Homeಕರ್ನಾಟಕಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

- Advertisement -
- Advertisement -

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು ಆರೋಪಗಳಿಗೆ, ಪ್ರಿಯಾಂಕ್ ಖರ್ಗೆ ‘X’ (ಟ್ವಿಟರ್) ಮೂಲಕ ಸರಣಿ ಪ್ರತ್ಯುತ್ತರ ನೀಡಿದ್ದಾರೆ.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ತಮ್ಮ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. “ನಿಮ್ಮ ಮಾತು ನಿಮ್ಮ ದುರಹಂಕಾರ ಗ್ರಾಮೀಣ ಜನರ ಬಗೆಗಿನ ತಾತ್ಸಾರ ಮನೋಭಾವಕ್ಕೆ ಹಿಡಿದ ಕನ್ನಡಿ. ನಿಮ್ಮ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಇಟಲಿಯಿಂದ ಬಂದಿರಬಹುದು, ರಾಹುಲ್ ಗಾಂಧಿ ಇಟಲಿ ಮಾತೆಯ ಪುತ್ರನಾಗಿರಬಹುದು. ಆದರೆ ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರು ಇದೇ ಕರ್ನಾಟಕದ ನೆಲದ ಹಳ್ಳಿಯಿಂದ ಬಂದವರು” ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಆಕ್ರೋಶ ಹೊರಹಾಕಿದ್ದರು. ಅಲ್ಲದೆ, ಡಾ. ರಾಜ್‌ಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಸಿನಿಮಾವನ್ನು ಸ್ಮರಿಸಿದ್ದ ಅಶೋಕ್, ಹಳ್ಳಿಯವರನ್ನು ಹೀಯಾಳಿಸುವ ಮನಸ್ಥಿತಿಗೆ ನಾಚಿಕೆಯಾಗಬೇಕು ಎಂದು ಸಚಿವರಿಗೆ ಟೀಕಿಸಿದ್ದರು.

ಆರ್. ಅಶೋಕ್ ಅವರ ಈ ರಾಜಕೀಯ ಆರೋಪಗಳಿಗೆ ಸಾಮಾಜಿಕ ಮಾಧ್ಯಮ ‘X’ ಮೂಲಕ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರನ್ನು ಸಮರ್ಥಿಸಿಕೊಳ್ಳಬೇಕಾಗಿ ಬಂದಿರುವುದು ಬಿಜೆಪಿಗೆ ಎದುರಾಗಿರುವ ರಾಜಕೀಯ ದೌರ್ಬಲ್ಯವೋ ಅಥವಾ ಸೈದ್ಧಾಂತಿಕ ದಿವಾಳಿತನವೋ, ಈ ಹಿಂದೆ ಜೆಡಿಎಸ್ ನಾಯಕರು ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗ ಬಿಜೆಪಿ ನಾಯಕರ ದಲಿತಪರ ಕಾಳಜಿ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದ್ದಾರೆ.

ತಮ್ಮ ವಿರುದ್ಧ ನಡೆದ ವೈಯಕ್ತಿಕ ಹಾಗೂ ಜಾತಿ ಆಧಾರಿತ ದಾಳಿಗಳನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಶಾಸಕರು ಹಾಗೂ ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮನ್ನು ‘ಕಾನ್ವೆಂಟ್ ದಲಿತ’, ‘ಪೈಲ್ಸ್’ ಹಾಗೂ ‘ನಾಯಿ’ ಎಂದು ನಿಂದಿಸಿದಾಗ ಅಶೋಕ್ ಅವರ ಸಂಸ್ಕೃತಿ ಮತ್ತು ನೈತಿಕತೆ ಎಲ್ಲಡಗಿತ್ತು ಎಂದು ತೀವ್ರವಾಗಿ ಪ್ರಶ್ನಿಸಿದ್ದಾರೆ. ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ತಮ್ಮ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದಾಗ, ಆರ್‌ಎಸ್‌ಎಸ್ ಕಾರ್ಯಕರ್ತರು ತಮಗೆ ಕೊಲೆ ಬೆದರಿಕೆ ಒಡ್ಡಿದಾಗ ಹಾಗೂ ಬಿಜೆಪಿ ಸಂಸದರು ದಲಿತರಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ ಎಂದು ಪ್ರಶ್ನಿಸಿದಾಗ ಅಶೋಕ್ ಅವರ ಪ್ರಜ್ಞೆ ಏಕಾಗಿ ಮೌನವಾಗಿತ್ತು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಹಾಸನದ ಪ್ರಜ್ವಲ್ ರೇವಣ್ಣ ಅವರಿಂದ ಸಂತ್ರಸ್ತರಾದ ಮಹಿಳೆಯರ ಪರವಾಗಿ ಅಥವಾ ಸೂರಜ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಧ್ವನಿ ಎತ್ತದೇ ಇರುವುದನ್ನು ಬೆಟ್ಟು ಮಾಡಿ ತೋರಿಸಿದ್ದಾರೆ. ಬಿಜೆಪಿ ನಾಯಕರ ನೈತಿಕ ಪ್ರಜ್ಞೆ ಜಾಗೃತವಾಗುವುದು ಕೇವಲ ಆಯ್ದ ವ್ಯಕ್ತಿಗಳ ವಿರುದ್ಧ ಮಾತ್ರವೇ ಎಂದು ಆಕ್ರೋಶ ಹೊರಹಾಕಿರುವ ಅವರು, ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಹೆಚ್.ಡಿ. ದೇವೇಗೌಡರು ಬಳಸಿದ್ದ ಕಟು ಪದಗಳು ನಾಡಿನ ಸಮುದಾಯಗಳಿಗೆ ನೋವುಂಟು ಮಾಡಿರಲಿಲ್ಲವೇ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...

ಇನ್ಮುಂದೆ ಸರ್ಕಾರಿ ಯೋಜನೆಗಳ ಅರ್ಹತೆಗೆ ‘ಆಧಾರ್’ ಬದಲು ‘ವೋಟರ್ ಐಡಿ’?: ಕೇಂದ್ರ ಸಚಿವರ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ರೋಶ!

ಕೇಂದ್ರ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಹಾಗೂ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಇನ್ಮುಂದೆ ಆಧಾರ್ ಕಾರ್ಡ್ ಬದಲು 'ವೋಟರ್ ಐಡಿ' (ಮತದಾರರ ಗುರುತಿನ ಚೀಟಿ) ಹಾಗೂ ಬಯೋಮೆಟ್ರಿಕ್ ಪರಿಶೀಲನೆಯನ್ನು ಆಧಾರವಾಗಿ ಬಳಸಲಾಗುವುದು...

AMU ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಶ್ರಾ ನಯೀಮ್ : ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆ ಆಯ್ಕೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (AMUSU) 105 ವರ್ಷಗಳ ಇತಿಹಾಸದಲ್ಲೇ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕಾನೂನು ವಿದ್ಯಾರ್ಥಿನಿ ನಶ್ರಾ ನಯೀಮ್ ಪಾತ್ರರಾಗಿದ್ದಾರೆ. ಶುಕ್ರವಾರ (ನ.6) ಪ್ರಕಟಗೊಂಡ ಚುನಾವಣೆಯ...

ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್

ವಾಸಸ್ಥಳ ಬದಲಾಯಿಸಿದ ಅಥವಾ ಸ್ಥಳಾಂತರಗೊಂಡ ಮತದಾರರು ಕೇವಲ 'ಫಾರಂ-8' ಅನ್ನು ಮಾತ್ರ ಭರ್ತಿ ಮಾಡಬಹುದು; ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆ (enumeration form)...

ವಿಳಾಸ ಬದಲಿಸಿದ್ದಕ್ಕೆ ಫಾರಂ-8 ಸಲ್ಲಿಸಿದ್ದರೂ ಒಂದೇ ಕುಟುಂಬದ 6 ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಮರುಸೇರ್ಪಡೆಗೆ ಬಾಂಬೆ ಹೈಕೋರ್ಟ್ ಆದೇಶ

ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದ ಒಂದೇ ಕುಟುಂಬದ ಆರು ಸದಸ್ಯರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ (ನ.5) ಭಾರತೀಯ ಚುನಾವಣಾ...

ಪ್ರಧಾನಿಗೆ ಪತ್ರ ಬರೆಯಿರಿ, ಸಂಸತ್ತಿನಲ್ಲಿ ಎಸ್‌ಐಆರ್ ಕುರಿತು ಚರ್ಚಿಸಿ: ರಾಹುಲ್‌ಗೆ ಅಮಿತ್ ಶಾ ಸವಾಲು

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚರ್ಚೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚಿಸಲು ಗಂಭೀರವಾದ ವಿಷಯಗಳನ್ನು ಎತ್ತಿಕೊಳ್ಳುವಂತೆ ವಿಪಕ್ಷ ನಾಯಕರಿಗೆ ಅವರು ಸಲಹೆ...

ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್

ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಫಾರಂ-7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟ...

ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್

'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು, ಗುರುವಾರ (ನ.5) ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮುಂದೆ ಹಾಜರಾದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ...