Homeಮುಖಪುಟಪಂಜಾಬ್‌ ಚುನಾವಣೆಗೆ ಬಿಜೆಪಿ-ಎಸ್‌ಎಡಿ ಮೈತ್ರಿ : ಮತ್ತೆ ಎನ್‌ಡಿಎಗೆ ಮರಳಿದ ಅಕಾಲಿದಳ

ಪಂಜಾಬ್‌ ಚುನಾವಣೆಗೆ ಬಿಜೆಪಿ-ಎಸ್‌ಎಡಿ ಮೈತ್ರಿ : ಮತ್ತೆ ಎನ್‌ಡಿಎಗೆ ಮರಳಿದ ಅಕಾಲಿದಳ

- Advertisement -
- Advertisement -

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮೈತ್ರಿ ಘೋಷಣೆ ಮಾಡಿವೆ. ಇದರೊಂದಿಗೆ ಅಕಾಲಿ ದಳ ಮತ್ತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಮರಳಿದ್ದು, ಪಂಜಾಬ್‌ನಲ್ಲಿ ಅಕಾಲಿ ದಳ ‘ಬಡೆ ಭಾಯಿ’ (ಹಿರಿಯ ಸಹೋದರ) ಪಾತ್ರವನ್ನು ನಿರ್ವಹಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ (ನ.24) ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, “ಅಕಾಲಿ ದಳದೊಂದಿಗಿನ ನಮ್ಮ ಸಂಬಂಧ ಯಾವಾಗಲೂ ಗಟ್ಟಿಯಾಗಿದೆ. ವಾಜಪೇಯಿ–ಅಡ್ವಾಣಿ ಕಾಲದಿಂದಲೂ ನಮ್ಮ ಬಾಂಧವ್ಯವಿದೆ” ಎಂದಿದ್ದಾರೆ. ಎನ್‌ಡಿಎ ಮೈತ್ರಿಕೂಟ ಪಂಜಾಬ್‌ನ ಎಲ್ಲಾ 117 ವಿಧಾಸಭಾ ಕ್ಷೇತ್ರಗಳಲ್ಲೂ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ವ್ಯಾಪಕವಾಗಿರುವ ಮಾದಕವಸ್ತು ಹಾವಳಿಯನ್ನು ಡಿಸೆಂಬರ್ 30, 2029ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಪಂಜಾಬ್‌ನಲ್ಲಿ ‘ಡಬಲ್ ಇಂಜಿನ್’ ಸರ್ಕಾರ ರಚನೆಯಾದ ಮೂರು ತಿಂಗಳೊಳಗೆ ರೈತರ ಸಮಸ್ಯೆಗಳು ಹಾಗೂ ಇತರ ಬಾಕಿ ಬೇಡಿಕೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಅಕಾಲಿ ದಳದ ನಾಯಕರ ಸುದೀರ್ಘ ಮಾತುಕತೆಯ ಬಳಿಕ ಪಂಜಾಬ್‌ಗಾಗಿ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಎನ್‌ಡಿಎ ಸರ್ಕಾರ ಅದನ್ನು ಜಾರಿಗೆ ತರಲಿದೆ ಎಂದು ಶಾ ವಿವರಿಸಿದರು.

ಎಎಪಿ ವಿರುದ್ಧ ವಾಗ್ದಾಳಿ

ಮೈತ್ರಿ ಘೋಷಣೆಯ ಬೆನ್ನಲ್ಲೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಎನ್‌ಡಿಎ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್‌ನಿಂದ ಎಎಪಿ ಸರ್ಕಾರವನ್ನು ಜನರು ಮತದಾನದ ಮೂಲಕ ಕೆಳಗಿಳಿಸಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಎಸ್‌ಎಡಿ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮಾತನಾಡಿ, ಈ ಮೈತ್ರಿ ಕೇವಲ ರಾಜಕೀಯ ಹೊಂದಾಣಿಕೆಯಲ್ಲ, ಪಂಜಾಬ್‌ನ ಹಿತದೃಷ್ಟಿಯಿಂದ ರೂಪುಗೊಂಡ ಸಹಜ ಬಾಂಧವ್ಯವಾಗಿದೆ ಎಂದಿದ್ದಾರೆ. 106 ವರ್ಷಗಳಿಗೂ ಹಳೆಯದಾದ ತಮ್ಮ ಪಕ್ಷವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಿಂದಲೂ ಬಿಜೆಪಿಯೊಂದಿಗೆ ಮೈತ್ರಿ ಹೊಂದಿತ್ತು ಎಂದು ಸ್ಮರಿಸಿದ ಅವರು, ಎಎಪಿ ಆಡಳಿತದಲ್ಲಿ ಪಂಜಾಬ್‌ನ ಆಡಳಿತ ವ್ಯವಸ್ಥೆ ಕುಸಿದಿದ್ದು, ದರೋಡೆಕೋರರ ಅಟ್ಟಹಾಸ ಹೆಚ್ಚಿದೆ ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ! (ಭಾಗ-1)

ಲೇಖಕರು: ಅಮನ್ ಭಾರ್ಗವಮೂಲ: Diagram Chasingಕನ್ನಡಕ್ಕೆ: ಸೋಮಶೇಖರ್ ಚಲ್ಯ "ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ನಾಗರಿಕನನ್ನೂ ಹೊರಗಿಟ್ಟಿಲ್ಲ; ಒಬ್ಬ ಅನರ್ಹ ವ್ಯಕ್ತಿಯನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸಿಲ್ಲ" - ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ, ಅಕ್ಟೋಬರ್ 27,...

ದಿಲ್ಜಿತ್ ದೋಸಾಂಜ್ ಬೆಂಗಳೂರು ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಮಾದಾವರ ಮೆಟ್ರೋ ನಿಲ್ದಾಣದಲ್ಲೂ ಐಇಡಿ ಸ್ಫೋಟದ ಎಚ್ಚರಿಕೆ

ಬೆಂಗಳೂರು: ಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಬೆಂಗಳೂರಿನಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 29ರಂದು ಮಾದಾವರದ ನೈಸ್ ಮೈದಾನದಲ್ಲಿ ನಡೆಯಲಿರುವ...

SIR ವಿರುದ್ಧದ ಹೋರಾಟದೇಶಕ್ಕೆ ಮಾದರಿಯಾದ ಕರ್ನಾಟಕ

ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ನಿರ್ಣಾಯಕ ಹೋರಾಟಕ್ಕೆ ಪ್ರಸ್ತುತ ದೇಶದ ಜನರು ಧುಮುಕಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ ಹಿಡಿದು, ನಮ್ಮ ಕರ್ನಾಟಕದ ಕೊಡಗಿನ ಆದಿವಾಸಿ ಹಾಡಿಗಳವರೆಗೆ ಹೋರಾಟದ ಕಿಚ್ಚು ಹಬ್ಬಿದೆ. ಕಳೆದ 10-12 ವರ್ಷಗಳಲ್ಲಿ...

ಎಫ್‌ಐಆರ್ ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ವಿವಾದಿತ ‘ಬಸವ ಮಂಟಪ’ ಕೃತಿ ಲೇಖಕ ರವಿ ಹಂಜ್‌

‘ಬಸವ ಮಂಟಪ’ ಕೃತಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಲೇಖಕ ರವಿ ಹಂಜಗಿಮಠ ಅವರು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ತಮ್ಮ ಅರ್ಜಿಯಲ್ಲಿ, ತಾನು ಬದ್ಧ ವೀರಶೈವ ಲಿಂಗಾಯತ ಧರ್ಮದ...

ದೇವಾಲಯ ಆವರಣದಲ್ಲಿನ ಪೆರಿಯಾರ್ ಪ್ರತಿಮೆ ಸ್ಥಳಾಂತರಿಸಲು ಹೈಕೋರ್ಟ್ ಸೂಚನೆ: ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ತಮಿಳುನಾಡು ಸರ್ಕಾರ ಮೇಲ್ಮನವಿ

ತಂಜಾವೂರು (ತಮಿಳುನಾಡು): ತಂಜಾವೂರು ಜಿಲ್ಲೆಯ ಅರುಳ್ಮಿಗು ಬ್ರಹ್ಮಸಿರಕಂಡೀಶ್ವರರ್ ದೇವಾಲಯದ ಸಮೀಪ ಸ್ಥಾಪಿಸಲಾಗಿರುವ ದ್ರಾವಿಡ ಚಳವಳಿಯ ನಾಯಕ ಹಾಗೂ ಸಮಾಜ ಸುಧಾರಕ ಇ.ವಿ. ರಾಮಸ್ವಾಮಿ (ಪೆರಿಯಾರ್) ಅವರ ಪ್ರತಿಮೆಯನ್ನು ತೆರವುಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ...

ಬಿಲ್ ಬಾಣ – ಭಾಗ 2 ಬಡತನವೇ ಮರಣದಂಡನೆಯಾದಾಗ

ಹಿಂದಿನ ಅಂಕಣದಲ್ಲಿ ಹಣ ಪಾವತಿಸಬಲ್ಲವರು ಮತ್ತು ವಿಮೆ ಹೊಂದಿರುವವರು ಹೇಗೆ ಅನಗತ್ಯ ಪರೀಕ್ಷೆಗಳು, ಶಸ್ತ್ರಚಿಕಿತ್ಸೆಗಳು, ದುಬಾರಿ ಬಿಲ್ಲಿಂಗ್ ಮತ್ತು ವಿಮಾ ಹಕ್ಕುಗಳ ನಿರಾಕರಣೆಯಿಂದ ಶೋಷಿಸಲ್ಪಡುತ್ತಾರೆ ಎಂಬುದನ್ನು ನೋಡಿದ್ದೇವೆ. ಆರೋಗ್ಯ ವ್ಯವಸ್ಥೆಯ ಆ ಮುಖದಲ್ಲಿ...

ಹಗ್ಗಿಂಗ್‌ಫೇಸ್ ಮೇಲೆ ಓಪನ್‌ಎಐ ಏಜೆಂಟ್‌ಗಳ ಸೈಬರ್ ದಾಳಿ: ಎಐ ನಿಯಂತ್ರಣದ ಕುರಿತು ಜಾಗತಿಕ ಕಳವಳ

2026ರ ಜುಲೈ 11ರಂದು, ಚಾಟ್‌ಜಿಪಿಟಿ ಖ್ಯಾತಿಯ ಓಪನ್‌ಎಐ (OpenAI) ಕಂಪನಿಯು ನಿರ್ಮಿಸಿದ ಸ್ವಾಯತ್ತ ಕೃತಕ ಬುದ್ಧಿಮತ್ತೆ (ತಮ್ಮಷ್ಟಕ್ಕೆ ತಾವೇ ನಿರ್ಧಾರ ಕೈಗೊಳ್ಳುವ ಎಐ) ಏಜೆಂಟ್‌ಗಳು, ಮಷೀನ್ ಲರ್ನಿಂಗ್ ಮಾದರಿಗಳನ್ನು ಹೋಸ್ಟ್ ಮಾಡುವ ‘ಹಗ್ಗಿಂಗ್...

ಕಿರುಕುಳ ಆರೋಪ : ಟಿವಿಕೆ ಶಾಸಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮಹಿಳಾ ಜಿಲ್ಲಾಧಿಕಾರಿ, ಎಫ್‌ಐಆರ್ ದಾಖಲು

ಕಿರುಕುಳ ಮತ್ತು ಅನುಚಿತ ವರ್ತನೆ ಆರೋಪಿಸಿ ತಮಿಳುನಾಡಿನ ಆಡಳಿತರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಸಿ. ಅರುಳ್ ವಿಘ್ನೇಶ್ ವಿರುದ್ಧ ಕಳ್ಳಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಅವರು ಪೊಲೀಸರಿಗೆ ಅಧಿಕೃತ...

ಬಾಂಗ್ಲಾದೇಶಕ್ಕೆ ಮರಳಲು ‘ವಿಜಯ ದಿನ’ವನ್ನೇ ಆಯ್ದುಕೊಂಡ ಶೇಖ್ ಹಸೀನಾ; ಡಿ.16ರಂದು ಭಾರತದಿಂದ ವಾಪಸಾಗುವ ಯೋಜನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಲ್ಲಿ ಆಶ್ರಯ ಪಡೆದಿರುವುದರಿಂದ ತಾಯ್ನಾಡಿಗೆ ಮರಳಲು ಡಿಸೆಂಬರ್ 16ರ ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಬಾಂಗ್ಲಾದೇಶ ಸ್ವಾತಂತ್ರ್ಯ ಗಳಿಸಿದ ದಿನದ ಸ್ಮರಣಾರ್ಥ...

ನ.25ರಂದು ಶರ್ಜೀಲ್ ಇಮಾಮ್ -ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ಹಿಂದಿನ 'ದೊಡ್ಡ ಸಂಚು' ಆರೋಪಕ್ಕೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ...