Homeಅಂತರಾಷ್ಟ್ರೀಯಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

- Advertisement -
- Advertisement -

ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು ಸೆಪ್ಟೆಂಬರ್ ನಂತರ ಅಮೆರಿಕದ ಮಿತ್ರರಾಷ್ಟ್ರವಾದ ಕುವೈತ್ ಮೇಲೆ ಮೇಲೆ ಇರಾನ್ ನಡೆಸಿದ ಮೊದಲ ದಾಳಿಯಾಗಿದೆ.

ಇರಾನ್‌ನ ವೈಮಾನಿಕ ದಾಳಿಗಳನ್ನು ವಾರದಲ್ಲಿ ಮೂರನೇ ಬಾರಿಗೆ ತಡೆಹಿಡಿದಿರುವುದಾಗಿ ಬಹ್ರೇನ್ ತಿಳಿಸಿದೆ. ಅಮೆರಿಕ ನೌಕಾಪಡೆಯ ಐದನೇ ಫ್ಲೀಟ್‌ನ ಪ್ರಧಾನ ಕಛೇರಿ ಇರುವ ಬಹ್ರೇನ್ ವಿರುದ್ಧ ಇರಾನ್ “ವ್ಯವಸ್ಥಿತ ಹಗೆತನದ ಧೋರಣೆ” ಅನುಸರಿಸುತ್ತಿದೆ ಎಂಬುವುದಾಗಿ ಆರೋಪಿಸಿದೆ ಎಂದು reuters.com ವರದಿ ಮಾಡಿದೆ.

ಮಧ್ಯಪ್ರಾಚ್ಯವನ್ನು ಅಸ್ಥಿರಗೊಳಿಸಿರುವ, ಹಡಗು ಸಂಚಾರಕ್ಕೆ ಅಡ್ಡಿಪಡಿಸಿರುವ, ಜಾಗತಿಕ ಇಂಧನ ಬೆಲೆಗಳನ್ನು ಹೆಚ್ಚಿಸಿರುವ ಮತ್ತು ಈ ಪ್ರದೇಶದಾದ್ಯಂತ ಇರುವ ದೇಶಗಳನ್ನು ಸಂಘರ್ಷದೊಳಗೆ ಎಳೆದಿರುವ ಈ ಬಿಕ್ಕಟ್ಟನ್ನು ಕೊನೆಗೊಳಿಸುವ ರಾಜತಾಂತ್ರಿಕ ಪ್ರಯತ್ನಗಳಿಗೆ ಎದುರಾಗಿರುವ ಅಡೆತಡೆಗಳನ್ನು ಈ ಇತ್ತೀಚಿನ ದಾಳಿಗಳು ಎತ್ತಿ ತೋರಿಸಿವೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಕುವೈತ್‌ನ ವಾಯು ರಕ್ಷಣಾ ಪಡೆಗಳು ಪ್ರತಿಕೂಲ ಡ್ರೋನ್ ದಾಳಿಗಳನ್ನು ಎದುರಿಸುತ್ತಿವೆ ಎಂದು ಹೇಳಿದ ಬೆನ್ನಲ್ಲೇ, ಕುವೈತ್‌ನ ಅಲೀ ಅಲ್ ಸಲೇಂ (Ali Al Salem) ನೆಲೆಯಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ಸ್ಥಾವರಗಳನ್ನು ತಾನು ಗುರಿಯಾಗಿಸಿಕೊಂಡಿರುವುದಾಗಿ ಇರಾನ್ ಸೇನೆ ತಿಳಿಸಿದೆ ಎಂದು reuters.com ವರದಿ ಉಲ್ಲೇಖಿಸಿದೆ.

ಅಮೆರಿಕದ ಸಿಬ್ಬಂದಿ ಮತ್ತು ಆಸ್ತಿಗಳ ಮೇಲೆ ಇರಾನ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಅಮೆರಿಕದ ಯುದ್ಧ ವಿಮಾನಗಳು ಕೇಶ್ಮ್ (Qeshm) ದ್ವೀಪದಲ್ಲಿರುವ ಕ್ಷಿಪಣಿ ಉಡಾವಣಾ ನೆಲೆಯನ್ನು ಗುರಿಯಾಗಿಸಿಕೊಂಡಿದ್ದವು ಎಂದು ಅಮೆರಿಕದ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ reuters.com ಹೇಳಿದೆ. ಅಮೆರಿಕದ ಈ ದಾಳಿಯಿಂದ ಮೂಲಸೌಕರ್ಯಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇರಾನ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ ಎಂದಿದೆ.

ತನ್ನ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ಆಕ್ರಮಣ ಅಥವಾ ಬೆದರಿಕೆಯ ವಿರುದ್ಧ ತನ್ನ ಭೂಪ್ರದೇಶ ಹಾಗೂ ಪ್ರಮುಖ ಸೌಲಭ್ಯಗಳನ್ನು ರಕ್ಷಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ತಾನು ಕಾಯ್ದಿರಿಸಿಕೊಂಡಿರುವುದಾಗಿ ಕುವೈತ್ ಹೇಳಿದೆ ಎಂದು ವರದಿ ಉಲ್ಲೇಖಿಸಿದೆ.

ಬುಧವಾರ ಸರ್ಕಾರಿ ಮಾಧ್ಯಮಗಳು ಪ್ರಕಟಿಸಿದ ವೀಡಿಯೊಗಳಲ್ಲಿ, ಫೆಬ್ರವರಿಯಲ್ಲಿ ಇಸ್ರೇಲ್ ಜೊತೆಗೂಡಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಅಮೆರಿಕಕ್ಕೆ ಇರಾನ್ ಸೇನೆಯ ಮಹಾದಂಡನಾಯಕ ಅಮೀರ್ ಹತಾಮಿ ಹೊಸ ಎಚ್ಚರಿಕೆಯನ್ನು ನೀಡಿದ್ದಾರೆ.

“ಶತ್ರು ತನ್ನ ತಪ್ಪನ್ನು ಪುನರಾವರ್ತಿಸಿದರೆ… ಭೌಗೋಳಿಕ ಮಿತಿಗಳಿಲ್ಲದೆ, ಅದನ್ನು ಮತ್ತು ಅದರ ಬೆಂಬಲಿಗರನ್ನು ಇನ್ನೂ ಬಲವಾಗಿ ಹಾಗೂ ಸಂಪೂರ್ಣವಾಗಿ ಹತ್ತಿಕ್ಕುವ ರೀತಿಯಲ್ಲಿ ಎದುರಿಸಲು ನಾವು ಸಿದ್ಧರಾಗಿದ್ದೇವೆ ಮತ್ತು ಅದಕ್ಕೆ ಬೇಕಾದ ಯೋಜನೆಗಳನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಿಷೇಧ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಕಾಯ್ದೆ ತಿದ್ದುಪಡಿ ಮನವಿಗೆ ಸಿಗದ ಮನ್ನಣೆ

ದೇವಸ್ಥಾನಗಳು ಸೇರಿದಂತೆ ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 18) ವಜಾಗೊಳಿಸಿದೆ ಎಂದು ‘ಬಾರ್...

‘ಆಕಾಶವೇನೂ ಕಳಚಿಬೀಳುವುದಿಲ್ಲ, ಅವರು ಮಧ್ಯಂತರ ಜಾಮೀನಿನ ಮೇಲೆಯೇ ಇರಲಿ’: ಆಜಮ್ ಖಾನ್ ಜಾಮೀನಿಗೆ ತುರ್ತು ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ! ಇಡಿಗೆ ಮತ್ತೆ ಹಿನ್ನಡೆ

ಜಾರಿ ನಿರ್ದೇಶನಾಲಯ (ED) ನಡೆಸಿದ ಬಂಧನ ಪ್ರಕ್ರಿಯೆಯನ್ನು ‘ಪ್ರೇರಿತ ಮತ್ತು ದುರುದ್ದೇಶಪೂರಿತ’ ಎಂದು ಕಟುವಾಗಿ ಟೀಕಿಸಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಆಜಮ್ ಖಾನ್ ಅವರಿಗೆ...

2024ರ ಚುನಾವಣೆ | 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬ ದಾಖಲೆಯೇ ಚುನಾವಣಾ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...

‘Shall we move?’: ಮನಿಲಾ ಕ್ವಾಡ್ ಶೃಂಗಸಭೆಯಲ್ಲಿ ಟ್ರಂಪ್‌ರ ಮಾತು ಮುಗಿಸಲು ಹೆಣಗಾಡಿದ ಮೋದಿ; ವೈರಲ್ ಆದ ಮುಜುಗರದ ಕ್ಷಣ

ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ ನವೆಂಬರ್ 17ರಂದು ನಡೆದ ಕ್ವಾಡ್  ನಾಯಕರ ಶೃಂಗಸಭೆಯ ಫೋಟೋ-ಆಪ್ ಒಂದು ಅನಿರೀಕ್ಷಿತ ಮತ್ತು ಅಸಹಜ ಮುಜುಗರದ ದೃಶ್ಯಕ್ಕೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿಗದಿತ ಫೋಟೋ...

ಸಿಜೆಐ ಅವಹೇಳನ ಆರೋಪ : ವಕೀಲನಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವೆಂಬರ್ 16ರಂದು ಬಹಿರಂಗ ನ್ಯಾಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಕೀಲರಿಗೆ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 18) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ವಕೀಲರ ವಿರುದ್ಧ ಕ್ರಿಮಿನಲ್...

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...

ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು

ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್...

SIR ನಿರ್ಧಾರಗಳಿಗೆ ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆ ಇತ್ತು ಎಂಬುದಕ್ಕೆ ಚುನಾವಣಾ ಆಯೋಗ ದಾಖಲೆ ಸಲ್ಲಿಸಿಲ್ಲ : ಸುಪ್ರೀಂ ಕೋರ್ಟ್‌ಗೆ ಅರ್ಜಿದಾರರ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿರುವ ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ ಭಾರತೀಯ ಚುನಾವಣಾ...

‘ನೋವು, ಆಘಾತ, ಅಪನಂಬಿಕೆಯಲ್ಲಿದ್ದೇನೆ’: ಇಬ್ಬರು ಅತ್ಯಾಚಾರ ಅಪರಾಧಿಗಳ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಆದೇಶದ ಕುರಿತು ಬಿಲ್ಕಿಸ್ ಬಾನು ಪ್ರತಿಕ್ರಿಯೆ

ಗುಜರಾತ್ ಗಲಭೆಯ ಸಂದರ್ಭದಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಮ್ಮ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳ ಪೈಕಿ ಇಬ್ಬರ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವುದು ತನಗೆ...

ಕಿಶ್ತ್ವಾರ್ ಪೊಲೀಸರ ಹತ್ಯೆ : ‘ಮಸೀದಿ ಘೋಷಣೆ’ ಕುರಿತ ಬಿಜೆಪಿ ಶಾಸಕಿಯ ಹೇಳಿಕೆಗೆ ಆಕ್ರೋಶ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ಹತ್ಯೆಯ ಕುರಿತು ಹಲವು ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಈ ಘಟನೆಯನ್ನು ಮಸೀದಿ ಘೋಷಣೆಗಳೊಂದಿಗೆ ತಳುಕು ಹಾಕುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಯತ್ನಕ್ಕೆ ಸ್ಥಳೀಯ...