Homeಮುಖಪುಟ"ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ": ಮಧ್ಯಪ್ರದೇಶದ ಬಿಜೆಪಿ ಸಂಸದ...

“ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ”: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ವಿವಾದಿತ ಹೇಳಿಕೆ!

- Advertisement -
- Advertisement -

ತಮ್ಮ ಅಸಂಸದೀಯ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಪದೇಪದೇ ಸುದ್ದಿಯಾಗುವ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ, ದೇಶದ ಅನ್ನದಾತರ ವಿರುದ್ಧ ನಾಲಿಗೆ ಹರಿಬಿಟ್ಟು ಮತ್ತೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. “ಇಂದಿನ ರೈತರು ವರ್ಷದಲ್ಲಿ ಕೇವಲ ಮೂರು ತಿಂಗಳು ಮಾತ್ರ ಶ್ರಮ ಪಡುತ್ತಾರೆ. ಬಾಕಿ ಒಂಭತ್ತು ತಿಂಗಳು ಗಾಂಜಾ, ಮದ್ಯ ಸೇವನೆ ಹಾಗೂ ಜೂಜಾಟದಲ್ಲಿ ಸಮಯ ವ್ಯರ್ಥ ಮಾಡುತ್ತಾರೆ” ಎಂದು ಮಿಶ್ರಾ ಆರೋಪಿಸಿದ್ದು, ಈ ಹೇಳಿಕೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದೆ.

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ರಕರಿ ಗ್ರಾಮ್ ಪಂಚಾಯತ್‌ನ ಕಮಲ್ ಗೋಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗೋವರ್ಧನ ಪೂಜೆ ಕಾರ್ಯಕ್ರಮದಲ್ಲಿ ಸಂಸದ ಮಿಶ್ರಾ ಭಾಗವಹಿಸಿದ್ದರು. ವೇದಿಕೆಯಲ್ಲಿ ರೈತರ ಬದಲಾದ ಜೀವನಶೈಲಿ ಹಾಗೂ ಕೃಷಿ ಪದ್ಧತಿಗಳ ಕುರಿತು ಮಾತನಾಡಲು ಆರಂಭಿಸಿದ ಅವರು, ಇಂದಿನ ರೈತರು ಕಷ್ಟಪಡುವುದನ್ನು ಬಿಟ್ಟು ಆರಾಮಪ್ರಿಯರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಾತು ಮುಂದುವರಿಸಿದ ಸಂಸದರು, “ರೈತರು ವರ್ಷದಲ್ಲಿ ಕೇವಲ 3 ತಿಂಗಳು ಮಾತ್ರ ಶ್ರಮ ಪಡುತ್ತಾರೆ, ಉಳಿದ 9 ತಿಂಗಳು ಏನು ಮಾಡುತ್ತಾರೆ?” ಎಂದು ವೇದಿಕೆಯಿಂದಲೇ ಸಭಿಕರನ್ನು ಪ್ರಶ್ನಿಸಿದರು. ಆಗ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು “ತಾಶ್ (ಇಸ್ಪೀಟ್ ಜೂಜು) ಆಡುತ್ತಾರೆ” ಎಂದು ಉದ್ಗರಿಸಿದಾಗ, ಅದನ್ನೇ ಬೆಂಬಲಿಸಿದ ಮಿಶ್ರಾ, “ಹೌದು, ಇಂದಿನ ಕೃಷಿಕ 3 ತಿಂಗಳು ಕೆಲಸ ಮಾಡಿ, ಉಳಿದ 9 ತಿಂಗಳು ಇಸ್ಪೀಟ್ ಆಡುವುದು, ತಂಬಾಕು/ರಾಜ್‌ಶ್ರೀ ಜಗಿಯುವುದು, ಮದ್ಯದ ಬಾಟಲಿ ಹಿಡಿಯುವುದು ಹಾಗೂ ಚೋಂಗಿ-ಗಾಂಜಾ ಸೇದುವುದರಲ್ಲೇ ದಿನ ಕಳೆಯುತ್ತಾನೆ” ಎಂದು ಗಂಭೀರ ಆರೋಪ ಮಾಡಿದರು.

ಕೃಷಿಕರ ಹಾಗೂ ವಿಪಕ್ಷಗಳ ತೀವ್ರ ಆಕ್ರೋಶ:

ಕೃಷಿ ಎಂದರೆ ಕೇವಲ ಬಿತ್ತನೆ ಮತ್ತು ಕೊಯ್ಲು ಮಾತ್ರವಲ್ಲ; ವರ್ಷವಿಡೀ ಬೆಳೆ ಕಾಯುವುದು, ನೀರು ಹಾಯಿಸುವುದು, ಮಳೆ-ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟಗಳ ವಿರುದ್ಧ ನಿರಂತರ ಹೋರಾಡುವುದಾಗಿದೆ. ಹೀಗಿರುವಾಗ ಇಡೀ ರೈತ ಸಮುದಾಯವನ್ನು ‘ಸೋಮಾರಿಗಳು’ ಹಾಗೂ ‘ವ್ಯಸನಿಗಳು’ ಎಂದು ಬಿಂಬಿಸಿರುವ ಸಂಸದರ ಹೇಳಿಕೆಗೆ ರೈತ ಸಂಘಟನೆಗಳು ಹಾಗೂ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗ ಕ್ಷಮೆಯಾಚನೆಗೆ ಆಗ್ರಹಿಸಿವೆ.

ಜನಾರ್ಧನ್ ಮಿಶ್ರಾ ಅವರ ಹಿಂದಿನ ವಿವಾದಾಸ್ಪದ ಸರಣಿ ಹೇಳಿಕೆಗಳು:

ಸಂಸದ ಜನಾರ್ಧನ್ ಮಿಶ್ರಾ ಇಂತಹ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚಿನ ತಿಂಗಳುಗಳಲ್ಲಿ ಅವರು ಹಲವು ಬಾರಿ ಸಾರ್ವಜನಿಕ ವೇದಿಕೆಗಳಲ್ಲಿ ಬೇಜವಾಬ್ದಾರಿ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ:

  • ಎಲಾನ್ ಮಸ್ಕ್ ಕುರಿತು ತುಚ್ಛ ಮಾತು: ರೇವಾದಲ್ಲಿ ನಡೆದ ಸೇತುವೆ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅಮೆರಿಕದ ಉದ್ಯಮಿ ಎಲಾನ್ ಮಸ್ಕ್ ಭಾರತಕ್ಕೆ ಬರುವ ವಿಷಯ ಕುರಿತು ಮಾತನಾಡುತ್ತಾ, “ಎಲಾನ್ ಮಸ್ಕ್‌ಗೆ ಎರಡು ಗುದ್ದಿದ್ರೆ ಭಾರತದಿಂದ ಓಡಿಹೋಗ್ತಾನೆ” ಎಂದು ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲ ಸಮ್ಮುಖದಲ್ಲೇ ಹೇಳಿಕೆ ನೀಡಿರುವುದಾಗಿ ವರದಿಗಳಾಗಿವೆ.
  • ಪೆಟ್ರೋಲ್ ಬೆಲೆ ಹಾಗೂ ಇಂಧನ ವಿವಾದ: ರೇವಾ ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣವನ್ನು ವಿರೋಧಿಸುವವರನ್ನು ಪ್ರಶ್ನಿಸುತ್ತಾ, “ಶುದ್ಧ ಪೆಟ್ರೋಲ್ ನಿನ್ನ ಅಪ್ಪನ ಮನೆಯಿಂದ ಬರುತ್ತದೆಯೇ?” (Pure petrol comes from your father’s house?) ಎಂದು ಸಾರ್ವಜನಿಕ ವೇದಿಕೆಯಲ್ಲೇ ಏಕವಚನದಲ್ಲಿ ಬೈದಿರುವಾಗಿ ವರದಿಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್‌ ರಕ್ಷಿಸಲು ಟ್ರಂಪ್‌ ವಿಫಲ

'ಎರಡು ಯುದ್ಧಗಳನ್ನು ಗೆದ್ದಿದ್ದಾರೆ' ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ....

ಶಿವಮೊಗ್ಗ: ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಡಿದ್ದ ಕುಟುಂಬ, ಇಬ್ಬರು ಸ್ಟೇಷನ್ ಮಾಸ್ಟರ್‌ಗಳಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ!

ರೈಲಿನ ಶೌಚಾಲಯಗಳಲ್ಲಿ ನೀರಿನ ಸೌಲಭ್ಯವಿಲ್ಲದೆ ಪ್ರಯಾಣಿಕರು ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಿದ ಘಟನೆಯನ್ನು 'ಸೇವೆಯಲ್ಲಾದ ನ್ಯೂನತೆ' ಎಂದು ಪರಿಗಣಿಸಿರುವ ಶಿವಮೊಗ್ಗ ಜಿಲ್ಲಾ ಗ್ರಾಹಕರ ಆಯೋಗವು ರೈಲ್ವೆ ಇಲಾಖೆಗೆ ದಂಡ ವಿಧಿಸಿದೆ. ಯಶವಂತಪುರ ಮತ್ತು ತುಮಕೂರು...

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳಿದರೆ ಗಲ್ಲಿಗೇರಿಸುವುದು ಖಚಿತ: ಪ್ರಾಸಿಕ್ಯೂಟರ್ ಎಚ್ಚರಿಕೆ; ಮೇಲ್ಮನವಿಗೂ ಅವಕಾಶ ಮುಕ್ತಾಯ

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ಮರಳಿದರೆ ಮರಣದಂಡನೆ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಸ್ವಯಂ ದೇಶಭ್ರಷ್ಟರಾಗಿ ನೆಲೆಸಿರುವ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ...

ವಯನಾಡ್‌: ಹಿಂದೂ ವೃದ್ದೆಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಸಹೋದರರು

ಧಾರ್ಮಿಕ ಗಡಿಗಳನ್ನು ಮೀರಿ, ಕೇರಳದ ಬೆಟ್ಟ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಸಹೋದರರು, ತಾವು ಸುಮಾರು ಐದು ದಶಕಗಳ ಕಾಲ ತಾಯಿಯಂತೆ ಪ್ರೀತಿಸಿ ಆರೈಕೆ ಮಾಡಿದ್ದ 85 ವರ್ಷದ ಹಿಂದೂ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಮುಪ್ಪೈನಾದ್...

ಆರು ವರ್ಷಗಳ ಜೈಲು ವಾಸದ ಬಳಿಕ ಇಬ್ಬರು ಮುಸ್ಲಿಂ ಯುವಕರು ಖುಲಾಸೆ: ಯುಎಪಿಎ ಪ್ರಕರಣದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ ಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿ ಆರು ವರ್ಷಗಳಿಂದ ಜೈಲಿನಲ್ಲಿ ನರಳುತ್ತಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಇಬ್ಬರು ಯುವಕರನ್ನು ವಿಶೇಷ ನ್ಯಾಯಾಲಯ 2026ರ ನವೆಂಬರ್ 5ರಂದು ದೋಷಮುಕ್ತಗೊಳಿಸಿದೆ ಎಂದು...

ಉತ್ತರ ಪ್ರದೇಶದ ಜೈಲುಗಳಲ್ಲಿ ಮಿತಿಮೀರಿದ ಜನಸಂದಣಿ: ಡಿಜಿ ಪ್ರಿಸನ್ಸ್‌ಗೆ ವಿವರವಾದ ಅಫಿಡವಿಟ್ ಸಲ್ಲಿಸಲು ಅಲಹಾಬಾದ್ ಹೈಕೋರ್ಟ್‌ ಆದೇಶ!

ಉತ್ತರ ಪ್ರದೇಶದಾದ್ಯಂತ ಇರುವ ಜೈಲುಗಳಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಮಿತಿಮೀರಿ ಕೈದಿಗಳನ್ನು ಬಂದೀಖಾನೆಯಲ್ಲಿಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯದ ಜೈಲುಗಳ ಅತಿಯಾದ ಜನಸಂದಣಿ ಮತ್ತು ನೈಜ ಸ್ಥಿತಿಗತಿ...

ಕರ್ನಾಟಕ ಸರ್ಕಾರದ ಇ30 ಆರೋಪಕ್ಕೆ ಅಂಕಿ-ಅಂಶಗಳ ಮೂಲಕ ಭಾರತ್ ಪೆಟ್ರೋಲಿಯಂ ತಿರುಗೇಟು; ಬಳಿಕ ಟ್ವೀಟ್ ಅಳಿಸಿದ ಕಂಪನಿ!

ಕರ್ನಾಟಕ ಸರ್ಕಾರದ ಇ20 ಪೆಟ್ರೋಲ್ ಕುರಿತ ಗಂಭೀರ ಆರೋಪಗಳಿಗೆ ತಿರುಗೇಟು ನೀಡಲು ಭಾರತ್ ಪೆಟ್ರೋಲಿಯಂ (ಬಿಪಿಸಿಎಲ್‌) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‘MythVsFact’ (ಮಿಥ್ಯೆ ಮತ್ತು ವಾಸ್ತವ) ಅಭಿಯಾನ ನಡೆಸುತ್ತಿದೆ. ಆದರೆ, ಈ ಅಭಿಯಾನದ...

ಖಾಸಗಿ ಶಾಲೆಗಳ ಅನುಮೋದನೆಗೆ ಹಣ ವಸೂಲಿ ಹಗರಣ: ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್‌ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಚೆನ್ನೈ: ತಮಿಳುನಾಡಿನಲ್ಲಿ ಖಾಸಗಿ ಶಾಲೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯಲ್ಲಿ ಹಣ ವಸೂಲಿ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರಿಗೆ...

ಸಾಮಾಜಿಕ ಜಾಲತಾಣದಲ್ಲಿ ದಲಿತ ವಿರೋಧಿ ಪೋಸ್ಟ್: ಐಐಟಿ ಪಾಟ್ನಾ ರಿಜಿಸ್ಟ್ರಾರ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್

ದಲಿತ ಸಮುದಾಯದ ಕುರಿತು ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ ಹಂಚಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಐಟಿ ಪಟ್ನಾದ ರಿಜಿಸ್ಟ್ರಾರ್ ಅವಲೇಂದರ್ ಕುಮಾರ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕೆಲವು ವಾರಗಳ...

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಕೇಸ್: ಅಜಿತ್ ದೋವಲ್, ಸಾಮಂತ್ ಗೋಯೆಲ್‌ಗೆ ಸಮನ್ಸ್ ನೀಡಲು ಅಮೆರಿಕ ಕೋರ್ಟ್ ಅನುಮತಿ

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರ್ಪತ್‌ವಂತ್ ಸಿಂಗ್ ಪನ್ನುನ್ ಹೂಡಿರುವ ಖಾಸಗಿ ಸಿವಿಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಅಮೆರಿಕದ ಫೆಡರಲ್ ನ್ಯಾಯಾಲಯವು ಪ್ರಮುಖ ಆದೇಶ ನೀಡಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು...