Homeಮುಖಪುಟಪತ್ರಕರ್ತರು ಬೇರೆ, ರೀಲ್-ಮೇಕರ್‌ಗಳು ಬೇರೆ: ರೀಲ್-ಮೇಕರ್‌ಗಳಿಗೆ ಮಾಧ್ಯಮ ರಕ್ಷಣೆ ಅನ್ವಯಿಸುವುದಿಲ್ಲ: ದೆಹಲಿ ಪೊಲೀಸರಿಂದ ಸುಪ್ರೀಂ ಕೋರ್ಟ್‌ಗೆ...

ಪತ್ರಕರ್ತರು ಬೇರೆ, ರೀಲ್-ಮೇಕರ್‌ಗಳು ಬೇರೆ: ರೀಲ್-ಮೇಕರ್‌ಗಳಿಗೆ ಮಾಧ್ಯಮ ರಕ್ಷಣೆ ಅನ್ವಯಿಸುವುದಿಲ್ಲ: ದೆಹಲಿ ಪೊಲೀಸರಿಂದ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪತ್ರಕರ್ತರಿಗೆ ನೀಡಲಾದ ರಕ್ಷಣಾ ಆದೇಶಗಳು ಸಾಮಾಜಿಕ ಜಾಲತಾಣಗಳ ರೀಲ್-ಮೇಕರ್‌ಗಳು ಹಾಗೂ ಕಂಟೆಂಟ್ ಕ್ರಿಯೇಟರ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿನ ಅಕ್ರಮಗಳ (SIR) ವಿರುದ್ಧ ನಡೆದ ಈ ಪ್ರತಿಭಟನೆಗಳ ವೇಳೆ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಧಿಕೃತ ಅಫಿಡವಿಟ್ ಸಲ್ಲಿಸಿದ್ದು, ವೃತ್ತಿಪರ ಪತ್ರಿಕೋದ್ಯಮಕ್ಕೂ ಮತ್ತು ಡಿಜಿಟಲ್ ಕಂಟೆಂಟ್ ಸೃಷ್ಟಿಗೂ ಸ್ಪಷ್ಟ ವ್ಯತ್ಯಾಸವಿದೆ ಎಂದು ವಾದಿಸಿದ್ದಾರೆ.

ಪ್ರತಿಭಟನಾ ಸ್ಥಳಗಳಲ್ಲಿ ವೃತ್ತಿಪರ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ತೊಂದರೆ ನೀಡಬಾರದು ಎಂಬ ಸುಪ್ರೀಂ ಕೋರ್ಟ್‌ನ ಅಕ್ಟೋಬರ್ 11ರ ನಿರ್ದೇಶನವು ಸಾಂಸ್ಥಿಕ ಮಾಧ್ಯಮಗಳ ಪತ್ರಕರ್ತರ ರಕ್ಷಣೆಗಾಗಿ ಮಾತ್ರವೇ ಹೊರತು, ರೀಲ್-ಮೇಕರ್‌ಗಳು ಅಥವಾ ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್‌ಗಳಿಗೆ ಸಾಮಾನ್ಯ ಕಾನೂನಿನಿಂದ ವಿನಾಯಿತಿ ನೀಡಲು ಉದ್ದೇಶಿಸಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಡಿಜಿಟಲ್ ಮಾಧ್ಯಮದಲ್ಲಿ ಸ್ವತಂತ್ರವಾಗಿ ಸುದ್ದಿ ಸಂಗ್ರಹಿಸುವ ಹಕ್ಕು ಎಲ್ಲರಿಗೂ ಇದ್ದು, ಪಿಐಬಿ ಮಾನ್ಯತೆ ಅಥವಾ ಸಾಂಸ್ಥಿಕ ಪ್ರೆಸ್ ಕಾರ್ಡ್ ಇಲ್ಲದಿದ್ದರೂ ಸ್ವತಂತ್ರ ಪತ್ರಕರ್ತರು ಮತ್ತು ಯೂಟ್ಯೂಬರ್‌ಗಳ ಸುದ್ದಿ ಸಂಗ್ರಹಣಾ ಹಕ್ಕನ್ನು ತಾವು ನಿರಾಕರಿಸುವುದಿಲ್ಲ. ಆದರೆ, ಕಾನೂನು ಸುವ್ಯವಸ್ಥೆ ಮತ್ತು ಗುಂಪುಗಳ ನಿಯಂತ್ರಣದ ಸಂದರ್ಭದಲ್ಲಿ ಎಲ್ಲ ನಾಗರಿಕರಂತೆ ಇವರೂ ಸಾಮಾನ್ಯ ಕಾನೂನುಗಳಿಗೆ ಬದ್ಧರಾಗಿರಬೇಕು ಎಂದು ಪೊಲೀಸರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಕೆಲವರು ಕ್ಯಾಮೆರಾ ಮತ್ತು ಮೈಕ್ರೋಫೋನ್ ಹಿಡಿದು ತಾವೇ ಪತ್ರಕರ್ತರು ಎಂದು ಸುಳ್ಳು ಹೇಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಕಳವಳ ವ್ಯಕ್ತಪಡಿಸಿರುವ ಪೊಲೀಸರು, ತಟಸ್ಥವಾಗಿ ಸುದ್ದಿ ವರದಿ ಮಾಡುವ ವೃತ್ತಿಪರರಿಗೂ ಮತ್ತು ಕೇವಲ ಕಂಟೆಂಟ್ ಸೃಷ್ಟಿಗಾಗಿ ಘಟನೆಗಳನ್ನು ದಾಖಲಿಸುವವರಿಗೂ ಇರುವ ವ್ಯತ್ಯಾಸವನ್ನು ನ್ಯಾಯಾಲಯವು ಪರಿಶೀಲಿಸಬೇಕು ಎಂದು ಕೋರಿದ್ದಾರೆ. ಪ್ರತಿಭಟನೆಗಳ ವೇಳೆ ಪತ್ರಕರ್ತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಮಹಿಳಾ ಪತ್ರಕರ್ತರು ಮಾಡಿದ್ದ ಲೈಂಗಿಕ ಕಿರುಕುಳದ ದೂರುಗಳಿಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಅಂತಹ ಯಾವುದೇ ಕೃತ್ಯ ಕಂಡುಬಂದಿಲ್ಲವಾದ್ದರಿಂದ ಆ ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದಿದ್ದಾರೆ.

‘ದಿ ಕ್ಯಾರವಾನ್’ ಮತ್ತು ‘ದಿ ಹಿಂದೂ’ ಸೇರಿದಂತೆ ಕೆಲವು ಪತ್ರಕರ್ತರ ಬಂಧನ ಅಥವಾ ತಡೆಗೆ ಸಂಬಂಧಿಸಿದಂತೆ, ಪ್ರತಿಭಟನಾ ಸ್ಥಳದಲ್ಲಿ ಜನಸಂದಣಿ ನಿಯಂತ್ರಣದ ವೇಳೆ ಭದ್ರತಾ ದೃಷ್ಟಿಯಿಂದ ಅವರನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆಯೇ ವಿನಃ ಉದ್ದೇಶಪೂರ್ವಕವಾಗಿ ಯಾವುದೇ ಅಡಚಣೆ ಮಾಡಿಲ್ಲ ಎಂದು ಪೊಲೀಸರು ಸುಪ್ರೀಂ ಕೊರ್ಟ್‌ ಗಮನಕ್ಕೆ ತಂದಿದ್ದಾರೆ. ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಾವೂ ಪ್ರತಿಭಟನಾಕಾರರಂತೆ ವರ್ತಿಸಿದ ಕೆಲವರು ಪತ್ರಕರ್ತರ ಸೋಗಿನಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿರುವ ಪೊಲೀಸರು ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ದೆಹಲಿ ಪೊಲೀಸರ ಈ ನಿಲುವು ಡಿಜಿಟಲ್ ಯುಗದಲ್ಲಿ ಸ್ವತಂತ್ರ ಪತ್ರಿಕೋದ್ಯಮ ಮತ್ತು ನಾಗರಿಕ ಪತ್ರಿಕೋದ್ಯಮದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಕುರಿತು ಚರ್ಚೆಗಳು ಆರಂಭವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ

ಅತ್ಯಾಚಾರ, ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಿರ್ಧಾರದಿಂದ 'ಭಯಭೀತರಾದ' ಮತ್ತು 'ಆಘಾತಕ್ಕೊಳಗಾದ' ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬಸ್ಥರು ಈ ತಿಂಗಳ...

ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು...

ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಿಷೇಧ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಕಾಯ್ದೆ ತಿದ್ದುಪಡಿ ಮನವಿಗೆ ಸಿಗದ ಮನ್ನಣೆ

ದೇವಸ್ಥಾನಗಳು ಸೇರಿದಂತೆ ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 18) ವಜಾಗೊಳಿಸಿದೆ ಎಂದು ‘ಬಾರ್...

‘ಆಕಾಶವೇನೂ ಕಳಚಿಬೀಳುವುದಿಲ್ಲ, ಅವರು ಮಧ್ಯಂತರ ಜಾಮೀನಿನ ಮೇಲೆಯೇ ಇರಲಿ’: ಆಜಮ್ ಖಾನ್ ಜಾಮೀನಿಗೆ ತುರ್ತು ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ! ಇಡಿಗೆ ಮತ್ತೆ ಹಿನ್ನಡೆ

ಜಾರಿ ನಿರ್ದೇಶನಾಲಯ (ED) ನಡೆಸಿದ ಬಂಧನ ಪ್ರಕ್ರಿಯೆಯನ್ನು ‘ಪ್ರೇರಿತ ಮತ್ತು ದುರುದ್ದೇಶಪೂರಿತ’ ಎಂದು ಕಟುವಾಗಿ ಟೀಕಿಸಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಆಜಮ್ ಖಾನ್ ಅವರಿಗೆ...

2024ರ ಚುನಾವಣೆ | 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬ ದಾಖಲೆಯೇ ಚುನಾವಣಾ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...

‘Shall we move?’: ಮನಿಲಾ ಕ್ವಾಡ್ ಶೃಂಗಸಭೆಯಲ್ಲಿ ಟ್ರಂಪ್‌ರ ಮಾತು ಮುಗಿಸಲು ಹೆಣಗಾಡಿದ ಮೋದಿ; ವೈರಲ್ ಆದ ಮುಜುಗರದ ಕ್ಷಣ

ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ ನವೆಂಬರ್ 17ರಂದು ನಡೆದ ಕ್ವಾಡ್  ನಾಯಕರ ಶೃಂಗಸಭೆಯ ಫೋಟೋ-ಆಪ್ ಒಂದು ಅನಿರೀಕ್ಷಿತ ಮತ್ತು ಅಸಹಜ ಮುಜುಗರದ ದೃಶ್ಯಕ್ಕೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿಗದಿತ ಫೋಟೋ...

ಸಿಜೆಐ ಅವಹೇಳನ ಆರೋಪ : ವಕೀಲನಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವೆಂಬರ್ 16ರಂದು ಬಹಿರಂಗ ನ್ಯಾಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಕೀಲರಿಗೆ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 18) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ವಕೀಲರ ವಿರುದ್ಧ ಕ್ರಿಮಿನಲ್...

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...

ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು

ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್...

SIR ನಿರ್ಧಾರಗಳಿಗೆ ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆ ಇತ್ತು ಎಂಬುದಕ್ಕೆ ಚುನಾವಣಾ ಆಯೋಗ ದಾಖಲೆ ಸಲ್ಲಿಸಿಲ್ಲ : ಸುಪ್ರೀಂ ಕೋರ್ಟ್‌ಗೆ ಅರ್ಜಿದಾರರ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿರುವ ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ ಭಾರತೀಯ ಚುನಾವಣಾ...