Homeಅಂತರಾಷ್ಟ್ರೀಯಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ...

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

- Advertisement -
- Advertisement -

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಗುರುವಾರ (ನ.11) ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹೆಲ್ಲೆ ಲಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

“ಹೈದರಾಬಾದ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಾನು ಮಾತನಾಡಬೇಕಿತ್ತು. ನನ್ನ ಭಾರತ ಭೇಟಿಗೆ ವೀಸಾ ಕೂಡ ದೊರೆತಿತ್ತು. ಆದರೆ, ಕೊನೆ ಕ್ಷಣದಲ್ಲಿ ನಾರ್ವೆಯ ಭಾರತೀಯ ರಾಯಭಾರ ಕಚೇರಿ ನನಗೆ ಕರೆ ಮಾಡಿ ಭಾರತಕ್ಕೆ ತೆರಳದಂತೆ ಸೂಚಿಸಿದೆ” ಎಂದು ಲಿಂಗ್ ಅವರು ತಿಳಿಸಿದ್ದಾರೆ.

“ಬಹುಷ ನಾನು ಈ ಹಿಂದೆ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳಿದ್ದಕ್ಕೆ ಅಥವಾ ಅವರ ಗೆಳೆಯರು ಎನ್ನಲಾದ ಅದಾನಿ ಮತ್ತು ಅಂಬಾನಿಯ ಬಗ್ಗೆ ಪ್ರಶ್ನಿಸಿದ್ದಕ್ಕೆ ನನ್ನ ಭಾರತ ಭೇಟಿಯನ್ನು ತಡೆದಿರಬಹುದು” ಎಂದಿದ್ದಾರೆ.

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಲಿಂಗ್ ವಿಡಿಯೋದಲ್ಲಿ ಮಾತನಾಡಿದ್ದಾರೆ.

thewire.in ವರದಿಯ ಪ್ರಕಾರ, ತೆಲಂಗಾಣ ಸರ್ಕಾರ ನವೆಂಬರ್ 12 ರಿಂದ 14 ರವರೆಗೆ ಆಯೋಜಿಸಿರುವ ‘ಭಾರತ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ‘ಮಾಧ್ಯಮದ ಭವಿಷ್ಯ’ (The Future of Media) ಕುರಿತಾದ ಚರ್ಚಾ ಗೋಷ್ಠಿಯಲ್ಲಿ ಲಿಂಗ್ ಮಾತನಾಡಬೇಕಿತ್ತು.

ಲಿಂಗ್ ಅವರು ಭಾರತಕ್ಕೆ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದರು. ದಾರಿ ಮಧ್ಯೆ ಅವರಿಗೆ ಕರೆ ಮಾಡಿದ ನಾರ್ವೆಯ ಭಾರತೀಯ ರಾಯಭಾರ ಕಚೇರಿ ವೀಸಾ ರದ್ದುಗೊಳಿಸಿರುವ ಬಗ್ಗೆ ತಿಳಿಸಿದೆ. ಅಲ್ಲದೆ, ವೀಸಾವನ್ನು ಅಧಿಕೃತವಾಗಿ ರದ್ದುಗೊಳಿಸುವ ಪ್ರಕ್ರಿಯೆಗಾಗಿ ಖುದ್ದಾಗಿ ರಾಯಭಾರ ಕಚೇರಿಗೆ ಭೇಟಿ ನೀಡುವಂತೆಯೂ ಅವರಿಗೆ ಸೂಚಿಸಿದೆ ಎಂದು thewire.in ವಿವರಿಸಿದೆ.

“ಇದು ಆಘಾತಕಾರಿ ಮತ್ತು ಹುಚ್ಚುತನವಾಗಿದೆ. ನನಗೆ ರಾಜಕೀಯ ಅನುಮತಿ (ಪೊಲಿಟಿಕಲ್ ಕ್ಲಿಯರೆನ್ಸ್) ಇದೆ ಮತ್ತು ಅದರ ಆಧಾರದ ಮೇಲೆ ವೀಸಾ ಕೂಡ ಸಿಕ್ಕಿದೆ, ಆದರೆ ಗೃಹ ವ್ಯವಹಾರಗಳ ಇಲಾಖೆ [ಗೃಹ ಸಚಿವಾಲಯ] ನನಗೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ನಿರ್ಧರಿಸಿದಂತೆ ತೋರುತ್ತಿದೆ. ನನ್ನ ಪ್ರಕರಣದಲ್ಲಿ ಗೃಹ ವ್ಯವಹಾರಗಳ ಇಲಾಖೆ ಹೇಗೆ ಸಂಬಂಧಪಟ್ಟಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನನಗೆ ಕಷ್ಟವಾಗುತ್ತಿದೆ. ಈ ವಾರಾಂತ್ಯದಲ್ಲಿ ಕೆಲವು ದಿನಗಳ ಕಾಲ ನಡೆಯುವ ಸಮ್ಮೇಳನವೊಂದಕ್ಕೆ ನಾನು ಹೋಗಬೇಕಾಗಿತ್ತು ಎಂದು ಲಿಂಗ್ ಗುರುವಾರ ತಿಳಿಸಿದ್ದಾಗಿ thewire.in ವರದಿ ಹೇಳಿದೆ.

‘ಭಾರತ್ ಸಮ್ಮಿಟ್’ನ ಸಂಘಟಕರಲ್ಲೊಬ್ಬರಾದ ಪುಷ್ಪರಾಜ್ ದೇಶಪಾಂಡೆ ಅವರು ಎಕ್ಸ್ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದು, “ಹೆಲ್ಲೆ ಲಿಂಗ್ ಸ್ವೆಂಡ್ಸ್ ಅವರು ಭಾರತ್ ಸಮ್ಮಿಟ್‌ನಲ್ಲಿ ನಮ್ಮೊಂದಿಗೆ ಸೇರಲು ಸಾಧ್ಯವಾಗದಿರುವುದು ಅತ್ಯಂತ ದುರದೃಷ್ಟಕರ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ಅವರ ಆಳ್ವಿಕೆಯಲ್ಲಿ ‘ಪ್ರಜಾಪ್ರಭುತ್ವದ ತಾಯಿ’ (mother of democracy) ಹೀಗಿರುತ್ತಾಳೆ!” ಎಂದು ಬರೆದುಕೊಂಡಿದ್ದಾರೆ.

ಕಳೆದ ಮೇ ತಿಂಗಳಲ್ಲಿ ನಾರ್ವೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜಧಾನಿ ಓಸ್ಲೋದಲ್ಲಿ ಅಲ್ಲಿನ ಪ್ರಧಾನಿ ಜೋನಾಸ್ ಗಹರ್ ಸ್ಟೋರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯ ಬಳಿಕ ಜಂಟಿ ಪತ್ರಿಕಾ ಹೇಳಿಕೆಯನ್ನು ನೀಡಿದ್ದರು. ಈ ವೇಳೆ ನೆರೆದಿದ್ದ ಪತ್ರಕರ್ತರಿಗೆ ಯಾವುದೇ ಪ್ರಶ್ನೆಗಳನ್ನು ಕೇಳಲು ಅವಕಾಶ ಇರಲಿಲ್ಲ.

ಹೇಳಿಕೆ ಓದಿದ ನಂತರ ಉಭಯ ನಾಯಕರು ವೇದಿಕೆಯಿಂದ ನಿರ್ಗಮಿಸುತ್ತಿದ್ದಾಗ, ನಾರ್ವೆಯ ಪ್ರಮುಖ ಪತ್ರಿಕೆಯಾದ ‘ಡಾಗ್ಸಾವಿಸೆನ್’ನ (Dagsavisen) ಪತ್ರಕರ್ತೆ ಹೆಲ್ಲೆ ಲಿಂಗ್ ಸ್ವೆಂಡ್ಸೆನ್ ಅವರು ಮೋದಿಯವರನ್ನು ಉದ್ದೇಶಿಸಿ, “ಪ್ರಧಾನಿ ಮೋದಿ, ವಿಶ್ವದ ಅತ್ಯಂತ ಸ್ವತಂತ್ರ ಪತ್ರಿಕಾ ಮಾಧ್ಯಮಗಳ ಕೆಲವು ಪ್ರಶ್ನೆಗಳಿಗೆ ನೀವೇಕೆ ಉತ್ತರಿಸಬಾರದು?” ಎಂದು ಜೋರಾಗಿ ಪ್ರಶ್ನಿಸಿದ್ದರು. ಆದರೆ, ಪ್ರಧಾನಿ ಮೋದಿ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ನಿರ್ಗಮಿಸಿದ್ದರು. ಲಿಂಗ್ ಅವರು ಮೋದಿಯವರನ್ನು ಹಿಂಬಾಲಿಸಿ ಮತ್ತೊಂದು ಪ್ರಶ್ನೆ ಕೇಳಲು ಪ್ರಯತ್ನಿಸಿದರಾದರೂ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದರು.

ಪ್ರಧಾನಿ ಮೋದಿ ಪತ್ರಕರ್ತೆಯ ಪ್ರಶ್ನೆಗೆ ಉತ್ತರಿಸದೆ ತೆರಳಿದ ವಿಡಿಯೋ ಜಗತ್ತಿನಾದ್ಯಂತ ವೈರಲ್ ಆಗಿ, ಭಾರೀ ಚರ್ಚೆಗೆ ಒಳಗಾಗಿತ್ತು. ಭಾರತದ ಬಲಪಂಥೀಯಯರು ಮೋದಿಯವರನ್ನು ಸಮರ್ಥಿಸಿಕೊಂಡು ಪ್ರಶ್ನೆ ಕೇಳಿದ ಪತ್ರಕರ್ತೆ ಲಿಂಗ್ ಅವರನ್ನೇ ಟೀಕಿಸಿದ್ದರು.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳೀಯರ ಹೋರಾಟಕ್ಕೆ ಸಂದ ಜಯ: ‘ನಮ್ಮ ಮೆಟ್ರೋ’ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರದಿಂದ ಅನುಮೋದನೆ!

ಬೆಂಗಳೂರು: 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) ಎಲಿವೇಟೆಡ್‌ ಕಾರಿಡಾರ್‌ನ ಮೂರು ಪ್ರಮುಖ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...

ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್‌

ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ 'ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್' (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್...

ಎಸ್‌ಐಆರ್ ಅವಧಿಯಲ್ಲಿ ಕೈಬಿಡಲಾದ ವ್ಯಕ್ತಿಗಳ ಗುರುತಿನ ಚೀಟಿ ಸಂಖ್ಯೆ ಮರುಸ್ಥಾಪನೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಇಬ್ಬರು ಅರ್ಜಿದಾರರು, ತಮ್ಮ ಪರಿಷ್ಕೃತ ಪರಿಹಾರ ಪ್ರಕ್ರಿಯೆಯನ್ನು ಕೇವಲ ಏಳು ರಾಜ್ಯಗಳಿಗೆ ಸೀಮಿತಗೊಳಿಸುವ ಬದಲು, ಕರಡು ಪಟ್ಟಿಯಿಂದ ಕೈಬಿಡಲಾದ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ...

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...