Homeಕರ್ನಾಟಕಚಿಕ್ಕಮಗಳೂರು: ಕಡಿಮೆ ಕೂಲಿ ಪ್ರಶ್ನಿಸಿದ ವಲಸೆ ಕಾರ್ಮಿಕರ ಮೇಲೆ ಬಂದೂಕು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ; ಕರ್ನಾಟಕ...

ಚಿಕ್ಕಮಗಳೂರು: ಕಡಿಮೆ ಕೂಲಿ ಪ್ರಶ್ನಿಸಿದ ವಲಸೆ ಕಾರ್ಮಿಕರ ಮೇಲೆ ಬಂದೂಕು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ; ಕರ್ನಾಟಕ ಜನಶಕ್ತಿ ಸಂಘಟನೆಯಿಂದ ನಾಳೆ ಪ್ರತಿಭಟನೆಗೆ ಕರೆ

- Advertisement -
- Advertisement -

ಚಿಕ್ಕಮಗಳೂರು: ದಿನಕ್ಕೆ 200-300 ರೂಪಾಯಿ ಕೂಲಿ ಸಾಕಾಗುವುದಿಲ್ಲ, ಬೇರೆ ತೋಟಕ್ಕೆ ಕೆಲಸಕ್ಕೆ ಹೋಗುತ್ತೇವೆ ಎಂದಿದ್ದಕ್ಕೆ ಕಾಫಿ ಎಸ್ಟೇಟ್ ಮಾಲೀಕರು ಬಂದೂಕು ಮತ್ತು ದೊಣ್ಣೆಗಳಿಂದ ಮಹಿಳೆಯರು ಸೇರಿದಂತೆ 34 ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸಗೋಡು ಗ್ರಾಮದಲ್ಲಿ ನಡೆದಿದೆ.

ನವೆಂಬರ್ 27ರ ಶುಕ್ರವಾರ ಬಸಗೋಡು ಕಾಫಿ ಎಸ್ಟೇಟ್‌ನಲ್ಲಿ ಈ ದೌರ್ಜನ್ಯ ನಡೆದಿದ್ದು, ಹಲ್ಲೆಯ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೀವ್ರ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಎಸ್ಟೇಟ್ ಮಾಲೀಕರಾದ ಭರತ್ ಮತ್ತು ಸತ್ಯಕೀರ್ತಿ ವಿರುದ್ಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

ಘಟನೆಯ ಹಿನ್ನೆಲೆ ಮತ್ತು ಸಂತ್ರಸ್ತರ ಅಳಲು: ತಮಿಳುನಾಡು ಮೂಲದ ಒಟ್ಟು 34 ವಲಸೆ ಕಾರ್ಮಿಕರು ಕೇವಲ ನಾಲ್ಕು ದಿನಗಳ ಹಿಂದಷ್ಟೇ ಬಸಗೋಡು ಕಾಫಿ ಎಸ್ಟೇಟ್‌ಗೆ ಕೆಲಸಕ್ಕೆ ಬಂದಿದ್ದರು. ತೋಟದಲ್ಲಿ ನೀಡಲಾಗುತ್ತಿದ್ದ ದಿನಕ್ಕೆ ₹200 ರಿಂದ ₹300 ಕೂಲಿ ತಮ್ಮ ಜೀವನ ನಿರ್ವಹಣೆಗೆ ಸಾಲುವುದಿಲ್ಲ ಎಂಬ ಕಾರಣಕ್ಕೆ ಕಾರ್ಮಿಕರು ಬೇರೆ ತೋಟಕ್ಕೆ ಕೆಲಸಕ್ಕೆ ಹೋಗಲು ನಿರ್ಧರಿಸಿದ್ದರು. ಇದಕ್ಕೆ ಆಕ್ಷೇಪಿಸಿದ ಮಾಲೀಕರು ತಾವು ನೀಡಿದ್ದ ಮುಂಗಡ ಹಣವನ್ನು ವಾಪಸ್ ಕೇಳಿದ್ದರು.

“ಮಾಲೀಕರು ಕೇಳಿದ ಹಣವನ್ನು ನಾವು ವಾಪಸ್ ಕೊಟ್ಟೆವು. ಆದರೂ ಬಿಡದೆ ಮೊದಲು ನಮ್ಮ ಕೆಲಸದ ಮೇಸ್ತ್ರಿ ಮೇಲೆ ಹಲ್ಲೆ ಮಾಡಿದರು. ಬಳಿಕ ನಮ್ಮ ಜೊತೆಯಲ್ಲಿದ್ದ ಮಹಿಳಾ ಕಾರ್ಮಿಕರ ಮೇಲೆ ದೊಣ್ಣೆಯಿಂದ ಮನಬಂದಂತೆ ಹೀನಾಮಾನವಾಗಿ ಥಳಿಸಿದರು. ಮಹಿಳೆಯರಿಗೆ ಬಂದೂಕಿನಿಂದ ತಿವಿದು, ಶೂಟ್ ಮಾಡುವ ರೀತಿಯಲ್ಲಿ ಬೆದರಿಸಿ ಗುದ್ದಿದ್ದಾರೆ. ನಾವು ತಡೆಯಲು ಹೋಗದಿದ್ದರೆ ಅವರ ಪರಿಸ್ಥಿತಿ ಏನಾಗುತ್ತಿತ್ತೋ ಊಹಿಸಲೂ ಸಾಧ್ಯವಿಲ್ಲ” ಎಂದು ಹಲ್ಲೆಗೊಳಗಾದ ಸಂತ್ರಸ್ತ ಕಾರ್ಮಿಕರೊಬ್ಬರು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ. ಈ ಹಿಂದೆ ಸುಮಾರು 60 ಕಾರ್ಮಿಕರು ಇಲ್ಲಿಂದ ಕೆಲಸ ಬಿಟ್ಟು ಹೋಗಿದ್ದ ಸಿಟ್ಟನ್ನೂ ಮಾಲೀಕರು ತಮ್ಮ ಮೇಲೆ ತೀರಿಸಿಕೊಂಡಿದ್ದು, ತಂಡದಲ್ಲಿದ್ದ ಎಲ್ಲಾ 34 ಕಾರ್ಮಿಕರಿಗೂ ಥಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಜೀತದಾಳುಗಳಂತೆ ದೌರ್ಜನ್ಯ; ಜಿಲ್ಲಾ ಆಸ್ಪತ್ರೆಗೆ ದಾಖಲು: ಕಾರ್ಮಿಕರನ್ನು ಜೀತದಾಳುಗಳಂತೆ ಕೂಡಿಹಾಕಿ, ಮಹಿಳೆಯರು ಮತ್ತು ಮಕ್ಕಳೆಂದೂ ನೋಡದೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಕೊಲೆ ಬೆದರಿಕೆ ಹಾಕಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಹಲ್ಲೆಯ ತೀವ್ರತೆಗೆ ಮಹಿಳಾ ಕಾರ್ಮಿಕೆಯೊಬ್ಬರು ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದರೂ ಬಿಡದೆ ದೊಣ್ಣೆಯಿಂದ ಥಳಿಸುತ್ತಿರುವುದು ಹಾಗೂ “ಸಾವಿರಾರು ಜನರಿಗೆ ಕೆಲಸ ಕೊಡುವ ಸಾಹುಕಾರನಿಗೆ ಎದುರಾಡುತ್ತೀರಾ?” ಎಂದು ನಿಂದಿಸುತ್ತಿರುವುದು ಸೆರೆಯಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳಾ ಕಾರ್ಮಿಕರು ಸೇರಿದಂತೆ ಸಂತ್ರಸ್ತರನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯ ವೇಳೆ ತಮ್ಮ ಕಿವಿಯಲ್ಲಿದ್ದ ಚಿನ್ನದ ಒಡವೆಯೂ ನಾಪತ್ತೆಯಾಗಿದೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆ ಮೀನಾ ತಿಳಿಸಿದ್ದಾರೆ.

ನಾಳೆ ಆಜಾದ್ ಪಾರ್ಕ್ ಬಳಿ ಬೃಹತ್ ಪ್ರತಿಭಟನೆಗೆ ಕರೆ: ಬಸಗೋಡು ಕಾಫಿ ಎಸ್ಟೇಟ್ ಮಾಲೀಕರು ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಅಮಾನವೀಯ ಕೃತ್ಯವನ್ನು ಖಂಡಿಸಿ ನಾಳೆ (ನವೆಂಬರ್ 29, ಭಾನುವಾರ) ಬೆಳಗ್ಗೆ 11:30ಕ್ಕೆ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್ ತಿಳಿಸಿದ್ದಾರೆ. ಮಲೆನಾಡಿನ ಕಾಫಿ ತೋಟಗಳಲ್ಲಿ ಕನಿಷ್ಠ ವೇತನ ನಿರಾಕರಣೆ ಮತ್ತು ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಿಜೆಪಿಗೆ ಚುನಾವಣೆಗಳೇ ಮುಖ್ಯ, ದೇಶವಲ್ಲ..’; ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರವಾಗಿ ಕೇಂದ್ರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಬಿಜೆಪಿ ವಿರುದ್ಧ...

“ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೆಂಬಲ ನೀಡಿ, ಇಲ್ಲವೇ ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆ ಎದುರಿಸಿ” : ಡಿಎಂಕೆಗೆ ಬಿಜೆಪಿ ಪರೋಕ್ಷ ಎಚ್ಚರಿಕೆ-ವರದಿ

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಬೆಂಬಲ ನೀಡಲು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನಿರ್ಧರಿಸಿದೆ. ಶನಿವಾರ (ನ.28) ಚೆನ್ನೈನಲ್ಲಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಡಿಎಂಕೆ ಅಧಿಕೃತ ಬೆಂಬಲ: ದಕ್ಷಿಣ ಭಾರತದ ಪ್ರಾತಿನಿಧ್ಯಕ್ಕೆ ಸಂದ ಜಯ ಎಂದ ಎಂ.ಕೆ. ಸ್ಟಾಲಿನ್

ಚೆನ್ನೈ: ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಪುನರ್‌ವಿಂಗಡಣೆ (Delimitation) ಸಂವಿಧಾನ ತಿದ್ದುಪಡಿ ಮಸೂದೆಗೆ ಡಿಎಂಕೆ ಶನಿವಾರ ಅಧಿಕೃತವಾಗಿ ಬೆಂಬಲ...

ನ್ಯಾಯಾಂಗ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ, ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲು ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಹ್ಯೂಮನ್ ರೈಟ್ಸ್ ವಾಚ್ ಗಂಭೀರ ಆತಂಕ!

ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ 'ಹ್ಯೂಮನ್ ರೈಟ್ಸ್ ವಾಚ್' (HRW) ಗಂಭೀರ ಆತಂಕ ವ್ಯಕ್ತಪಡಿಸಿದೆ. ಕಾನೂನು ತಿದ್ದುಪಡಿಗಳು, ರಾಜಕೀಯ...

ತಿರುಪರಂಕುಂದ್ರಂ ಬೆಟ್ಟದ ಭದ್ರತೆ ವಹಿಸಿಕೊಂಡ ಸಿಆರ್‌ಪಿಎಫ್ : ದೀಪ ಬೆಳಗಿಸಲು ಸಿದ್ಧತೆ; ದರ್ಗಾಕ್ಕೆ ಮುಸ್ಲಿಮರ ಭೇಟಿ

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಧುರೈನ ತಿರುಪರಂಕುಂದ್ರಂ ಬೆಟ್ಟದ ಸಂಪೂರ್ಣ ಭದ್ರತೆ ಮತ್ತು ಕಣ್ಗಾವಲು ಹೊಣೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಶನಿವಾರ (ನ.28) ಬೆಳಿಗ್ಗೆ ವಹಿಸಿಕೊಂಡಿದೆ. ಬೆಟ್ಟದ ಮೇಲಿರುವ ದೀಪತ್ತೂಣ್...

ಜಾತಿವಾದಿ ಹೇಳಿಕೆ ಆರೋಪ: ಎಚ್‌ಸಿಯು ಪ್ರಾಧ್ಯಾಪಕರ ಅಮಾನತಿಗೆ ಮಾನವ ಹಕ್ಕುಗಳ ವೇದಿಕೆ ಆಗ್ರಹ

ಹಳೆಯ ವಿದ್ಯಾರ್ಥಿಗಳ ವಿರುದ್ಧ ಜಾತಿವಾದಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಎಚ್‌ಸಿಯು) ಸಹಾಯಕ ಪ್ರಾಧ್ಯಾಪಕ ವಿಜಯ್ ರಾಮದಾಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾನವ...

ಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ ನೋಟಿಸ್, 3 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಮಧ್ಯವರ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕ ಅಶುತೋಷ್ ರಾಂಕಾ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ....

ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ

ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಮುಂಬರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಬೆಂಬಲಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ...

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ...