Homeಅಂತರಾಷ್ಟ್ರೀಯಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

ಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

- Advertisement -
- Advertisement -

ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿ ಸ್ಥಳಾಂತರಗೊಂಡ ಕುಟುಂಬಗಳು ಆಶ್ರಯ ಪಡೆದಿದ್ದ ಟೆಂಟ್‌ಗಳ ಮೇಲೆ ಮರಳಿನ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಐವರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಭಾನುವಾರ (ನ.8) ಈ ದುರಂತ ಸಂಭವಿಸಿದೆ ಎಂದು ಪ್ಯಾಲೆಸ್ತೀನ್ ಮಾಧ್ಯಮಗಳು ವರದಿ ಮಾಡಿವೆ.

ಸೂಕ್ತ ಆಶ್ರಯವಿಲ್ಲದೆ ಸತತ ನಾಲ್ಕನೇ ಚಳಿಗಾಲವನ್ನು ಎದುರಿಸುತ್ತಿರುವ ಪ್ಯಾಲೆಸ್ತೀನಿಯರ ಸಂಕಷ್ಟವನ್ನು ಈ ಘಟನೆ ಮತ್ತಷ್ಟು ಹೆಚ್ಚಿಸಿದೆ. ಗಾಜಾದಾದ್ಯಂತ ತಾತ್ಕಾಲಿಕ ಶಿಬಿರಗಳಲ್ಲಿ ವಾಸಿಸುತ್ತಿರುವ ಸಾವಿರಾರು ಸ್ಥಳಾಂತರಗೊಂಡ ಕುಟುಂಬಗಳು ಭಾರಿ ಮಳೆ ಮತ್ತು ಬಿರುಗಾಳಿಯಿಂದ ತೀವ್ರ ತೊಂದರೆ ಅನುಭವಿಸುತ್ತಿವೆ.

ಗಾಜಾದ ನಾಗರಿಕ ರಕ್ಷಣಾ ಪಡೆಗಳು ಮರಳು ಮತ್ತು ಅವಶೇಷಗಳ ಅಡಿಯಿಂದ ಐವರ ಮೃತದೇಹಗಳನ್ನು ಹೊರತೆಗೆದಿವೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅವಶೇಷಗಳ ಅಡಿಯಿಂದ ಗಾಯಗೊಂಡಿದ್ದ ಐವರನ್ನು ಜೀವಂತವಾಗಿ ಹೊರತರಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ದೇರ್ ಅಲ್-ಬಲಾಹ್‌ನ ದಕ್ಷಿಣ ಭಾಗದಲ್ಲಿರುವ ಸ್ಥಳಾಂತರಿತ ಕುಟುಂಬಗಳ ಶಿಬಿರದ ಮೇಲೆ ಮರಳು ಮತ್ತು ಬಂಡೆಗಳ ರಾಶಿ ಕುಸಿದು ಬಿದ್ದಿದ್ದು, ಹಲವರು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಗಾಜಾ ನಾಗರಿಕ ರಕ್ಷಣಾ ಪಡೆಯ ವಕ್ತಾರ ಮಹಮೂದ್ ಬಸ್ಸಾಲ್ ತಿಳಿಸಿದ್ದಾರೆ.

ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಸ್ಥಳೀಯ ನಿವಾಸಿಗಳು ಧಾವಿಸಿದ್ದು, ಸಲಿಕೆ ಸೇರಿದಂತೆ ಲಭ್ಯವಿದ್ದ ಸಾಮಾನ್ಯ ಉಪಕರಣಗಳನ್ನು ಬಳಸಿ ಕಾರ್ಯಾಚರಣೆ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳಲ್ಲಿ ಕೆಲವರು ಮರಳನ್ನು ಅಗೆದು ದೊಡ್ಡ ಕಾಂಕ್ರೀಟ್ ಚಪ್ಪಡಿಯೊಂದನ್ನು ಎತ್ತಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಮತ್ತೊಬ್ಬ ವ್ಯಕ್ತಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಬರಿಗೈಯಲ್ಲೇ ಮರಳನ್ನು ತೆರವುಗೊಳಿಸುತ್ತಿರುವುದು ದೃಶ್ಯಗಳಲ್ಲಿ ದಾಖಲಾಗಿದೆ.

ನವೆಂಬರ್ 6ರ ಶುಕ್ರವಾರ ರಾತ್ರಿ ಗಾಜಾದಲ್ಲಿ ಆರಂಭವಾದ ತೀವ್ರ ಹವಾಮಾನ ವೈಪರೀತ್ಯದ ನಡುವೆ ಈ ದುರಂತ ಸಂಭವಿಸಿದೆ. ಅಂದಿನಿಂದ ಭಾರಿ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ನವೆಂಬರ್ 7ರಂದು ಗಾಜಾ ಸರ್ಕಾರದ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಮೊದಲ ಕಡಿಮೆ ಒತ್ತಡದ ಹವಾಮಾನ ವ್ಯವಸ್ಥೆ ಗಾಜಾವನ್ನು ಪ್ರವೇಶಿಸಿದ ಕೇವಲ 12 ಗಂಟೆಗಳಲ್ಲಿ ಸುಮಾರು 70 ಸಾವಿರ ಟೆಂಟ್‌ಗಳು ಜಲಾವೃತಗೊಂಡಿವೆ. ಅಲ್ಲದೆ, ಹಲವು ಗೋಡೆಗಳು ಕುಸಿದಿದ್ದು, ಇದರಿಂದ ಉಂಟಾದ ಹಾನಿಯ ಮೊತ್ತ ಸುಮಾರು 30 ಲಕ್ಷ ಅಮೆರಿಕನ್ ಡಾಲರ್ ಎಂದು ಅಂದಾಜಿಸಲಾಗಿದೆ.

ಗಾಜಾ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ಮುನೀರ್ ಅಲ್-ಬುರ್ಷ್ ಅವರು, ಸುಮಾರು 3.5 ಲಕ್ಷ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಪ್ರತಿಕೂಲ ಹವಾಮಾನ ವೈಪರೀತ್ಯಕ್ಕೆ ನೇರವಾಗಿ ಒಡ್ಡಿಕೊಂಡಿದ್ದಾರೆ ಎಂದು ಎಚ್ಚರಿಸಿದ್ದಾರೆ. ತಾಪಮಾನ ಕುಸಿಯುತ್ತಿರುವುದರಿಂದ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾನಿಗೊಳಗಾದ ಒಳಚರಂಡಿ ಮತ್ತು ಕೊಳಚೆನೀರು ಸಂಸ್ಕರಣಾ ವ್ಯವಸ್ಥೆಗಳು, ಇಂಧನ ಹಾಗೂ ತಾಪನ ಸೌಲಭ್ಯಗಳ ಕೊರತೆಯೂ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿವೆ.

2025ರ ಅಕ್ಟೋಬರ್ 10ರಿಂದ ಕದನ ವಿರಾಮ ಜಾರಿಯಲ್ಲಿದ್ದರೂ, ಮಾನವೀಯ ನೆರವು, ಆಶ್ರಯ ನಿರ್ಮಾಣ ಸಾಮಗ್ರಿಗಳು ಮತ್ತು ಪುನರ್‌ನಿರ್ಮಾಣಕ್ಕೆ ಅಗತ್ಯವಾದ ಸರಕುಗಳ ಪೂರೈಕೆಯ ಮೇಲಿನ ನಿರ್ಬಂಧಗಳು ಮುಂದುವರಿದಿವೆ. ಇದರಿಂದ ಗಾಜಾದಲ್ಲಿ ಜನರ ಜೀವನಮಟ್ಟ ಸುಧಾರಿಸುವ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ.

ಕದನ ವಿರಾಮದ ಅವಧಿಯಲ್ಲೂ ಮುಂದುವರಿದ ಸಾವು-ನೋವು

2023ರ ಅಕ್ಟೋಬರ್ 7ರಿಂದ ಈವರೆಗೆ ಇಸ್ರೇಲ್ ದಾಳಿಗಳಲ್ಲಿ ಕನಿಷ್ಠ 74,640 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದು, 1,75,947 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

ನವೆಂಬರ್ 8ರಂದು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕದನ ವಿರಾಮ ಜಾರಿಯಾದ ಬಳಿಕವೂ 1,610 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದು, 5,819 ಮಂದಿ ಗಾಯಗೊಂಡಿದ್ದಾರೆ. ಇದೇ ಅವಧಿಯಲ್ಲಿ ಕಟ್ಟಡಗಳ ಅವಶೇಷಗಳ ಅಡಿಯಿಂದ 849 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಪ್ರದೇಶದಲ್ಲಿ ನಾಗರಿಕ ಸ್ವಾತಂತ್ರ್ಯದ ಸ್ಥಿತಿ ನಾಚಿಕೆಗೇಡಿನದ್ದು’; ಹಕ್ಕುಗಳ ಉಲ್ಲಂಘನೆ ಪೊಲೀಸರಿಗೆ ದಿನನಿತ್ಯದ ಸಂಗತಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ರಾಜ್ಯದಲ್ಲಿನ ನಾಗರಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು 'ನಾಚಿಕೆಗೇಡಿನದ್ದು' ಎಂದು ಬಣ್ಣಿಸಿದೆ. ನಾಗರಿಕರ...

ಇಸ್ರೇಲ್‌ನ ನೂತನ ಸರ್ಕಾರ ರಚಿಸಲು ಗಾಡಿ ಐಸೆನ್‌ಕೋಟ್‌ಗೆ ಅಧಿಕೃತ ಆಹ್ವಾನ

ಇಸ್ರೇಲ್‌ನ ಯಾಶರ್ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ಅವರು ದೇಶದ ಮುಂದಿನ ಸರ್ಕಾರ ರಚಿಸುವ ಅಧಿಕೃತ ಹೊಣೆಗಾರಿಕೆಯನ್ನು ಭಾನುವಾರ (ನ.8) ಸ್ವೀಕರಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ 26ನೇ ನೆಸೆಟ್‌ನ (ಇಸ್ರೇಲ್ ಸಂಸತ್ತು) ಮೊದಲ ಸರ್ಕಾರ...

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...

ಎನ್‌ಡಿಎ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ

ಕರ್ನಾಟಕದ 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ಗೂಗಲ್ ‘ರೀಯೂನಿಯನ್’ ಜಾಹೀರಾತು ಬಿಡುಗಡೆಯಾಗಿ 13 ವರ್ಷ: ಕುನಾಲ್ ಕಾಮ್ರಾ ಪೋಸ್ಟ್‌ನಿಂದ ಮತ್ತೆ ನೆನಪಾದ ಗಡಿ ಮೀರಿದ ಸೌಹಾರ್ದತೆ!

13 ವರ್ಷಗಳ ಹಿಂದೆ ಅಂದರೆ 2013ರ ನವೆಂಬರ್ 13ರಂದು ಗೂಗಲ್ ಇಂಡಿಯಾ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದ ಜಾಗತಿಕ ಪ್ರಸಿದ್ಧ ‘ರೀಯೂನಿಯನ್’ (Google Reunion) ಜಾಹೀರಾತು, ಇಂದು ಸಾಮಾಜಿಕ ಜಾಲತಾಣ...

ಕೇಂದ್ರ ಸಚಿವರ ಜೇಬು ತುಂಬಿಸಲು ಎಥನಾಲ್ ದಂಧೆ!: 130 ಕೋಟಿ ಜನರಿಗೆ 20% ಹೆಸರಲ್ಲಿ 40% ಎಥನಾಲ್ – ಪ್ರಿಯಾಂಕ್‌ ಖರ್ಗೆ!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ಸರಬರಾಜು ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಯಮಾನುಸಾರ ಇರಬೇಕಾದ ಶೇಕಡಾ 20 ಕ್ಕಿಂತಲೂ ಅಧಿಕ ಪ್ರಮಾಣದ ಎಥನಾಲ್ ಮಿಶ್ರಣ ಮಾಡುತ್ತಿರುವುದು ಈಗ ರಾಜ್ಯ ಸರ್ಕಾರ ನಡೆಸಿದ ತನಿಖೆಯಿಂದ...

ಎಥೆನಾಲ್ ಅತಿಯಾದ ಮಿಶ್ರಣ: ಸಾವಿರಾರು ವಾಹನಗಳಿಗೆ ಸಮಸ್ಯೆ, ಎಂಜಿನ್‌ಗಳು ಸ್ಥಗಿತ; ಆರೋಪ ಮತ್ತಷ್ಟು ತೀವ್ರಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿವಾದ ಕರ್ನಾಟಕದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ವಿವಿಧೆಡೆ ಸಾವಿರಾರು ವಾಹನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ, ಎಂಜಿನ್‌ಗಳು ಪದೇಪದೇ ಸ್ಥಗಿತಗೊಳ್ಳುತ್ತಿವೆ ಮತ್ತು...