HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...