- Advertisement -
- Advertisement -
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ನ (ಸಿಆರ್ಪಿಎಫ್)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲೆಯ ಚೆಕ್ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿಯ ಮೇಲೆ, ಬೈಕ್ನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.
ಸಿಆರ್ಪಿಎಫ್ ಪ್ರಕಾರ, ಈ ಘಟನೆಯು ಮಧ್ಯಾಹ್ನ 2.15ರ ಸುಮಾರಿಗೆ ನಡೆದಿದೆ. ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ.
ಕಳೆದ ತಿಂಗಳು, ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿರುವ ಅಲಾರ್ಮ್ಡ್ಗು ಶಿಬಿರದಲ್ಲಿ, ಉಳಿದಿದ್ದ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸುವ ವೇಳೆ ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ನಾಲ್ವರು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು.


