Homeಮುಖಪುಟಜಪಾನ್‌ನ ಮೊತೊಮಚಿ ಟೊಯೊಟೊ ಘಟಕಕ್ಕೆ ಸಿಎಂ ಭೇಟಿ; ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶ ವಿಸ್ತರಿಸುವ ಗುರಿ

ಜಪಾನ್‌ನ ಮೊತೊಮಚಿ ಟೊಯೊಟೊ ಘಟಕಕ್ಕೆ ಸಿಎಂ ಭೇಟಿ; ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶ ವಿಸ್ತರಿಸುವ ಗುರಿ

- Advertisement -
- Advertisement -

“ಕರ್ನಾಟಕ ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ರಾಜ್ಯ ಸರ್ಕಾರದ ಹೂಡಿಕೆ ಆಕರ್ಷಣೆ ಅಭಿಯಾನದ ಭಾಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಾಣಿಜ್ಯ ಸಚಿವ ಎಂ.ಬಿ. ಪಾಟೀಲ್ ಹಾಗೂ ನಿಯೋಗದೊಂದಿಗೆ ಜಪಾನ್‌ನ ಮೊತೊಮಚಿ ಘಟಕದಲ್ಲಿ ಟೊಯೊಟಾ ಮೋಟಾರ್ ಕಾರ್ಪೊರೇಷನ್‌ ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.

ಇದೇ ವೇಳೆ ಟೊಯೊಟಾದ ‘ಗ್ಲೋಬಲ್ ಸ್ಕಿಲ್-ಅಪ್’ ಕಾರ್ಯಕ್ರಮದಡಿ ಜಪಾನ್ ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಟೊಯೊಟಾ ಬಿಡದಿ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸೋಮವಾರ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ​ಸಿಎಂ ತರಬೇತಿದಾರರ ಅನುಭವಗಳ ಬಗ್ಗೆ ಮಾಹಿತಿ ಪಡೆದರು. ಜಪಾನ್ ನಲ್ಲಿ‌ ದೊರೆತಿರುವ ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ತಾಂತ್ರಿಕ ಕೌಶಲ್ಯ ಹಾಗೂ ಪರಿಣತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ತರಬೇತಿ ಪಡೆಯುತ್ತಿರುವವರಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು.

ಕರ್ನಾಟಕಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಪ್ರಮುಖ ತಾಣವಾಗಿರುವ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಬಲಪಡಿಸುವುದರ ಕುರಿತು ಈ ಚರ್ಚೆಗಳು ನಡೆಸಿದರು.

“ಕರ್ನಾಟಕ ಸರ್ಕಾರದ ‘ಬಿಯಾಂಡ್ ಬೆಂಗಳೂರು’ ಯೋಜನೆಯ ಮೂಲಕ ಕೈಗಾರಿಕಾ ಅಭಿವೃದ್ಧಿ, ಹೂಡಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೊರಗೂ ಕೊಂಡೊಯ್ಯಲು ಮತ್ತು ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಕೈಗಾರಿಕಾ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಬದ್ಧವಾಗಿದೆ” ಎಂದು ಹೇಳಿದರು.

“ಕೈಗಾರಿಕೆಗಳನ್ನು ಆಕರ್ಷಿಸಿ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶಗಳನ್ನು ವಿಸ್ತರಿಸುವ ಮೂಲಕ ಕರ್ನಾಟಕದ ಪ್ರತಿಯೊಂದು ಪ್ರದೇಶವನ್ನೂ ರಾಜ್ಯದ ಬೆಳವಣಿಗೆಯ ಪಯಣದಲ್ಲಿ ಪಾಲುದಾರರನ್ನಾಗಿ ಮಾಡುವುದು ಸರ್ಕಾರದ ಹೂಡಿಕೆ ಅಭಿಯಾನದ ಗುರಿಯಾಗಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋದವರ ಮೇಲ್ಮನವಿಗಳಿಗೆ ಮೊದಲ ಆದ್ಯತೆ; ಸೇರ್ಪಡೆ ವಿರುದ್ಧದ ಅರ್ಜಿ ಮುಂದೂಡಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR — Special Intensive Revision) ಪ್ರಕ್ರಿಯೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟಿರುವ (deleted) ನಾಗರಿಕರು ಸಲ್ಲಿಸಿರುವ ಮೇಲ್ಮನವಿಗಳಿಗೆ ಮೊದಲ...

ಗೋಧ್ರಾ ರೈಲು ದಹನ ಪ್ರಕರಣ : ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಇರ್ಫಾನ್ ಸಿರಾಜ್ ಪಾಡಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.23) ಅಮಾನತುಗೊಳಿಸಿದ್ದು, ವೈದ್ಯಕೀಯ ಕಾರಣಗಳ ಆಧಾರದ ಮೇಲೆ ಜಾಮೀನು ಮಂಜೂರು...

ನೇಪಾಳದ ಪುನರ್‌ನಿರ್ಮಾಣಕ್ಕೆ ಭಾರತದಿಂದ ₹15,000 ಕೋಟಿ ನೆರವು; ‘ಉಭಯ ದೇಶಗಳ ಸಂಬಂಧ ಹಿಮಾಲಯದಷ್ಟೇ ದೃಢವಾಗಿವೆ’ ಎಂದ ಪ್ರಧಾನಿ ಬಲೇಂದ್ರ ಶಾ

ನೇಪಾಳ: ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ನೇಪಾಳದ ಪುನರ್‌ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಭಾರತ ಸುಮಾರು 15,000 ಕೋಟಿ ರೂಪಾಯಿಗಳ ನೆರವು ಪ್ಯಾಕೇಜ್ ಘೋಷಿಸಿದೆ. ಸೋಮವಾರ ನೇಪಾಳದ ಪ್ರಧಾನಿ ಬಲೇಂದ್ರ ಶಾ ಅವರೊಂದಿಗಿನ ಜಂಟಿ...

ಧ್ರುವ್ ರಾಠೀ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿ

2018ರ ಮಾನನಷ್ಟ ಮೊಕದ್ದಮೆಯೊಂದಕ್ಕೆ ಸಂಬಂಧಿಸಿದಂತೆ, ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ದೆಹಲಿ ನ್ಯಾಯಾಲಯವೊಂದು ಸೋಮವಾರ (ನ.23) ಜಾಮೀನು ರಹಿತ ವಾರಂಟ್ ಹೊರಡಿಸಿದೆ. ರಾಠೀ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊವೊಂದಕ್ಕೆ ಸಂಬಂಧಿಸಿದಂತೆ, ವಿಕಾಸ್...

ಡಿಲಿಮಿಟೇಶನ್ ಮಸೂದೆ ಬೆಂಬಲಿಸಲು ಸಂಸದರಿಗೆ ಬಿಜೆಪಿಯಿಂದ ತಲಾ 150 ಕೋಟಿ ರೂ. ಆಫರ್ : ಸಂಜಯ್ ರಾವುತ್ ಗಂಭೀರ ಆರೋಪ

ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗೆ ಬೆಂಬಲ ಪಡೆಯುವ ಸಲುವಾಗಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಸಂಸದರಿಗೆ ತಲಾ 150 ಕೋಟಿ ರೂಪಾಯಿ ಆಫರ್ ಮಾಡುತ್ತಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ)...

ಮಧ್ಯಪ್ರದೇಶ| ದೇವಸ್ಥಾನ ಪ್ರವೇಶಿಸದಂತೆ ತಡೆದ ಸವರ್ಣೀಯರು; ಎಸ್‌ಪಿ ಕಚೇರಿ ಮುಂದೆ ದಲಿತ ಮಹಿಳೆಯರಿಂದ ಪ್ರತಿಭಟನೆ

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ರಿಚ್ಛಾರಾ ಗ್ರಾಮದ ದಲಿತ ಮಹಿಳೆಯರು, ತಮ್ಮ ಜಾತಿಯ ಕಾರಣಕ್ಕೆ ಹೊಸದಾಗಿ ನಿರ್ಮಿಸಲಾದ ಶಿವ ದೇವಾಲಯ ಪ್ರವೇಶಿಸಲು ಮತ್ತು ಶಿವಲಿಂಗಕ್ಕೆ ನೀರು ಅರ್ಪಿಸಲು ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗುರುವಾರ ಕುಟುಂಬದ ಸದಸ್ಯರು...

ಎಸ್‌ಐಆರ್‌ ರದ್ದಾದರೆ ಸಿಇಸಿ ಗ್ಯಾನೇಶ್ ಕುಮಾರ್ ಜೈಲಿಗೆ: ಪ್ರಶಾಂತ್ ಭೂಷಣ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದರೆ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಜೈಲು ಸೇರಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಭಾನುವಾರ...

ಬಿಸ್ಲೆರಿ ವಿರುದ್ಧ FSSAI ಕ್ರಮ ಕೈಗೊಂಡಿದ್ದೇಕೆ? ಕುಡಿಯುವ ನೀರಿನಲ್ಲಿ ಪತ್ತೆಯಾದ ಕ್ಯಾನ್ಸರ್ ಕಾರಕ ಯಾವುದು?

ಲಕ್ಷಾಂತರ ಭಾರತೀಯರಿಗೆ ಬಿಸ್ಲೆರಿ (Bisleri) ನೀರಿನ ಬಾಟಲಿಯನ್ನು ಖರೀದಿಸುವುದು ಬಹುತೇಕ ಸಹಜ ಅಭ್ಯಾಸವಾಗಿದೆ. ರೈಲ್ವೆ, ವಿಮಾನ ನಿಲ್ದಾಣಗಳು, ರೆಸ್ಟೋರೆಂಟ್‌ಗಳು ಮತ್ತು ನೆರೆಹೊರೆಯ ಅಂಗಡಿಗಳಲ್ಲಿ ಈ ಚಿರಪರಿಚಿತ ಲೇಬಲ್ ಸುರಕ್ಷಿತ ಕುಡಿಯುವ ನೀರಿಗೆ ಪರ್ಯಾಯ...

ಸರ್ಕಾರಿ ಶಾಲೆಯಲ್ಲಿ ಜಾತಿ ತಾರತಮ್ಯದ ಆರೋಪ: ದಲಿತ ಲ್ಯಾಬ್ ಅಸಿಸ್ಟೆಂಟ್ ಮೇಜಿನ ಮೇಲೆ ಮಲ ಸುರಿದು ಕಿರುಕುಳ!

ತಮಿಳುನಾಡಿನ ಅರಿಯಲೂರು ಜಿಲ್ಲೆಯ ಜಯಂಕೊಂಡಂ ಸಮೀಪದ ಕೀಲವೆಲಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪ್ರಯೋಗಾಲಯ ಸಹಾಯಕ (ಲ್ಯಾಬ್ ಅಸಿಸ್ಟೆಂಟ್) ಪಿ. ಕಣ್ಣದಾಸನ್ ಅವರ ಮೇಜಿನ ಮೇಲೆ ಕೆಲವು ಸಿಬ್ಬಂದಿ...

ಜೆಡಿಯು ವಿಲೀನಕ್ಕೆ ಬಿಜೆಪಿ ಏಜೆಂಟರಿಂದ ಸಂಚು; ನಿತೀಶ್ ಕುಮಾರ್ ಅವರನ್ನು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿಡಲಾಗುತ್ತಿದೆ: ಪ್ರಶಾಂತ್ ಕಿಶೋರ್ ಆರೋಪ

ಪಾಟ್ನಾ: ಬಿಹಾರದಲ್ಲಿ ಆಡಳಿತಾರೂಢ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಪಕ್ಷದೊಳಗೆ ಬಿಜೆಪಿ ಏಜೆಂಟರು ಕಾರ್ಯನಿರ್ವಹಿಸುತ್ತಿದ್ದು, ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದಕ್ಕೆ ವ್ಯವಸ್ಥಿತವಾಗಿ ದಾರಿ ಮಾಡಿಕೊಡುತ್ತಿದ್ದಾರೆ. ಈ ಉದ್ದೇಶದಿಂದಲೇ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್...