Homeಮುಖಪುಟತಿರುಪರಂಕುಂದ್ರಂ ಬೆಟ್ಟದ ಭದ್ರತೆ ವಹಿಸಿಕೊಂಡ ಸಿಆರ್‌ಪಿಎಫ್ : ದೀಪ ಬೆಳಗಿಸಲು ಸಿದ್ಧತೆ; ದರ್ಗಾಕ್ಕೆ ಮುಸ್ಲಿಮರ ಭೇಟಿ

ತಿರುಪರಂಕುಂದ್ರಂ ಬೆಟ್ಟದ ಭದ್ರತೆ ವಹಿಸಿಕೊಂಡ ಸಿಆರ್‌ಪಿಎಫ್ : ದೀಪ ಬೆಳಗಿಸಲು ಸಿದ್ಧತೆ; ದರ್ಗಾಕ್ಕೆ ಮುಸ್ಲಿಮರ ಭೇಟಿ

- Advertisement -
- Advertisement -

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಧುರೈನ ತಿರುಪರಂಕುಂದ್ರಂ ಬೆಟ್ಟದ ಸಂಪೂರ್ಣ ಭದ್ರತೆ ಮತ್ತು ಕಣ್ಗಾವಲು ಹೊಣೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಶನಿವಾರ (ನ.28) ಬೆಳಿಗ್ಗೆ ವಹಿಸಿಕೊಂಡಿದೆ. ಬೆಟ್ಟದ ಮೇಲಿರುವ ದೀಪತ್ತೂಣ್ (ದೀಪದ ಕಂಬ) ಎಂಬ ಕಲ್ಲಿನ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸುವ ಧಾರ್ಮಿಕ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು ಅರುಳ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ಸಮೀಪದ ಹಝರತ್ ಸುಲ್ತಾನ್ ಸಿಕಂದರ್ ಬಾದ್‌ಷಾ ಔಲಿಯಾ ದರ್ಗಾ ಹಾಗೂ ಇಡೀ ಬೆಟ್ಟಕ್ಕೆ ಭದ್ರತೆ ಒದಗಿಸುವಂತೆ ಕೇಂದ್ರ ಪಡೆಗಳಿಗೆ ಶುಕ್ರವಾರ (ನ.27) ನಿರ್ದೇಶನ ನೀಡಿತ್ತು. ಇದರ ಅನ್ವಯ, ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್‌) ತುಕಡಿಗಳೊಂದಿಗೆ ಸಿಆರ್‌ಪಿಎಫ್‌ನ ಒಂದು ಪಡೆ ಬೆಟ್ಟದ ತಪ್ಪಲಿನಲ್ಲಿ ಬೀಡುಬಿಟ್ಟಿದ್ದು, ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿದೆ. ಭದ್ರತಾ ಪಡೆಗಳು ಆಗಮಿಸಿದಾಗ ಸ್ಥಳೀಯ ನಿವಾಸಿಗಳು ಮತ್ತು ಭಕ್ತರು ಹೂವಿನ ಸ್ವಾಗತ ಕೋರಿದರು ಎಂದು newindianexpress.com ವರದಿ ಮಾಡಿದೆ.

ಕೋರ್ಟ್ ಆದೇಶದಂತೆ ದೀಪತ್ತೂಣ್ ಸುತ್ತ ತಾತ್ಕಾಲಿಕ ವೇದಿಕೆ ಮತ್ತು ಅಟ್ಟಣಿಗೆ ನಿರ್ಮಾಣ ಕಾರ್ಯ ಆರಂಭವಾಗಿದೆ. ದೇವಸ್ಥಾನದ ಅರ್ಚಕರು (ಸ್ಥಾನಿಕರು) ಹಾಗೂ ನ್ಯಾಯಾಲಯ ನೇಮಿಸಿದ ರಿಸೀವರ್‌ಗಳು ದೀಪದ ಕೊಪ್ಪರಿಗೆಯನ್ನು ಇರಿಸಿ ಬೆಳಗಿಸಲು ಅನುಕೂಲವಾಗುವಂತೆ ಈ ವ್ಯವಸ್ಥೆ ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಮೀಪದ ಸಿಕಂದರ್ ಬಾದ್‌ಷಾ ದರ್ಗಾದ ಸುತ್ತ 50 ಮೀಟರ್ ಬಫರ್ ವಲಯವನ್ನು ಸಿಆರ್‌ಪಿಎಫ್ ಸುತ್ತುವರಿದಿದೆ ಎಂದು ವರದಿ ವಿವರಿಸಿದೆ.

ಕಳೆದ ನ. 24ರಂದು ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ದೀಪತ್ತೂಣ್‌ನಲ್ಲಿ ದೀಪ ಬೆಳಗಿಸದೆ, ಸಾಂಪ್ರದಾಯಿಕ ಸ್ಥಳವಾದ ಉಚ್ಚಿಪಿಳ್ಳೈಯಾರ್ ದೇವಸ್ಥಾನದ ಬಳಿ ದೀಪ ಬೆಳಗಿಸಲಾಗಿತ್ತು. ಇದರಿಂದಾಗಿ ಕಳೆದ ಕೆಲವು ದಿನಗಳಿಂದ ಬೆಟ್ಟದ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ನ.24ರಂದು ಸ್ಥಳೀಯ ಪೊಲೀಸರಿಂದ ತಡೆಯಲ್ಪಟ್ಟಿದ್ದ ಬಿಜೆಪಿ ನಾಯಕರಾದ ಡಾ. ತಮಿಳಿಸೈ ಸೌಂದರರಾಜನ್, ಎಲ್. ಮುರುಗನ್, ನೈನಾರ್ ನಾಗೇಂದ್ರನ್ ಮತ್ತು ಹಿಂದೂ ಮುನ್ನಣಿ ರಾಜ್ಯಾಧ್ಯಕ್ಷ ಕಡೇಶ್ವರ ಸುಬ್ರಮಣಿಯಂ ಅವರು ಇಂದಿನ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.

ದರ್ಗಾದಲ್ಲಿ ಮುಸ್ಲಿಂ ಭಕ್ತರ ಪ್ರಾರ್ಥನೆ :

ಇದೇ ವೇಳೆ, ಬೆಟ್ಟದ ಮೇಲಿರುವ ಹಝರತ್ ಸುಲ್ತಾನ್ ಸಿಕಂದರ್ ಬಾದ್‌ಷಾ ಔಲಿಯಾ ದರ್ಗಾಕ್ಕೆ ಶನಿವಾರ ಬೆಳಿಗ್ಗೆ ಸ್ಥಳೀಯರು ಹಾಗೂ ನೆರೆಯ ಕೇರಳದಿಂದ ಬಂದ ನೂರಕ್ಕೂ ಹೆಚ್ಚು ಮುಸ್ಲಿಂ ಯಾತ್ರಾರ್ಥಿಗಳು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಳಿಗ್ಗೆ 6.15ರಿಂದಲೇ ಭಕ್ತರು ಬೆಟ್ಟ ಹತ್ತಲು ಸರತಿ ಸಾಲಿನಲ್ಲಿ ನಿಂತಿದ್ದರು. ದರ್ಗಾಕ್ಕೆ ಭೇಟಿ ನೀಡುವ ಭಕ್ತರ ರಕ್ಷಣೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಬೆಟ್ಟದ ಮೇಲಿನ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ. ದರ್ಗಾ ಯಾತ್ರಾರ್ಥಿಗಳಿಗೆ ಯಾವುದೇ ಅಡೆತಡೆಯಿಲ್ಲದೆ ಪ್ರಾರ್ಥನೆ ಸಲ್ಲಿಸಲು ಹಾಗೂ ದೇವಸ್ಥಾನದ ದೀಪ ಬೆಳಗುವ ಸಿದ್ಧತೆಗಳು ಸುಗಮವಾಗಿ ನಡೆಯಲು ಭದ್ರತಾ ಪಡೆಗಳು ಕ್ರಮ ಕೈಗೊಂಡಿವೆ ಎಂದು newindianexpress.com ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ, ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲು ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಹ್ಯೂಮನ್ ರೈಟ್ಸ್ ವಾಚ್ ಗಂಭೀರ ಆತಂಕ!

ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ 'ಹ್ಯೂಮನ್ ರೈಟ್ಸ್ ವಾಚ್' (HRW) ಗಂಭೀರ ಆತಂಕ ವ್ಯಕ್ತಪಡಿಸಿದೆ. ಕಾನೂನು ತಿದ್ದುಪಡಿಗಳು, ರಾಜಕೀಯ...

ಜಾತಿವಾದಿ ಹೇಳಿಕೆ ಆರೋಪ: ಎಚ್‌ಸಿಯು ಪ್ರಾಧ್ಯಾಪಕರ ಅಮಾನತಿಗೆ ಮಾನವ ಹಕ್ಕುಗಳ ವೇದಿಕೆ ಆಗ್ರಹ

ಹಳೆಯ ವಿದ್ಯಾರ್ಥಿಗಳ ವಿರುದ್ಧ ಜಾತಿವಾದಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಎಚ್‌ಸಿಯು) ಸಹಾಯಕ ಪ್ರಾಧ್ಯಾಪಕ ವಿಜಯ್ ರಾಮದಾಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾನವ...

ಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ ನೋಟಿಸ್, 3 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಮಧ್ಯವರ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕ ಅಶುತೋಷ್ ರಾಂಕಾ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ....

ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ

ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಮುಂಬರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಬೆಂಬಲಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ...

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿಗೆ ಖರ್ಗೆ ಮನವಿ; ಡಿಎಂಕೆ, ಎಎಪಿ, ಬಿಜೆಡಿಗೂ ಆಹ್ವಾನ

ನವದೆಹಲಿ: ಮಹಿಳಾ ಮೀಸಲಾತಿ ಜಾರಿ ನೆಪದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮತ್ತೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳ ಬೆನ್ನಲ್ಲೇ, ಸರ್ಕಾರದ ನಡೆಗೆ ಸಂಘಟಿತ...

ನಿಗದಿತ ಮಿತಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ: ಕರ್ನಾಟಕ ಸರ್ಕಾರದಿಂದ ಇಂಡಿಯನ್ ಆಯಿಲ್‌ಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು ಸಮೀಪದ ದೇವನಗೊಂದಿ ಟರ್ಮಿನಲ್‌ನಲ್ಲಿ ಪೆಟ್ರೋಲ್‌ಗೆ ನಿಗದಿತ ಶೇ. 20 ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದು ತಪಾಸಣೆಯ ವೇಳೆ ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್...

ಅಸ್ಸಾಂನ ಲಖಿಂಪುರದಲ್ಲಿ ತೆರವು ಕಾರ್ಯಾಚರಣೆ ಬಳಿಕವೂ ನಿಲ್ಲದ ಸಂಕಷ್ಟ: ಸೂರು ಕಳೆದುಕೊಂಡು ಬಯಲಿನಲ್ಲಿ ಕಾಲಕಳೆಯುತ್ತಿರುವ 135 ಬಡ ಮುಸ್ಲಿಂ ಕುಟುಂಬಗಳು, ಧರ್ಮದ ಆಧಾರದ ತಾರತಮ್ಯದ ಗಂಭೀರ ಆರೋಪ!

ಲಖಿಂಪುರ (ಅಸ್ಸಾಂ): ಅಸ್ಸಾಂನ ಲಖಿಂಪುರ ಜಿಲ್ಲೆಯ ಕದಮ್ ಕಂದಾಯ ವೃತ್ತದ ವ್ಯಾಪ್ತಿಯ ಬೋಗಿನದಿ ಪ್ರದೇಶದಲ್ಲಿ ಜಿಲ್ಲಾಡಳಿತ ನಡೆಸಿದ ಬೃಹತ್ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ಸುಮಾರು 135 ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ....

ಪೌರಕಾರ್ಮಿಕರ ಸ್ವಂತ ಮನೆ ಕನಸಿಗೆ ಸರ್ಕಾರದ ಬಲ; ಮೈಸೂರಿನಲ್ಲಿ 158 ಕುಟುಂಬಗಳ ವಸತಿ ಸಮುಚ್ಚಯ ಉದ್ಘಾಟಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಸ್ವಂತ ಮನೆಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಮತ್ತು ಭದ್ರತೆ ತರುವ...