HomeUncategorizedಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ನವದೆಹಲಿ:

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶೋಕಾಸ್ (ಕಾರಣ ಕೇಳಿ) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಅಕ್ಟೋಬರ್ 12 ರಂದು ಚುನಾವಣಾ ಆಯೋಗಕ್ಕೆ ಸಂಬಂಧಿತ ದೆಹಲಿ ಪ್ರತಿಭಟನೆಯ ಸಂದರ್ಭದಲ್ಲಿ ಕೇರಳ ಕಾಂಗ್ರೆಸ್‌ನ ಅಧಿಕೃತ ‘X’ (ಟ್ವಿಟರ್) ಖಾತೆಯಲ್ಲಿ ಸಿಜೆಐ ಸೂರ್ಯ ಕಾಂತ್ ಅವರ ಕುರಿತು “ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದರೆ ತಕ್ಷಣ ರಾಜೀನಾಮೆ ನೀಡಿ” ಎಂಬ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ವಿನೀತ್ ಜಿಂದಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠವು, 1971ರ ನ್ಯಾಯಾಂಗ ನಿಂದನೆ ಕಾಯ್ದೆ ಹಾಗೂ ಸಂವಿಧಾನದ 129 ನೇ ವಿಧಿಯಡಿ ಕ್ರಮ ಜರುಗಿಸುವ ಕುರಿತು ನೋಟಿಸ್ ನೀಡಿ ಪರಿಶೀಲಿಸಲು ತೀರ್ಮಾನಿಸಿರುವುದಾಗಿ ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ ವರದಿ ಮಾಡಿದೆ..

ವಿಚಾರಣೆ ವೇಳೆ ಕಾಂಗ್ರೆಸ್ ಸಮಿತಿಯ ಪರ ವಕೀಲರು ವಾದ ಮಂಡಿಸಿ, ಈ ಪೋಸ್ಟ್ ಅನ್ನು ಪಕ್ಷದ ಹಿರಿಯ ನಾಯಕರ ಅನುಮತಿಯಿಲ್ಲದೆ ಸಿಬ್ಬಂದಿ ವಿಜಯ್ ತೊಟ್ಟತಿಲ್ ಎಂಬುವವರು ಅಪ್‌ಲೋಡ್ ಮಾಡಿದ್ದರು ಎಂದು ಸ್ಪಷ್ಟಪಡಿಸಿದರು. ಘಟನೆ ಗಮನಕ್ಕೆ ಬಂದ ತಕ್ಷಣವೇ ಪೋಸ್ಟ್ ತೆಗೆದುಹಾಕಲಾಗಿದ್ದು, ತಪ್ಪಿತಸ್ಥ ನೌಕರ ವಿಜಯ್ ತೊಟ್ಟತಿಲ್ ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿ ಬೇಷರತ್ ಕ್ಷಮೆಯಾಚಿಸಲಾಗಿದೆ ಎಂದು ಪೀಠಕ್ಕೆ ತಿಳಿಸಲಾಯಿತು. ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್ ಕೂಡ ಈ ಕುರಿತು ಪ್ರತ್ಯೇಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದ ಕುರಿತು ಕಾನೂನಾತ್ಮಕ ವೀಕ್ಷಣೆಗಳನ್ನು ಹಂಚಿಕೊಂಡ ಸುಪ್ರೀಂ ಕೋರ್ಟ್ ಪೀಠವು, ಸಂವಿಧಾನಿಕ ಚೌಕಟ್ಟಿನಲ್ಲಿ ನ್ಯಾಯಾಲಯಗಳ ತೀರ್ಪುಗಳನ್ನು ವಿಮರ್ಶಿಸಲು ಸಂಪೂರ್ಣ ಅವಕಾಶವಿದೆ, ಆದರೆ ನ್ಯಾಯಾಂಗದ ಸ್ವತಂತ್ರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಅಥವಾ ಬೆದರಿಸುವ ಯತ್ನಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗುರಾಣಿಯಾಗಿ ಬಳಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನವೇ ಸರ್ವೋಚ್ಚವಾಗಿದ್ದು, ನ್ಯಾಯಾಂಗದ ಗೌರವವು ಕಾನೂನಿನ ಆಡಳಿತವನ್ನು ಆಧರಿಸಿದೆ ಎಂದು ನ್ಯಾಯಾಲಯ ತಿಳಿಸಿದೆ.

ಈ ಕಾನೂನು ಪ್ರಕ್ರಿಯೆಯಲ್ಲಿ ಪೀಠಕ್ಕೆ ಸೂಕ್ತ ನೆರವು ನೀಡಲು ಹಿರಿಯ ವಕೀಲರಾದ ಅರವಿಂದ್ ದಾತಾರ್ ಮತ್ತು ಸಿದ್ಧಾರ್ಥ್ ಅಗರ್ವಾಲ್ ಅವರನ್ನು ನ್ಯಾಯಾಲಯದ ಮಿತ್ರರನ್ನಾಗಿ ನೇಮಿಸಲಾಗಿದ್ದು, ಭಾರತದ ಅಟಾರ್ನಿ ಜನರಲ್ ಅವರ ನೆರವನ್ನೂ ಕೋರಲಾಗಿದೆ ಎಂದು ವರದಿಯಾಗಿದೆದ. ಪ್ರಸ್ತುತ ಹಂತದಲ್ಲಿ ಪ್ರಕರಣದ ಸತ್ಯಾಸತ್ಯತೆ ಕುರಿತು ಯಾವುದೇ ಅಂತಿಮ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೋರ್ಟ್, ಕೇರಳ ಕಾಂಗ್ರೆಸ್ ಪದಾಧಿಕಾರಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...

ಇನ್ಮುಂದೆ ಸರ್ಕಾರಿ ಯೋಜನೆಗಳ ಅರ್ಹತೆಗೆ ‘ಆಧಾರ್’ ಬದಲು ‘ವೋಟರ್ ಐಡಿ’?: ಕೇಂದ್ರ ಸಚಿವರ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ರೋಶ!

ಕೇಂದ್ರ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಹಾಗೂ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಇನ್ಮುಂದೆ ಆಧಾರ್ ಕಾರ್ಡ್ ಬದಲು 'ವೋಟರ್ ಐಡಿ' (ಮತದಾರರ ಗುರುತಿನ ಚೀಟಿ) ಹಾಗೂ ಬಯೋಮೆಟ್ರಿಕ್ ಪರಿಶೀಲನೆಯನ್ನು ಆಧಾರವಾಗಿ ಬಳಸಲಾಗುವುದು...

AMU ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಶ್ರಾ ನಯೀಮ್ : ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆ ಆಯ್ಕೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (AMUSU) 105 ವರ್ಷಗಳ ಇತಿಹಾಸದಲ್ಲೇ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕಾನೂನು ವಿದ್ಯಾರ್ಥಿನಿ ನಶ್ರಾ ನಯೀಮ್ ಪಾತ್ರರಾಗಿದ್ದಾರೆ. ಶುಕ್ರವಾರ (ನ.6) ಪ್ರಕಟಗೊಂಡ ಚುನಾವಣೆಯ...

ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್

ವಾಸಸ್ಥಳ ಬದಲಾಯಿಸಿದ ಅಥವಾ ಸ್ಥಳಾಂತರಗೊಂಡ ಮತದಾರರು ಕೇವಲ 'ಫಾರಂ-8' ಅನ್ನು ಮಾತ್ರ ಭರ್ತಿ ಮಾಡಬಹುದು; ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆ (enumeration form)...

ವಿಳಾಸ ಬದಲಿಸಿದ್ದಕ್ಕೆ ಫಾರಂ-8 ಸಲ್ಲಿಸಿದ್ದರೂ ಒಂದೇ ಕುಟುಂಬದ 6 ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಮರುಸೇರ್ಪಡೆಗೆ ಬಾಂಬೆ ಹೈಕೋರ್ಟ್ ಆದೇಶ

ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದ ಒಂದೇ ಕುಟುಂಬದ ಆರು ಸದಸ್ಯರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ (ನ.5) ಭಾರತೀಯ ಚುನಾವಣಾ...

ಪ್ರಧಾನಿಗೆ ಪತ್ರ ಬರೆಯಿರಿ, ಸಂಸತ್ತಿನಲ್ಲಿ ಎಸ್‌ಐಆರ್ ಕುರಿತು ಚರ್ಚಿಸಿ: ರಾಹುಲ್‌ಗೆ ಅಮಿತ್ ಶಾ ಸವಾಲು

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚರ್ಚೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚಿಸಲು ಗಂಭೀರವಾದ ವಿಷಯಗಳನ್ನು ಎತ್ತಿಕೊಳ್ಳುವಂತೆ ವಿಪಕ್ಷ ನಾಯಕರಿಗೆ ಅವರು ಸಲಹೆ...

ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್

ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಫಾರಂ-7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟ...

ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್

'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು, ಗುರುವಾರ (ನ.5) ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮುಂದೆ ಹಾಜರಾದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ...