Homeಮುಖಪುಟ2024ರ ಚುನಾವಣೆ| 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ...

2024ರ ಚುನಾವಣೆ| 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ

ವರದಿ : ಸುಮೇಧಾ ಮಿತ್ತಲ್ ಮತ್ತು ವೆಂಕಟೇಶ್ ನಾಯಕ್ / The Reporters' Collective ► ಸಂಪಾದನೆ : ಫುರ್ಖಾನ್ ಅಮೀನ್

- Advertisement -
- Advertisement -

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ ಅಧಿಕೃತ ದಾಖಲೆಯೇ ಭಾರತೀಯ ಚುನಾವಣಾ ಆಯೋಗದ (ಇಸಿಐ) ಬಳಿಯಿಲ್ಲ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ತನಿಖಾ ಪತ್ರಿಕೋದ್ಯಮ ಸಂಸ್ಥೆಯಾದ ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ (The Reporters’ Collective) ತನ್ನ ‘ಎಲೆಕ್ಷನ್ ಆಡಿಟ್’ (Election Audit) ಸರಣಿಯ ಎರಡನೇ ಭಾಗದಲ್ಲಿ ಚುನಾವಣಾ ಆಯೋಗದ ಆಂತರಿಕ ವರದಿಗಳನ್ನು ವಿಶ್ಲೇಷಿಸಿ ಈ ಮಹತ್ವದ ವರದಿಯನ್ನು ಪ್ರಕಟಿಸಿದೆ.

ವರದಿಯ ಪ್ರಮುಖ ಅಂಶಗಳು:

  • 530 ಕ್ಷೇತ್ರಗಳ ದಾಖಲೆಗಳ ಪರಿಶೀಲನೆ : ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ 2024ರಲ್ಲಿ ಚುನಾವಣೆ ನಡೆದ 467 ವಿಧಾನಸಭಾ ಹಾಗೂ 63 ಲೋಕಸಭಾ ಕ್ಷೇತ್ರಗಳ (ಒಟ್ಟು 530 ಕ್ಷೇತ್ರಗಳ) ಚುನಾವಣಾಧಿಕಾರಿಗಳ (Returning Officers) ಆಂತರಿಕ ವರದಿಗಳು ಮತ್ತು 4,212 ಭೌತಿಕ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರದ ಮತದಾನದ ಲೆಕ್ಕವೇ ನಮೂದಾಗಿಲ್ಲ ಎಂದು ರಿಪೋಟರ್ಸ್ ಕಲೆಕ್ಟಿವ್ ತಂಡ ತಿಳಿಸಿದೆ.
  • ರಾಜ್ಯವಾರು ವಿವರ : ಸಂಜೆ 5ರ ನಂತರದ ಮತದಾನದ ದಾಖಲೆ ಇಲ್ಲದ ಕ್ಷೇತ್ರಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 114 ಕ್ಷೇತ್ರಗಳಲ್ಲಿ (ಸುಮಾರು ಶೇ. 40) ಹಾಗೂ 48 ಲೋಕಸಭಾ ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಈ ದಾಖಲೆಯಿಲ್ಲ. ಜಮ್ಮು-ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳು ಹಾಗೂ 1 ಲೋಕಸಭಾ ಕ್ಷೇತ್ರದಲ್ಲಿ, ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 22 ಹಾಗೂ 1 ಲೋಕಸಭಾ ಕ್ಷೇತ್ರದಲ್ಲಿ ಈ ಮಾಹಿತಿ ಲಭ್ಯವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.
  • ಕ್ಯೂ ಸ್ಲಿಪ್ (Queue Slip) ದಾಖಲೆಯೂ ನಾಪತ್ತೆ : ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗುವ ಸಮಯದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರಿಗೆ ನೀಡಲಾಗುವ ‘ಕ್ಯೂ ಸ್ಲಿಪ್’ಗಳ ಸಂಖ್ಯೆಯನ್ನು 530 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ದಾಖಲಿಸಿಯೇ ಇಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಸ್ಲಿಪ್‌ಗಳ ಲೆಕ್ಕವಿಲ್ಲದಿದ್ದರೆ, ನಿಗದಿತ ಸಮಯದ ನಂತರ ಅಕ್ರಮವಾಗಿ ಯಾರಾದರೂ ಮತ ಚಲಾಯಿಸಿದ್ದಾರೆಯೇ ಎಂಬುದನ್ನು ಪತ್ತೆಹಚ್ಚುವುದು ಅಸಾಧ್ಯ.

ಕೊನೆಯ ಗಂಟೆಯ ಮತದಾನ ಏಕೆ ಮಹತ್ವದ್ದು?

ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಮತಗಟ್ಟೆ ಅಧಿಕಾರಿಗಳು ಪ್ರತಿ ಎರಡು ಗಂಟೆಗೊಮ್ಮೆ ವಿದ್ಯುನ್ಮಾನ ಮತಯಂತ್ರದಲ್ಲಿ (EVM) ದಾಖಲಾದ ಮತಗಳ ಸಂಖ್ಯೆಯನ್ನು ಮತ್ತು ಮತಗಟ್ಟೆಗೆ ಪ್ರವೇಶಿಸಿದ ಮತದಾರರ ಸಹಿ ಪಡೆಯುವ ‘ಫಾರ್ಮ್ 17A’ (Register of Voters) ದಾಖಲೆಯನ್ನು ತಾಳೆ ನೋಡಬೇಕು. ಇದನ್ನು ಪ್ರಿಸೈಡಿಂಗ್ ಆಫೀಸರ್ ಡೈರಿಯಲ್ಲಿ ಬರೆಯಬೇಕು. ಸಂಜೆಯ ವೇಳೆಗೆ ಅನೇಕ ರಾಜಕೀಯ ಪಕ್ಷಗಳ ಏಜೆಂಟರು ಮತಗಟ್ಟೆಗಳಿಂದ ತೆರಳುವುದರಿಂದ, ಕೊನೆಯ ಗಂಟೆಯಲ್ಲಿ ಬೋಗಸ್ ಮತದಾನ ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ಎರಡು ಗಂಟೆಗಳ ಲೆಕ್ಕಾಚಾರ ಅತ್ಯಂತ ನಿರ್ಣಾಯಕವಾಗಿರುತ್ತದೆ.

ಮಹಾರಾಷ್ಟ್ರದ 76 ಲಕ್ಷ ಮತಗಳ ಏರಿಕೆಯ ಗೊಂದಲ:

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನ ಸಂಜೆ 5 ಗಂಟೆಗೆ ಶೇ. 58.22ರಷ್ಟಿದ್ದ ಮತದಾನ ಪ್ರಮಾಣ, ಮರುದಿನ ಶೇ. 66.05ಕ್ಕೆ ಏರಿಕೆಯಾಗಿತ್ತು. ಅಂದರೆ ಕೊನೆಯ ಒಂದು ಗಂಟೆಯಲ್ಲಿ ಸುಮಾರು 76 ಲಕ್ಷ ಮತಗಳು ಚಲಾವಣೆಯಾಗಿವೆ ಎಂದು ಹೇಳಲಾಗಿತ್ತು. ಆದರೆ, ಆಯೋಗದ ಆಂತರಿಕ ದಾಖಲೆಗಳ ಪ್ರಕಾರ, 5 ಗಂಟೆಯ ನಂತರದ ಮಾಹಿತಿ ಲಭ್ಯವಿರುವ 174 ಕ್ಷೇತ್ರಗಳಲ್ಲಿ ಕೇವಲ 50.87 ಲಕ್ಷ ಮತಗಳು ಮಾತ್ರ ಚಲಾವಣೆಯಾಗಿವೆ. ಉಳಿದ 114 ಕ್ಷೇತ್ರಗಳ ದಾಖಲೆಯೇ ಇಲ್ಲದಿರುವಾಗ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕೊನೆಯ ಗಂಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸರತಿ ಸಾಲಿನಲ್ಲಿ ನಿಂತಿದ್ದರು ಎಂದು ಯಾವ ಆಧಾರದ ಮೇಲೆ ಸಮರ್ಥಿಸಿಕೊಂಡರು ಎಂಬ ಪ್ರಶ್ನೆ ಎದ್ದಿದೆ.

"ಮತದಾನದ ದಿನದಂದೇ ಅಕ್ರಮಗಳನ್ನು ಪತ್ತೆಹಚ್ಚಲು ಈ ಎರಡು ಗಂಟೆಗಳ ವರದಿಗಳು ಸಹಕಾರಿಯಾಗಿರುತ್ತವೆ. ಸಂಜೆ 5ರ ನಂತರದ ಕಾಲಂ ಅನ್ನು ಖಾಲಿ ಬಿಟ್ಟು, ನಂತರ ಒಟ್ಟು ಮತಗಳ ಸಂಖ್ಯೆಗೆ ಹೊಂದುವಂತೆ ತಿದ್ದುವುದು ಲೆಕ್ಕಪತ್ರಗಳಲ್ಲಿ ವಂಚನೆ ಎಸಗಿದಂತೆಯೇ ಸರಿ," ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಅಭಿಪ್ರಾಯಪಟ್ಟಿದ್ದಾರೆ.

ಕೊಪ್ರಿ-ಪಚ್‌ಪಖಾಡಿ ಕ್ಷೇತ್ರದ ಅಸಹಜ ಅಂಕಿಅಂಶ: ಮಹಾರಾಷ್ಟ್ರದ ಕೊಪ್ರಿ-ಪಚ್‌ಪಖಾಡಿ ಕ್ಷೇತ್ರದಲ್ಲಿ ಸಂಜೆ 5 ಗಂಟೆಯವರೆಗೆ 1.13 ಲಕ್ಷ ಮತಗಳು ಚಲಾವಣೆಯಾಗಿದ್ದವು. ಆದರೆ ದಿನದ ಅಂತ್ಯಕ್ಕೆ ಒಟ್ಟು ಮತಗಳ ಸಂಖ್ಯೆ 2.03 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಕೇವಲ 366 ಮತಗಟ್ಟೆಗಳಲ್ಲಿ ಕೊನೆಯ ಒಂದು ಗಂಟೆಯಲ್ಲಿ 89,878 ಮತಗಳು ಚಲಾವಣೆಯಾಗಿವೆ. ಇದರ ಪ್ರಕಾರ, ಪ್ರತಿ ಮತಗಟ್ಟೆಯಲ್ಲಿ ಪ್ರತಿ ನಿಮಿಷಕ್ಕೆ ಸರಾಸರಿ 4 ಮತದಾರರು (ಒಬ್ಬ ಮತದಾರ ಗುರುತಿನ ಚೀಟಿ ತೋರಿಸಿ, ಸಹಿ ಹಾಕಿ, ಶಾಯಿ ಹಚ್ಚಿಸಿಕೊಂಡು ಮತ ಚಲಾಯಿಸಲು ಕೇವಲ 15 ಸೆಕೆಂಡ್) ಮತ ಚಲಾಯಿಸಿರಬೇಕು, ಇದು ವಾಸ್ತವದಲ್ಲಿ ಅಸಾಧ್ಯ ಎಂದು ವರದಿ ಬೊಟ್ಟು ಮಾಡಿದೆ.

ಈ ಕುರಿತು ಸ್ಪಷ್ಟನೆ ಕೋರಿ ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ಕಳುಹಿಸಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯೋಗವು ಅದನ್ನು ‘ಸಾರ್ವಜನಿಕ ಕುಂದುಕೊರತೆ’ (Public Grievance) ಎಂದು ಪರಿಗಣಿಸಿ, ತನ್ನದೇ ದಾಖಲೆಗಳನ್ನು ತನಗೇ ನೀಡುವಂತೆ ಕೇಳಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Courtesy : reporters-collective.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Shall we move?’: ಮನಿಲಾ ಕ್ವಾಡ್ ಶೃಂಗಸಭೆಯಲ್ಲಿ ಟ್ರಂಪ್‌ರ ಮಾತು ಮುಗಿಸಲು ಹೆಣಗಾಡಿದ ಮೋದಿ; ವೈರಲ್ ಆದ ಮುಜುಗರದ ಕ್ಷಣ

ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ ನವೆಂಬರ್ 17ರಂದು ನಡೆದ ಕ್ವಾಡ್  ನಾಯಕರ ಶೃಂಗಸಭೆಯ ಫೋಟೋ-ಆಪ್ ಒಂದು ಅನಿರೀಕ್ಷಿತ ಮತ್ತು ಅಸಹಜ ಮುಜುಗರದ ದೃಶ್ಯಕ್ಕೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿಗದಿತ ಫೋಟೋ...

ಸಿಜೆಐ ಅವಹೇಳನ ಆರೋಪ : ವಕೀಲನಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವೆಂಬರ್ 16ರಂದು ಬಹಿರಂಗ ನ್ಯಾಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಕೀಲರಿಗೆ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 18) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ವಕೀಲರ ವಿರುದ್ಧ ಕ್ರಿಮಿನಲ್...

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...

ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು

ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್...

SIR ನಿರ್ಧಾರಗಳಿಗೆ ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆ ಇತ್ತು ಎಂಬುದಕ್ಕೆ ಚುನಾವಣಾ ಆಯೋಗ ದಾಖಲೆ ಸಲ್ಲಿಸಿಲ್ಲ : ಸುಪ್ರೀಂ ಕೋರ್ಟ್‌ಗೆ ಅರ್ಜಿದಾರರ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿರುವ ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ ಭಾರತೀಯ ಚುನಾವಣಾ...

‘ನೋವು, ಆಘಾತ, ಅಪನಂಬಿಕೆಯಲ್ಲಿದ್ದೇನೆ’: ಇಬ್ಬರು ಅತ್ಯಾಚಾರ ಅಪರಾಧಿಗಳ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಆದೇಶದ ಕುರಿತು ಬಿಲ್ಕಿಸ್ ಬಾನು ಪ್ರತಿಕ್ರಿಯೆ

ಗುಜರಾತ್ ಗಲಭೆಯ ಸಂದರ್ಭದಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಮ್ಮ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳ ಪೈಕಿ ಇಬ್ಬರ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವುದು ತನಗೆ...

ಕಿಶ್ತ್ವಾರ್ ಪೊಲೀಸರ ಹತ್ಯೆ : ‘ಮಸೀದಿ ಘೋಷಣೆ’ ಕುರಿತ ಬಿಜೆಪಿ ಶಾಸಕಿಯ ಹೇಳಿಕೆಗೆ ಆಕ್ರೋಶ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ಹತ್ಯೆಯ ಕುರಿತು ಹಲವು ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಈ ಘಟನೆಯನ್ನು ಮಸೀದಿ ಘೋಷಣೆಗಳೊಂದಿಗೆ ತಳುಕು ಹಾಕುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಯತ್ನಕ್ಕೆ ಸ್ಥಳೀಯ...

SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಏಕಪಕ್ಷೀಯ ನಿರ್ಧಾರಗಳು ಮತ್ತು ಬೃಹತ್ ಪ್ರಮಾಣದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ...

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ | ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ : ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ ಮಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಬಿಲ್ಕಿಸ್ ಬಾನು ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಭೀಕರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿ ಅವರಿಗೆ ಜಾಮೀನು ಮಂಜೂರು...