Homeಮುಖಪುಟಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ, ಎನ್‌ಆರ್‌ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ‌ ಗಮನ‌ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು ರೂ.35 ಸಾವಿರ ಕೋಟಿ, ಕೇಂದ್ರ ಸರ್ಕಾರ ನೀಡಿರುವುದು ರೂ.1800 ಕೋಟಿ.‌‌ ಮೊದಲು ಬಾಕಿ ನೆರೆ‌ ಪರಿಹಾರ ಪಾವತಿ ನಂತರ ಸಿಎಎ, ಎನ್ ಆರ್ ಸಿ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಕಳಸಾ-ಬಂಡೂರಿ ಯೋಜನೆ‌ ಬಗ್ಗೆ ನಿಮ್ಮ ಪಕ್ಷ ಎರಡು ನಾಲಿಗೆಯಲ್ಲಿ ಯಾಕೆ ಮಾತನಾಡುತ್ತಿದೆ? ಚುನಾವಣೆಯ ಮೊದಲು ನಮ್ಮ ಪರ, ಈಗ ಗೋವಾ ಪರ. ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ ಕೊಟ್ಟು ಬಿಡಿ ಎಂದು ಅವರು ಆಗ್ರಹಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...