Homeಮುಖಪುಟದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತನಿಖಾ ಸಮಿತಿಗೆ ಒಪ್ಪಿಸಿದ ಸುಪ್ರೀಂ...

ದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತನಿಖಾ ಸಮಿತಿಗೆ ಒಪ್ಪಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕಳೆದ ಅಕ್ಟೋಬರ್‌ನಲ್ಲಿ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ನಡೆದ ಪ್ರತಿಭಟನೆಗಳನ್ನು ವರದಿ ಮಾಡುವಾಗ ತಮ್ಮ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಮತ್ತು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಕೇರಳದ ಏಳು ಪತ್ರಕರ್ತರು ಸಲ್ಲಿಸಿದ್ದ ದೂರನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 26) ತನಿಖಾ ಸಮಿತಿಗೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಕೇರಳ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)
ಸಲ್ಲಿಸಿದ್ದ ಅರ್ಜಿಯನ್ನು, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಭಾಷ್ ರೆಡ್ಡಿ ನೇತೃತ್ವದ ತನಿಖಾ ಸಮಿತಿಗೆ ವರ್ಗಾಯಿಸಿದೆ. ಕಳೆದ ಜುಲೈನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರ ಕ್ರಮದ ಕುರಿತು ತನಿಖೆ ನಡೆಸಲು ಆಗಸ್ಟ್‌ನಲ್ಲಿ ಈ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿತ್ತು.

ಘಟನೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ತನಿಖಾ ಸಮಿತಿಯ ಮುಂದೆ ಹಾಜರುಪಡಿಸುವಂತೆ ಪತ್ರಕರ್ತರಿಗೆ ನ್ಯಾಯಾಲಯ ಸೂಚಿಸಿದೆ. ಸಮಿತಿಯು ಈ ಆರೋಪಗಳನ್ನು ಪರಿಶೀಲಿಸಿ ವಾಸ್ತವಾಂಶಗಳ ವರದಿಯನ್ನು ದಾಖಲಿಸಲಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಪತ್ರಕರ್ತರು ಪ್ರತಿಭಟನಾ ಸ್ಥಳದಲ್ಲಿದ್ದರೇ, ಅವರ ಮೇಲೆ ಬಲಪ್ರಯೋಗ ಮಾಡಲಾಗಿದೆಯೇ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಿದ್ದಕ್ಕಿಂತ ಹೆಚ್ಚಿನ ಬಲವನ್ನು ಪೊಲೀಸರು ಬಳಸಿದ್ದಾರೆಯೇ ಎಂಬುದನ್ನು ಸಮಿತಿಯು ಮೊದಲು ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ವರದಿ ಮಾಡುವ ಪತ್ರಕರ್ತರಿಗೆ ವಿಶೇಷ ರಕ್ಷಣೆ ಇದೆಯೇ ಅಥವಾ ಸಾಮಾನ್ಯ ನಾಗರಿಕರಿಗೆ ಅನ್ವಯವಾಗುವ ನಿಯಮಗಳೇ ಅವರಿಗೂ ಅನ್ವಯವಾಗುತ್ತವೆಯೇ ಎಂಬ ವಿಸ್ತೃತ ಕಾನೂನು ಪ್ರಶ್ನೆಗಳನ್ನು ಪರಿಶೀಲಿಸುವುದಾಗಿ ಪೀಠವು ಸುಳಿವು ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ವಿ. ದಿನೇಶ್, ಏಳು ಪತ್ರಕರ್ತರ ಮೇಲಿನ ದೌರ್ಜನ್ಯದ ಆರೋಪಗಳಿಗೆ ದೆಹಲಿ ಪೊಲೀಸರು ಪ್ರತ್ಯೇಕವಾಗಿ ಉತ್ತರಿಸದೆ ಸಾಮಾನ್ಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದ್ದಾರೆ. “ನಾವು ಯಾವುದೇ ವಿಶೇಷ ಸವಲತ್ತುಗಳನ್ನು ಕೇಳುತ್ತಿಲ್ಲ. ನಾವು ಮಾನ್ಯತೆ ಪಡೆದ ವೃತ್ತಿಪರ ಪತ್ರಕರ್ತರಾಗಿದ್ದು, ನಮ್ಮ ವೃತ್ತಿ ಧರ್ಮವನ್ನು ನಿರ್ವಹಿಸಲು ಅವಕಾಶ ನೀಡಿ ಎಂದಷ್ಟೇ ಕೇಳುತ್ತಿದ್ದೇವೆ” ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೊಲೀಸರ ಅಫಿಡವಿಟ್‌ನಲ್ಲಿ ಎಲ್ಲಾ ಆರೋಪಗಳಿಗೆ ಉತ್ತರಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

24 ನ್ಯೂಸ್‌ನ ಮುಖ್ಯ ವರದಿಗಾರ ಸುಹೈಲ್ ಮುಹಮ್ಮದ್, ಕ್ಯಾಮರಾಮನ್ ವಿ.ಎಸ್. ರಾಹುಲ್, ಏಷ್ಯಾನೆಟ್ ನ್ಯೂಸ್ ವರದಿಗಾರ ಸಜಿನ್, ರಿಪೋರ್ಟರ್ ಟಿವಿಯ ಮಹಿಳಾ ಪತ್ರಕರ್ತೆಯರಾದ ರೋಶ್ನಿ ರಾಜನ್ ಮತ್ತು ಫರ್ಸಾನಾ, ಮಾತೃಭೂಮಿ ಛಾಯಾಗ್ರಾಹಕ ವಿಷ್ಣುಪ್ರಸಾದ್ ಹಾಗೂ ಮನೋರಮಾ ನ್ಯೂಸ್‌ನ ಹಿರಿಯ ವರದಿಗಾರ ಮಿಜಿ ಪಿ. ಜೋಸ್ ಅವರು ಪೊಲೀಸರಿಂದ ದೌರ್ಜನ್ಯ ಮತ್ತು ಬೆದರಿಕೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿ ಕೆಯುಡಬ್ಲ್ಯೂಜೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಲೈವ್ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯ ಮೇಲೆ ಹಲ್ಲೆ ಮತ್ತು ಛಾಯಾಗ್ರಾಹಕರ ಕ್ಯಾಮರಾ ಕಸಿದುಕೊಳ್ಳಲು ಯತ್ನಿಸಿದ ಘಟನೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಸದ್ಯ ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ ಅರ್ಜಿಯನ್ನು ವಿಲೇವಾರಿ ಮಾಡಿರುವ ಸುಪ್ರೀಂ ಕೋರ್ಟ್, ಹೆಚ್ಚಿನ ತನಿಖೆಗಾಗಿ ಉನ್ನತಾಧಿಕಾರ ಸಮಿತಿಗೆ ವಹಿಸಿದೆ.

Courtesy :livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌರವ್ ದಾಸ್‌ಗೆ ಆಕ್ಸ್‌ಫರ್ಡ್, ಎಲ್‌ಎಸ್‌ಇ ಆಹ್ವಾನ: ಸರ್ಕಾರಕ್ಕೆ ‘ಅಸೂಯೆ’ ಎಂದ ಅಭಿಜಿತ್ ದಿಪ್ಕೆ

ಪ್ರತಿಷ್ಠಿತ ಸಂಸ್ಥೆಗಳಿಗೆ 27 ವರ್ಷದ ಯುವಕನಿಗೆ ಆಹ್ವಾನ ಬಂದಿದ್ದನ್ನು ಕಂಡು ಸರ್ಕಾರಕ್ಕೆ "ಅಸೂಯೆ" ಉಂಟಾದ ಕಾರಣ, ಸಿಜೆಪಿ (ಸಿಜೆಪಿ) ಸಹ-ಸಂಚಾಲಕ ಸೌರವ್ ದಾಸ್ ಅವರಿಗೆ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಆಕ್ಸ್‌ಫರ್ಡ್...

ಯುಎಪಿಎ ಪ್ರಕರಣಗಳಲ್ಲಿ ಮುಸ್ಲಿಮರನ್ನೇ ಹೆಚ್ಚು ಗುರಿಯಾಗಿಸಲಾಗುತ್ತಿದೆ: ಕರ್ನಾಟಕದ ಅಧ್ಯಯನ ಉಲ್ಲೇಖಿಸಿದ ಹ್ಯೂಮನ್‌ ರೈಟ್ಸ್‌ ವಾಚ್!

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ಭಾರತದಲ್ಲಿ ಭಯೋತ್ಪಾದನೆ ನಿಗ್ರಹ ಕಾನೂನುಗಳ ಬಳಕೆಯ...

ಸರ್ಕಾರಿ ಶಾಲೆಗಳ ದತ್ತು ನೀತಿ ವಿರೋಧಿ ಧರಣಿ ಸ್ಥಳಕ್ಕೆ ಶಿಕ್ಷಣ ಇಲಾಖೆ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಭೇಟಿ; ಹೋರಾಟಗಾರರ ಅಹವಾಲು ಸರ್ಕಾರಕ್ಕೆ ತಲುಪಿಸುವ ಭರವಸೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸಮಗ್ರವಾಗಿ ಜಾರಿಯಾಗಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ದತ್ತು ನೀಡುವ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಕರ್ನಾಟಕ...

ಸ್ವತಂತ್ರ ಕಾರ್ಯವೈಖರಿಯ ಮೂಲಕ ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳುತ್ತಿರಬೇಕು: ಸಿಜೆಐ ಸೂರ್ಯ ಕಾಂತ್

ಪ್ರತಿಯೊಂದು ಭಿನ್ನಾಭಿಪ್ರಾಯವನ್ನೂ ತನ್ನ ಅಧಿಕಾರಕ್ಕೆ ಎದುರಾದ ಸವಾಲು ಎಂದು ಭಾವಿಸದೆ, ಟೀಕೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಆತ್ಮವಿಶ್ವಾಸದ ಸಂಸ್ಥೆಯೊಂದು ಹೊಂದಿರಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಗುರುವಾರ (ನ.26)...

‘ಸರ್ಕಾರಿ ಶಾಲೆಗಳನ್ನು ನಡೆಸಬೇಕಿರುವುದು ಸರ್ಕಾರ, ಕಂಪನಿಗಳಲ್ಲ’: ರಾಜ್ಯ ಸರ್ಕಾರದ ವಿರುದ್ಧ ಶ್ರೀಪಾದ್ ಭಟ್ ವಾಗ್ದಾಳಿ 

‘ಸರ್ಕಾರಿ ಶಾಲೆಗಳನ್ನು ನಡೆಸಬೇಕಿರುವುದು ಸರ್ಕಾರವೇ ಹೊರತು ಅಂಬಾನಿ, ಅದಾನಿ ಅಥವಾ ಟೊಯೋಟಾ ಕಂಪನಿಗಳಲ್ಲ. ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡಲು ಜನರು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿಲ್ಲ. ಶಿಕ್ಷಕರು, ಶೌಚಾಲಯ, ಪಠ್ಯಪುಸ್ತಕ ಸೇರಿದಂತೆ...

ಶಿಕ್ಷಣ ದಾನ ಅಥವಾ ಭಿಕ್ಷೆಯಲ್ಲ ಮೂಲಭೂತ ಹಕ್ಕು, ಬೇಡಿಕೆ ಈಡೇರುವವರೆಗೆ ಫ್ರೀಡಂ ಪಾರ್ಕ್‌ ಬಿಟ್ಟು ಕದಲುವುದಿಲ್ಲ : ನಿರಂಜನಾರಾಧ್ಯ

ಶಿಕ್ಷಣ ದಾನ ಅಥವಾ ಭಿಕ್ಷೆಯಲ್ಲ, ಅದು ನಮ್ಮ ಮೂಲಭೂತ ಹಕ್ಕು. ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೆ ಫ್ರೀಡಂ ಪಾರ್ಕ್‌ ಬಿಟ್ಟು ಕದಲುವುದಿಲ್ಲ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ...

ಸೌರವ್ ದಾಸ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ: ದೆಹಲಿ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬ್ರಿಟನ್‌ಗೆ ಪ್ರಯಾಣಿಸಲು ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ ಸಂಚಾಲಕ ಸೌರವ್ ದಾಸ್ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಅವರ ವಿರುದ್ಧ ಲುಕ್ ಔಟ್ ಸರ್ಕ್ಯುಲರ್...

ಉತ್ತರ ಪ್ರದೇಶ: ಸಂವಿಧಾನ ದಿನದಂದೇ ಸಂವಿಧಾನ ರಕ್ಷಾ ಮೆರವಣಿಗೆಗೆ ತಡೆ; ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ 

ಲಕ್ನೋ: ಉತ್ತರ ಪ್ರದೇಶದಲ್ಲಿ ಸಂವಿಧಾನ ರಕ್ಷಾ ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಅನುಮತಿ ನಿರಾಕರಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮೆರವಣಿಗೆಗೆ ಅನುಮತಿ ನೀಡದಿದ್ದರೂ ಪ್ರತಿಭಟನೆಯಿಂದ ಹಿಂದೆ ಸರಿಯುವ...

ಹತ್ತು ವರ್ಷಗಳಲ್ಲಿ ಇ.ಡಿ. ಬಳಕೆ ಶೇ.600ರಷ್ಟು ಏರಿಕೆ: ಬಿಜೆಪಿ ಸೇರಿದ ಬಳಿಕ ತನಿಖೆಯಿಂದ ನಿರಾಳತೆ ಪಡೆದ ವಿರೋಧ ಪಕ್ಷದ ನಾಯಕರು?

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಕೇಂದ್ರದ ಬಿಜೆಪಿ...

ಸಂಯುಕ್ತ ಕಿಸಾನ್ ಮೋರ್ಚಾದ ಜಂತರ್ ಮಂತರ್ ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸದಸ್ಯರು ಮತ್ತು ಇತರ ಹೋರಾಟಗಾರರು ಗುರುವಾರ (ನ.26) ಕಾಳಿ ಬಾರಿಯಿಂದ ಜಂತರ್ ಮಂತರ್‌ವರೆಗೆ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ನವದೆಹಲಿ ಜಿಲ್ಲೆಯಲ್ಲಿ...