Homeಮುಖಪುಟಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

- Advertisement -
- Advertisement -

2026ರ ಏಪ್ರಿಲ್‌ನಲ್ಲಿ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕ ವಿ.ಎಸ್. ಬಾಬು ಗುರುವಾರ ನಿಧನರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆ ಅವರ ಸಾವನ್ನು ದೃಢಪಡಿಸಿದೆ.

75 ವರ್ಷದ ಬಾಬು ಅವರು ಕೊಳತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ದೀರ್ಘಕಾಲದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸೆಪ್ಟೆಂಬರ್ 9ರಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯ ವೈದ್ಯಕೀಯ ಸೇವೆಗಳ ನಿರ್ದೇಶಕ ರಾಜೇಶ್ ಅಗರ್ವಾಲ್ ಅಧಿಕೃತ ಹೇಳಿಕೆಯಲ್ಲಿ, “ನಮ್ಮ ಬಹುಶಿಸ್ತೀಯ ವೈದ್ಯಕೀಯ ತಂಡವು ಸಮಗ್ರ ಚಿಕಿತ್ಸಾ ನಿರ್ವಹಣೆ ಹಾಗೂ ಅತ್ಯುತ್ತಮ ಪ್ರಯತ್ನಗಳನ್ನು ನಡೆಸಿದರೂ ಅವರ ಆರೋಗ್ಯ ಸ್ಥಿತಿ ನಿರಂತರವಾಗಿ ಹದಗೆಡುತ್ತಿತ್ತು. ಬಳಿಕ ಅವರಿಗೆ ಹೃದಯ ಸ್ತಂಭನ ಉಂಟಾಗಿ ಗುರುವಾರ ಮಧ್ಯಾಹ್ನ 2.24ಕ್ಕೆ ನಿಧನರಾದರು” ಎಂದು ತಿಳಿಸಿದ್ದಾರೆ.

ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ಹಾಗೂ ಟಿವಿಕೆ ಸಂಸ್ಥಾಪಕ ಸಿ. ಜೋಸೆಫ್ ವಿಜಯ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸೇರಿದಂತೆ ಹಲವು ರಾಜಕೀಯ ನಾಯಕರು ಬಾಬು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಾಬು ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿರುವ ರಾಜ್ಯಪಾಲ ಅರ್ಲೇಕರ್, ಮೃತರ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಬೆಂಬಲಿಗರಿಗೆ ಹೃತ್ಪೂರ್ವಕ ಸಂತಾಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ವಿಜಯ್ ಕೂಡ ತಮ್ಮ ಪಕ್ಷದ ಕೊಳತ್ತೂರು ಕ್ಷೇತ್ರದ ಶಾಸಕ ಅನಾರೋಗ್ಯದಿಂದ ನಿಧನರಾಗಿರುವ ಸುದ್ದಿ ತಿಳಿದು ತೀವ್ರ ದುಃಖ ಮತ್ತು ಆಘಾತವಾಗಿದೆ ಎಂದು ಹೇಳಿದ್ದಾರೆ.

“ಸಾರ್ವಜನಿಕ ಜೀವನಕ್ಕೆ ಸಂಪೂರ್ಣವಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದ, ಜನರ ನಡುವೆ ಒಬ್ಬರಾಗಿ ಬದುಕಿ, ಎಲ್ಲರ ಪ್ರೀತಿ, ಬೆಂಬಲ ಮತ್ತು ವಿಶ್ವಾಸ ಗಳಿಸಿದ್ದ ವಿ.ಎಸ್. ಬಾಬು ಅವರ ಹಠಾತ್ ನಿಧನ ತುಂಬಲಾರದ ನಷ್ಟ. ದುಃಖದಲ್ಲಿರುವ ಅವರ ಕುಟುಂಬ ಸದಸ್ಯರು, ಬಂಧುಗಳು, ಸ್ನೇಹಿತರು, ಟಿವಿಕೆ ಕಾರ್ಯಕರ್ತರು ಹಾಗೂ ಕೊಳತ್ತೂರು ಕ್ಷೇತ್ರದ ಜನರಿಗೆ ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ” ಎಂದು ವಿಜಯ್ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಬು ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು ಭಾವಿಸಲಾಗಿತ್ತು. ಆದರೆ ಅವರ ನಿಧನದ ಸುದ್ದಿ ತಮಗೆ ದುಃಖ ತಂದಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ಹಿಂದೆ ಡಿಎಂಕೆಯಲ್ಲಿದ್ದ ಬಾಬು ಅವರು 2026ರ ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಸ್ಟಾಲಿನ್ ಅವರನ್ನು ಸೋಲಿಸಿದ್ದರು. ಬಾಬು 82,997 ಮತಗಳನ್ನು ಪಡೆದು 8,795 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸ್ಟಾಲಿನ್ 74,202 ಮತಗಳನ್ನು ಪಡೆದಿದ್ದರು.

ಇದಕ್ಕೂ ಮೊದಲು 2006ರಿಂದ 2011ರವರೆಗೆ ಪುರಸೈವಾಕ್ಕಂ ವಿಧಾನಸಭಾ ಕ್ಷೇತ್ರದಿಂದ ಡಿಎಂಕೆ ಶಾಸಕರಾಗಿ ಆಯ್ಕೆಯಾಗಿದ್ದರು. 2016ರಲ್ಲಿ ಎಐಎಡಿಎಂಕೆ ಸೇರಿದ್ದ ಅವರು, ಬಳಿಕ 2026ರ ಫೆಬ್ರವರಿಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ರಾಜಕೀಯ ವಲಯದಲ್ಲಿ ಅವರು ‘ಪುರಸೈ ಬಾಬು’ ಎಂದೇ ಜನಪ್ರಿಯರಾಗಿದ್ದರು.

ಸಾರ್ವಜನಿಕ ಕಾಮಗಾರಿ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಹಾಗೂ ಟಿವಿಕೆ ಪ್ರಧಾನ ಕಾರ್ಯದರ್ಶಿ ಆದವ್ ಅರ್ಜುನ ಅವರು ಬಾಬು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸದಾ ನಗುಮುಖ ಹೊಂದಿದ್ದ ಮತ್ತು ಪಕ್ಷದ ನಾಯಕತ್ವದ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ಬಾಬು ಅವರನ್ನು ಪಕ್ಷದ ಆತ್ಮೀಯ ಸದಸ್ಯರಾಗಿ ಸ್ಮರಿಸಲಾಗುವುದು ಎಂದು ಹೇಳಿದ್ದಾರೆ.

“ಉತ್ತರ ಚೆನ್ನೈ ಭಾಗದ ಪ್ರಮುಖ ನಾಯಕರಾಗಿದ್ದ ಅವರು ಸ್ಥಳೀಯ ಸಮುದಾಯ ಮತ್ತು ಭಾಷೆಯೊಂದಿಗೆ ಆಳವಾದ ನಂಟು ಹೊಂದಿದ್ದರು. ಪಕ್ಷವು ಸಂಕಷ್ಟದ ಸಂದರ್ಭಗಳನ್ನು ಎದುರಿಸುವಾಗ ನೆರವಾಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಪಕ್ಷದ ನಾಯಕತ್ವದೊಂದಿಗೆ ನಡೆದ ಮೊದಲ ಸಭೆಯಲ್ಲೇ ಕೊಳತ್ತೂರು, ಪೆರಂಬೂರು ಮತ್ತು ವಿಲ್ಲಿವಾಕ್ಕಂ ಸೇರಿದಂತೆ ಉತ್ತರ ಚೆನ್ನೈನ ಹಲವು ಪ್ರದೇಶಗಳ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಂಕಷ್ಟಗಳ ಬಗ್ಗೆ ಅವರು ಗಮನ ಸೆಳೆದಿದ್ದರು” ಎಂದು ಅರ್ಜುನ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಬು ಅವರ ನಿಧನವು ಪಕ್ಷಕ್ಕೆ ಮಾತ್ರವಲ್ಲದೆ ಇಡೀ ಚೆನ್ನೈ ನಗರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರು ಹೇಳಿದರು. ಬಾಬು ಅವರ ಆಶಯದಂತೆ ಉತ್ತರ ಚೆನ್ನೈ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಕಾರ್ಯಗಳನ್ನು ಮುಂದುವರಿಸಿ, ಅವರ ಸೇವೆ ಮತ್ತು ಬದ್ಧತೆಯನ್ನು ಗೌರವಿಸುವುದಾಗಿ ಸಚಿವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಸವಣ್ಣನವರ ಅವಹೇಳನ’: ‘ಬಸವ ಮಂಟಪ’ ಕೃತಿ ನಿಷೇಧಕ್ಕೆ ಕಾಂಗ್ರೆಸ್, ಬಿಜೆಪಿ ಲಿಂಗಾಯತ ನಾಯಕರ ಆಗ್ರಹ; ರವಿ ಹಂಜ್ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಒತ್ತಾಯ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವ್ಯಕ್ತಿತ್ವ ಮತ್ತು ವಿಚಾರಗಳಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ನೆಲೆಸಿರುವ ಲೇಖಕ ರವಿ ಹಂಜ್ ಬರೆದಿರುವ ‘ಬಸವ ಮಂಟಪ’ ಪುಸ್ತಕದ ವಿರುದ್ಧ...

ದೆಹಲಿ ಎಸ್‌ಐಆರ್ : ಮುಸ್ತಫಾಬಾದ್‌ನ ಸುಳ್ಳು ‘ಫಾರಂ-7’ ಅರ್ಜಿಗಳ ಕುರಿತು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ದೆಹಲಿಯ ಮುಸ್ತಫಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ ಹೆಸರನ್ನು ಅಳಿಸಿಹಾಕಲು ನಕಲಿ 'ಫಾರಂ-7' ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ದೂರಿನ ಕುರಿತು ಪರಿಶೀಲನೆ ನಡೆಸುವಂತೆ ಸುಪ್ರೀಂ...

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ ನಾಯಕತ್ವದ ‘ಡಿಕೆಶಿ V/s ಕುಮಾರ ಸಂಘರ್ಷ’

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಜಾತಿ ಸಮೀಕರಣಗಳು ಮತ್ತು ಸಮುದಾಯದ ನಾಯಕತ್ವವು ಸದಾ ನಿರ್ಣಾಯಕ ಪಾತ್ರ ವಹಿಸುತ್ತಲೇ ಬಂದಿವೆ. ಅದರಲ್ಲೂ ಹಳೆಯ ಮೈಸೂರು ಭಾಗದಲ್ಲಿ ಅತ್ಯಂತ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ರಾಜಕೀಯ ಒಲವು, ರಾಜ್ಯದ...

ಉತ್ತರ ಪ್ರದೇಶ: ಮದುವೆಗೆ 15 ದಿನ ಇರುವಾಗ ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕನ ಸಾವು; ಪೊಲೀಸರ ವಿರುದ್ಧ ಚಿತ್ರಹಿಂಸೆ, ₹18.8 ಲಕ್ಷ ಸುಲಿಗೆ ಆರೋಪ

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ 22 ವರ್ಷದ ಮುಸ್ಲಿಂ ಯುವಕನೊಬ್ಬನ ಮದುವೆಗೆ ಇನ್ನು ಕೇವಲ 15 ದಿನಗಳು ಬಾಕಿ ಇರುವಾಗ ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್...

ದಲಿತ ಕುಟುಂಬದ ಮೇಲೆ ಹಲ್ಲೆ ಆರೋಪ: ಸಿಒ, ಎಸ್‌ಎಚ್‌ಒ ಸೇರಿ 15 ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶ

ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿ, ಮಹಿಳೆಯೊಬ್ಬರನ್ನು ಪೊಲೀಸ್ ಕಸ್ಟಡಿಯಲ್ಲಿ ಹಿಂಸಿಸಿ, ಆಕೆಯ ಮಗನನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಸರ್ಕಲ್ ಆಫೀಸರ್ (ಸಿಒ),...

‘ಎಸ್ಐಆರ್’ ಬಳಿಕ ‘ಎಸ್ಎಸ್ಆರ್’ ಮೂಲಕ ಮುಖ ಉಳಿಸಿಕೊಳ್ಳಲು ಚುನಾವಣಾ ಆಯೋಗದ ಕಸರತ್ತು: SIR ವಿರೋಧಿ ಜನಪರ ಸಂಘಟನೆಗಳಿಂದ ತೀವ್ರ ಹೋರಾಟದ ಎಚ್ಚರಿಕೆ

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ತರ್ಕಹೀನ, ದೋಷಪೂರಿತ ಎಂದು ಆರೋಪ; SIR ಪಟ್ಟಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ; ನವೆಂಬರ್ 26ರಿಂದ ದೇಶದ 100 ನಗರಗಳಲ್ಲಿ ಪ್ರಜಾತಂತ್ರ ಮರುಸ್ಥಾಪನಾ ಅಭಿಯಾನಕ್ಕೆ ಸಿದ್ಧತೆ ಬೆಂಗಳೂರು: ಮತದಾರರ...

ಒಡಿಶಾದ ಬುಡಕಟ್ಟು ಪ್ರದೇಶದಲ್ಲಿ ಗಣಿ ಭೂಸ್ವಾಧೀನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಬುಡಕಟ್ಟು ಸಮುದಾಯಗಳ ಪೂರ್ವಾನುಮತಿ ಕಡ್ಡಾಯ ಎಂದು ತೀರ್ಪು

ಒಡಿಶಾದ ಸುಂದರಗಢ ಜಿಲ್ಲೆಯ ಅನುಸೂಚಿತ ಗ್ರಾಮ ಪ್ರದೇಶಗಳಲ್ಲಿ ಡಾಲ್ಮಿಯಾ ಸಿಮೆಂಟ್ ಸ್ಥಾವರಕ್ಕಾಗಿ ಕೈಗೊಂಡಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬುಡಕಟ್ಟು ಪ್ರದೇಶಗಳಲ್ಲಿ ಭೂಸ್ವಾಧೀನಕ್ಕೆ ಮುಂದುವರಿಯುವ ಮೊದಲು ಸ್ಥಳೀಯ ಗ್ರಾಮ ಪಂಚಾಯತ್‌ ಅಥವಾ...

ಪ್ಯಾಲೆಸ್ತೀನ್ ನಾಯಕ ಯಾಸರ್ ಅರಾಫಾತ್ ಸಲಹೆಗಾರರಾಗಿದ್ದ ಅಹ್ಮದ್ ತಿಬಿ ಇಸ್ರೇಲ್ ಸಂಸತ್ತಿನ ಉಪಸಭಾಪತಿಯಾಗಿ ಆಯ್ಕೆ

ಇಸ್ರೇಲ್‌ ಸಂಸತ್ತಾದ ನೆಸೆಟ್‌ಗೆ (Knesset) ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಆಡಳಿತರೂಢ ಒಕ್ಕೂಟಕ್ಕೆ ಸೋಲಾಗಿರುವುದು ಹಲವು ಗಮನಾರ್ಹ ಬದಲಾವಣೆಗಳಿಗೆ ಕಾರಣವಾಗಿದೆ. ಅವುಗಳಲ್ಲಿ ಒಂದು ಅಹ್ಮದ್ ತಿಬಿ ಅವರು ಉಪಸಭಾಪತಿಯಾಗಿ...

“ಚುನಾವಣೆ ಬಹಿಷ್ಕರಿಸಿದರೆ ಪ್ರಜಾಪ್ರಭುತ್ವ ಅಂತ್ಯ”: ರಾಹುಲ್ ಗಾಂಧಿ ಎಚ್ಚರಿಕೆ; ಆಯೋಗದೊಳಗಿಂದಲೇ ಮಾಹಿತಿ ಸಿಗುತ್ತಿದೆ ಎಂದ ವಿಪಕ್ಷ ನಾಯಕ

ಅಮೆರಿಕ: ಭಾರತೀಯ ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯ ಎದುರಾಗಿದೆ ಎಂಬ ಮಾಹಿತಿ ಚುನಾವಣಾ ಆಯೋಗದ ಒಳಗಿನಿಂದಲೇ ವಿರೋಧ ಪಕ್ಷಗಳಿಗೆ ಲಭ್ಯವಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

ಸೈನಿಕರು ಸಂಕಲ್ಪ ಮಾಡಿದರೆ ಪಂಜಾಬ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯ: ಪಂಜಾಬ್‌ನಲ್ಲಿ ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್!

ಜಲಂಧರ್: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (AAP) ಸರ್ಕಾರವನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸಂತ ಗುರು ರವಿದಾಸ್...