HomeಅಂಕಣಗಳುKarnataka against SIRಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ 'ಮತ ಉಳಿಸಿ, ದೇಶ ಉಳಿಸಿ' ಪ್ರತಿಭಟನೆ

ಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆ

- Advertisement -
- Advertisement -

‘ಮತ ಉಳಿಸಿ, ದೇಶ ಉಳಿಸಿ’ ಎಂಬ ಶಿರ್ಷಿಕೆಯಡಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿಯಾ ಒಕ್ಕೂಟ’ ದಿಂದ ಕರ್ನಾಟಕ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಗುರುವಾರ (ನ.5) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಿತು.

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್‌) ಲಿಬರೇಶನ್, ಸಮಾಜವಾದಿ ಪಕ್ಷ, (ಎಸ್‌ಪಿ), ಮುಸ್ಲಿಂ ಲೀಗ್ (ಐಯುಎಂಎಲ್‌) ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಡಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಅರ್ಜಿ ನಮೂನೆ 7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು.

ನಾವು ಕೇವಲ ಚುನಾವಣಾ ಆಯೋಗದ ವಿರುದ್ಧ ಮಾತ್ರ ಹೋರಾಟ ಮಾಡುತ್ತಿಲ್ಲ. ಚುನಾವಣಾ ಆಯೋಗದ ಹಿಂದೆ ಇರುವ ಬಿಜೆಪಿಯ ಹುನ್ನಾರದ ವಿರುದ್ಧವೂ ಹೋರಾಟ ಮಾಡುತ್ತಿದ್ದೇವೆ ಎಂದರು.

ಜನಸಾಮಾನ್ಯರ ಮತಗಳನ್ನು ಉಳಿಸುವ ವಿಚಾರದಲ್ಲಿ ನಮಗೆ ಬದ್ಧತೆಯಿದೆ. ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಎಲ್ಲ ಬಿಎಲ್‌ಒಗಳಿಗೆ ಹೇಳಲು ಬಯಸುತ್ತೇನೆ. ಮತಗಳ್ಳತನಕ್ಕೆ ಯಾರು ಕುಮ್ಮಕ್ಕು ನೀಡಿದ್ದಾರೆ, ಯಾರು ಅರ್ಜಿಗಳನ್ನು ತಂದುಕೊಟ್ಟಿದ್ದಾರೆ ಎಂಬುದಕ್ಕೆ ಸಿಸಿಟಿವಿ ದಾಖಲೆಗಳಿವೆ. ಈ ಬಗ್ಗೆ ಪ್ರಕರಣ ದಾಖಲಿಸಿ ಸಮಾಜಕ್ಕೆ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಮತಗಳ್ಳತನ ಮಾಡಿದೆ. ಅಂತಹ ಪಕ್ಷದ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಮತ ನಮ್ಮ ಬದುಕು. ನಮ್ಮ ಹಕ್ಕಿಗಾಗಿ ಇಂದು ನಾವೆಲ್ಲರೂ ಹೋರಾಟ ಮಾಡಲು ಇಲ್ಲಿ ಸೇರಿದ್ದೇವೆ ಎಂದು ಹೇಳಿದರು.

ಫ್ರೀಡಂ ಪಾರ್ಕ್ ದೇಶದ ರಾಜಕೀಯ ಬದಲಾವಣೆಯ ಹಾಗೂ ಐತಿಹಾಸಿಕ ಹೋರಾಟಗಳ ಸಾಕ್ಷಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರೊಂದಿಗೆ ಈ ಹಿಂದೆ ಇದೇ ಸ್ಥಳದಲ್ಲಿ ಮಹಾದೇವಪುರ, ಗಾಂಧಿನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಮತದಾರರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಹೋರಾಟ ಆರಂಭಿಸಲಾಗಿತ್ತು. ಆ ಹೋರಾಟ ದೇಶಕ್ಕೆ ದೊಡ್ಡ ಸಂದೇಶ ನೀಡಿತ್ತು ಎಂದು ಸ್ಮರಿಸಿದರು.

ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆಯ ಮೂಲಕ ಬಿಜೆಪಿ ಸರ್ಕಾರ ತನ್ನ ಕಾರ್ಯಕರ್ತರಿಗೆ ಬಿಎಲ್‌ಒ ಅಧಿಕಾರ ನೀಡಿಸಿ, ಲಕ್ಷಾಂತರ ಮತಗಳನ್ನು ತೆಗೆದುಹಾಕುವ ಮತ್ತು ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲು ಸಂಚು ರೂಪಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ ಚುನಾವಣಾ ಆಯೋಗವನ್ನು ಭೇಟಿ ಮಾಡಿ ರಾಜ್ಯದ ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸಿದ್ದರು. ಈ ಎಲ್ಲ ಪ್ರಯತ್ನಗಳ ನಡುವೆಯೂ ರಾಜ್ಯದ ಜನತೆ ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟರು ಎಂದರು.

ಕರ್ನಾಟಕ ಮಾತ್ರವಲ್ಲದೆ ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಹರಿಯಾಣ ಮತ್ತು ತಮಿಳುನಾಡಿನಲ್ಲಿಯೂ ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಮತದಾರರ ಹಕ್ಕುಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗವು ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುವ ಬದಲು ಒಂದು ಪಕ್ಷದ ಕಾರ್ಯಕರ್ತರಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಎಸ್‌ಐಆರ್ ಕಾನೂನು ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಸಿಇಸಿ ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹಾಗೂ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಎಸ್‌ಐಆರ್ ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ನವೆಂಬರ್ 1ರಂದು ದೆಹಲಿಯಲ್ಲಿ ಈ ಸಂಬಂಧ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳು ಹೋರಾಟವನ್ನು ಮುಂದುವರಿಸಿವೆ. ಇದು ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ವಿಚಾರವಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಮಹತ್ವದ ಹೋರಾಟವಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್, ಸಿಪಿಐನ ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್, ಸಿಪಿಐಎಂಎಲ್ ಪಕ್ಷದ ಕ್ಲಿಪ್ಟನ್ ಡಿ ರೊಜಾರಿಯೋ, ಫಾರ್ವಡ್ ಬ್ಲಾಕ್‌ನ ಶಿವಶಂಕ‌ರ್, ಬಹುಭಾಷಾ ನಟ ಪ್ರಕಾಶ್ ರಾಜ್, ಸಿಪಿಐ(ಎಂ) ಹಾಗೂ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್ ವಿಮಲಾ, ಕಾಂಗ್ರೆಸ್‌ನ ಪಲ್ಲಂರಾಜು, ಮಾಜಿ ಸಚಿವ ದಿನೇಶ್ ಗುಂಡೂರಾವ್, ಸರ್ವೋದಯ ಕರ್ನಾಟಕದ ವೀರಸಂಗಯ್ಯ, ಜಾಗೃತ ಕರ್ನಾಟಕ ಸಂಘಟನೆಯ ಡಾ.ಬಿ.ಸಿ ಬಸವರಾಜು, ಮೈ ವೋಟ್ ಮೈ ರೈಟ್‌ ಅಭಿಯಾನ ವಿನಯ್ ಶ್ರೀನಿವಾಸ್, ಉಡುಪಿ ಮುಸ್ಲಿಂ ಒಕ್ಕೂಟದ ಯಾಸೀನ್ ಮಲ್ಪೆ, ಎಐಎಸ್‌ಎಫ್‌ನ ರಾಜ್ಯಾಧ್ಯಕ್ಷೆ ವೀಣಾ ನಾಯಕ್, ಡಿವೈಎಫ್‌ಐನ ರಾಜ್ಯ ಕಾರ್ಯದರ್ಶಿ ಸಂತೋಷ್ ಬಜಾಲ್, ಎಐಎಸ್‌ಎನ ಶರತ್ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗೆ ಪತ್ರ ಬರೆಯಿರಿ, ಸಂಸತ್ತಿನಲ್ಲಿ ಎಸ್‌ಐಆರ್ ಕುರಿತು ಚರ್ಚಿಸಿ: ರಾಹುಲ್‌ಗೆ ಅಮಿತ್ ಶಾ ಸವಾಲು

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚರ್ಚೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚಿಸಲು ಗಂಭೀರವಾದ ವಿಷಯಗಳನ್ನು ಎತ್ತಿಕೊಳ್ಳುವಂತೆ ವಿಪಕ್ಷ ನಾಯಕರಿಗೆ ಅವರು ಸಲಹೆ...

ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್

ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಫಾರಂ-7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟ...

ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್

'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು, ಗುರುವಾರ (ನ.5) ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮುಂದೆ ಹಾಜರಾದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ...

ಉದ್ಯೋಗಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ, ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅರ್ಹತೆ ಮತ್ತು ಪ್ರತಿಭೆಯ ಆಧಾರದಲ್ಲಿ ನೇಮಕಾತಿ ಮಾಡುವುದರ ಜೊತೆಗೆ, ಕರ್ನಾಟಕದ ಖಾಸಗಿ ಕಂಪನಿಗಳು ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಬೇಕು. ಪ್ರತಿಭಾವಂತ ಕನ್ನಡಿಗರಿಗೆ ನೇಮಕಾತಿಯಲ್ಲಿ ಆದ್ಯತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ....

‘ನೀವು ನಮ್ಮೊಂದಿಗಿದ್ದೀರಾ, ಇಲ್ಲ ನಮ್ಮ ವಿರುದ್ಧ ಇದ್ದೀರಾ’: ಇರಾನ್ ತೈಲ ವ್ಯಾಪಾರಕ್ಕೆ ನೆರವು ಆರೋಪ; ಭಾರತ ಮೂಲದ ದಂಪತಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್: ಇರಾನ್‌ನ ತೈಲ ವ್ಯಾಪಾರಕ್ಕೆ ನೆರವು ನೀಡುವ ಮೂಲಕ ಅಮೆರಿಕದ ಆರ್ಥಿಕ ನಿರ್ಬಂಧಗಳನ್ನು ಉಲ್ಲಂಘಿಸಲು ಸಹಕರಿಸಿದ ಆರೋಪದ ಮೇಲೆ ಭಾರತ ಮೂಲದ ದಂಪತಿ ಮತ್ತು ಅವರೊಂದಿಗೆ ಸಂಪರ್ಕ ಹೊಂದಿರುವ ಹಲವು ಕಂಪನಿಗಳ ವಿರುದ್ಧ...

ಆರು ರಾಜ್ಯಗಳು – ಕೇಂದ್ರಾಡಳಿತ ಪ್ರದೇಶಗಳ ‘ಎಸ್‌ಎಸ್‌ಆರ್’ ಪ್ರಕ್ರಿಯೆ ಘೋಷಿಸಿದ ಚುನಾವಣಾ ಆಯೋಗ

ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು, ಮಿಜೋರಾಂ, ಒಡಿಶಾ ಮತ್ತು ಸಿಕ್ಕಿಂಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Summary Revision -...

ಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು

ಉತ್ತರಾಖಂಡದ ರೆಸಾರ್ಟ್‌ನಲ್ಲಿ ಕೊಲೆಯಾದ ಯುವತಿ ಅಂಕಿತಾ ಭಂಡಾರಿ ಪೋಷಕರು ನ್ಯಾಯಕ್ಕಾಗಿ ತಮ್ಮ ಹೋರಾಟ ಮುಂದುವರಿಸಿದ್ದು, ಬುಧವಾರ (ನ.4) ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಗಾಂಧಿ ಸ್ಮಾರಕದ ಸಾರ್ವಜನಿಕ ದ್ವಾರದ ಬಳಿ ಧರಣಿ ಕುಳಿತಿದ್ದ ಅವರನ್ನು ಪೊಲೀಸರು...

40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್

ʼಶೇಕಡ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ನ.4) ರದ್ದುಪಡಿಸಿದೆ. ಕರ್ನಾಟಕ...

‘ಔಪಚಾರಿಕ ಬಂಧನವಲ್ಲ, ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಲೆಕ್ಕ’: ಸುಪ್ರೀಂ ಮಹತ್ವದ ತೀರ್ಪು; ನಾಲ್ವರು ಆರೋಪಿಗಳ ಬಿಡುಗಡೆಗೆ ಆದೇಶ

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಸಾಂವಿಧಾನಿಕ ಗಡುವು ಆರಂಭವಾಗುತ್ತದೆ. ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದ ಈ ಅವಧಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ...

ಹಳೆಯ ವಿದ್ಯಾರ್ಥಿಗೆ ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದನೆ; ಕ್ಷಮೆಯಾಚನೆಯೊಂದಿಗೆ ಪ್ರಕರಣ ಮುಕ್ತಾಯಕ್ಕೆ ಪ್ರಯತ್ನ

ಹೈದರಾಬಾದ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಜಯ್ ರಾಮದಾಸ್ ಮಂಡಲಾ ಅವರು ಇಮೇಲ್ ಮೂಲಕ ತಮ್ಮನ್ನು 'ದಲಿತ ಅಸ್ಪೃಶ್ಯ ಮೂರ್ಖ' ಎಂದು ನಿಂದಿಸಿದ್ದಾರೆ ಮತ್ತು ಬಿಹಾರ ಹಾಗೂ ಜಾರ್ಖಂಡ್‌ನ ವಿದ್ಯಾರ್ಥಿಗಳನ್ನು...