಗಳ ಉಲ್ಲಂಘನೆ ಖಂಡಿಸಿ ಜೆಎನ್‌ಯುನಲ್ಲಿ 500ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರ ಮುಷ್ಕರ

ನವದೆಹಲಿ: ಕಾನೂನುಬಾಹಿರ ವೇತನ ಕಡಿತ, ಶಾಸನಬದ್ಧ ಬೋನಸ್ ಪಾವತಿಸದಿರುವುದು, ಕಾರ್ಮಿಕರನ್ನು ಅನಿಯಂತ್ರಿತವಾಗಿ ಅಮಾನತುಗೊಳಿಸುವುದು ಮತ್ತು ಸಿಬ್ಬಂದಿ ಕೊರತೆಯಿಂದ ಹೆಚ್ಚುತ್ತಿರುವ ಕೆಲಸದ ಹೊರೆ ಸೇರಿದಂತೆ ಹಲವು ಕಾರ್ಮಿಕ ಹಕ್ಕುಗಳ ಉಲ್ಲಂಘನೆಗಳನ್ನು ಖಂಡಿಸಿ ದೆಹಲಿಯ ಜವಾಹರಲಾಲ್...