Homeಮುಖಪುಟಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈ: ಜನರ ಮೂಲಭೂತ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವ ನಾಗರಿಕರ ಮೇಲೆ ಅಸ್ಪಷ್ಟ ಆರೋಪಗಳನ್ನು ಹೊರಿಸಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದನ್ನು ನ್ಯಾಯಾಲಯ ತೀವ್ರವಾಗಿ ಪ್ರಶ್ನಿಸಿದ್ದು, ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

ಅಕ್ಟೋಬರ್ 29ರಂದು ಹೊರಡಿಸಿದ ಆದೇಶದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌ನ ನಾಗಪುರ ಪೀಠದ ನ್ಯಾಯಮೂರ್ತಿ ಎಂ.ಡಬ್ಲ್ಯೂ. ಚಂದ್ವಾನಿ, ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವ ನಡುವಿನ ವ್ಯತ್ಯಾಸವನ್ನು ಮಸುಕಾಗಲು ಬಿಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳದಿದ್ದರೆ, ಹಿಂಸಾಚಾರದಲ್ಲಿ ತೊಡಗದಿದ್ದರೆ ಅಥವಾ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗೆ ಹಾನಿ ಮಾಡದಿದ್ದರೆ, ಪ್ರಜಾಪ್ರಭುತ್ವದ ಭಾಗವಾಗಿರುವ ಅವರ ಪ್ರತಿಭಟನೆಗಳನ್ನು ಅಪರಾಧವೆಂದು ಪರಿಗಣಿಸಿ ಕಾನೂನು ಕ್ರಮ ಜರುಗಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ಚಂದ್ರಾಪುರ ಜಿಲ್ಲೆಯ ನಂದಗಾಂವ್ ಗ್ರಾಮದ ನಿವಾಸಿ ನಿಷ್ಕರ್ಷ್ ನಿಮ್ಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಈ ವರ್ಷದ ಜನವರಿಯಲ್ಲಿ ಗ್ರಾಮದ ರಸ್ತೆಗಳ ದುಸ್ಥಿತಿಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ರಸ್ತೆಯ ಕಳಪೆ ಸ್ಥಿತಿಯಿಂದಾಗಿ ವಾಹನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಗ್ರಾಮಸ್ಥರು, ರಸ್ತೆ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಆದರೆ, ಪ್ರತಿಭಟನಾಕಾರರು ಕಾನೂನುಬಾಹಿರವಾಗಿ ಗುಂಪುಗೂಡಿ ರಸ್ತೆ ತಡೆ ನಡೆಸಿದ್ದಾರೆ ಎಂಬುದು ಪೊಲೀಸರ ಆರೋಪವಾಗಿತ್ತು. ಇದನ್ನು ಪ್ರಶ್ನಿಸಿ ನಿಮ್ಗಡೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಂವಿಧಾನದ 19(1)(ಬಿ) ವಿಧಿಯು ಶಾಂತಿಯುತವಾಗಿ ಮತ್ತು ಶಸ್ತ್ರಾಸ್ತ್ರಗಳಿಲ್ಲದೆ ಸಭೆ ಸೇರುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕನಿಗೂ ಖಾತರಿಪಡಿಸಿದೆ ಎಂದು ನ್ಯಾಯಾಲಯ ನೆನಪಿಸಿದೆ. ಈ ಹಕ್ಕಿನ ಮೇಲೆ ಸಮಂಜಸವಾದ ನಿರ್ಬಂಧಗಳನ್ನು ವಿಧಿಸಲು ಅವಕಾಶವಿದ್ದರೂ, ಅಸ್ಪಷ್ಟ ಆರೋಪಗಳ ನೆಪದಲ್ಲಿ ನಾಗರಿಕರ ಮೂಲಭೂತ ಹಕ್ಕನ್ನು ದುರ್ಬಲಗೊಳಿಸುವುದು ಅಥವಾ ಹತ್ತಿಕ್ಕುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

“ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಮತ್ತು ದಂಡನಾತ್ಮಕ ಮೊಕದ್ದಮೆಗಳನ್ನು ದಾಖಲಿಸುವ ನಡುವಿನ ಗೆರೆಗಳನ್ನು ಮಸುಕುಗೊಳಿಸಲು ಬಿಡಲಾಗುವುದಿಲ್ಲ. ಇಂತಹ ಮನಸ್ಥಿತಿ ಪ್ರಭಾವ ಬೀರಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಿರುತ್ತದೆ” ಎಂದು ನ್ಯಾಯಪೀಠ ಎಚ್ಚರಿಸಿದೆ. ಅಲ್ಲದೆ, ಅರ್ಜಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮುಂದುವರಿಸುವುದು ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಹೇಳುವ ಮೂಲಕ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಪ್ರತಿಭಟಿಸುವವರನ್ನು ಕ್ರಿಮಿನಲ್ ಪ್ರಕರಣಗಳ ಮೂಲಕ ಮೌನಗೊಳಿಸುವ ಪ್ರಯತ್ನಗಳ ನಡುವೆ, ನಾಗರಿಕರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಎತ್ತಿಹಿಡಿದಿರುವ ಈ ತೀರ್ಪು ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕಾರಣ ತಿಳಿಸುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ

ನಾರ್ವೆ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಿರುವುದಕ್ಕೆ ಕಾರಣ ತಿಳಿಸುವಂತೆ ಪತ್ರಕರ್ತರ ಸಂಘ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಗುರುವಾರ (ನ.12)...

ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ...

ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ಎನ್‌ವಿಡಿಯಾ ಸಿಇಒ ವೈಯಕ್ತಿಕ ಸಂಬಂಧ ವಿವಾದ: ‘ಗೂಢಚಾರಿಕೆ ನಿರೂಪಣೆಗಳನ್ನು ಸೃಷ್ಟಿಸಿ ತಾಂತ್ರಿಕ ದಿಗ್ಬಂಧನ ಹೇರಬೇಡಿ’: ಅಮೆರಿಕಕ್ಕೆ ಚೀನಾ ಎಚ್ಚರಿಕೆ

ಅಮೆರಿಕವು ಚೀನಾದ ತಾಂತ್ರಿಕ ಪ್ರಗತಿಗೆ ಕಡಿವಾಣ ಹಾಕಲು ಗೂಢಚಾರಿಕೆಯ ಆರೋಪಗಳನ್ನು ನೆಪವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಚೀನಾ, ಇಂತಹ ನಿರೂಪಣೆಗಳನ್ನು ಸೃಷ್ಟಿಸುವುದನ್ನು ನಿಲ್ಲಿಸುವಂತೆ ಅಮೆರಿಕವನ್ನು ಒತ್ತಾಯಿಸಿದೆ. ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್...

ಯುಪಿ ವಿಧಾನಸಭೆ ಚುನಾವಣೆಗೆ ಓವೈಸಿ-ಆಝಾದ್ ಮೈತ್ರಿ : ಸಿಎಂ ಅಭ್ಯರ್ಥಿ ಘೋಷಣೆ

ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಚಂದ್ರಶೇಖರ್ ಆಝಾದ್ ಅವರ ಆಝಾದ್ ಸಮಾಜ ಪಕ್ಷ...

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು...

ಸ್ಥಳೀಯರ ಹೋರಾಟಕ್ಕೆ ಸಂದ ಜಯ: ‘ನಮ್ಮ ಮೆಟ್ರೋ’ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರದಿಂದ ಅನುಮೋದನೆ!

ಬೆಂಗಳೂರು: 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) ಎಲಿವೇಟೆಡ್‌ ಕಾರಿಡಾರ್‌ನ ಮೂರು ಪ್ರಮುಖ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...