Homeಮುಖಪುಟಗ್ರಾಮ ದೇವತೆ, ದೇವಸ್ಥಾನದ ಜಾಗ, ಸಾರ್ವಜನಿಕ ರಸ್ತೆ ಕಬಳಿಕೆ ಆರೋಪ; ಬಿಹಾರದ ಬಿಜೆಪಿ ಶಾಸಕಿ ಮೈಥಿಲಿ...

ಗ್ರಾಮ ದೇವತೆ, ದೇವಸ್ಥಾನದ ಜಾಗ, ಸಾರ್ವಜನಿಕ ರಸ್ತೆ ಕಬಳಿಕೆ ಆರೋಪ; ಬಿಹಾರದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಕುಟುಂಬದ ಒತ್ತುವರಿ ಜಾಗ ತೆರವುಗೊಳಿಸಿದ ಅಧಿಕಾರಿಗಳು!

- Advertisement -
- Advertisement -

ಜಾನಪದ ಗಾಯಕಿ ಹಾಗೂ ಬಿಹಾರದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಅವರ ಕುಟುಂಬವು ದರ್ಭಂಗಾ ಜಿಲ್ಲೆಯಲ್ಲಿ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಕಾಂಪೌಂಡ್ ಗೋಡೆಯನ್ನು ಸ್ಥಳೀಯ ಆಡಳಿತವು ಗುರುವಾರ ತೆರವುಗೊಳಿಸಿದೆ. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ಈ ಕುರಿತು ವಿಸ್ತೃತ ವರದಿ ಪ್ರಕಟಿಸಿದೆ.

ದರ್ಭಂಗಾ ಜಿಲ್ಲೆಯ ತರ್ದಿಹ್ ಬ್ಲಾಕ್‌ನ ಪೋಖರ್‌ಭಿಂದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ರಸ್ತೆ, ಖಾಸಗಿ ಜಮೀನುಗಳು, ಗ್ರಾಮ ದೇವತೆ ‘ತಿವಾರಿ ಬಾಬಾ’ ಹಾಗೂ ರಾಧಾಕೃಷ್ಣ ದೇವಸ್ಥಾನದ ಜಾಗ, ಸಾಮೂಹಿಕ ಶ್ರದ್ಧಾಸ್ಥಳ ಮತ್ತು ಚರಂಡಿ ಜಾಗವನ್ನು ಶಾಸಕಿಯ ಕುಟುಂಬ ಒತ್ತುವರಿ ಮಾಡಿಕೊಂಡಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದರು. ಈ ಕುರಿತು ಸರ್ಕಲ್ ಆಫೀಸರ್‌ಗೆ ದೂರು ನೀಡಿದ್ದಲ್ಲದೆ, ಮುಖ್ಯಮಂತ್ರಿಗಳ ಕಚೇರಿಯ ‘ಸಹ್ಯೋಗ್’ ಪೋರ್ಟಲ್‌ನಲ್ಲೂ ದೂರು ದಾಖಲಿಸಲಾಗಿತ್ತು.

ಸಾರ್ವಜನಿಕರ ದೂರಿನ ಬೆನ್ನಲ್ಲೇ ಗುರುವಾರ ಭೂ ಸುಧಾರಣೆ ಉಪ ಕಲೆಕ್ಟರ್ ಅಜಯ್ ಕುಮಾರ್ ಮತ್ತು ಸರ್ಕಲ್ ಆಫೀಸರ್ ಅಲೋಕ್ ಕುಮಾರ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡವು ಗ್ರಾಮಕ್ಕೆ ಭೇಟಿ ನೀಡಿ, ದೂರುದಾರರು ಹಾಗೂ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿವಾದಿತ ಜಾಗವನ್ನು ಅಳತೆ ಮಾಡಿವೆ. ಪ್ರಾಥಮಿಕ ಪರಿಶೀಲನೆಯಲ್ಲಿ ಸರ್ಕಾರಿ ರಸ್ತೆಯ ಭಾಗವನ್ನು ಒತ್ತುವರಿ ಮಾಡಿ ಗೋಡೆ ನಿರ್ಮಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಅಧಿಕಾರಿಗಳು ತಕ್ಷಣವೇ ಗೋಡೆಯನ್ನು ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದ್ದಾರೆ. ಖಾಸಗಿ ಜಮೀನುಗಳ ಒತ್ತುವರಿ ಕುರಿತ ದೂರುಗಳ ದಾಖಲೆಗಳನ್ನು ಶನಿವಾರ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಲ್ಆರ್ ಅಜಯ್ ಕುಮಾರ್ ತಿಳಿಸಿದ್ದಾರೆ.

ಇದೇ ಗ್ರಾಮದ ಗಗನ್ ಕುಮಾರ್ ಮಿಶ್ರಾ ಎಂಬುವವರು ನವೆಂಬರ್ 7 ರಂದು ತರ್ದಿಹ್ ಸರ್ಕಲ್ ಆಫೀಸರ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, ಶಾಸಕಿಯ ತಂದೆ ರಮೇಶ್ ಠಾಕೂರ್ ಅವರು ತಮ್ಮ 3 ಡಿಸೆಮಿಲ್ ಖಾಸಗಿ ಜಮೀನನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ಕೇಳಿಕೊಂಡಾಗ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ತಮಗೆ ಬೆದರಿಕೆ ಹಾಕಲಾಗಿದೆ ಎಂದೂ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ, ದೇವಸ್ಥಾನದ ಜಾಗದ ಒತ್ತುವರಿ ಆರೋಪವು ಮಧುಬನಿ ಜಿಲ್ಲಾ ವ್ಯಾಪ್ತಿಗೆ ಬರುವುದರಿಂದ ಅಲ್ಲಿನ ಆಡಳಿತಕ್ಕೆ ದೂರು ನೀಡುವಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ತಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ 26 ವರ್ಷದ ಶಾಸಕಿ ಮೈಥಿಲಿ ಠಾಕೂರ್, ಅವೆಲ್ಲವೂ ಸಂಪೂರ್ಣವಾಗಿ ಆಧಾರರಹಿತ ವದಂತಿಗಳು ಎಂದು ಹೇಳಿದ್ದಾರೆ. ತಮ್ಮ ಅಲಿನಗರ ವಿಧಾನಸಭಾ ಕ್ಷೇತ್ರದ ಪೋಖರ್‌ಭಿಂದಾ ಗ್ರಾಮದಲ್ಲಿ ಹಿರಿಯರ ಬೆಂಬಲದೊಂದಿಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಅನುಕೂಲವಾಗುವಂತೆ ಮನೆ ನಿರ್ಮಿಸುತ್ತಿದ್ದೇನೆಯೇ ಹೊರತು ಯಾವುದೇ ಒತ್ತುವರಿ ಮಾಡಿಲ್ಲ ಎಂದಿದ್ದಾರೆ. ಎಲ್ಲಾ ದಾಖಲೆಗಳು ತಮ್ಮ ಬಳಿಯಿದ್ದು, ಅನುಮಾನವಿದ್ದವರು ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಬಹುದು ಎಂದು ಅವರು ತಿರುಗೇಟು ನೀಡಿದ್ದಾರೆ.

ಈ ಒತ್ತುವರಿ ವಿವಾದವು ಬಿಹಾರ ರಾಜಕೀಯದಲ್ಲಿ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಆರ್‌ಜೆಡಿ (RJD) ಕಾರ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಆಡಳಿತಾರೂಢ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಮತ್ತು ಅವರ ತಂದೆ ರಮೇಶ್ ಠಾಕೂರ್ ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಸರ್ಕಾರಿ ಜಾಗ, ಸಾರ್ವಜನಿಕ ರಸ್ತೆ ಹಾಗೂ ಖಾಸಗಿ ಜಮೀನುಗಳನ್ನು ಅಕ್ರಮವಾಗಿ ಕಬಳಿಸಿದ್ದಾರೆ ಎಂದು ಆರೋಪಿಸಿರುವ ತೇಜಸ್ವಿ, ಎನ್‌ಡಿಎ ಶಾಸಕರು ಸಾರ್ವಜನಿಕರ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಹಿಂದಿನ ‘ಜಂಗಲ್ ರಾಜ್’ ಬಗ್ಗೆ ಮಾತನಾಡುತ್ತಿದ್ದ ಶಾಸಕಿ, ಈಗ ‘ಮಂಗಲ್ ರಾಜ್’ನಲ್ಲಿ ಸರ್ಕಾರಿ ಮತ್ತು ಗ್ರಾಮಸ್ಥರ ಜಮೀನು ಒತ್ತುವರಿ ಮಾಡಿಕೊಂಡು ಭಜನೆ ಹಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ, ತೇಜಸ್ವಿ ಅವರ ಹಿರಿಯ ಸಹೋದರ ಹಾಗೂ ಜನಶಕ್ತಿ ಜನತಾದಳದ ರಾಷ್ಟ್ರೀಯ ಅಧ್ಯಕ್ಷ ತೇಜ್ ಪ್ರತಾಪ್ ಯಾದವ್ ಕೂಡ ರಮೇಶ್ ಠಾಕೂರ್ ವಿರುದ್ಧದ ಆರೋಪಗಳ ಕುರಿತು ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು ಮತ್ತು ರಾಜಕೀಯ ಗುರುತು, ಜನಪ್ರಿಯತೆ ಅಥವಾ ಪ್ರಭಾವದ ಆಧಾರದ ಮೇಲೆ ಯಾರನ್ನೂ ತನಿಖೆಯಿಂದ ದೂರವಿಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಬಿಎ ಚುನಾವಣೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಕರ್ನಾಟಕ ಚುನಾವಣಾ ಆಯೋಗ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ವಿಧಿಸಿರುವ ಗಡುವನ್ನು ಒಂದು ತಿಂಗಳ ಕಾಲ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ....

ಮುಸ್ಲಿಮರ ಮನೆ ಕೆಡವಿದ ಬುಲ್ಡೋಜರ್‌ಗಳೇ ಉತ್ತರ ಪ್ರದೇಶದ ಬ್ರ್ಯಾಂಡ್ ಎಂದ ಯೋಗಿ ಆದಿತ್ಯನಾಥ್; ಹೆಚ್ಚಿನ ಉತ್ಪಾದನೆ, ರಫ್ತಿಗೆ ಕರೆ 

ಲಖನೌ: ಮುಸ್ಲಿಮರು, ದಲಿತರು ಸೇರಿದಂತೆ ಅಂಚಿನಲ್ಲಿರುವ ಸಮುದಾಯಗಳು ಮತ್ತು ಸರ್ಕಾರದ ನೀತಿಗಳನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡು ನಡೆದಿರುವ ಮನೆ, ಕಟ್ಟಡಗಳ ಧ್ವಂಸ ಕಾರ್ಯಾಚರಣೆಗಳ ಮೂಲಕ ವಿವಾದದ ಕೇಂದ್ರವಾಗಿರುವ ಬುಲ್ಡೋಜರ್‌ಗಳನ್ನೇ ಉತ್ತರ ಪ್ರದೇಶದ ಬ್ರ್ಯಾಂಡ್ ಎಂದು...

ಕ್ಷೇತ್ರ ಮರುವಿಂಗಡಣೆ ಮಸೂದೆ ಅಂಗೀಕಾರಕ್ಕೆ ವಿಶೇಷ ಅಧಿವೇಶನ: ‘ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ’ ಎಂದ ಪ್ರಿಯಾಂಕಾ

ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಉದ್ದೇಶದಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬಗ್ಗೆ ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ನನ್ನ ಫೋನ್ ಟ್ಯಾಪ್ ಮಾಡುತ್ತಿರುವ ಪ್ರಧಾನಿ, ಅವರ ವಿರುದ್ಧದ ಸಾಕ್ಷ್ಯಗಳೇನು ಎಂಬುದು ಅವರಿಗೆ ಗೊತ್ತಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ತಮ್ಮ ಫೋನ್‌ನಲ್ಲಿವೆ. ಅದನ್ನು ಪ್ರಧಾನಿ ಟ್ಯಾಪ್ ಮಾಡುತ್ತಿದ್ದಾರೆ ಎಂದು...

ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸಿದೆ; ವ್ಯವಸ್ಥಿತ ಹತ್ಯೆ, ವಿನಾಶವನ್ನು ಪುನರುಚ್ಚರಿಸಿದ ನೊಬೆಲ್ ಪುರಸ್ಕೃತೆ ನವಿ ಪಿಳ್ಳೈ 

ಗಾಜಾ/ಡರ್ಬನ್: ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನಡೆಸಿರುವುದು ಕೇವಲ ಯುದ್ಧದ ಭಾಗವಾಗಿ ನಡೆದ ದಾಳಿಗಳಲ್ಲ, ಬದಲಿಗೆ ಒಂದು ಜನಸಮುದಾಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ನಾಶಪಡಿಸುವ ಉದ್ದೇಶದಿಂದ ನಡೆಸಿದ ವ್ಯವಸ್ಥಿತ ನರಮೇಧ ಎಂಬ ತಮ್ಮ ಹಿಂದಿನ...

‘ನನ್ನ ಜೊತೆ ನೇರ ಚರ್ಚೆ ನಡೆಸಿದ ನಂತರ ಮೋದಿ ಪ್ರಧಾನಿಯಾಗಿ ಉಳಿಯುವುದಿಲ್ಲ’: ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರವಾಗಿ ಮುಖಾಮುಖಿ ಚರ್ಚೆ ನಡೆಸಲು ಮತ್ತೊಮ್ಮೆ ಸವಾಲು ಹಾಕಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮೊಂದಿಗೆ ನಡೆಯುವ ನೇರ ಚರ್ಚೆಯ ಬಳಿಕ ನರೇಂದ್ರ...

ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕಾರಣ ತಿಳಿಸುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ

ನಾರ್ವೆ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಿರುವುದಕ್ಕೆ ಕಾರಣ ತಿಳಿಸುವಂತೆ ಪತ್ರಕರ್ತರ ಸಂಘ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಗುರುವಾರ (ನ.12)...

ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

ಮುಂಬೈ: ಜನರ ಮೂಲಭೂತ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಾರ್ವಜನಿಕ ಸಮಸ್ಯೆಗಳ ವಿರುದ್ಧ...

ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ...

ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...