Homeಮುಖಪುಟಸಂಯುಕ್ತ ಕಿಸಾನ್ ಮೋರ್ಚಾದ ಜಂತರ್ ಮಂತರ್ ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ಸಂಯುಕ್ತ ಕಿಸಾನ್ ಮೋರ್ಚಾದ ಜಂತರ್ ಮಂತರ್ ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸದಸ್ಯರು ಮತ್ತು ಇತರ ಹೋರಾಟಗಾರರು ಗುರುವಾರ (ನ.26) ಕಾಳಿ ಬಾರಿಯಿಂದ ಜಂತರ್ ಮಂತರ್‌ವರೆಗೆ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ದೆಹಲಿ ಪೊಲೀಸರು, ಉದ್ದೇಶಿತ ಮೆರವಣಿಗೆಯ ಬಗ್ಗೆ ಮಾಹಿತಿ ಲಭ್ಯವಾಗಿದೆಯಾದರೂ, ಪ್ರತಿಭಟನೆ ನಡೆಸಲು ಅನುಮತಿ ಕೋರಿ ಸಂಘಟಕರಿಂದ ಯಾವುದೇ ಅಧಿಕೃತ ಅರ್ಜಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಇದರನ್ವಯ ಅನಧಿಕೃತವಾಗಿ ಜನರು ಗುಂಪುಗೂಡುವುದು, ಮೆರವಣಿಗೆ, ಪ್ರತಿಭಟನೆ, ಭಾಷಣ, ಘೋಷಣೆಗಳನ್ನು ಕೂಗುವುದು ಹಾಗೂ ಧರಣಿ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾರ್ವಜನಿಕರು ಈ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದು, ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಐತಿಹಾಸಿಕ ರೈತ ಹೋರಾಟಕ್ಕೆ ಆರು ವರ್ಷ ಪೂರ್ಣಗೊಂಡ ಹಿನ್ನೆಲೆ (ನವೆಂಬರ್ 26, 2020ರ ಹೋರಾಟದ ಸ್ಮರಣಾರ್ಥ) ಎಸ್‌ಕೆಎಂ ಈ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯ ಮೂಲಕ ರೈತರ ಶೋಷಣೆ ಕೊನೆಗೊಳ್ಳಬೇಕು ಮತ್ತು ಡಿಸೆಂಬರ್ 9, 2021ರಂದು ಕೇಂದ್ರ ಸರ್ಕಾರ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು (India-US trade deal) ಸಂಘಟನೆ ವಿರೋಧಿಸಿದೆ.

ಗಮನಾರ್ಹವಾಗಿ, ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಹಿಂಪಡೆಯಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕು ಎಂಬ ಬೇಡಿಕೆಯನ್ನು ಸಹ ಮುಂದಿಟ್ಟಿದೆ.

ರೈತರ ಸಮಗ್ರ ಸಾಲ ಮನ್ನಾ ಮಾಡಬೇಕು, ಆತ್ಮಹತ್ಯೆ ಮಾಡಿಕೊಂಡ ರೈತರು ಮತ್ತು ಕೃಷಿ ಕಾರ್ಮಿಕರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು, ಹಾಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಬದಲಾಗಿ ಸಾರ್ವಜನಿಕ ವಲಯದ ಬೆಳೆ ಮತ್ತು ಜಾನುವಾರು ವಿಮಾ ನಿಗಮವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ತು ವರ್ಷಗಳಲ್ಲಿ ಇ.ಡಿ. ಬಳಕೆ ಶೇ.600ರಷ್ಟು ಏರಿಕೆ: ಬಿಜೆಪಿ ಸೇರಿದ ಬಳಿಕ ತನಿಖೆಯಿಂದ ನಿರಾಳತೆ ಪಡೆದ ವಿರೋಧ ಪಕ್ಷದ ನಾಯಕರು?

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಕೇಂದ್ರದ ಬಿಜೆಪಿ...

ರಾಹುಲ್ ಗಾಂಧಿ ಹೆಸರು, ಫೋಟೋ ಇರುವ ಪೋಸ್ಟ್‌ಗಳಿಗೆ ನಿರ್ಬಂಧ : ಮೆಟಾ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯುವ ಕಾಂಗ್ರೆಸ್

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರು ಅಥವಾ ಫೋಟೋ ಹೊಂದಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಸ್ವಯಂಚಾಲಿತವಾಗಿ ನಿರ್ಬಂಧಿಸುತ್ತಿವೆ ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್...

ಯುಪಿಎ ಅವಧಿಗೆ ಹೋಲಿಸಿದರೆ ಮೋದಿ ಆಡಳಿತದಲ್ಲಿ ಶೇ.16–28ರಷ್ಟು ಮಸೂದೆಗಳಷ್ಟೇ ಸಂಸದೀಯ ಸಮಿತಿಗಳಿಗೆ ರವಾನೆ: ತರಾತುರಿ ಕಾನೂನುಗಳಿಗೆ ಹ್ಯೂಮನ್‌ ರೈಟ್ಸ್‌ ವಾಚ್ ಕಳವಳ!

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ...

ತಿರುವಪ್ಪರಂಕುಂದ್ರಂ ‘ಕಾರ್ತಿಕ ದೀಪ’ ವಿವಾದ: ಸುಪ್ರೀಂ ಕೋರ್ಟ್‌ಗೆ ಮಧುರೈ ಜಿಲ್ಲಾಧಿಕಾರಿ ನೀಡಿದ ವಿವರಣೆ ಏನು?

ತಮಿಳುನಾಡಿನ ತಿರುವಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಿಸುವ ವಿಚಾರವಾಗಿ ವಿವಾದ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ನ್ಯಾಯಾಲಯದ ಆದೇಶದಂತೆ ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ದೀಪ ಬೆಳಗಿಸದೆ, ಸಾಂಪ್ರದಾಯಿಕ ಸ್ಥಳದಲ್ಲೇ...

ಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜಾರ್ಖಂಡ್ ವಿಧಾನಸಭೆ ಬುಧವಾರ (ನ.25) ನಿರ್ಣಯವೊಂದನ್ನು ಅಂಗೀಕರಿಸಿದೆ. ಧ್ವನಿಮತದ ಮೂಲಕ ಅಂಗೀಕರಿಸಲಾದ ಈ ನಿರ್ಣಯದಲ್ಲಿ ಎಸ್‌ಐಆರ್...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವೇಳೆ ತಂದೆಯ ಹೆಸರು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವ ಕಾರಣಕ್ಕೆ ಸುಮಾರು ಮೂರು ತಿಂಗಳ ಹಸುಗೂಸಿಗೆ ಜನನ ಪ್ರಮಾಣಪತ್ರ ನೀಡಲು ಪಂಚಾಯತ್ ಅಧಿಕಾರಿಗಳು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ರಮ ಬಂಧನ ಆರೋಪ: ಕೇಂದ್ರ, ದೆಹಲಿ ಸರ್ಕಾರಕ್ಕೆ ಸುಪ್ರೀಂ 10 ದಿನಗಳ ಗಡುವು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ಕಳೆದ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಮಗ್ರ...

ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ: ಹ್ಯೂಮನ್ ರೈಟ್ಸ್ ವಾಚ್

ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳ ಕುರಿತು ದಶಕಗಳಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿಗಳನ್ನು ಪ್ರಕಟಿಸುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಭಾರತದ ಪ್ರಸ್ತುತ ರಾಜಕೀಯ ಮತ್ತು...

6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ. ಉಮರ್...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ರೈತರ ಪ್ರತಿಭಟನೆ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕನಿಷ್ಠ ಸಾಕಾಣಿಕೆ ದರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ "ವಿಧಾನ ಸೌಧ ಚಲೋ" ಪ್ರತಿಭಟನೆ...