Homeಮುಖಪುಟಸೈನಿಕರು ಸಂಕಲ್ಪ ಮಾಡಿದರೆ ಪಂಜಾಬ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯ: ಪಂಜಾಬ್‌ನಲ್ಲಿ ಹೊಸ ವಿವಾದದ ಕಿಡಿ ಹೊತ್ತಿಸಿದ...

ಸೈನಿಕರು ಸಂಕಲ್ಪ ಮಾಡಿದರೆ ಪಂಜಾಬ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯ: ಪಂಜಾಬ್‌ನಲ್ಲಿ ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್!

- Advertisement -
- Advertisement -

ಜಲಂಧರ್: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (AAP) ಸರ್ಕಾರವನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸಂತ ಗುರು ರವಿದಾಸ್ ಅವರ 650ನೇ ಜನ್ಮದಿನಾಚರಣೆಯ ಅಂಗವಾಗಿ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಏಳು ರಾಜ್ಯಗಳಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ಸಮರಸತಾ ಸಂಕಲ್ಪ ಯಾತ್ರೆ’ಗೆ ಜಲಂಧರ್‌ನಲ್ಲಿ ಚಾಲನೆ ನೀಡಿ ಮಾತನಾಡಿದ ನಿತಿನ್ ನಬಿನ್, ಪಂಜಾಬ್‌ನ ಸೈನಿಕರು ಸಂಕಲ್ಪ ಮಾಡಿದರೆ ರಾಜ್ಯ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಬಹುದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಬಿನ್, ಪಂಜಾಬ್ ಮುಖ್ಯಮಂತ್ರಿಯವರು ರಾಜ್ಯದ ಜನರ ಬದುಕನ್ನು ಬದಲಿಸುವ ಬದಲು ಅರವಿಂದ್ ಕೇಜ್ರಿವಾಲ್ ಅವರಿಗೆ ಕೇವಲ ಒಂದು ‘ಎಟಿಎಂ (ATM)’ ಆಗಿ ಬಳಕೆಯಾಗುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರೈತರು, ಯುವಕರು ಮತ್ತು ಮಹಿಳೆಯರಿಗೆ ಸರ್ಕಾರ ವಂಚನೆ ಮಾಡಿದೆ ಎಂದು ದೂರಿದ ಅವರು, “ದೇಶದ ಗಡಿಗಳನ್ನು ಕಾಯುವ ಪಂಜಾಬ್‌ನ ಸೈನಿಕರು ನಮ್ಮ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದ್ದಾರೆ; ಅವರು ಸಂಕಲ್ಪ ಮಾಡಿದರೆ ನಿಮ್ಮ ಸರ್ಕಾರವನ್ನು ಕಿತ್ತೊಗೆಯಬಹುದು” ಎಂದು ಹೇಳಿಕೆ ನೀಡಿದ್ದಾರೆ. ನಿತಿನ್ ನಬಿನ್ ಅವರ ಈ ಹೇಳಿಕೆ ಹೊರಬೀಳುತ್ತಿದ್ದಂತೆಯೇ ವಿರೋಧ ಪಕ್ಷಗಳು, ಮಾಜಿ ಸೈನಿಕರು ಹಾಗೂ ಸಾಂವಿಧಾನಿಕ ವಿಶ್ಲೇಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ರಾಜಕೀಯೇತರವಾಗಿ ಕಾರ್ಯನಿರ್ವಹಿಸುತ್ತವೆ. ಆದರೆ, ಚುನಾವಣಾ ರಾಜಕೀಯ ಮತ್ತು ಸರ್ಕಾರ ಬದಲಾವಣೆಯಂತಹ ಪಕ್ಷಗಳ ನಡುವಿನ ಅಧಿಕಾರದ ಹೋರಾಟದಲ್ಲಿ ಸೈನಿಕರನ್ನು ಎಳೆದು ತಂದಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸೇನೆಯ ತಟಸ್ಥತೆಯ ಆಘಾತಕಾರಿ ಉಲ್ಲಂಘನೆಯಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸೈನಿಕರ ತ್ಯಾಗ ಮತ್ತು ದೇಶಭಕ್ತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರವೃತ್ತಿಯು ಅಪಾಯಕಾರಿ ಸಂಪ್ರದಾಯಕ್ಕೆ ನಾಂದಿ ಹಾಡುತ್ತದೆ ಎಂಬ ಟೀಕೆಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿವೆ.

ಮತ್ತೊಂದೆಡೆ, ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ಮತಗಳನ್ನು ಕ್ರೋಢೀಕರಿಸಲು ಬಿಜೆಪಿ ಈ ಯಾತ್ರೆಯನ್ನು ಬಳಸಿಕೊಳ್ಳುತ್ತಿದೆ ಎಂಬ ವಿಶ್ಲೇಷಣೆಗಳೂ ಕೇಳಿಬಂದಿವೆ. ಇನ್ನೂ ಸೈನಿಕರ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನೀಡಿದ ಹೇಳಿಕೆಯು ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಮತ್ತು ಪ್ರತಿರೋಧಕ್ಕೆ ದಾರಿ ಮಾಡಿಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ನಾಯಕ ಯಾಸರ್ ಅರಾಫಾತ್ ಸಲಹೆಗಾರರಾಗಿದ್ದ ಅಹ್ಮದ್ ತಿಬಿ ಇಸ್ರೇಲ್ ಸಂಸತ್ತಿನ ಉಪಸಭಾಪತಿಯಾಗಿ ಆಯ್ಕೆ

ಇಸ್ರೇಲ್‌ ಸಂಸತ್ತಾದ ನೆಸೆಟ್‌ಗೆ (Knesset) ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಆಡಳಿತರೂಢ ಒಕ್ಕೂಟಕ್ಕೆ ಸೋಲಾಗಿರುವುದು ಹಲವು ಗಮನಾರ್ಹ ಬದಲಾವಣೆಗಳಿಗೆ ಕಾರಣವಾಗಿದೆ. ಅವುಗಳಲ್ಲಿ ಒಂದು ಅಹ್ಮದ್ ತಿಬಿ ಅವರು ಉಪಸಭಾಪತಿಯಾಗಿ...

“ಚುನಾವಣೆ ಬಹಿಷ್ಕರಿಸಿದರೆ ಪ್ರಜಾಪ್ರಭುತ್ವ ಅಂತ್ಯ”: ರಾಹುಲ್ ಗಾಂಧಿ ಎಚ್ಚರಿಕೆ; ಆಯೋಗದೊಳಗಿಂದಲೇ ಮಾಹಿತಿ ಸಿಗುತ್ತಿದೆ ಎಂದ ವಿಪಕ್ಷ ನಾಯಕ

ಅಮೆರಿಕ: ಭಾರತೀಯ ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯ ಎದುರಾಗಿದೆ ಎಂಬ ಮಾಹಿತಿ ಚುನಾವಣಾ ಆಯೋಗದ ಒಳಗಿನಿಂದಲೇ ವಿರೋಧ ಪಕ್ಷಗಳಿಗೆ ಲಭ್ಯವಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

ಮಹಿಳಾ ಪತ್ರಕರ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ : ದೆಹಲಿ ಪೊಲೀಸರಿಂದ ದೂರುಗಳ ವಿಚಾರಣೆ ಮುಕ್ತಾಯ

ಅಕ್ಟೋಬರ್‌ನಲ್ಲಿ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೂವರು ಮಹಿಳಾ ಪತ್ರಕರ್ತರು...

ತಿರುಪರಂಕುಂದ್ರಂ ವಿವಾದ | ಹೈಕೋರ್ಟ್ ಆದೇಶಕ್ಕೆ ತಡೆ ನೀಡದಿದ್ದರೆ ಸಾವಿರಾರು ಸರ್ವೆ ಕಂಬಗಳು ಧಾರ್ಮಿಕ ಸ್ವರೂಪ ಪಡೆಯಲಿವೆ : ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಸರ್ಕಾರ ವಾದ

ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾದ ಸಮೀಪದ ಕಲ್ಲಿನ ಸ್ತಂಭದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಬುಧವಾರ (ನ.18)...

ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ

ಅತ್ಯಾಚಾರ, ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಿರ್ಧಾರದಿಂದ 'ಭಯಭೀತರಾದ' ಮತ್ತು 'ಆಘಾತಕ್ಕೊಳಗಾದ' ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬಸ್ಥರು ಈ ತಿಂಗಳ...

ಪತ್ರಕರ್ತರು ಬೇರೆ, ರೀಲ್-ಮೇಕರ್‌ಗಳು ಬೇರೆ: ರೀಲ್-ಮೇಕರ್‌ಗಳಿಗೆ ಮಾಧ್ಯಮ ರಕ್ಷಣೆ ಅನ್ವಯಿಸುವುದಿಲ್ಲ: ದೆಹಲಿ ಪೊಲೀಸರಿಂದ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪತ್ರಕರ್ತರಿಗೆ ನೀಡಲಾದ ರಕ್ಷಣಾ ಆದೇಶಗಳು ಸಾಮಾಜಿಕ ಜಾಲತಾಣಗಳ ರೀಲ್-ಮೇಕರ್‌ಗಳು ಹಾಗೂ ಕಂಟೆಂಟ್ ಕ್ರಿಯೇಟರ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ...

ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು...

ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಿಷೇಧ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಕಾಯ್ದೆ ತಿದ್ದುಪಡಿ ಮನವಿಗೆ ಸಿಗದ ಮನ್ನಣೆ

ದೇವಸ್ಥಾನಗಳು ಸೇರಿದಂತೆ ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 18) ವಜಾಗೊಳಿಸಿದೆ ಎಂದು ‘ಬಾರ್...

‘ಆಕಾಶವೇನೂ ಕಳಚಿಬೀಳುವುದಿಲ್ಲ, ಅವರು ಮಧ್ಯಂತರ ಜಾಮೀನಿನ ಮೇಲೆಯೇ ಇರಲಿ’: ಆಜಮ್ ಖಾನ್ ಜಾಮೀನಿಗೆ ತುರ್ತು ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ! ಇಡಿಗೆ ಮತ್ತೆ ಹಿನ್ನಡೆ

ಜಾರಿ ನಿರ್ದೇಶನಾಲಯ (ED) ನಡೆಸಿದ ಬಂಧನ ಪ್ರಕ್ರಿಯೆಯನ್ನು ‘ಪ್ರೇರಿತ ಮತ್ತು ದುರುದ್ದೇಶಪೂರಿತ’ ಎಂದು ಕಟುವಾಗಿ ಟೀಕಿಸಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಆಜಮ್ ಖಾನ್ ಅವರಿಗೆ...

2024ರ ಚುನಾವಣೆ | 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬ ದಾಖಲೆಯೇ ಚುನಾವಣಾ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...