Homeಮುಖಪುಟಕೇರಳ: ಇ20 ಪರೀಕ್ಷೆಗೆ ಶುದ್ಧ ಪೆಟ್ರೋಲ್ ನೀಡಲು ತೈಲ ಕಂಪನಿಗಳ ಹಿಂದೇಟು

ಕೇರಳ: ಇ20 ಪರೀಕ್ಷೆಗೆ ಶುದ್ಧ ಪೆಟ್ರೋಲ್ ನೀಡಲು ತೈಲ ಕಂಪನಿಗಳ ಹಿಂದೇಟು

- Advertisement -
- Advertisement -

ಪೆಟ್ರೋಲ್‌ನಲ್ಲಿರುವ ಎಥನಾಲ್ ಪ್ರಮಾಣವನ್ನು ಪರಿಶೀಲಿಸುವ ಕೇರಳ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಇ20 ಪೆಟ್ರೋಲ್‌ನಲ್ಲಿನ ಎಥನಾಲ್ ಪ್ರಮಾಣವನ್ನು ಹೋಲಿಕೆ ಮಾಡಿ ಪರೀಕ್ಷಿಸಲು ಅಗತ್ಯವಿರುವ ಎಥನಾಲ್ ಮಿಶ್ರಣವಿಲ್ಲದ ಶುದ್ಧ ಪೆಟ್ರೋಲ್ ಮಾದರಿಗಳನ್ನು ಒದಗಿಸಲು ತೈಲ ಕಂಪನಿಗಳು ನಿರಾಕರಿಸಿವೆ.

ಗ್ಯಾಸ್ ಕ್ರೊಮ್ಯಾಟೋಗ್ರಫಿ ವಿಧಾನದಲ್ಲಿ ಪರೀಕ್ಷೆ ನಡೆಸಲು, ಎಥನಾಲ್ ಮಿಶ್ರಣವಿಲ್ಲದ ಶುದ್ಧ ಪೆಟ್ರೋಲ್ ಮಾದರಿಗಳನ್ನು ನೀಡುವಂತೆ ರಾಸಾಯನಿಕ ಪರೀಕ್ಷಕರ ಪ್ರಯೋಗಾಲಯವು ಸಾರ್ವಜನಿಕ ವಲಯದ ತೈಲ ಕಂಪನಿಗಳನ್ನು ಕೋರಿತ್ತು. ಆದರೆ, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಶುದ್ಧ ಪೆಟ್ರೋಲ್ ಲಭ್ಯವಿಲ್ಲ. ಪರೀಕ್ಷೆಗಾಗಿ ಎಥನಾಲ್ ಮಿಶ್ರಣವಿಲ್ಲದ ಪೆಟ್ರೋಲ್ ಒದಗಿಸಬೇಕೆಂಬ ಯಾವುದೇ ನಿಯಮವಿಲ್ಲ ಎಂದು ಆರಂಭದಲ್ಲಿ ಕಂಪನಿಗಳು ಮನವಿ ತಿರಸ್ಕರಿಸಿದ್ದವು. ಹಲವು ಬಾರಿ ಮನವಿ ಮಾಡಿದ ಬಳಿಕ, ನಾಗರಿಕ ಸರಬರಾಜು ಇಲಾಖೆಯು ಅಧಿಕೃತವಾಗಿ ಕೋರಿದರೆ ಬೇಡಿಕೆಯನ್ನು ಪರಿಗಣಿಸಬಹುದು ಎಂದು ಕಂಪನಿಗಳು ತಿಳಿಸಿವೆ.

ಬಳಿಕ ಪ್ರಯೋಗಾಲಯದ ಅಧಿಕಾರಿಗಳು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಅನೂಪ್ ಜೇಕಬ್ ಅವರನ್ನು ಸಂಪರ್ಕಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರು ಇಲಾಖೆಯ ಕಾರ್ಯದರ್ಶಿ ಡಿ. ಬಾಲಮುರಳಿ ಅವರಿಗೆ ಸೂಚಿಸಿದ್ದಾರೆ. ಕಾರ್ಯದರ್ಶಿಯವರು ತೈಲ ಕಂಪನಿಗಳಿಗೆ ಅಧಿಕೃತ ಪತ್ರ ಬರೆಯುವ ನಿರೀಕ್ಷೆಯಿದೆ. ಇದೇ ವೇಳೆ, ಆಹಾರ ಮತ್ತು ಗೃಹ ಇಲಾಖೆಗಳ ಮಧ್ಯಸ್ಥಿಕೆಯಿಂದ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಪರೀಕ್ಷಾ ಕಿಟ್‌ಗಳು ಪ್ರಯೋಗಾಲಯಕ್ಕೆ ತಲುಪಿವೆ.

ಆದರೆ, ಶುದ್ಧ ಪೆಟ್ರೋಲ್ ಮಾದರಿಗಳು ಇನ್ನೂ ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಯೋಗಾಲಯಗಳು ಸಾಂಪ್ರದಾಯಿಕ ರಾಸಾಯನಿಕ ಪರೀಕ್ಷೆಗಳ ಮೂಲಕ ಪರಿಶೀಲನೆ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಮುಂದಿನ ವಾರದೊಳಗೆ ಪರೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥನಾಲ್ ಇರುವುದು ಪತ್ತೆಯಾದರೆ, ತೈಲ ಕಂಪನಿಗಳಿಂದ ಶುದ್ಧ ಪೆಟ್ರೋಲ್ ಮಾದರಿಗಳನ್ನು ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ನಡೆಸಿದ ಪೆಟ್ರೋಲ್ ಪರೀಕ್ಷೆಗಳಲ್ಲಿ ಎಥನಾಲ್ ಪ್ರಮಾಣ ಶೇ.31ರಷ್ಟು ಕಂಡುಬಂದಿದೆ ಎಂಬ ರಾಜ್ಯ ಸರ್ಕಾರದ ಹೇಳಿಕೆಯ ಬೆನ್ನಲ್ಲೇ ಕೇರಳ ಈ ಕ್ರಮಕ್ಕೆ ಮುಂದಾಗಿದೆ. ಪೆಟ್ರೋಲ್‌ನಲ್ಲಿ ಅನುಮತಿಸಲಾದ ಎಥನಾಲ್ ಪ್ರಮಾಣ ಶೇ.20ರಷ್ಟಿದ್ದರೆ, ರಾಜ್ಯದ ಶೇ.80ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ಮಿತಿಗಿಂತ ಹೆಚ್ಚಿನ ಪ್ರಮಾಣದ ಎಥನಾಲ್ ಹೊಂದಿರುವ ಇಂಧನ ಮಾರಾಟವಾಗುತ್ತಿದೆ ಎಂದು ಕರ್ನಾಟಕ ಸರ್ಕಾರ ಹೇಳಿತ್ತು.

ಆದರೆ, ತೈಲ ಕಂಪನಿಗಳು ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಪರೀಕ್ಷಾ ವಿಧಾನದ ಲೋಪಗಳನ್ನು ಉಲ್ಲೇಖಿಸಿ ಕರ್ನಾಟಕದ ವರದಿಯನ್ನು ತಿರಸ್ಕರಿಸಿದ್ದವು. ದೇಶಾದ್ಯಂತ ನಡೆಸಿದ 893 ಮಾದರಿಗಳ ಪರೀಕ್ಷೆಯಲ್ಲಿ, ಕರ್ನಾಟಕದ 56 ಮಾದರಿಗಳೂ ಸೇರಿ ಎಥನಾಲ್ ಪ್ರಮಾಣ ಶೇ.19ರಿಂದ 21ರ ನಡುವೆ ಇರುವುದು ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿತ್ತು.

ಕೇರಳ ಸರ್ಕಾರವು ಸಾಂಪ್ರದಾಯಿಕ ಪರೀಕ್ಷಾ ವಿಧಾನಗಳನ್ನು ಅನುಸರಿಸಲು ಮುಂದಾಗಿರುವುದು, ಈ ಪರೀಕ್ಷೆಗಳ ಫಲಿತಾಂಶಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಡುಗೊಲ್ಲರ ಎಸ್‌ಟಿ ಹಕ್ಕಿನ ಹೋರಾಟ: ಮೂರು ತಿಂಗಳ ಅಧ್ಯಯನದ ಬಳಿಕ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ; ಹಿರಿಯೂರು ಉಪಚುನಾವಣೆ ಸಿದ್ಧತೆಯೂ ಜೋರು

ಸಮುದಾಯದ ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ, ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ಸಮುದಾಯಗಳಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ಜನಾಂಗೀಯ ಅಧ್ಯಯನ ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು...

ಜಮ್ಮು-ಕಾಶ್ಮೀರ: ನೇಮಕಾತಿ ಅಕ್ರಮದ ವಿರುದ್ಧ  ಕೊರೆಯುವ ಚಳಿಯಲ್ಲೂ ಧರಣಿ: ವಿದ್ಯಾರ್ಥಿಗಳ ಜೊತೆ ರಾತ್ರಿ ಕಳೆದ ಮಾಜಿ ಸಂಸದ ಅಗಾ ರುಹುಲ್ಲಾ

ಶ್ರೀನಗರ: ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳು, ಪರೀಕ್ಷಾ ವಂಚನೆ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿನ ಪಾರದರ್ಶಕತೆಯ ಕೊರತೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯುವ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ...

ತಿರುಪರಂಕುಂದ್ರಂ ವಿವಾದ : ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರ್ಕಾರದಿಂದ ಮರುಪರಿಶೀಲನಾ ಅರ್ಜಿ

ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾದ ಸಮೀಪದ 'ದೀಪತ್ತೂನ್' (ಕಲ್ಲಿನ ಸ್ತಂಭ) ಮೇಲೆ ಕಾರ್ತಿಕ ದೀಪ ಬೆಳಗಲು ಅನುಮತಿ ನೀಡಿರುವ ಇತ್ತೀಚಿನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ....

ಅಗ್ನಿವೀರರ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಯತ್ನ: 14 ವರ್ಷದ ಬಾಲಕನ ವಶಕ್ಕೆ ಪಡೆದ ದೆಹಲಿ ಪೊಲೀಸರು

ಸುಮಾರು 4,000 ಅಗ್ನಿವೀರ ಸಿಬ್ಬಂದಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹ್ಯಾಕ್ ಮಾಡಿ, ಅದನ್ನು ಡಾರ್ಕ್ ವೆಬ್‌ನಲ್ಲಿ 500 ಡಾಲರ್‌ಗೆ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಹರಿಯಾಣದ ಬಲ್ಲಭಗಢದ 14 ವರ್ಷದ ಬಾಲಕನನ್ನು...

ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್‌ ಶಸ್ತ್ರಾಸ್ತ್ರ ಪೂರೈಕೆ ಹಾಗೂ ತರಬೇತಿ ನೀಡಿದೆ: ಮ್ಯಾನ್ಮಾರ್ ಹೋರಾಟಗಾರ ಮೌಂಗ್ ಝರ್ನಿ ಗಂಭೀರ ಆರೋಪ

ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನರಮೇಧ ನಡೆಸುತ್ತಿದ್ದ ಸಂದರ್ಭದಲ್ಲಿ ಇಸ್ರೇಲ್ ದೇಶವು ಮ್ಯಾನ್ಮಾರ್ ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿ, ತರಬೇತಿಯನ್ನೂ ನೀಡಿತ್ತು ಎಂದು ಮ್ಯಾನ್ಮಾರ್‌ನ ಖ್ಯಾತ ಹೋರಾಟಗಾರ ಮತ್ತು ಶಿಕ್ಷಣತಜ್ಞ ಮೌಂಗ್ ಝರ್ನಿ...

ಉತ್ತರ ಪ್ರದೇಶ ಚುನಾವಣೆ: ಒಬಿಸಿ ಮತಗಳ ‘ಕ್ರೋಢೀಕರಣಕ್ಕೆ’ ಅಖಿಲೇಶ್ ಯಾದವ್ ಯತ್ನ; ಸಣ್ಣ ಜಾತಿ ಆಧಾರಿತ ಪಕ್ಷಗಳೊಂದಿಗೆ ಮೈತ್ರಿಗೆ ಚಿಂತನೆ

ಲಖನೌ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ (ಒಬಿಸಿ) ಮತಗಳನ್ನು ಕ್ರೋಢೀಕರಿಸಿ ಚುನಾವಣಾ ಲಾಭ ಪಡೆಯುವ ಉದ್ದೇಶದಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್...

IDBI ಬ್ಯಾಂಕ್ ಮಾರಾಟ ‘ಭಾರತದ ಅತಿದೊಡ್ಡ ಹಗರಣ’: ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಗಂಭೀರ ಆರೋಪ; ಸಂಸತ್ ಚರ್ಚೆಗೆ ಇ.ಎ.ಎಸ್. ಶರ್ಮಾ ಒತ್ತಾಯ!

ಲಾಭದ ಹಳಿಗೆ ಮರಳಿರುವ IDBI ಬ್ಯಾಂಕ್‌ನ ಶೇ. 60.72ರಷ್ಟು ಷೇರುಗಳನ್ನು ಕೆನಡಾದ ಫೇರ್‌ಫ್ಯಾಕ್ಸ್ ಫೈನಾನ್ಷಿಯಲ್ ಹೋಲ್ಡಿಂಗ್ಸ್ ಸಂಸ್ಥೆಗೆ 52,878 ಕೋಟಿ ರೂಪಾಯಿಗೆ ಮಾರಾಟ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದು ಈಗ...

ದಾಖಲೆಯ 100 ದಿನಗಳು ಕಳೆದರೂ ಅಧಿಕೃತವಾಗಿ ಮುಕ್ತಾಯಗೊಳ್ಳದ ಸಂಸತ್ತಿನ ಮುಂಗಾರು ಅಧಿವೇಶನ!

ಲೋಕಸಭಾ ಸ್ಥಾನಗಳ ಹೆಚ್ಚಳಕ್ಕೆ ಸಂಬಂಧಿಸಿದ ವಿವಾದಾತ್ಮಕ ಕ್ಷೇತ್ರ ಪುನರ್ವಿಂಗಡಣೆ (Delimitation) ಮಸೂದೆಯನ್ನು ಕೇಂದ್ರ ಸರ್ಕಾರ ಮರುಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಚರ್ಚೆಗಳ ನಡುವೆಯೇ, ಸಂಸತ್ತಿನ ಮುಂಗಾರು ಅಧಿವೇಶನವು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿ (Sine die)...

‘ಕಾಂಗ್ರೆಸ್ ಬಡವರನ್ನು ದಾರಿ ತಪ್ಪಿಸಿತು; ನನ್ನ ಸರ್ಕಾರ 50 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ’: ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಪಾಟ್ನಾ: ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿದೆ. ಬಡವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ಆದರೆ, ತಮ್ಮ ಸರ್ಕಾರದ ಉತ್ತಮ ಉದ್ದೇಶಗಳು ಮತ್ತು ಪ್ರಯತ್ನಗಳಿಂದಾಗಿ ದೇಶದ 50...

ರಿಪೋಟರ್ಸ್ ಕಲೆಕ್ಟಿವ್‌ ‘ಎಲೆಕ್ಷನ್ ಆಡಿಟ್’ ವರದಿಗೆ ಚುನಾವಣಾ ಅಧಿಕಾರಿಗಳಿಂದ ಸಮಜಾಯಿಸಿ : ವರದಿಗಾರ್ತಿ ಸುಮೇಧಾ ಮಿತ್ತಲ್ ತಿರುಗೇಟು

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...