Homeಕರ್ನಾಟಕಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಭಾನುವಾರ (ನ.08) ಸಿಂಧನೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಯ ಬಳಿ ನೂರಾರು ಪ್ರತಿಭಟನಾಕಾರರು ಜಮಾಯಿಸಿದರು. ತಿಡಿಗೋಳ ಚಲೋ ಕಾರ್ಯಕ್ರಮಕ್ಕೆ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್ ರ್ಯಾಲಿಯು ಬನ್ನೂರ ರಸ್ತೆಯ ಹಳ್ಳ ದಾಟುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅಡ್ಡ ನಿಂತು ತಿಡಿಗೋಳ ಗ್ರಾಮಕ್ಕೆ ಹೋಗದಂತೆ ತಡೆದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಅವರು ‘ಕಳೆದ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಿದೆ. ತಮ್ಮ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುತ್ತೇವೆ’ ಎಂದು ಭರವಸೆ ನೀಡಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, “ಲಿಂಗಾಯತರು ಅಸ್ಪೃಶ್ಯತಾ ಆಚರಣೆಗೆ ವಿರೋಧಿಗಳಾಗಿರಬೇಕು. ಆದರೆ ಅವರೇ ಅಸ್ಪೃಶ್ಯತೆ ಆಚರಣೆ ಮಾಡಿದರೆ ವಿಶ್ವಗುರು ಬಸವಣ್ಣನಿಗೆ ದ್ರೋಹ ಬಗೆದಂತಾಗುತ್ತದೆ; ತಿಡಿಗೋಳ ಗ್ರಾಮದಲ್ಲಿ ತಿಳಿಕೊಳ ಇರಬೇಕು” ಎಂದರು.

ದಲಿತ ಸಂಘರ್ಷ ಸಮಿತಿ (ಎನ್. ಮೂರ್ತಿ ಬಣ) ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ ಮಾತನಾಡಿ, “ರಾಜ್ಯ ಸರ್ಕಾರದಲ್ಲಿ ದಲಿತರೇ ಗೃಹ ಮಂತ್ರಿ, ಸಮಾಜ ಕಲ್ಯಾಣ ಮಂತ್ರಿ ಇದ್ದಾಗ್ಯೂ ದಲಿತರ ಕೊಲೆ, ಅತ್ಯಾಚಾರ, ದೌರ್ಜನ್ಯ ನಡೆಯುತ್ತಿರುವುದು ದುರದೃಷ್ಟಕರ. ತಿಡಿಗೋಳ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸಬೇಕು ಮತ್ತು ದಲಿತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಸಮಾಜ ಕಲ್ಯಾಣ ಸಚಿವರ ಮನೆಯ ಮುಂದೆ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಕೀಲರಾದ ಕ್ಲಿಪ್ಪನ್ ಮಾತನಾಡಿ, “ಜಾತಿ ಆಧಾರಿತ ಅಸ್ಪೃಶ್ಯತೆ ಆಚರಣೆ ಮಾಡುವವರು ಮಾನಸಿಕ ರೋಗ ಪೀಡಿತರಾಗಿರುತ್ತಾರೆ. ಪ್ಲಾಸ್ಟಿಕ್ ಗ್ಲಾಸ್‌ನಲ್ಲಿ ಚಹಾ ವಿತರಣೆ ಮಾಡುವುದು ಅಸ್ಪಶ್ಯತೆ ಆಚರಣೆಗೆ ಅನುಕೂಲವಾಗಿದೆ. ಕ್ಷೌರ ಮಾಡದಿರುವುದು, ದೇವಸ್ಥಾನಕ್ಕೆ ನಿಷೇಧದಂತಹ ಆಚರಣೆಗಳು ಎಂದೋ ರದ್ದಾಗಬೇಕಾಗಿತ್ತು” ಎಂದು ಹೇಳಿದರು.

ದಲಿತ ಮುಖಂಡ ಎಸ್.ಮಾರೆಪ್ಪ ವಕೀಲ, ಸಿಪಿಐಎಂಎಲ್ ಮಾಸ್‌ಲೈನ್ ರಾಜ್ಯ ಘಟಕದ ಕಾರ್ಯದರ್ಶಿ ಡಿ.ಎಚ್.ಪೂಜಾರ್ ಅವರು ದಲಿತರ ಮೇಲೆ ಹಾಕಿದ ಎಲ್ಲ ಪ್ರಕರಣಗಳನ್ನು ಸ್ಥಳದಲ್ಲಿಯೇ ಹಿಂಪಡೆಯಬೇಕು. ಇಲ್ಲದಿದ್ದರೆ ತಿಡಿಗೋಳ ಗ್ರಾಮಕ್ಕೆ ತೆರಳಲು ಬಿಡಬೇಕು ಎಂದು ಆಗ್ರಹಿಸಿದರು.

ಚಿತ್ರದುರ್ಗ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ, ಕೆಆರ್‌ಎಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್, ದಲಿತ ಹೋರಾಟಗಾರರಾದ ಶೇಖರಪ್ಪ ಧುಮತಿ ವಕೀಲ, ಎಸ್.ಮಾರೆಪ್ಪ ವಕೀಲ ರಾಯಚೂರು, ಎಂ.ಆರ್. ಬೇರಿ, ಅಂಬಣ್ಣ ಆರೋಲಿಕರ್, ರವೀಂದ್ರ ಪಟ್ಟಿ, ಹನುಮಂತಪ್ಪ ಮಾನ್ವಿ, ದಾನಪ್ಪ ನಿಲೋಗಲ್, ದೊಡ್ಡಪ್ಪ ಮುರಾರಿ ಇನ್ನಿತರರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆ: ಕೇರಳದ ವಿಜಿಲೆನ್ಸ್ ಮುಂದೆ ಹಾಜರಾದ ಗುತ್ತಿಗೆದಾರ; ಹಿಂದಿನ ತನಿಖೆ ಸಾಕ್ಷ್ಯ ಮುಚ್ಚಿಹಾಕಿದ ಆರೋಪ

ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ತನಿಖೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಡೆದ ರಸ್ತೆ...

ಗೌರಿ ಲಂಕೇಶ್, ಕಲ್ಬುರ್ಗಿ ಹತ್ಯೆ ಪ್ರಕರಣ: 6 ತಿಂಗಳಲ್ಲಿ ವಿಚಾರಣೆ ಮುಗಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸುವೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಕೇರಳದ...

ದೀಪಾವಳಿಯ ಮರುದಿನ ದಟ್ಟ ಹೊಗೆಯಿಂದ ಮುಸುಕಾದ ದೆಹಲಿ ಆಕಾಶ; ಅಪಾಯಕಾರಿ ಮಟ್ಟಕ್ಕೆ ಏರಿದ ವಾಯುಮಾಲಿನ್ಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ನಗರದಾದ್ಯಂತ ಪಟಾಕಿ ಸಿಡಿಸಿದ ಪರಿಣಾಮ, ಸೋಮವಾರ ಬೆಳಗ್ಗೆ ದೆಹಲಿ ತೀವ್ರ ವಾಯುಮಾಲಿನ್ಯದ ಹೊಡೆತಕ್ಕೆ ಸಿಲುಕಿದೆ. ದಟ್ಟ ಬೂದು ಬಣ್ಣದ ಹೊಗೆಯ ಮಂಜು ನಗರದ ಆಕಾಶವನ್ನು...

‘ಉತ್ತರ ಪ್ರದೇಶದಲ್ಲಿ ನಾಗರಿಕ ಸ್ವಾತಂತ್ರ್ಯದ ಸ್ಥಿತಿ ನಾಚಿಕೆಗೇಡಿನದ್ದು’; ಹಕ್ಕುಗಳ ಉಲ್ಲಂಘನೆ ಪೊಲೀಸರಿಗೆ ದಿನನಿತ್ಯದ ಸಂಗತಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ರಾಜ್ಯದಲ್ಲಿನ ನಾಗರಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು 'ನಾಚಿಕೆಗೇಡಿನದ್ದು' ಎಂದು ಬಣ್ಣಿಸಿದೆ. ನಾಗರಿಕರ...

ಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿ ಸ್ಥಳಾಂತರಗೊಂಡ ಕುಟುಂಬಗಳು ಆಶ್ರಯ ಪಡೆದಿದ್ದ ಟೆಂಟ್‌ಗಳ ಮೇಲೆ ಮರಳಿನ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಐವರು ಪ್ಯಾಲೆಸ್ತೀನಿಯರು...

ಇಸ್ರೇಲ್‌ನ ನೂತನ ಸರ್ಕಾರ ರಚಿಸಲು ಗಾಡಿ ಐಸೆನ್‌ಕೋಟ್‌ಗೆ ಅಧಿಕೃತ ಆಹ್ವಾನ

ಇಸ್ರೇಲ್‌ನ ಯಾಶರ್ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ಅವರು ದೇಶದ ಮುಂದಿನ ಸರ್ಕಾರ ರಚಿಸುವ ಅಧಿಕೃತ ಹೊಣೆಗಾರಿಕೆಯನ್ನು ಭಾನುವಾರ (ನ.8) ಸ್ವೀಕರಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ 26ನೇ ನೆಸೆಟ್‌ನ (ಇಸ್ರೇಲ್ ಸಂಸತ್ತು) ಮೊದಲ ಸರ್ಕಾರ...

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...